Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:28 - ಕನ್ನಡ ಸತ್ಯವೇದವು C.L. Bible (BSI)

28 ಜನರು ತಲೆಬಾಗಿ ನಮಸ್ಕರಿಸಿದರು. ಇಸ್ರಯೇಲರು ಅಲ್ಲಿಂದ ಹೊರಟು ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ನಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇಸ್ರಾಯೇಲರು ಅಲ್ಲಿಂದ ಹೊರಟು ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಜನರು ತಲೆಬಾಗಿ ನಮಸ್ಕರಿಸಿದರು. ಇಸ್ರಾಯೇಲ್ಯರು ಅಲ್ಲಿಂದ ಹೊರಟು ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ನಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ್ದಂತೆಯೇ ಇಸ್ರೇಲರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯೆಹೋವ ದೇವರು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಇಸ್ರಾಯೇಲರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:28
23 ತಿಳಿವುಗಳ ಹೋಲಿಕೆ  

ಚೊಚ್ಚಲ ಮಕ್ಕಳನ್ನು ಸಂಹರಿಸುವಾತನು ಇಸ್ರಯೇಲರನ್ನು ಮುಟ್ಟದಂತೆ ರಕ್ತವನ್ನು ಚಿಮುಕಿಸಿ ಪಾಸ್ಕವನ್ನು ಆಚರಿಸುವಂತೆ ಮೋಶೆ ವಿಧಿಸಿದ್ದು ವಿಶ್ವಾಸದಿಂದಲೇ.


‘ಸರ್ವೇಶ್ವರ ಸ್ವಾಮಿ ಈಜಿಪ್ಟಿನವರನ್ನು ಸಂಹರಿಸಿದಾಗ ಆ ದೇಶದಲ್ಲೇ ಇದ್ದ ಇಸ್ರಯೇಲರ ಮನೆಗಳನ್ನು ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮವರನ್ನು ಉಳಿಸಿದರು. ಆದ್ದರಿಂದ ಸರ್ವೇಶ್ವರ ಸ್ವಾಮಿಯ ಗೌರವಾರ್ಥ ಈ ಪಾಸ್ಕ ಬಲಿಯ ಆಚರಣೆಯನ್ನು ನಡೆಸುತ್ತಿದ್ದೇವೆ’ ಎಂದು ಉತ್ತರಕೊಡಿ,” ಎಂದು ಹೇಳಿದನು. ...


ಅರ್ಧರಾತ್ರಿಯಲ್ಲಿ ಸರ್ವೇಶ್ವರ ಸ್ವಾಮಿ ಸಿಂಹಾಸನಾರೂಢನಾಗಬೇಕಾಗಿದ್ದ ಫರೋಹನ ಚೊಚ್ಚಲು ಮಗನು ಮೊದಲ್ಗೊಂಡು ಸೆರೆಯಲ್ಲಿದ್ದ ಖೈದಿಯ ಚೊಚ್ಚಲ ಮಗನವರೆಗೂ ಈಜಿಪ್ಟ್ ದೇಶದಲ್ಲಿದ್ದ ಎಲ್ಲ ಚೊಚ್ಚಲು ಮಕ್ಕಳನ್ನೂ ಪ್ರಾಣಿಗಳ ಚೊಚ್ಚಲ ಮರಿಗಳನ್ನೂ ಸಂಹಾರ ಮಾಡಿದರು.


ಸರ್ವೇಶ್ವರ ಸ್ವಾಮಿಯ ಆಜ್ಞೆಯಂತೆಯೇ ಮೋಶೆ ಮತ್ತು ಆರೋನರು ಮಾಡಿದರು.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋದರು. ಸರ್ವೇಶ್ವರ ತಮಗೆ ಹೇಳಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ನೆಲದಲ್ಲಿ ಬಿಸಾಡಿದಾಗ ಅದು ಸರ್ಪ ಆಯಿತು.


ಮೋಶೆ ಹೇಳಿಕೊಟ್ಟ ಹಾಗೆ ಈಜಿಪ್ಟಿನವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಹಾಗು ಬಟ್ಟೆಗಳನ್ನು ಕೇಳಿಕೊಂಡರು.


ನಾನು ಫರೋಹನ ಹೃದಯವನ್ನು ಕಠಿಣವಾಗಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ಆ ಫರೋಹನನ್ನೂ ಅವನ ಸೈನ್ಯವನ್ನೂ ಗೆದ್ದು ನಾನು ಪ್ರಖ್ಯಾತಿ ಹೊಂದುವೆನು. ನಾನೇ ಸರ್ವೇಶ್ವರ ಎಂಬುದು ಈಜಿಪ್ಟಿನವರಿಗೆ ಗೊತ್ತಾಗುವುದು.” ಸರ್ವೇಶ್ವರನ ಆಜ್ಞೆಯಂತೆಯೇ ಇಸ್ರಯೇಲರು ನಡೆದುಕೊಂಡರು.


“ಬೆಚಲೇಲನು ಮತ್ತು ಒಹೋಲೀಯಾಬನು ಎಲ್ಲವನ್ನು ಸರ್ವೇಶ್ವರ ಸ್ವಾಮಿ ಆಜ್ಞಾಪಿಸಿದ ಪ್ರಕಾರವೇ ಮಾಡುವರು. ಬೇರೆ ಕಲೆಗಾರರು, ಅಂದರೆ ಸರ್ವೇಶ್ವರನಿಂದ ಜ್ಞಾನವಿವೇಕಗಳನ್ನು ಹೊಂದಿ, ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಬೇಕಾದ ಸಕಲವಿಧ ವಸ್ತುಗಳನ್ನು ಮಾಡುವ ಕ್ರಮ ತಿಳಿದಿರುವವರು, ಅವರೊಂದಿಗೆ ಕೆಲಸ ಮಾಡುವರು,” ಎಂದನು.


ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಸಂಪೂರ್ತಿಯಾಯಿತು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಅದನ್ನು ಮಾಡಿದ್ದರು.


ಸರ್ವೇಶ್ವರ ಆಜ್ಞಾಪಿಸಿದಂತೆಯೇ ಇಸ್ರಯೇಲರು ಆ ಕೆಲಸವನ್ನೆಲ್ಲಾ ಮಾಡಿದ್ದರು.


ಅವರು ಮಾಡಿದ್ದ ಕೆಲಸವನ್ನು ಮೋಶೆ ಪರೀಕ್ಷಿಸಲಾಗಿ ಕರ್ತನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿ ಮುಗಿಸಿದರೆಂದು ತಿಳಿದುಕೊಂಡು ಅವರನ್ನು ಆಶೀರ್ವದಿಸಿದನು.


ಮೋಶೆ ಈ ಮಾತುಗಳನ್ನು ಇಸ್ರಯೇಲರಿಗೆ ತಿಳಿಸಿದನು. ಅವರು ಆ ದೂಷಕನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡು ಹೋಗಿ ಕಲ್ಲೆಸೆದು ಕೊಂದರು. ಸರ್ವೇಶ್ವರ ಸ್ವಾಮಿ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು.


ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ನಡೆದುಕೊಂಡರು.


ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು. ಅಂಥವರೆಲ್ಲರನ್ನು ಪಾಳೆಯದಿಂದ ಹೊರದೂಡಿದರು.


ಸರ್ವೇಶ್ವರನ ಅಪ್ಪಣೆಯಂತೆಯೇ ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರನು ಮಾಡಿದರು.


ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಈ ಕಪ್ಪವನ್ನು ಸರ್ವೇಶ್ವರನಿಗೆ ಪ್ರತ್ಯೇಕಿಸಿ ಮಹಾಯಾಜಕ ಎಲ್ಲಾಜಾರನಿಗೆ ಒಪ್ಪಿಸಿದನು.


ಇವುಗಳಲ್ಲಿ ಮೋಶೆ ಸರ್ವೇಶ್ವರನ ಅಪ್ಪಣೆಯ ಪ್ರಕಾರ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಸರ್ವೇಶ್ವರನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು.


ಮೋಶೆ ನೂನನ ಮಗನಾದ ಯೆಹೋಶುವನ ಮೇಲೆ ಹಸ್ತಕ್ಷೇಪಮಾಡಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಸರ್ವೇಶ್ವರ ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರ ಇಸ್ರಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು.


ಅದಕ್ಕವಳು, “ನಿಮ್ಮ ಮಾತಿನಂತೆಯೇ ಆಗಲಿ,” ಎಂದು ಹೇಳಿ ಅವರನ್ನು ಕಳುಹಿಸಿದಳು. ಅವರು ಹೊರಟುಹೋದ ಮೇಲೆ ಆ ಕೆಂಪುದಾರವನ್ನು ಕಿಟಕಿಗೆ ಕಟ್ಟಿದಳು.


ಇಸ್ರಯೇಲರು ಯೆಹೋಶುವನು ಆಜ್ಞಾಪಿಸಿದಂತೆಯೇ ಮಾಡಿದರು. ಸರ್ವೇಶ್ವರಸ್ವಾಮಿ ಯೆಹೋಶುವನಿಗೆ ಹೇಳಿದ ಪ್ರಕಾರ ಅವರು ಇಸ್ರಯೇಲರ ಸಂಖ್ಯೆಗೆ ಅನುಸಾರವಾಗಿ ಜೋರ್ಡನಿನ ಮಧ್ಯದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ತಮ್ಮ ಬಿಡಾರದ ಸ್ಥಳಕ್ಕೆ ತಂದು ಅಲ್ಲಿ ಅವುಗಳನ್ನು ನಿಲ್ಲಿಸಿದರು.


ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ನಾಡನ್ನು ಹಂಚಿಕೊಂಡರು.


ದಾವೀದನು ಸರ್ವೇಶ್ವರನ ಆಜ್ಞಾನುಸಾರ ಮಾಡಿ ಫಿಲಿಷ್ಟಿಯರನ್ನು ಗೆಬದಿಂದ ಗೆಜರಿನವರೆಗೂ ಹೊಡೆದು ಓಡಿಸಿದನು.


ಸರ್ವೇಶ್ವರನ ಅಪ್ಪಣೆಯಂತೆ ಜೋರ್ಡನಿನ ಪೂರ್ವಕ್ಕಿರುವ ಕೆರೀತ್ ಹಳ್ಳದಲ್ಲಿ ಅವನು ವಾಸಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು