Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:24 - ಕನ್ನಡ ಸತ್ಯವೇದವು C.L. Bible (BSI)

24 ನೀವು ಮತ್ತು ನಿಮ್ಮ ಸಂತತಿಯವರು ಈ ನಿಯಮಗಳನ್ನು ಶಾಶ್ವತವಾಗಿ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇದು ನಿಮಗೂ, ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮವೆಂದು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮವೆಂದು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನೀವು ಈ ಆಜ್ಞೆಯನ್ನು ಜ್ಞಾಪಕದಲ್ಲಿಡಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಇದನ್ನು ಒಂದು ಶಾಸನವಾಗಿ ನೀವೂ, ನಿಮ್ಮ ಪುತ್ರರೂ ಸದಾಕಾಲಕ್ಕೂ ಆಚರಿಸತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:24
6 ತಿಳಿವುಗಳ ಹೋಲಿಕೆ  

ಆ ದಿನವು ನಿಮಗೆ ಸ್ಮರಣೀಯ ದಿನವಾಗಿರುವುದು. ಅಂದು ನೀವು ಸರ್ವೇಶ್ವರನ ಗೌರವಾರ್ಥ ಹಬ್ಬವನ್ನು ಕೊಂಡಾಡಬೇಕು. ಅದನ್ನು ಶಾಶ್ವತ ನಿಯಮವೆಂದು ತಲತಲಾಂತರಕ್ಕೂ ಆಚರಿಸಬೇಕು.


ಹುಳಿರಹಿತ ರೊಟ್ಟಿಯನ್ನು ತಿನ್ನುವ ಹಬ್ಬವನ್ನು ನೀವು ಆಚರಿಸಬೇಕು. ಏಕೆಂದರೆ ಆ ದಿನದಲ್ಲೇ ನಾನು ನಿಮ್ಮ ಪಾಳೆಯದವರನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದದ್ದು . ನೀವೂ ನಿಮ್ಮ ಸಂತತಿಯವರೂ ಆ ದಿನವನ್ನು ಆಚರಣೆಗೆ ತರಬೇಕು.


ಸರ್ವೇಶ್ವರ ತಮ್ಮ ವಾಗ್ದಾನದ ಮೇರೆಗೆ ನಿಮಗೆ ಕೊಡುವ ನಾಡಿಗೆ ನೀವು ಸೇರಿದಾಗ ಈ ವಿಧಿಯನ್ನು ಅನುಸರಿಸಬೇಕು.


ಸರ್ವೇಶ್ವರ ನಿಮ್ಮ ಪೂರ್ವಜರಿಗೆ ಪ್ರಮಾಣವಾಗಿ ಹೇಳಿದಂತೆ ನಿಮ್ಮನ್ನು ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ, ನೀವು ಈ ಆಚರಣೆಯನ್ನು ಈ ತಿಂಗಳಿನಲ್ಲೇ ನಡೆಸಬೇಕು.


ವರ್ಷವರ್ಷವೂ ನಿಯಮಿತ ಕಾಲದಲ್ಲಿ ಈ ಆಚರಣೆಯನ್ನು ನಡೆಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು