ವಿಮೋಚನಕಾಂಡ 12:31 - ಕನ್ನಡ ಸತ್ಯವೇದವು C.L. Bible (BSI)31 ಫರೋಹನು ಆ ರಾತ್ರಿಯಲ್ಲೆ ಮೋಶೆ ಮತ್ತು ಆರೋನರನ್ನು ಕರೆಯಿಸಿದನು. “ನೀವೂ ಹಾಗು ಇಸ್ರಯೇಲರೆಲ್ಲರೂ ನನ್ನ ಜನರನ್ನು ಬಿಟ್ಟು ಹೊರಟುಹೋಗಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಫರೋಹನು ಆ ರಾತ್ರಿಯಲ್ಲೇ ಮೋಶೆ ಮತ್ತು ಆರೋನರನ್ನು ಕರೆಯಿಸಿ ಅವರಿಗೆ, “ನೀವು ಎದ್ದು ನನ್ನ ಜನರ ಮಧ್ಯದಿಂದ ಹೊರಟುಹೋಗಿರಿ. ನೀವು ಕೇಳಿಕೊಂಡ ಮೇರೆಗೆ ಯೆಹೋವನನ್ನು ಆರಾಧಿಸುವುದಕ್ಕೆ ನೀವು ಮತ್ತು ಇಸ್ರಾಯೇಲರು ಹೊರಟುಹೋಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಫರೋಹನು ಆ ರಾತ್ರಿಯಲ್ಲೇ ಮೋಶೆ ಆರೋನರನ್ನು ಕರಿಸಿ - ನೀವೂ ಇಸ್ರಾಯೇಲ್ಯರೆಲ್ಲರೂ ನನ್ನ ಜನರ ಮಧ್ಯದಿಂದ ಹೊರಟುಹೋಗಿರಿ; ನೀವು ಕೇಳಿಕೊಂಡ ಮೇರೆಗೆ ಯೆಹೋವನನ್ನು ಆರಾಧಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆದ್ದರಿಂದ ಆ ರಾತ್ರಿ, ಫರೋಹನು ಮೋಶೆ ಆರೋನರನ್ನು ಕರೆಸಿ, “ನನ್ನ ಜನರನ್ನು ಬಿಟ್ಟುಹೋಗಿ. ನೀವು ಕೇಳಿಕೊಂಡಂತೆ ನೀವು ಮತ್ತು ನಿಮ್ಮ ಜನರು ಹೊರಟುಹೋಗಿ ಯೆಹೋವನನ್ನು ಆರಾಧಿಸಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ, “ನೀವು ಮತ್ತು ಇಸ್ರಾಯೇಲರೆಲ್ಲರೂ ಎದ್ದು ನನ್ನ ಜನರೊಳಗಿಂದ ಹೊರಟು ಹೋಗಿರಿ. ನೀವು ಹೇಳಿದ ಹಾಗೆಯೇ, ಯೆಹೋವ ದೇವರನ್ನು ಆರಾಧಿಸುವುದಕ್ಕೆ ಹೊರಟುಹೋಗಿರಿ. ಅಧ್ಯಾಯವನ್ನು ನೋಡಿ |