Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:17 - ಕನ್ನಡ ಸತ್ಯವೇದವು C.L. Bible (BSI)

17 ಹುಳಿರಹಿತ ರೊಟ್ಟಿಯನ್ನು ತಿನ್ನುವ ಹಬ್ಬವನ್ನು ನೀವು ಆಚರಿಸಬೇಕು. ಏಕೆಂದರೆ ಆ ದಿನದಲ್ಲೇ ನಾನು ನಿಮ್ಮ ಪಾಳೆಯದವರನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದದ್ದು . ನೀವೂ ನಿಮ್ಮ ಸಂತತಿಯವರೂ ಆ ದಿನವನ್ನು ಆಚರಣೆಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಬೇಕು. ಏಕೆಂದರೆ ಈ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ್ದರಿಂದ ನೀವೂ, ನಿಮ್ಮ ಸಂತತಿಯವರೂ ಈ ದಿನವನ್ನು ಆಚರಣೆಗೆ ತರಬೇಕು. ಇದು ಶಾಶ್ವತವಾದ ನಿಯಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಈ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ್ದರಿಂದ ನೀವೂ ನಿಮ್ಮ ಸಂತತಿಯವರೂ ಈ ದಿನವನ್ನು ಆಚರಣೆಗೆ ತರಬೇಕು; ಇದು ಶಾಶ್ವತವಾದ ನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಲೇಬೇಕು. ಯಾಕೆಂದರೆ ಆ ದಿನದಲ್ಲಿಯೇ ನಾನು ನಿಮ್ಮ ಎಲ್ಲಾ ಜನರ ಗುಂಪುಗಳನ್ನು ಈಜಿಪ್ಟಿನಿಂದ ಬಿಡಿಸಿ ಕರೆದುಕೊಂಡು ಹೋದೆನು. ಆದ್ದರಿಂದ ನಿಮ್ಮ ಸಂತತಿಯವರೆಲ್ಲರೂ ಆ ದಿನವನ್ನು ಜ್ಞಾಪಕಮಾಡಿಕೊಳ್ಳಬೇಕು. ಇದು ಶಾಶ್ವತವಾದ ಕಟ್ಟಳೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಬೇಕು. ಏಕೆಂದರೆ ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ್ದೇನೆ. ಆದಕಾರಣ ನಿಮ್ಮ ಸಂತತಿಗಳಲ್ಲಿ ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:17
12 ತಿಳಿವುಗಳ ಹೋಲಿಕೆ  

ಆ ದಿನ ನೀವು ನಿಮ್ಮ ಮಕ್ಕಳಿಗೆ, “ನಮ್ಮ ಜನರು ಈಜಿಪ್ಟಿನಿಂದ ಹೊರಟು ಬಂದಾಗ ಸರ್ವೇಶ್ವರ ನಮಗೋಸ್ಕರ ಮಾಡಿದ ಉಪಕಾರವನ್ನು ಸ್ಮರಿಸುವುದಕ್ಕಾಗಿ ಈ ಆಚರಣೆಯನ್ನು ನಡೆಸುತ್ತಿದ್ದೇವೆ” ಎಂದು ತಿಳಿಸಬೇಕು. ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದ್ದರಿಂದ ಅವರ ನಿಯಮ ನಮ್ಮ ಬಾಯಿಗೆ ಬರುತ್ತಿರಬೇಕು.


ಮೋಶೆ ಇಸ್ರಯೇಲರಿಗೆ, “ಗುಲಾಮತನದಲ್ಲಿದ್ದು ಈಜಿಪ್ಟ್ ದೇಶದಿಂದ ಬಿಡುಗಡೆಯಾದ ಈ ದಿನವನ್ನು ನೀವು ಸ್ಮರಿಸಬೇಕು. ಈ ದಿನದಲ್ಲೇ ಸರ್ವೇಶ್ವರ ಸ್ವಾಮಿ ತಮ್ಮ ಭುಜಬಲ ಪ್ರಯೋಗಿಸಿ ನಿಮ್ಮನ್ನು ಅಲ್ಲಿಂದ ವಿಮೋಚಿಸಿದರು. ಈ ದಿನದಂದು ನೀವು ಹುಳಿಬೆರತದ್ದನ್ನು ತಿನ್ನಕೂಡದು.


ಈ ನಾನೂರ ಮೂವತ್ತು ವರ್ಷಗಳು ಕಳೆದ ನಂತರ ಅದೇ ದಿವಸದಲ್ಲಿ ಸರ್ವೇಶ್ವರನ ಪಡೆಗಳೆಲ್ಲವೂ ಈಜಿಪ್ಟ್ ದೇಶವನ್ನು ಬಿಟ್ಟು ಹೊರಟುಬಂದವು.


ನಾನು ಈಜಿಪ್ಟಿನವರಿಗೆ ವಿರುದ್ಧ ಕೈಯೆತ್ತಿ ಅವರ ಮಧ್ಯೆಯಿಂದ ಇಸ್ರಯೇಲರನ್ನು ಹೊರತಂದಾಗ ನಾನು ಸರ್ವೇಶ್ವರನೆಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು.


ನಾವು ಸರ್ವೇಶ್ವರನಿಗೆ ಮೊರೆಯಿಟ್ಟೆವು. ಅವರು ನಮ್ಮ ಪ್ರಾರ್ಥನೆಯನ್ನು ಆಲಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಇದೆಲ್ಲದರ ಅರಿವು ತಮಗಿದೆ. ಈಗ ನಾವು ತಮ್ಮ ರಾಜ್ಯದ ಗಡಿಪ್ರದೇಶವಾದ ಕಾದೇಶ್ ಎಂಬ ಊರಲ್ಲಿದ್ದೇವೆ.


“ತಮ್ಮ ತಮ್ಮ ಗೋತ್ರದ ಪ್ರಕಾರ ಇಸ್ರಯೇಲ್ ಜನರನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬರುವುದಕ್ಕೆ ಸರ್ವೇಶ್ವರನಿಂದ ಆಜ್ಞೆಹೊಂದಿದ ಆರೋನ್ ಮತ್ತು ಮೋಶೆ ಇವರೇ.


ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು ಆ ದಿನದ ಸಂಜೆವೇಳೆಯಲ್ಲಿ ಇಸ್ರಯೇಲ್ ಸಮಾಜದವರೆಲ್ಲರು ತಮ್ಮ ತಮ್ಮ ಕೂಟಗಳಲ್ಲಿ ಕೊಯ್ಯಬೇಕು.


ಆ ದಿನವು ನಿಮಗೆ ಸ್ಮರಣೀಯ ದಿನವಾಗಿರುವುದು. ಅಂದು ನೀವು ಸರ್ವೇಶ್ವರನ ಗೌರವಾರ್ಥ ಹಬ್ಬವನ್ನು ಕೊಂಡಾಡಬೇಕು. ಅದನ್ನು ಶಾಶ್ವತ ನಿಯಮವೆಂದು ತಲತಲಾಂತರಕ್ಕೂ ಆಚರಿಸಬೇಕು.


ನೀವು ಮತ್ತು ನಿಮ್ಮ ಸಂತತಿಯವರು ಈ ನಿಯಮಗಳನ್ನು ಶಾಶ್ವತವಾಗಿ ಆಚರಿಸಬೇಕು.


ವರ್ಷವರ್ಷವೂ ನಿಯಮಿತ ಕಾಲದಲ್ಲಿ ಈ ಆಚರಣೆಯನ್ನು ನಡೆಸಬೇಕು.


“ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬಗಳನ್ನು ಆಚರಿಸಿರಿ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದ ನಿಯಮಿತ ಕಾಲದಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ನೀವು ಚೈತ್ರಮಾಸದಲ್ಲಿ ಈಜಿಪ್ಟಿನಿಂದ ಬಿಡುಗಡೆಯಾಗಿ ಹೊರಬಂದದ್ದು.


ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಏಕೆಂದರೆ ನೀವು ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ ಅವಸರದಿಂದ ಈಜಿಪ್ಟನ್ನು ಬಿಟ್ಟುಬಂದಿರಿ. ಈಜಿಪ್ಟ್ ದೇಶದಿಂದ ನಿಮಗೆ ಬಿಡುಗಡೆಯಾದ ದಿನವು ನಿಮ್ಮ ಜೀವಮಾನವೆಲ್ಲಾ ನೆನಪಿನಲ್ಲಿರುವಂತೆ, ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ನೀವು ಏಳು ದಿವಸಗಳವರೆಗೂ ತಿನ್ನಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು