Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:15 - ಕನ್ನಡ ಸತ್ಯವೇದವು C.L. Bible (BSI)

15 ಏಳು ದಿವಸ ನೀವು ಹುಳಿರಹಿತ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳಿಂದ ತೆಗೆದುಬಿಡಬೇಕು. ಆ ಏಳು ದಿನಗಳಲ್ಲಿ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನನ್ನು ಇಸ್ರಯೇಲರಿಂದ ಬಹಿಷ್ಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “‘ಏಳು ದಿನಗಳವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಬಿಡಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿಯನ್ನು ತಿನ್ನುವವನು ಇಸ್ರಾಯೇಲಿನೊಳಗಿಂದ ತೆಗೆದುಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಏಳು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳೊಳಗಿಂದ ತೆಗೆದುಬಿಡಬೇಕು. ಆ ದಿವಸ ಮೊದಲುಗೊಂಡು ಏಳು ದಿವಸಗಳೊಳಗೆ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನು ಇಸ್ರಾಯೇಲ್ಯರಿಂದ ತೆಗೆದು ಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈ ಹಬ್ಬದಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನುವಿರಿ. ಹಬ್ಬದ ಪ್ರಥಮ ದಿನದಲ್ಲಿ ನೀವು ನಿಮ್ಮ ಮನೆಯಿಂದ ಎಲ್ಲಾ ಹುಳಿಯನ್ನು ತೆಗೆದುಹಾಕುವಿರಿ. ಈ ಹಬ್ಬದ ಏಳು ದಿನಗಳಲ್ಲಿ ಯಾವುದೇ ಹುಳಿಯನ್ನು ತಿನ್ನಬಾರದು. ಯಾವನಾದರೂ ಹುಳಿಯನ್ನು ತಿಂದರೆ, ನೀವು ಅವನನ್ನು ಇಸ್ರೇಲಿನಿಂದ ಬಹಿಷ್ಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿ ತಿನ್ನುವವರನ್ನು ಇಸ್ರಾಯೇಲಿನೊಳಗಿಂದ ಬಹಿಷ್ಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:15
28 ತಿಳಿವುಗಳ ಹೋಲಿಕೆ  

ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಏಕೆಂದರೆ ನೀವು ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ ಅವಸರದಿಂದ ಈಜಿಪ್ಟನ್ನು ಬಿಟ್ಟುಬಂದಿರಿ. ಈಜಿಪ್ಟ್ ದೇಶದಿಂದ ನಿಮಗೆ ಬಿಡುಗಡೆಯಾದ ದಿನವು ನಿಮ್ಮ ಜೀವಮಾನವೆಲ್ಲಾ ನೆನಪಿನಲ್ಲಿರುವಂತೆ, ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ನೀವು ಏಳು ದಿವಸಗಳವರೆಗೂ ತಿನ್ನಬೇಕು.


ಸುನ್ನತಿ ಮಾಡಿಸಿಕೊಳ್ಳದ ಗಂಡಸು ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದವನಾದ ಕಾರಣ, ಅವನು ಕುಲದಿಂದ ಬಹಿಷ್ಕೃತನಾಗಬೇಕು.


ಒಬ್ಬನು ತಾನು ಶುದ್ಧನಾಗಿದ್ದರೂ ಪ್ರಯಾಣದಲ್ಲಿಲ್ಲದಿದ್ದರೂ ಪಾಸ್ಕ ಹಬ್ಬವನ್ನು ಆಚರಿಸಲು ತಪ್ಪಿದ್ದೇ ಆದರೆ ಅಂಥವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಸರ್ವೇಶ್ವರನಿಂದ ನಿಯಮಿತವಾದ ಬಲಿಯನ್ನು ಸಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ಪಾಪಫಲವನ್ನು ಅನುಭವಿಸಲೇಬೇಕು.


“ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬಗಳನ್ನು ಆಚರಿಸಿರಿ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದ ನಿಯಮಿತ ಕಾಲದಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ನೀವು ಚೈತ್ರಮಾಸದಲ್ಲಿ ಈಜಿಪ್ಟಿನಿಂದ ಬಿಡುಗಡೆಯಾಗಿ ಹೊರಬಂದದ್ದು.


ಹುಳಿಯಿಲ್ಲದ ರೊಟ್ಟಿ ತಿನ್ನುವ ಹಬ್ಬ ಒಂದು. ನಾನು ನಿಮಗೆ ಆಜ್ಞಾಪಿಸಿದಂತೆ ಚೈತ್ರಮಾಸದ ನಿಗದಿಯಾದ ಕಾಲದಲ್ಲಿ ಏಳು ದಿವಸವೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಏಕೆಂದರೆ ಆ ಮಾಸದಲ್ಲೇ ನೀವು ಈಜಿಪ್ಟಿನಿಂದ ಹೊರಟುಬಂದದ್ದು. ನನ್ನ ಸನ್ನಿಧಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯಿಲ್ಲದೆ ಬರೀ ಕೈಯಲ್ಲಿ ಬರಕೂಡದು.


ಆರು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನ ನಿಮ್ಮ ದೇವರಾದ ಸರ್ವೇಶ್ವರನ ಗೌರವಾರ್ಥ ಸಭೆಸೇರಬೇಕು. ಆ ದಿನದಲ್ಲಿ ಯಾವ ದುಡಿಮೆಯನ್ನೂ ಮಾಡಕೂಡದು.


ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಆರಂಭವಾಗಬೇಕು. ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.


ನನಗೆ ಬಲಿಯರ್ಪಿಸುವಾಗ ಆ ಬಲಿಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಕೂಡದು. ಪಸ್ಕದಲ್ಲಿ ನೀವು ಸಮರ್ಪಿಸುವ ಬಲಿ ಮಾಂಸವನ್ನು ಮರುದಿನದವರೆಗೂ ಉಳಿಸಬಾರದು.


ಆ ರಾತ್ರಿಯಲ್ಲೇ ಆ ಮಾಂಸವನ್ನು ತಿನ್ನಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಪಲ್ಯಗಳ ಸಮೇತ ಊಟಮಾಡಬೇಕು.


ನಿಮಗೆ ಕಿರುಕುಳ ಕೊಡುತ್ತಿರುವವರು ತಮ್ಮ ಅಂಗಚ್ಛೇದವನ್ನಾದರೂ ಮಾಡಿಕೊಂಡರೆ ಲೇಸು.


ಇದರಿಂದ ಯೆಹೂದ್ಯರಿಗೆ ಮೆಚ್ಚುಗೆಯಾಯಿತೆಂದು ತಿಳಿದು ಪೇತ್ರನನ್ನು ಬಂಧಿಸಿದನು. (ಆಗ ಹುಳಿರಹಿತ ರೊಟ್ಟಿಯ ಹಬ್ಬ ನಡೆಯುತ್ತಿತ್ತು).


ಇಷ್ಟರಲ್ಲೇ, ಸಾವಿರಾರು ಜನರು ಒಬ್ಬರನ್ನೊಬ್ಬರು ಒತ್ತರಿಸುತ್ತಾ ಕಿಕ್ಕಿರಿದು ನೆರೆದಿದ್ದರು. ಯೇಸು ಮೊದಲು ಶಿಷ್ಯರನ್ನು ಉದ್ದೇಶಿಸಿ, “ಫರಿಸಾಯರ ‘ಹುಳಿಹಿಟ್ಟಿನ’ ಬಗ್ಗೆ. ಅಂದರೆ ಅವರ ಕಪಟತನದ ಬಗ್ಗೆ, ಎಚ್ಚರಿಕೆಯಿಂದಿರಿ.


ರೊಟ್ಟಿಯ ಹಿಟ್ಟನ್ನು ಹುದುಗೆಬ್ಬಿಸುವ ಹುಳಿಯನ್ನು ಕುರಿತು ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯವಾಗಿ ಜಾಗರೂಕರಾಗಿರಬೇಕೆಂದು ಯೇಸು ಎಚ್ಚರಿಸಿದರೆಂದು ಆಗ ಶಿಷ್ಯರು ಅರ್ಥಮಾಡಿಕೊಂಡರು.


ಇಂಥ ಕೃತ್ಯವನ್ನು ಎಸಗುವವನು ಎಂಥ ಕುಟುಂಬಕ್ಕಾದರೂ ಸೇರಿರಲಿ - ಅಂಥವನನ್ನು ಸೇನಾಧೀಶ್ವರ ಸರ್ವೇಶ್ವರ ಯಕೋಬನ ಕುಲದಿಂದ ಹೊರಗೆ ಹಾಕುವರು.


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ಯಾವ ಊರಲ್ಲೂ, ಪಾಸ್ಕದಪಶುವನ್ನು ವಧಿಸಬಾರದು;


ಏಕೆಂದರೆ ಪ್ರತಿ ದೇಹಕ್ಕೂ ರಕ್ತವೇ ಪ್ರಾಣಾಧಾರ. ಆದಕಾರಣ ಸರ್ವೇಶ್ವರ ಇಸ್ರಯೇಲರಿಗೆ, ಪ್ರತಿ ಪ್ರಾಣಿಗೂ ರಕ್ತವೇ ಪ್ರಾಣಾಧಾರವಾದ್ದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನೂ ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರ ಹಾಕಬೇಕು,’ ಎಂದು ಆಜ್ಞಾಪಿಸಿದ್ದಾರೆ.


“ಅಷ್ಟುಮಾತ್ರವಲ್ಲ, ಇಸ್ರಯೇಲರಲ್ಲಾಗಲಿ, ಅವರ ನಡುವೆ ವಾಸಿಸುವ ಅನ್ಯದೇಶದವರಲ್ಲಾಗಲಿ ಯಾರಾದರು ರಕ್ತಭೋಜನ ಮಾಡಿದರೆ ಸರ್ವೇಶ್ವರ ಅಂಥ ವ್ಯಕ್ತಿಯ ವಿರುದ್ಧ ಉಗ್ರಕೋಪಗೊಳ್ಳುವರು; ಅವನನ್ನು ತನ್ನ ಪ್ರಜೆಯಿಂದ ತೆಗೆದುಹಾಕುವರು.


ಆದಕಾರಣ ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಭಾವಿಸಿ ಆಚರಿಸಬೇಕು. ಅದನ್ನು ಅಪವಿತ್ರವೆಂದು ವರ್ತಿಸುವವನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ದುಡಿಯುವವನನ್ನು ತನ್ನ ಕುಲದಿಂದ ತೆಗೆದುಹಾಕಬೇಕು.


ಹಬ್ಬ ಮುಗಿಸಿಕೊಂಡು ಅವರು ಹಿಂದಿರುಗಿ ಬರುವಾಗ ಬಾಲಕಯೇಸು ಜೆರುಸಲೇಮಿನಲ್ಲಿಯೇ ಉಳಿದುಬಿಟ್ಟರು.


ಇದರಂತೆ ತೈಲವನ್ನು ಮಾಡುವವನು ಹಾಗು ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನು ತನ್ನ ಕುಲದಿಂದ ಬಹಿಷ್ಕೃತನಾಗಬೇಕು.


ಜೆರುಸಲೇಮಿನಲ್ಲಿ ಕೂಡಿಬಂದ ಇಸ್ರಯೇಲರು ಏಳು ದಿನಗಳವರೆಗೂ ಮಹಾಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಿದರು. ಲೇವಿಯರೂ ಯಾಜಕರೂ ಮಹಾವಾದ್ಯದೊಡನೆ ಸರ್ವೇಶ್ವರನನ್ನು ಪ್ರತಿದಿನವೂ ಕೀರ್ತಿಸುತ್ತಿದ್ದರು.


ಇದಲ್ಲದೆ, ಆಡಂಬರದಿಂದ ಏಳು ದಿವಸಗಳವರೆಗೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಿದರು. ಏಕೆಂದರೆ, ಇಸ್ರಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಸ್ಸೀರಿಯದ ಅರಸ, ತಮಗೆ ಸಹಾಯಮಾಡುವಂತೆ ಸರ್ವೇಶ್ವರ ಅವನ ಮನಪರಿವರ್ತಿಸಿ, ಅವರಿಗೆ ಸಂತೋಷವನ್ನು ಉಂಟುಮಾಡಿದ್ದರು.


ಮೋಶೆ ಇಸ್ರಯೇಲರಿಗೆ, “ಗುಲಾಮತನದಲ್ಲಿದ್ದು ಈಜಿಪ್ಟ್ ದೇಶದಿಂದ ಬಿಡುಗಡೆಯಾದ ಈ ದಿನವನ್ನು ನೀವು ಸ್ಮರಿಸಬೇಕು. ಈ ದಿನದಲ್ಲೇ ಸರ್ವೇಶ್ವರ ಸ್ವಾಮಿ ತಮ್ಮ ಭುಜಬಲ ಪ್ರಯೋಗಿಸಿ ನಿಮ್ಮನ್ನು ಅಲ್ಲಿಂದ ವಿಮೋಚಿಸಿದರು. ಈ ದಿನದಂದು ನೀವು ಹುಳಿಬೆರತದ್ದನ್ನು ತಿನ್ನಕೂಡದು.


ಕೇವಲ ಸುವಾಸನೆಗಾಗಿ ಅಂಥದ್ದನ್ನು ಮಾಡಿಕೊಳ್ಳುವವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು