Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:23 - ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರ ಈಜಿಪ್ಟಿನವರನ್ನು ವಧಿಸಲು ಆ ದೇಶದ ನಡುವೆ ಹಾದುಹೋಗುವಾಗ ನಿಮ್ಮ ನಿಮ್ಮ ಮನೆಬಾಗಲಿನ ಮೇಲ್ಪಟ್ಟಿಯಲ್ಲೂ ಹಾಗೂ ಎರಡು ನಿಲುವು ಕಂಬಗಳಲ್ಲೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿಹೋಗುವರು. ನಿಮ್ಮನ್ನು ವಧಿಸಲು ವಿನಾಶಕನನ್ನು ನಿಮ್ಮ ಮನೆಗಳಿಗೆ ಅವರು ಬರಗೊಡಿಸುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನು ಐಗುಪ್ತ್ಯರನ್ನು ಹತಮಾಡುವುದಕ್ಕೆ ದೇಶದ ನಡುವೆ ಹಾದುಹೋಗುವನು. ಆಗ ನಿಮ್ಮ ನಿಮ್ಮ ಮನೆಬಾಗಿಲಿನ ಮೇಲಣ ಪಟ್ಟಿಯಲ್ಲಿಯೂ, ಎರಡು ನಿಲುವು ಪಟ್ಟಿಗಳಲ್ಲಿಯೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿ ಹೋಗುವನು. ನಿಮ್ಮ ಪ್ರಾಣ ತೆಗೆಯುವುದಕ್ಕೆ ಸಂಹಾರಕನು ನಿಮ್ಮ ಮನೆಗಳಲ್ಲಿ ಬರುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನು ಐಗುಪ್ತ್ಯರನ್ನು ಹತಮಾಡುವದಕ್ಕೆ ದೇಶದ ನಡುವೆ ಹಾದುಹೋಗುವಾಗ ನಿಮ್ಮ ನಿಮ್ಮ ಮನೇಬಾಗಲಿನ ಮೇಲಣ ಪಟ್ಟಿಯಲ್ಲಿಯೂ ಎರಡು ನಿಲುವು ಕಂಬಗಳಲ್ಲಿಯೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿಹೋಗುವನು. ನಿಮ್ಮ ಪ್ರಾಣ ತೆಗೆಯುವದಕ್ಕೆ ಸಂಹಾರಕನನ್ನು ನಿಮ್ಮ ಮನೆಗಳಲ್ಲಿ ಬರಗೊಡಿಸುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆ ಸಮಯದಲ್ಲಿ ಚೊಚ್ಚಲಾದವುಗಳನ್ನು ಸಂಹರಿಸಲು ಯೆಹೋವನು ಈಜಿಪ್ಟಿನ ಮೂಲಕ ಹಾದುಹೋಗುವನು. ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿದ ರಕ್ತವನ್ನು ಯೆಹೋವನು ನೋಡಿ ಆ ಮನೆಯನ್ನು ಸಂರಕ್ಷಿಸುವನು. ಸಂಹಾರಕನು ನಿಮ್ಮ ಮನೆಯೊಳಗೆ ಬಂದು ಸಂಹರಿಸಲು ಯೆಹೋವನು ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಏಕೆಂದರೆ ಯೆಹೋವ ದೇವರು ಈಜಿಪ್ಟಿನವರನ್ನು ಸಂಹರಿಸುವುದಕ್ಕಾಗಿ ಹಾದುಹೋಗುವರು. ಅವರು ಅಡ್ಡ ಪಟ್ಟಿಯ ಮೇಲೂ, ಅದರ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ, ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡದಂತೆ, ಯೆಹೋವ ದೇವರು ನಿಮ್ಮ ಬಾಗಿಲುಗಳನ್ನು ದಾಟಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:23
14 ತಿಳಿವುಗಳ ಹೋಲಿಕೆ  

ಭೂಮಿಯ ಮೇಲಣ ಹುಲ್ಲಿಗಾಗಲಿ, ಯಾವುದೇ ಹಸಿರು ಇಲ್ಲವೇ ಮರಗಳಿಗಾಗಲಿ ಕೇಡನ್ನುಂಟುಮಾಡಬಾರದು ಎಂದೂ ಮಾನವರಲ್ಲಿ ಯಾರ ಹಣೆಯ ಮೇಲೆ ದೇವರ ಮುದ್ರೆಯಿಲ್ಲವೋ ಅಂಥವರಿಗೆ ಮಾತ್ರ ಕೇಡು ಮಾಡಬಹುದೆಂದೂ ಅಪ್ಪಣೆಯಾಗಿತ್ತು.


“ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ನಾವು ಮುದ್ರೆಯೊತ್ತುವ ತನಕ ಭೂಮಿಗಾಗಲಿ, ಸಮುದ್ರಕ್ಕಾಗಲಿ, ಇಲ್ಲವೇ ಮರಗಳಿಗಾಗಲಿ ಕೇಡನ್ನು ಮಾಡಬೇಡಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.


ಚೊಚ್ಚಲ ಮಕ್ಕಳನ್ನು ಸಂಹರಿಸುವಾತನು ಇಸ್ರಯೇಲರನ್ನು ಮುಟ್ಟದಂತೆ ರಕ್ತವನ್ನು ಚಿಮುಕಿಸಿ ಪಾಸ್ಕವನ್ನು ಆಚರಿಸುವಂತೆ ಮೋಶೆ ವಿಧಿಸಿದ್ದು ವಿಶ್ವಾಸದಿಂದಲೇ.


ಮತ್ತೆ ಕೆಲವರು ಗೊಣಗುಟ್ಟಿದರು; ಸಂಹಾರಕ ದೂತನಿಂದ ಸಂಹರಿಸಲ್ಪಟ್ಟರು. ನೀವೂ ಅವರಂತೆ ಗೊಣಗುಟ್ಟುವವರಾಗಬೇಡಿ.


ವೃದ್ಧ, ಯುವಕ, ಯುವತಿ, ಮಹಿಳೆ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿ,” ಎಂದು ನನಗೆ ಕೇಳಿಸುವಂತೆ ಅಪ್ಪಣೆಮಾಡಿದರು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


ಆಗ ಸರ್ವೇಶ್ವರ ಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಬೆಳಿಗ್ಗೆ ಎದ್ದುನೋಡುವಾಗ ಅವರೆಲ್ಲರೂ ಹೆಣಗಳಾಗಿದ್ದರು.


ದೇವದೂತನು ಜೆರುಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಸರ್ವೇಶ್ವರ ಆ ಕೇಡಿನ ವಿಷಯದಲ್ಲಿ ನೊಂದುಕೊಂಡು, ಸಂಹಾರಕ ದೂತನಿಗೆ, “ಈಗ ಸಾಕು, ನಿನ್ನ ಕೈಯನ್ನು ಹಿಂತೆಗೆ,” ಎಂದು ಆಜ್ಞಾಪಿಸಿದರು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.


ಹೊಸ ಒಡಂಬಡಿಕೆಯ ಮಧ್ಯಸ್ಥರಾದ ಯೇಸುಸ್ವಾಮಿಯ ಬಳಿಗೆ, ಹೇಬೆಲನ ರಕ್ತಕ್ಕಿಂತಲೂ ಅಮೋಘವಾಗಿ ಮೊರೆಯಿಡುವ ಪ್ರೋಕ್ಷಣಾರಕ್ತದ ಬಳಿಗೆ ನೀವು ಬಂದಿದ್ದೀರಿ.


“ನೀನು ಜೆರುಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಾಡಿ, ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗೆ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು,” ಎಂದು ಅಪ್ಪಣೆಕೊಟ್ಟರು.


ಮೋಶೆ ಫರೋಹನಿಗೆ ಇಂತೆಂದನು: “ಸರ್ವೇಶ್ವರ ಮಾಡಿರುವ ಅಪ್ಪಣೆ ಇದು: ‘ನಡುರಾತ್ರಿಯ ವೇಳೆಯಲ್ಲಿ ನಾನೇ ಈಜಿಪ್ಟಿನವರ ನಡುವೆ ಹಾದುಹೋಗುವೆನು.


ಅವುಗಳ ರಕ್ತದಲ್ಲಿ ಸ್ವಲ್ಪ ತೆಗೆದು ತಾವು ಆ ಭೋಜನ ಮಾಡುವ ಮನೆಯ ಬಾಗಿಲಿನ ಎರಡು ನಿಲುವು ಕಂಬಗಳಿಗೂ ಮೇಲಿನ ಪಟ್ಟಿಗೂ ಹಚ್ಚಬೇಕು.


ನನ್ನ ಜನರೇ, ಹೋಗಿ; ನಿಮ್ಮ ನಿಮ್ಮ ಮನೆಗಳನ್ನು ಸೇರಿ ಬಾಗಿಲು ಮುಚ್ಚಿಕೊಳ್ಳಿ. ದೇವರ ಕೋಪ ತೀರುವತನಕ ಕೊಂಚಕಾಲ ಅವಿತುಕೊಳ್ಳಿ.


ಆಹಾ! ಬಚ್ಚಿಡಲಾರೆಯಾ ನನ್ನನ್ನು ಪಾತಾಳದೊಳಗೆ? ಅಲ್ಲಿ ಮರೆಮಾಚಿಡಲಾರೆಯಾ ನಿನ್ನ ಕೋಪ ಇಳಿಯುವವರೆಗೆ? ಕಾಲವನ್ನು ಗೊತ್ತುಮಾಡಲಾರೆಯಾ ನನ್ನನು ನೆನೆಯುವುದಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು