Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:2 - ಕನ್ನಡ ಸತ್ಯವೇದವು C.L. Bible (BSI)

2 “ಎಲ್ಲ ಮಾಸಗಳಲ್ಲಿ ಇದೇ ನಿಮಗೆ ಆದಿ ಮಾಸವಾಗಿರಬೇಕು. ಇದೇ ನಿಮಗೆ ಪ್ರತಿ ವರ್ಷದ ಮೊದಲನೆಯ ತಿಂಗಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಎಲ್ಲಾ ತಿಂಗಳುಗಳಲ್ಲಿ ಇದೇ ನಿಮಗೆ ಮೊದಲ ತಿಂಗಳಾಗಿರಬೇಕು. ಇದೇ ನಿಮಗೆ ಪ್ರತಿ ವರ್ಷದ ಮೊದಲನೆಯ ತಿಂಗಳಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಎಲ್ಲಾ ಮಾಸಗಳಲ್ಲಿ ಇದೇ ನಿಮಗೆ ಆದಿಮಾಸವಾಗಿರಬೇಕು, ಇದೇ ನಿಮಗೆ ಪ್ರತಿ ವರುಷದ ಮೊದಲನೆಯ ತಿಂಗಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಈ ತಿಂಗಳು ನಿಮಗೆ ವರ್ಷದ ಮೊದಲನೆ ತಿಂಗಳಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಎಲ್ಲಾ ಮಾಸಗಳಲ್ಲಿ ಇದೇ ನಿಮಗೆ ಆದಿಮಾಸವಾಗಿರಬೇಕು. ಇದು ನಿಮಗೆ ವರುಷದ ಮೊದಲನೆಯ ತಿಂಗಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:2
14 ತಿಳಿವುಗಳ ಹೋಲಿಕೆ  

ಚೈತ್ರಮಾಸದ ಈ ದಿನದಂದು ನೀವು ಹೊರಟವರು.


“ನೀವು ಚೈತ್ರಮಾಸದಲ್ಲಿ ಪಾಸ್ಕಹಬ್ಬವನ್ನು ನಿಮ್ಮ ದೇವರಾದ ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು. ಆ ಮಾಸದಲ್ಲೇ ರಾತ್ರಿವೇಳೆಯಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈಜಿಪ್ಟ್ ದೇಶದಿಂದ ಬಿಡುಗಡೆ ಮಾಡಿದ್ದು.


“ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬಗಳನ್ನು ಆಚರಿಸಿರಿ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದ ನಿಯಮಿತ ಕಾಲದಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ನೀವು ಚೈತ್ರಮಾಸದಲ್ಲಿ ಈಜಿಪ್ಟಿನಿಂದ ಬಿಡುಗಡೆಯಾಗಿ ಹೊರಬಂದದ್ದು.


ಹುಳಿಯಿಲ್ಲದ ರೊಟ್ಟಿ ತಿನ್ನುವ ಹಬ್ಬ ಒಂದು. ನಾನು ನಿಮಗೆ ಆಜ್ಞಾಪಿಸಿದಂತೆ ಚೈತ್ರಮಾಸದ ನಿಗದಿಯಾದ ಕಾಲದಲ್ಲಿ ಏಳು ದಿವಸವೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಏಕೆಂದರೆ ಆ ಮಾಸದಲ್ಲೇ ನೀವು ಈಜಿಪ್ಟಿನಿಂದ ಹೊರಟುಬಂದದ್ದು. ನನ್ನ ಸನ್ನಿಧಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯಿಲ್ಲದೆ ಬರೀ ಕೈಯಲ್ಲಿ ಬರಕೂಡದು.


‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಂದು ಸರ್ವೇಶ್ವರಸ್ವಾಮಿ ನೇಮಿಸಿದ ಪಾಸ್ಕಹಬ್ಬವಾಗಬೇಕು.


“ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ವೇಳೆಯಲ್ಲಿ ಸರ್ವೇಶ್ವರ ನೇಮಿಸಿದ ಪಸ್ಕಹಬ್ಬವಾಗಬೇಕು.


ಅರಸ ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ವರ್ಷದ ಮೊದಲನೆಯ ತಿಂಗಳು ಆದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭಮಾಸವೂ ಶುಭದಿನವೂ ಯಾವುದು ಎಂದು ತಿಳಿದುಕೊಳ್ಳಲು ‘ಪೂರ’ನ್ನು ಅಂದರೆ ಚೀಟನ್ನು ಹಾಕಲು ಚೀಟು ಹನ್ನೆರಡನೆ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.


ಈಜಿಪ್ಟ್ ದೇಶದಲ್ಲಿ ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ ಹೀಗೆಂದರು:


ಈ ವಿಷಯದಲ್ಲಿ ನೀವು ಇಸ್ರಯೇಲರ ಸಮಾಜಕ್ಕೆಲ್ಲ ಈ ರೀತಿ ಕಟ್ಟಳೆಯಿಡಬೇಕು: ‘ಈ ತಿಂಗಳ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ಆರಿಸಿಕೊಳ್ಳಬೇಕು.


ಮೊದಲನೇ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯಿಂದ ಇಪ್ಪತ್ತೊಂದನೆಯ ದಿನದ ಸಂಜೆಯವರೆಗೂ ನೀವು ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಕಳಂಕರಹಿತವಾದ ಹೋರಿಯನ್ನು ಆರಿಸಿ ಅದರಿಂದ ಪವಿತ್ರಾಲಯವನ್ನು ಶುದ್ಧೀಕರಿಸಬೇಕು.


ಮೋಶೆ ಇಸ್ರಯೇಲರಿಗೆ, “ಗುಲಾಮತನದಲ್ಲಿದ್ದು ಈಜಿಪ್ಟ್ ದೇಶದಿಂದ ಬಿಡುಗಡೆಯಾದ ಈ ದಿನವನ್ನು ನೀವು ಸ್ಮರಿಸಬೇಕು. ಈ ದಿನದಲ್ಲೇ ಸರ್ವೇಶ್ವರ ಸ್ವಾಮಿ ತಮ್ಮ ಭುಜಬಲ ಪ್ರಯೋಗಿಸಿ ನಿಮ್ಮನ್ನು ಅಲ್ಲಿಂದ ವಿಮೋಚಿಸಿದರು. ಈ ದಿನದಂದು ನೀವು ಹುಳಿಬೆರತದ್ದನ್ನು ತಿನ್ನಕೂಡದು.


ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ಮೋಶೆ ಗುಡಾರವನ್ನು ಎತ್ತಿ ನಿಲ್ಲಿಸಿದನು.


“ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಏಳು ದಿವಸದ ಪಾಸ್ಕಹಬ್ಬವನ್ನು ಆಚರಿಸತೊಡಗಬೇಕು; ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು