Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:27 - ಕನ್ನಡ ಸತ್ಯವೇದವು C.L. Bible (BSI)

27 ‘ಸರ್ವೇಶ್ವರ ಸ್ವಾಮಿ ಈಜಿಪ್ಟಿನವರನ್ನು ಸಂಹರಿಸಿದಾಗ ಆ ದೇಶದಲ್ಲೇ ಇದ್ದ ಇಸ್ರಯೇಲರ ಮನೆಗಳನ್ನು ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮವರನ್ನು ಉಳಿಸಿದರು. ಆದ್ದರಿಂದ ಸರ್ವೇಶ್ವರ ಸ್ವಾಮಿಯ ಗೌರವಾರ್ಥ ಈ ಪಾಸ್ಕ ಬಲಿಯ ಆಚರಣೆಯನ್ನು ನಡೆಸುತ್ತಿದ್ದೇವೆ’ ಎಂದು ಉತ್ತರಕೊಡಿ,” ಎಂದು ಹೇಳಿದನು. ...

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನೀವು ಅವರಿಗೆ, ‘ಯೆಹೋವನು ಐಗುಪ್ತ್ಯರನ್ನು ಸಂಹರಿಸಿದಾಗ ಐಗುಪ್ತ ದೇಶದಲ್ಲಿದ್ದ ಇಸ್ರಾಯೇಲರ ಮನೆಗಳಲ್ಲಿ ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮ ಮನೆಯವರನ್ನು ಉಳಿಸಿದ್ದರಿಂದ ನಾವು ಯೆಹೋವನ ಪಸ್ಕವೆಂಬ ಈ ಆಚರಣೆಯನ್ನು ನಡೆಸಲೇಬೇಕು ಎಂದು ಹೇಳಬೇಕು’” ಎಂದನು. ಆಗ ಜನರು ತಲೆಬಾಗಿ ಯೆಹೋವನಿಗೆ ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೆಹೋವನು ಐಗುಪ್ತ್ಯರನ್ನು ಸಂಹರಿಸಿದಾಗ ಐಗುಪ್ತದೇಶದಲ್ಲಿದ್ದ ಇಸ್ರಾಯೇಲ್ಯರ ಮನೆಗಳಲ್ಲಿ ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮವರನ್ನು ಉಳಿಸಿದದರಿಂದ ನಾವು ಯೆಹೋವನ ಪಸ್ಕವೆಂಬ ಈ ಯಜ್ಞಾಚಾರವನ್ನು ನಡಿಸುವದುಂಟು ಎಂದು ಹೇಳಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ‘ಇದು ಯೆಹೋವನನ್ನು ಸನ್ಮಾನಿಸಲು ಮಾಡುವ ಪಸ್ಕಹಬ್ಬವಾಗಿದೆ. ಯಾಕೆಂದರೆ ನಾವು ಈಜಿಪ್ಟಿನಲ್ಲಿದ್ದಾಗ ಯೆಹೋವನು ಇಸ್ರೇಲರ ಮನೆಗಳನ್ನು ಬಿಟ್ಟು ದಾಟಿಹೋದನು; ಈಜಿಪ್ಟಿನವರನ್ನು ಸಂಹರಿಸಿದನು; ಆದರೆ ಆತನು ನಮ್ಮ ಮನೆಗಳಲ್ಲಿದ್ದವರನ್ನು ರಕ್ಷಿಸಿದನು’ ಎಂದು ಹೇಳಬೇಕು. “ಆಗ ಮೋಶೆಯ ಮಾತನ್ನು ಕೇಳುತ್ತಿದ್ದ ಇಸ್ರೇಲರು ಅಡ್ಡಬಿದ್ದು ಯೆಹೋವನನ್ನು ಆರಾಧಿಸಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನೀವು ಅವರಿಗೆ, ‘ಯೆಹೋವ ದೇವರು ಈಜಿಪ್ಟ್ ದೇಶದಲ್ಲಿ ಈಜಿಪ್ಟಿನವರನ್ನು ಸಂಹರಿಸಿ, ನಮ್ಮ ಮನೆಗಳನ್ನು ಕಾಪಾಡುವುದಕ್ಕಾಗಿ ಇಸ್ರಾಯೇಲರ ಮನೆಗಳನ್ನು ದಾಟಿಹೋದ ಯೆಹೋವ ದೇವರ ಪಸ್ಕ ಬಲಿಯ ಆಚರಣೆಯನ್ನು ನಡೆಸುತ್ತಿದ್ದೇವೆ,’ ಎಂದು ನೀವು ಹೇಳಬೇಕು,” ಎಂದನು. ಆಗ ಜನರು ತಲೆಬಾಗಿಸಿ ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:27
18 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ತಮ್ಮನ್ನು ಭೇಟಿಮಾಡಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡಿದ್ದಾರೆಂದು ತಿಳಿದ ಆ ಇಸ್ರಯೇಲರು ತಲೆಬಾಗಿ ಆರಾಧಿಸಿದರು.


ಆ ಭೋಜನವನ್ನು ಮಾಡಬೇಕಾದ ಕ್ರಮ ಇದು: ನೀವು ನಡುಕಟ್ಟಿಕೊಂಡು, ಕೆರಮೆಟ್ಟಿಕೊಂಡು ಊರುಗೋಲನ್ನು ಹಿಡಿದುಕೊಂಡು ಬೇಗ ಬೇಗನೆ ಊಟಮಾಡಬೇಕು. ಏಕೆಂದರೆ ಅದು ಸರ್ವೇಶ್ವರ ಸ್ವಾಮಿಗೆ ಆಚರಿಸತಕ್ಕ ಪಾಸ್ಕಹಬ್ಬ.


ನೀವು ಹುಳಿಯಿಲ್ಲದ ಕಣಕವಾಗಿದ್ದೀರಿ. ಅಪ್ಪಟ ರೊಟ್ಟಿಯಾಗುವಂತೆ ಹುಳಿಯನ್ನು ತೆಗೆದುಹಾಕಿರಿ. ಏಕೆಂದರೆ, ಪಾಸ್ಕ ಯಜ್ಞದ ಕುರಿಮರಿಯಾದ ಕ್ರಿಸ್ತಯೇಸು ಬಲಿಯಾಗಿದ್ದಾರೆ.


ಸರ್ವೇಶ್ವರ ಈಜಿಪ್ಟಿನವರನ್ನು ವಧಿಸಲು ಆ ದೇಶದ ನಡುವೆ ಹಾದುಹೋಗುವಾಗ ನಿಮ್ಮ ನಿಮ್ಮ ಮನೆಬಾಗಲಿನ ಮೇಲ್ಪಟ್ಟಿಯಲ್ಲೂ ಹಾಗೂ ಎರಡು ನಿಲುವು ಕಂಬಗಳಲ್ಲೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿಹೋಗುವರು. ನಿಮ್ಮನ್ನು ವಧಿಸಲು ವಿನಾಶಕನನ್ನು ನಿಮ್ಮ ಮನೆಗಳಿಗೆ ಅವರು ಬರಗೊಡಿಸುವುದೇ ಇಲ್ಲ.


ಎಜ್ರನು ಪರಾತ್ಪರ ದೇವರಾದ ಸರ್ವೇಶ್ವರನನ್ನು ಸ್ತುತಿಸಿದಾಗ ಸರ್ವಜನರೂ ತಮ್ಮ ಕೈಗಳನ್ನೆತ್ತಿ ‘ಆಮೆನ್, ಆಮೆನ್’ ಎಂದು ಹೇಳಿ ನೆಲದಮಟ್ಟಿಗೂ ತಲೆಬಾಗಿ ಸರ್ವೇಶ್ವರನನ್ನು ಆರಾಧಿಸಿದರು.


ಅರಸ ಹಿಜ್ಕೀಯನೂ ಪದಾಧಿಕಾರಿಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಸರ್ವೇಶ್ವರನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.


ಆಗ ಯೆಹೋಷಾಫಾಟನು ನೆಲದ ಮಟ್ಟಿಗೂ ತಲೆಬಾಗಿದನು. ಎಲ್ಲಾ ಯೆಹೂದ್ಯರೂ ಜೆರುಸಲೇಮಿನವರೂ ಸರ್ವೇಶ್ವರನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.


ತರುವಾಯ ದಾವೀದನು ನೆರೆದ ಸಭೆಯವರಿಗೆ, “ನಿಮ್ಮ ದೇವರಾದ ಸರ್ವೇಶ್ವರನನ್ನು ಸ್ತುತಿಸಿರಿ,” ಎಂದು ಹೇಳಿದನು. ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಸ್ತುತಿಸುತ್ತಾ ತಲೆಬಾಗಿ ಅವರನ್ನೂ ಅರಸನನ್ನೂ ನಮಸ್ಕರಿಸಿದರು.


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ಯಾವ ಊರಲ್ಲೂ, ಪಾಸ್ಕದಪಶುವನ್ನು ವಧಿಸಬಾರದು;


ಆಡುಕುರಿಗಳಲ್ಲಾಗಲಿ, ದನಗಳಲ್ಲಿ ಆಗಲಿ ಪಾಸ್ಕದ ಪಶುವನ್ನು, ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲೇ ಅವರಿಗಾಗಿ ನೀವು ಅದನ್ನು ವಧಿಸಬೇಕು.


ನನಗೆ ಬಲಿಯರ್ಪಿಸುವಾಗ ಆ ಬಲಿಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಕೂಡದು. ಪಸ್ಕದಲ್ಲಿ ನೀವು ಸಮರ್ಪಿಸುವ ಬಲಿ ಮಾಂಸವನ್ನು ಮರುದಿನದವರೆಗೂ ಉಳಿಸಬಾರದು.


ಕೂಡಲೇ ಮೋಶೆ ನೆಲದಮೇಲೆ ಅಡ್ಡಬಿದ್ದು ನಮಸ್ಕರಿಸಿ,


ಇಸ್ರಯೇಲರು ತಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ಈ ಸೂಚಕಕಾರ್ಯಗಳನ್ನು ತಿಳಿಸಬೇಕು; ಅಲ್ಲದೆ ಸರ್ವೇಶ್ವರ ಆದ ನಾನು ಈಜಿಪ್ಟಿನವರನ್ನು ಇಷ್ಟಬಂದ ಹಾಗೆ ಆಡಿಸಿ ದಂಡಿಸಿದೆನೆಂದು ತಿಳಿಸಬೇಕು. ಹೀಗೆ ನಾನೇ ಸರ್ವೇಶ್ವರನೆಂದು ಈ ಸೂಚಕಕಾರ್ಯಗಳಿಂದ ನೀವು ತಿಳಿದುಕೊಳ್ಳುವಿರಿ,” ಎಂದರು.


ಜನರು ತಲೆಬಾಗಿ ನಮಸ್ಕರಿಸಿದರು. ಇಸ್ರಯೇಲರು ಅಲ್ಲಿಂದ ಹೊರಟು ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ನಡೆದುಕೊಂಡರು.


ಇನ್ನು ಮುಂದೆ ನಿಮ್ಮ ಮಕ್ಕಳು, ಇದರ ಅರ್ಥವೇನೆಂದು ವಿಚಾರಿಸುವಾಗ ನೀವು ಅವರಿಗೆ, ‘ನಾವು ಗುಲಾಮತನದಲ್ಲಿದ್ದಾಗ ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ಈಜಿಪ್ಟಿನಿಂದ ನಮ್ಮನ್ನು ಬಿಡುಗಡೆ ಮಾಡಿದರು.


ಕೇಳಿದೆವು ಕಿವಿಯಾರೆ ದೇವಾ, ನೀ ಎಸಗಿದ ಘನಕಾರ್ಯಗಳನು I ವಿವರಿಸಿಹರು ನಮ್ಮ ಪೂರ್ವಜರು ನಿನ್ನಾ ಮಹತ್ಕಾರ್ಯಗಳನು II


ಆ ದಿನ ನೀವು ನಿಮ್ಮ ಮಕ್ಕಳಿಗೆ, “ನಮ್ಮ ಜನರು ಈಜಿಪ್ಟಿನಿಂದ ಹೊರಟು ಬಂದಾಗ ಸರ್ವೇಶ್ವರ ನಮಗೋಸ್ಕರ ಮಾಡಿದ ಉಪಕಾರವನ್ನು ಸ್ಮರಿಸುವುದಕ್ಕಾಗಿ ಈ ಆಚರಣೆಯನ್ನು ನಡೆಸುತ್ತಿದ್ದೇವೆ” ಎಂದು ತಿಳಿಸಬೇಕು. ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದ್ದರಿಂದ ಅವರ ನಿಯಮ ನಮ್ಮ ಬಾಯಿಗೆ ಬರುತ್ತಿರಬೇಕು.


ನೇಮವಿತ್ತನು ಯಕೋಬವಂಶಕೆ I ಶಾಸನಕೊಟ್ಟನು ಇಸ್ರಯೇಲರಿಗೆ II ವಿಧಿಸಿದ ನಿಂತು ನಮ್ಮ ಪೂರ್ವಜನರಿಗೆ I “ಕಲಿಸಿರಿ ಇವನ್ನು ನಿಮ್ಮ ಮಕ್ಕಳಿಗೆ” II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು