Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:19 - ಕನ್ನಡ ಸತ್ಯವೇದವು C.L. Bible (BSI)

19 ಏಳು ದಿನ ನಿಮ್ಮ ಮನೆಗಳಲ್ಲಿ ಹುಳಿಹಿಟ್ಟೇ ಇರಕೂಡದು. ಹುಳಿ ಬೆರಸಿದ್ದನ್ನು ತಿನ್ನುವವನು ಪರದೇಶದವನಾಗಿರಲಿ, ಸ್ವದೇಶದವನಾಗಿರಲಿ ಇಸ್ರಯೇಲ್ ಜನರಿಂದ ಬಹಿಷ್ಕೃತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆ ಏಳು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಹುಳಿಹಿಟ್ಟು ಇರಬಾರದು. ಹುಳಿ ಬೆರಸಿದ್ದನ್ನು ಯಾರು ತಿನ್ನುವರೋ ಅವನು ಪರದೇಶದವನಾಗಲಿ, ಸ್ವದೇಶದವನಾಗಲಿ ಇಸ್ರಾಯೇಲ ಸಮೂಹದೊಳಗಿಂದ ತೆಗೆದುಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆ ಏಳು ದಿನಗಳೂ ನಿಮ್ಮ ಮನೆಗಳಲ್ಲಿ ಹುಳಿಯಿಟ್ಟೇ ಇರಕೂಡದು. ಹುಳಿ ಬೆರಸಿದ್ದನ್ನು ತಿನ್ನುವವನು ಪರದೇಶದವನಾಗಲಿ ಸ್ವದೇಶದವನಾಗಲಿ ಇಸ್ರಾಯೇಲ್ ಜನರೊಳಗಿಂದ ತೆಗೆದುಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಏಳು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಯಾವ ಹುಳಿಯೂ ಇರಬಾರದು. ಯಾವ ಇಸ್ರೇಲಿಯಾದರೂ ಯಾವ ವಿದೇಶಿಯನಾದರೂ ಈ ಹಬ್ಬದಲ್ಲಿ ಹುಳಿಯನ್ನು ತಿಂದರೆ, ಅವನನ್ನು ಇಸ್ರೇಲರ ಸಮುದಾಯದಿಂದ ಬಹಿಷ್ಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಏಳು ದಿನಗಳವರೆಗೆ ಹುಳಿ ಹಿಟ್ಟು ನಿಮ್ಮ ಮನೆಗಳಲ್ಲಿ ಸಿಕ್ಕಬಾರದು, ಏಕೆಂದರೆ ಹುಳಿ ಬೆರೆಸಿದ್ದನ್ನು ಯಾರು ತಿನ್ನುವರೋ ಅವರು ಪರದೇಶದವರಾಗಲಿ, ಸ್ವದೇಶದವರಾಗಲಿ ಅವರನ್ನು ಇಸ್ರಾಯೇಲ್ ಸಭೆಯೊಳಗಿಂದ ಬಹಿಷ್ಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:19
13 ತಿಳಿವುಗಳ ಹೋಲಿಕೆ  

ಏಳು ದಿವಸ ನೀವು ಹುಳಿರಹಿತ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳಿಂದ ತೆಗೆದುಬಿಡಬೇಕು. ಆ ಏಳು ದಿನಗಳಲ್ಲಿ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನನ್ನು ಇಸ್ರಯೇಲರಿಂದ ಬಹಿಷ್ಕರಿಸಬೇಕು.


ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಏಕೆಂದರೆ ನೀವು ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ ಅವಸರದಿಂದ ಈಜಿಪ್ಟನ್ನು ಬಿಟ್ಟುಬಂದಿರಿ. ಈಜಿಪ್ಟ್ ದೇಶದಿಂದ ನಿಮಗೆ ಬಿಡುಗಡೆಯಾದ ದಿನವು ನಿಮ್ಮ ಜೀವಮಾನವೆಲ್ಲಾ ನೆನಪಿನಲ್ಲಿರುವಂತೆ, ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ನೀವು ಏಳು ದಿವಸಗಳವರೆಗೂ ತಿನ್ನಬೇಕು.


ಹುಳಿಯಿಲ್ಲದ ರೊಟ್ಟಿ ತಿನ್ನುವ ಹಬ್ಬ ಒಂದು. ನಾನು ನಿಮಗೆ ಆಜ್ಞಾಪಿಸಿದಂತೆ ಚೈತ್ರಮಾಸದ ನಿಗದಿಯಾದ ಕಾಲದಲ್ಲಿ ಏಳು ದಿವಸವೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಏಕೆಂದರೆ ಆ ಮಾಸದಲ್ಲೇ ನೀವು ಈಜಿಪ್ಟಿನಿಂದ ಹೊರಟುಬಂದದ್ದು. ನನ್ನ ಸನ್ನಿಧಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯಿಲ್ಲದೆ ಬರೀ ಕೈಯಲ್ಲಿ ಬರಕೂಡದು.


ಒಬ್ಬನು ತಾನು ಶುದ್ಧನಾಗಿದ್ದರೂ ಪ್ರಯಾಣದಲ್ಲಿಲ್ಲದಿದ್ದರೂ ಪಾಸ್ಕ ಹಬ್ಬವನ್ನು ಆಚರಿಸಲು ತಪ್ಪಿದ್ದೇ ಆದರೆ ಅಂಥವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಸರ್ವೇಶ್ವರನಿಂದ ನಿಯಮಿತವಾದ ಬಲಿಯನ್ನು ಸಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ಪಾಪಫಲವನ್ನು ಅನುಭವಿಸಲೇಬೇಕು.


“ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬಗಳನ್ನು ಆಚರಿಸಿರಿ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದ ನಿಯಮಿತ ಕಾಲದಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ನೀವು ಚೈತ್ರಮಾಸದಲ್ಲಿ ಈಜಿಪ್ಟಿನಿಂದ ಬಿಡುಗಡೆಯಾಗಿ ಹೊರಬಂದದ್ದು.


ನಿಮ್ಮ ಬಳಿ ವಾಸವಾಗಿರುವ ವಿದೇಶೀಯನೊಬ್ಬನು ಸರ್ವೇಶ್ವರನಿಗೆ ಈ ಪಾಸ್ಕಹಬ್ಬವನ್ನು ಕೊಂಡಾಡಬೇಕೆಂಬ ಆಸೆಯಿದ್ದರೆ ಅವನೂ ಅವನ ಕುಟುಂಬಕ್ಕೆ ಸೇರಿದ ಗಂಡಸರೆಲ್ಲರೂ ಸುನ್ನತಿಮಾಡಿಸಿಕೊಳ್ಳಬೇಕು. ಬಳಿಕ ಅವನು ಬಂದು ಈ ಹಬ್ಬವನ್ನು ಆಚರಿಸಬಹುದು. ಅಂಥವನು ಸ್ವದೇಶದವನಂತೆ ಆಗುತ್ತಾನೆ. ಆದರೆ ಸುನ್ನತಿ ಮಾಡಿಸಿಕೊಳ್ಳದ ಯಾವನೂ ಆ ಭೋಜನದಲ್ಲಿ ಭಾಗಿ ಆಗಕೂಡದು.


ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಹೀಗೆಂದರು: “ಪಾಸ್ಕಹಬ್ಬ ಆಚರಣೆಯ ಕ್ರಮ ಇದು - ವಿದೇಶೀಯನಾರೂ ಆ ಭೋಜನದಲ್ಲಿ ಪಾಲ್ಗೊಳ್ಳಬಾರದು.


ನೀವು ನಿಮ್ಮ ಎಲ್ಲಾ ಮನೆಗಳಲ್ಲಿ ಹುಳಿರಹಿತ ರೊಟ್ಟಿಗಳನ್ನು ತಿನ್ನಬೇಕೇ ಹೊರತು ಹುಳಿಸಹಿತವಾದ ಯಾವುದನ್ನೂ ತಿನ್ನಕೂಡದು,” ಎಂದು ವಿಧಿಸಿದರು.


ಮೋಶೆ ಇಸ್ರಯೇಲರಿಗೆ, “ಗುಲಾಮತನದಲ್ಲಿದ್ದು ಈಜಿಪ್ಟ್ ದೇಶದಿಂದ ಬಿಡುಗಡೆಯಾದ ಈ ದಿನವನ್ನು ನೀವು ಸ್ಮರಿಸಬೇಕು. ಈ ದಿನದಲ್ಲೇ ಸರ್ವೇಶ್ವರ ಸ್ವಾಮಿ ತಮ್ಮ ಭುಜಬಲ ಪ್ರಯೋಗಿಸಿ ನಿಮ್ಮನ್ನು ಅಲ್ಲಿಂದ ವಿಮೋಚಿಸಿದರು. ಈ ದಿನದಂದು ನೀವು ಹುಳಿಬೆರತದ್ದನ್ನು ತಿನ್ನಕೂಡದು.


ಆ ಏಳು ದಿವಸವು ಹಿಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು. ಮಾತ್ರವಲ್ಲ ನಿಮ್ಮ ಬಳಿಯಲ್ಲಿ ಅಥವಾ ನಿಮ್ಮ ನಾಡಿನಲ್ಲಿ ಹುಳಿಯಾಗಲಿ ಹುಳಿ ಹಿಟ್ಟಾಗಲಿ ಇರಕೂಡದು.


“ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ವೇಳೆಯಲ್ಲಿ ಸರ್ವೇಶ್ವರ ನೇಮಿಸಿದ ಪಸ್ಕಹಬ್ಬವಾಗಬೇಕು.


ಇದರಂತೆ ತೈಲವನ್ನು ಮಾಡುವವನು ಹಾಗು ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನು ತನ್ನ ಕುಲದಿಂದ ಬಹಿಷ್ಕೃತನಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು