Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:29 - ಕನ್ನಡ ಸತ್ಯವೇದವು C.L. Bible (BSI)

29 ಅರ್ಧರಾತ್ರಿಯಲ್ಲಿ ಸರ್ವೇಶ್ವರ ಸ್ವಾಮಿ ಸಿಂಹಾಸನಾರೂಢನಾಗಬೇಕಾಗಿದ್ದ ಫರೋಹನ ಚೊಚ್ಚಲು ಮಗನು ಮೊದಲ್ಗೊಂಡು ಸೆರೆಯಲ್ಲಿದ್ದ ಖೈದಿಯ ಚೊಚ್ಚಲ ಮಗನವರೆಗೂ ಈಜಿಪ್ಟ್ ದೇಶದಲ್ಲಿದ್ದ ಎಲ್ಲ ಚೊಚ್ಚಲು ಮಕ್ಕಳನ್ನೂ ಪ್ರಾಣಿಗಳ ಚೊಚ್ಚಲ ಮರಿಗಳನ್ನೂ ಸಂಹಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮಧ್ಯರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಐಗುಪ್ತ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಸಂಹಾರ ಮಾಡಿದನು. ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅರ್ಧರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಬಂದಿವಾನನ ಚೊಚ್ಚಲು ಮಗನವರೆಗೂ ಐಗುಪ್ತದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮಧ್ಯರಾತ್ರಿಯಲ್ಲಿ ಯೆಹೋವನು ಈಜಿಪ್ಟಿನಲ್ಲಿದ್ದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. ಫರೋಹನ ಚೊಚ್ಚಲು ಮಗನಿಂದಿಡಿದು ಸೆರೆಮನೆಯಲ್ಲಿದ್ದ ಕೈದಿಯ ಚೊಚ್ಚಲು ಮಗನವರೆಗೆ ಇರುವ ಎಲ್ಲಾ ಚೊಚ್ಚಲು ಮಕ್ಕಳನ್ನು ಆತನು ಸಂಹರಿಸಿದನು. ಚೊಚ್ಚಲು ಪಶುಗಳೂ ಸಂಹರಿಸಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಮಧ್ಯರಾತ್ರಿಯಲ್ಲಿ ಸಿಂಹಾಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು, ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಎಂದರೆ ಈಜಿಪ್ಟ್ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ, ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಯೆಹೋವ ದೇವರು ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:29
27 ತಿಳಿವುಗಳ ಹೋಲಿಕೆ  

ಸಂಹರಿಸಿದನು ಈಜಿಪ್ಟಿನ ಚೊಚ್ಚಲ ಮಕ್ಕಳನು I ಹಾಮನ ಮನೆತನದ ಮೊತ್ತಮೊದಲ ಸಂತಾನವನು II


ನನ್ನನ್ನು ಆರಾಧಿಸಲು ನಿನ್ನ ದೇಶದಿಂದ ಹೊರಡುವುದಕ್ಕೆ ಅವನಿಗೆ ಅಪ್ಪಣೆಕೊಡು.' ಇದಕ್ಕೆ ನೀನು ಒಪ್ಪದೆ ಹೋದರೆ ನಾನು ನಿನ್ನ ಜ್ಯೇಷ್ಠ ಪುತ್ರನನ್ನು ಕೊಲ್ಲುವೆನು,”


ಕೊಂದನು ಚೊಚ್ಚಲುಗಳನು ಈಜಿಪ್ಟಿನೊಳು I ಮನುಷ್ಯರೊಳು, ಪಶುಪ್ರಾಣಿಗಳೊಳು II


ಕೊಂದನು ನಾಡಿನ ಜ್ಯೇಷ್ಠರೆಲ್ಲರನು I ಗಂಡಸುತನದಾ ಪ್ರಥಮ ಫಲಗಳನು II


ಈಜಿಪ್ಟಿನ ಚೊಚ್ಚಲುಗಳನು ಸಂಹರಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಇಸ್ರಯೇಲರಲ್ಲಿ ಚೊಚ್ಚಲಾದ ಮನುಷ್ಯರೂ ಪಶುಪ್ರಾಣಿಗಳೆಲ್ಲವೂ ನನ್ನ ಸೊತ್ತೆಂಬುದೇನೋ ನಿಜ; ಈಜಿಪ್ಟ್ ದೇಶದಲ್ಲಿ ಚೊಚ್ಚಲಾದುದನ್ನೆಲ್ಲ ಸಂಹರಿಸಿದಾಗ ಇಸ್ರಯೇಲರಲ್ಲಿ ಚೊಚ್ಚಲಾದುದನ್ನು ನನ್ನ ಸ್ವಂತಕ್ಕಾಗಿ ಪ್ರತಿಷ್ಠಾಪಿಸಿಕೊಂಡೆ.


ಆ ರಾತ್ರಿ ನಾನು ಈಜಿಪ್ಟ್ ದೇಶದ ನಡುವೆ ಹಾದುಹೋಗುವೆನು; ಮನುಷ್ಯರಾಗಲಿ, ಪ್ರಾಣಿಗಳಾಗಲಿ ಚೊಚ್ಚಲಾದುದೆಲ್ಲವನ್ನು ಸಂಹರಿಸುವೆನು. ಈಜಿಪ್ಟ್ ದೇಶದ ಸಮಸ್ತ ದೇವತೆಗಳನ್ನೂ ದಂಡಿಸುವೆನು. ನಾನೇ ಸರ್ವೇಶ್ವರ!


ಚೊಚ್ಚಲ ಮಕ್ಕಳನ್ನು ಸಂಹರಿಸುವಾತನು ಇಸ್ರಯೇಲರನ್ನು ಮುಟ್ಟದಂತೆ ರಕ್ತವನ್ನು ಚಿಮುಕಿಸಿ ಪಾಸ್ಕವನ್ನು ಆಚರಿಸುವಂತೆ ಮೋಶೆ ವಿಧಿಸಿದ್ದು ವಿಶ್ವಾಸದಿಂದಲೇ.


ಆ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ಈಜಿಪ್ಟರ ದೇವತೆಗಳನ್ನು ದಂಡಿಸಿ ಈಜಿಪ್ಟರ ಚೊಚ್ಚಲು ಮಕ್ಕಳನ್ನು ಸಂಹರಿಸಿದ್ದರು. ಆ ಮಕ್ಕಳ ಶವಗಳನ್ನು ಸಮಾಧಿ ಮಾಡಲಾಗುತ್ತಿತ್ತು.


ಫರೋಹನು ಹಟಹಿಡಿದು ನಮ್ಮನ್ನು ಹೋಗಗೊಡಿಸದೆ ಇದ್ದಾಗ ಸರ್ವೇಶ್ವರ ಈಜಿಪ್ಟಿನಲ್ಲಿದ್ದ ಚೊಚ್ಚಲು ಮಕ್ಕಳನ್ನು ಹಾಗು ಪಶುಪ್ರಾಣಿಗಳ ಚೊಚ್ಚಲು ಮರಿಗಳನ್ನೂ ಅಂತೂ ಈ ದೇಶದಲ್ಲಿ ಚೊಚ್ಚಲಾಗಿದ್ದುದೆಲ್ಲವನ್ನು ಸಂಹಾರ ಮಾಡಿದರು. ಆದಕಾರಣ ಗಂಡಾದ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಸರ್ವೇಶ್ವರನಿಗೆ ಸಮರ್ಪಿಸುತ್ತೇವೆ. ಮನುಷ್ಯರಿಗೆ ಹುಟ್ಟಿದ ಪ್ರಥಮ ಗರ್ಭಫಲವನ್ನಾದರೋ ಬದಲು ಕೊಟ್ಟು ಬಿಡಿಸಿಕೊಳ್ಳುತ್ತೇವೆ,” ಎಂದು ಹೇಳಬೇಕು.


ಸ್ವರ್ಗದಲ್ಲಿ ದಾಖಲೆಯಾಗಿರುವ ಜೇಷ್ಠಪುತ್ರನ ಸಭೆಗೆ; ನೀವು ಬಂದಿರುವುದು ಸಕಲ ಮಾನವರ ನ್ಯಾಯಮೂರ್ತಿಯಾದ ದೇವರ ಸನ್ನಿಧಿಗೆ; ಸಿದ್ಧಿಗೆ ಬಂದ ಸತ್ಪುರುಷರ ಆತ್ಮಗಳ ಸಮೂಹಕ್ಕೆ;


ರಕ್ತ ಸುರಿಸಿ ನೀವು ನನ್ನೊಡನೆ ಮಾಡಿಕೊಂಡ ಒಡಂಬಡಿಕೆಯ ನಿಮಿತ್ತ ಕರೆತರುವೆನು ನಿಮ್ಮವರನು ಸೆರೆಯಾಳತ್ವದಿಂದ ಮೇಲೆತ್ತುವೆನು ನಿಮ್ಮವರನು ಆ ಸೆರೆಬಾವಿಯಿಂದ.


ಈ ಪ್ರಕಾರ ಯೆರೆಮೀಯನನ್ನು ಹಗ್ಗಗಳ ಮೂಲಕ ಸೇದಿಕೊಂಡು ಬಾವಿಯಿಂದ ಮೇಲಕ್ಕೆ ಎತ್ತಿದರು. ಬಳಿಕ ಯೆರೆಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.


ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದ ಇಳಿಸಿ ಅಲ್ಲೇ ಬಿಟ್ಟುಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು. ಯೆರೆಮೀಯನು ಅದರೊಳಗೆ ಹೂತುಕೊಂಡನು.


ಸೆರೆಯಲ್ಲಿ ಸೊರಗಿದವನು ಸಾಯನು; ಇಳಿಯನವನು ಪಾತಾಳಕ್ಕೆ, ಬಿಡುಗಡೆಯಾಗುವನು ಬೇಗನೆ, ಇರದವನಿಗೆ ಅನ್ನದ ಕೊರತೆ.


ತಳ್ಳುವವರನು ಖೈದಿಗಳ ಗುಂಪಿನಂತೆ ನೆಲಮಾಳಿಗೆಗೆ, ಇರುವರವರು ಸೆರೆಯಲಿ ಬಹುದಿನಗಳವರೆಗೆ, ತದನಂತರ ಗುರಿಯಾಗುವರು ದಂಡನೆಗೆ.


ಕ್ಷಣಮಾತ್ರದೊಳು, ನಡುರಾತ್ರಿಯೊಳು ಸತ್ತುಹೋಗುವರು ನಾಡಿನ ಪ್ರಜೆಗಳು ತಲ್ಲಣಗೊಂಡು ಇಲ್ಲದೆಹೋಗುವರು ಮನುಷ್ಯರ ಕೈಸೋಂಕದೆಯೆ ಪರಾಕ್ರಮಿಗಳು ಮಾಯವಾಗುವರು.


ವಾಸ್ತವವಾಗಿ ಇಸ್ರಯೇಲರ ಜೇಷ್ಠರೆಲ್ಲರು ನನ್ನ ಸೊತ್ತು, ಈಜಿಪ್ಟ್ ದೇಶದಲ್ಲಿ ಜೇಷ್ಠವಾದುದೆಲ್ಲವನ್ನು ನಾನು ಸಂಹಾರಮಾಡಿದಾಗ ಇಸ್ರಯೇಲರಲ್ಲಿಯ ಜೇಷ್ಠ ಮನುಷ್ಯರನ್ನೂ ಪಶುಪ್ರಾಣಿಗಳನ್ನೂ ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆ. ಆದರೆ ಈಗ ಅಂಥವರಿಗೆ ಬದಲಾಗಿ ಲೇವಿಯರನ್ನು ಆರಿಸಿಕೊಂಡಿದ್ದೇನೆ, ಅವರು ಸರ್ವೇಶ್ವರನಾದ ನನ್ನವರು.”


ಮಾರನೆಯ ದಿನವೇ ಸರ್ವೇಶ್ವರ ಈ ಕಾರ್ಯವನ್ನು ನೆರವೇರಿಸಿದರು. ಈಜಿಪ್ಟಿನವರ ಪಶುಪ್ರಾಣಿಗಳೆಲ್ಲಾ ಸಾಯುತ್ತಾ ಬಂದವು. ಇಸ್ರಯೇಲರ ಪಶುಪ್ರಾಣಿಗಳಲ್ಲಿ ಒಂದೂ ಸಾಯಲಿಲ್ಲ.


ಜನರು ತಲೆಬಾಗಿ ನಮಸ್ಕರಿಸಿದರು. ಇಸ್ರಯೇಲರು ಅಲ್ಲಿಂದ ಹೊರಟು ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ನಡೆದುಕೊಂಡರು.


ತೂಬೆತ್ತಿಬಿಟ್ಟನು ತನ್ನ ಕ್ರೋಧಕೆ I ತುತ್ತಾಗಿಸಿದನು ದೇಹಗಳನು ಜಾಡ್ಯಕೆ I ಅಡ್ಡಿತರಲಿಲ್ಲ ಆತನು ಅವರ ಮರಣಕೆ II


ಸಾಗುತಿದೆ ವ್ಯಾಧಿ ಆತನ ಮುಂದೆ ಬರುತಿದೆ ಮೃತ್ಯು ಆತನ ಹಿಂದೆ.


ಆದರೆ ಅವರನ್ನು ಗುಲಾಮರನ್ನಾಗಿಸಿಕೊಳ್ಳುವ ರಾಷ್ಟ್ರವನ್ನು ನಾನು ದಂಡಿಸುವೆನು. ಬಳಿಕ ಬಿಡುಗಡೆ ಹೊಂದಿ ಅಧಿಕ ಆಸ್ತಿವಂತರಾಗಿ ಹಿಂತಿರುಗುವರು.


ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆ ಎಂದರು: “ಫರೋಹನಿಗೂ ಈಜಿಪ್ಟಿನವರಿಗೂ ಇನ್ನೊಂದು ಪಿಡುಗನ್ನು ಬರಮಾಡುತ್ತೇನೆ. ಅದು ಬಂದನಂತರ ಅವನು ನಿಮಗೆ ಇಲ್ಲಿಂದ ಹೋಗುವುದಕ್ಕೆ ಅಪ್ಪಣೆಕೊಡುವನು. ಅದು ಮಾತ್ರವಲ್ಲ, ನಿಮ್ಮೆಲ್ಲರನ್ನು ಅಲ್ಲಿಂದ ಅಟ್ಟಿಬಿಡುವನು.


ಆಶಾಭಂಗಪಟ್ಟು ಅವಮಾನ ಹೊಂದುವರು ನಿನ್ನ ಮೇಲೆ ಕೋಪಗೊಂಡವರು ನಾಶವಾಗಿ ನಿರ್ಮೂಲವಾಗುವರು ನಿನ್ನ ಸಂಗಡ ವ್ಯಾಜ್ಯವಾಡಿದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು