Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:22 - ಕನ್ನಡ ಸತ್ಯವೇದವು C.L. Bible (BSI)

22 ಹಿಸ್ಸೋಪ್ ಗಿಡದ ಕುಚ್ಚನ್ನು ಬಟ್ಟಲಿನಲ್ಲಿರುವ ಆ ರಕ್ತದಲ್ಲಿ ಅದ್ದಿ ಬಾಗಿಲಿನ ಪಟ್ಟಿಗೂ ಅದರ ನಿಲುವು ಕಂಬಗಳೆರಡಕ್ಕೂ ಹಚ್ಚಿರಿ. ಬಳಿಕ ನಿಮ್ಮಲ್ಲಿ ಒಬ್ಬರೂ ಸೂರ್ಯೋದಯದವರೆಗೆ ಬಾಗಿಲಿನಿಂದ ಹೊರಗೆ ಹೋಗಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹಿಸ್ಸೋಪ್ ಗಿಡದ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿಲಿನ ಮೇಲಿನ ಅಡ್ಡಪಟ್ಟಿಗೂ, ಅದರ ಪಕ್ಕದಲ್ಲಿರುವ ಎರಡು ನಿಲುವುಪಟ್ಟಿಗಳಿಗೂ ಹಚ್ಚಬೇಕು. ತರುವಾಯ ನಿಮ್ಮಲ್ಲಿ ಒಬ್ಬರೂ ಬೆಳಗಾಗುವವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೊರಗೆ ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಬಟ್ಟಲಿನಲ್ಲಿರುವ ಆ ರಕ್ತದಲ್ಲಿ ಅದ್ದಿ ಬಾಗಲಿನ ಮೇಲಣ ಪಟ್ಟಿಗೂ ಎರಡು ನಿಲುವುಕಂಬಗಳಿಗೂ ಹಚ್ಚಬೇಕು. ತರುವಾಯ ನಿಮ್ಮಲ್ಲಿ ಒಬ್ಬರೂ ಸೂರ್ಯೋದಯದೊಳಗಾಗಿ ಬಾಗಲಿನಿಂದ ಹೊರಗೆ ಹೋಗಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ರಕ್ತ ತುಂಬಿರುವ ಪಾತ್ರೆಯಲ್ಲಿ ಅದ್ದಿರಿ. ರಕ್ತವನ್ನು ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿರಿ. ಮುಂಜಾನೆಯಾಗುವವರೆಗೆ ಯಾರೂ ತಮ್ಮ ಮನೆಯನ್ನು ಬಿಟ್ಟು ಹೊರಗೆ ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹಿಸ್ಸೋಪ ಗಿಡದ ಕಟ್ಟನ್ನು ತೆಗೆದುಕೊಂಡು, ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ, ಬಾಗಿಲಿನ ಮೇಲೆ ಅಡ್ಡ ಪಟ್ಟಿಗೂ, ಅದರ ಪಕ್ಕದಲ್ಲಿರುವ ಎರಡು ನಿಲುವು ಕಂಬಗಳಿಗೂ ಹಚ್ಚಿರಿ. ನಿಮ್ಮಲ್ಲಿ ಯಾರೂ ಬೆಳಗಾಗುವವರೆಗೆ ಮನೆಯ ಬಾಗಿಲನ್ನು ಬಿಟ್ಟುಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:22
13 ತಿಳಿವುಗಳ ಹೋಲಿಕೆ  

ಚೊಚ್ಚಲ ಮಕ್ಕಳನ್ನು ಸಂಹರಿಸುವಾತನು ಇಸ್ರಯೇಲರನ್ನು ಮುಟ್ಟದಂತೆ ರಕ್ತವನ್ನು ಚಿಮುಕಿಸಿ ಪಾಸ್ಕವನ್ನು ಆಚರಿಸುವಂತೆ ಮೋಶೆ ವಿಧಿಸಿದ್ದು ವಿಶ್ವಾಸದಿಂದಲೇ.


ಹಿಸ್ಸೋಪಿನಿಂದ ನೀ ಚಿಮುಕಿಸೆ, ನಾ ಶುದ್ಧನಾಗುವೆ I ನೀ ತೊಳೆದೆಯಾದರೆ, ಹಿಮಕ್ಕಿಂತ ನಾ ಬೆಳ್ಳಗಾಗುವೆ II


ಬಳಿಕ ಮೈಲಿಗೆಯಾಗದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಗೊಂಚಲಿನಿಂದ ಸಾವಾದ, ಆ ಡೇರೆಯ ಮೇಲೂ ಅದರಲ್ಲಿರುವ ಸಲಕರಣೆಗಳ ಮೇಲೂ ವ್ಯಕ್ತಿಗಳ ಮೇಲೂ ಚಿಮುಕಿಸಬೇಕು. ಹಾಗೆಯೇ ಎಲುಬಾಗಲಿ, ಹತನಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾರಿಗೆ ಸೋಂಕಿತೋ ಅವರ ಮೇಲೆಯೂ ಚಿಮುಕಿಸಬೇಕು.


ಮೋಶೆ ಧರ್ಮಶಾಸ್ತ್ರದ ಆಜ್ಞೆಗಳನ್ನೆಲ್ಲ ಸಾರಿ ಹೇಳಿ, ಹೋತ ಹಾಗೂ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅದಕ್ಕೆ ನೀರು ಬೆರೆಸಿದನು; ಅದನ್ನು ಕೆಂಪು ಉಣ್ಣೆಯ ನೂಲಿನಿಂದ ಕಟ್ಟಿದ ಹಿಸ್ಸೋಪ್ ಕಡ್ಡಿಗಳಿಂದ ಪವಿತ್ರಗ್ರಂಥದ ಮೇಲೂ ಜನರ ಮೇಲೂ ಚಿಮುಕಿಸಿದನು.


ಹಳೆಯ ಒಡಂಬಡಿಕೆಯಲ್ಲಿ ದೇವಾರಾಧನೆಗೆ ವಿಧಿನಿಯಮಗಳಿದ್ದವು; ಮಾನವ ನಿರ್ಮಿತ ದೇವಾಲಯವೂ ಇತ್ತು.


ಅವುಗಳ ರಕ್ತದಲ್ಲಿ ಸ್ವಲ್ಪ ತೆಗೆದು ತಾವು ಆ ಭೋಜನ ಮಾಡುವ ಮನೆಯ ಬಾಗಿಲಿನ ಎರಡು ನಿಲುವು ಕಂಬಗಳಿಗೂ ಮೇಲಿನ ಪಟ್ಟಿಗೂ ಹಚ್ಚಬೇಕು.


ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.


ನೀವು ಯೇಸುಕ್ರಿಸ್ತರಿಗೆ ಶರಣಾಗಿ ಅವರ ರಕ್ತದಿಂದ ಶುದ್ಧೀಕರಣಹೊಂದಲು ತಂದೆಯಾದ ದೇವರ ಸಂಕಲ್ಪಾನುಸಾರ ಆಯ್ಕೆಯಾದವರು; ಅವರ ಆತ್ಮದ ಮುಖಾಂತರ ಪವಿತ್ರೀಕರಿಸಲಾದವರು. ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಸಮೃದ್ಧಿಯಾಗಿ ಲಭಿಸಲಿ!


ಹೊಸ ಒಡಂಬಡಿಕೆಯ ಮಧ್ಯಸ್ಥರಾದ ಯೇಸುಸ್ವಾಮಿಯ ಬಳಿಗೆ, ಹೇಬೆಲನ ರಕ್ತಕ್ಕಿಂತಲೂ ಅಮೋಘವಾಗಿ ಮೊರೆಯಿಡುವ ಪ್ರೋಕ್ಷಣಾರಕ್ತದ ಬಳಿಗೆ ನೀವು ಬಂದಿದ್ದೀರಿ.


ಬಳಿಕ ಅವರೆಲ್ಲರು ಕೀರ್ತನೆ ಹಾಡಿ, ಓಲಿವ್ ಗುಡ್ಡಕ್ಕೆ ಹೊರಟರು.


ನನ್ನ ಜನರೇ, ಹೋಗಿ; ನಿಮ್ಮ ನಿಮ್ಮ ಮನೆಗಳನ್ನು ಸೇರಿ ಬಾಗಿಲು ಮುಚ್ಚಿಕೊಳ್ಳಿ. ದೇವರ ಕೋಪ ತೀರುವತನಕ ಕೊಂಚಕಾಲ ಅವಿತುಕೊಳ್ಳಿ.


ಅವರಲ್ಲಿ ಯಾರಾದರೂ ಮನೆಬಿಟ್ಟು ಬೀದಿಗೆ ಬಂದರೆ ಅವರ ಮರಣಕ್ಕೆ ಅವರೇ ಕಾರಣರು ಆಗುವರು. ಅದಕ್ಕೆ ನಾವು ಹೊಣೆಗಾರರಲ್ಲ. ಆದರೆ ನಿನ್ನೊಡನೆ ಮನೆಯಲ್ಲಿದ್ದವರ ಮೇಲೆ ಯಾರಾದರೂ ಕೈಮಾಡಿದ್ದಾದರೆ ಆ ರಕ್ತಾಪರಾಧ ನಮ್ಮ ತಲೆಯ ಮೇಲಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು