ವಿಮೋಚನಕಾಂಡ 12:3 - ಕನ್ನಡ ಸತ್ಯವೇದವು C.L. Bible (BSI)3 ಈ ವಿಷಯದಲ್ಲಿ ನೀವು ಇಸ್ರಯೇಲರ ಸಮಾಜಕ್ಕೆಲ್ಲ ಈ ರೀತಿ ಕಟ್ಟಳೆಯಿಡಬೇಕು: ‘ಈ ತಿಂಗಳ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ಆರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇದರ ವಿಷಯದಲ್ಲಿ ನೀವು ಇಸ್ರಾಯೇಲರ ಸಮೂಹಕ್ಕೆಲ್ಲಾ ಹೀಗೆ ಅಪ್ಪಣೆಮಾಡಬೇಕು, ‘ಈ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ತೆಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇದರ ವಿಷಯದಲ್ಲಿ ನೀವು ಇಸ್ರಾಯೇಲ್ಯರ ಸಮೂಹಕ್ಕೆಲ್ಲಾ ಅಪ್ಪಣೆ ಮಾಡಬೇಕಾದದ್ದೇನಂದರೆ - ಈ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ ಆಡುಮರಿಯನ್ನಾಗಲಿ ತೆಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಈ ಆಜ್ಞೆಯು ಇಡೀ ಇಸ್ರೇಲರ ಸಮೂಹಕ್ಕೆ ಅನ್ವಯಿಸುತ್ತದೆ. ಈ ತಿಂಗಳ ಹತ್ತನೆಯ ದಿನದಲ್ಲಿ ಪ್ರತಿಯೊಬ್ಬನು ತನ್ನ ಮನೆಯಲ್ಲಿರುವ ಜನರಿಗಾಗಿ ಒಂದು ಕುರಿಮರಿಯನ್ನು ಅಥವಾ ಒಂದು ಆಡುಮರಿಯನ್ನು ಕೊಯ್ಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇಸ್ರಾಯೇಲ್ ಸಭೆಗೆಲ್ಲಾ ನೀವು ಹೇಳಬೇಕಾದದ್ದೇನೆಂದರೆ, ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಪ್ರತಿ ಗೋತ್ರಗಳ ಪ್ರತಿಯೊಂದು ಕುಟುಂಬಕ್ಕೆ ಒಂದರಂತೆ ಕುರಿಮರಿಯನ್ನು ತೆಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿ |