Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:33 - ಕನ್ನಡ ಸತ್ಯವೇದವು C.L. Bible (BSI)

33 ಈಜಿಪ್ಟಿನವರು, “ನಾವೆಲ್ಲರು ಸಾಯುತ್ತೇವೆ,” ಎಂದುಕೊಂಡು ತಮ್ಮ ದೇಶವನ್ನು ಬಿಟ್ಟು ಬೇಗನೆ ಹೋಗಬೇಕೆಂದು ಇಸ್ರಯೇಲರನ್ನು ಒತ್ತಾಯಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಐಗುಪ್ತರು, “ನಾವೆಲ್ಲರು ಸಾಯುತ್ತೇವೆ” ಎಂದುಕೊಂಡು ಇಸ್ರಾಯೇಲರನ್ನು ತಮ್ಮ ದೇಶದಿಂದ ಬೇಗನೇ ಕಳುಹಿಸಿಬಿಡುವುದಕ್ಕೆ ಅಪೇಕ್ಷೆಪಟ್ಟು ಅವರನ್ನು ಬಲವಂತಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಐಗುಪ್ತ್ಯರು - ನಾವೆಲ್ಲರು ಸಾಯುತ್ತೇವಲ್ಲಾ ಅಂದುಕೊಂಡು ಇಸ್ರಾಯೇಲ್ಯರನ್ನು ತಮ್ಮ ದೇಶದಿಂದ ತ್ವರೆಯಾಗಿ ಕಳುಹಿಸಿಬಿಡುವದಕ್ಕೆ ಅಪೇಕ್ಷೆಪಟ್ಟು ಅವರನ್ನು ಬಲಾತ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಈಜಿಪ್ಟಿನ ಜನರು ಸಹ ತಮ್ಮನ್ನು ಬೇಗನೆ ಬಿಟ್ಟು ಹೋಗಬೇಕೆಂದು ಇಸ್ರೇಲರನ್ನು ಬೇಡಿಕೊಂಡು, “ನೀವು ಬಿಟ್ಟು ಹೋಗದಿದ್ದರೆ, ನಾವೆಲ್ಲಾ ಸಾಯುವೆವು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಇದಲ್ಲದೆ ಈಜಿಪ್ಟಿನವರು, “ನಾವೆಲ್ಲರೂ ಸಾಯುತ್ತೇವೆ,” ಎಂದು ಹೇಳಿ, ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿಬಿಡುವ ಹಾಗೆ ಜನರನ್ನು ಒತ್ತಾಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:33
9 ತಿಳಿವುಗಳ ಹೋಲಿಕೆ  

ಭೀತಿಯಿತ್ತಾ ಈಜಿಪ್ಟರಿಗೆ ಇಸ್ರಯೇಲರ ಬಗ್ಗೆ I ಈ ಕಾರಣ ಆನಂದಿಸಿದರು ಅವರು ಹೋದುದಕ್ಕೆ II


ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆ ಎಂದರು: “ಫರೋಹನಿಗೂ ಈಜಿಪ್ಟಿನವರಿಗೂ ಇನ್ನೊಂದು ಪಿಡುಗನ್ನು ಬರಮಾಡುತ್ತೇನೆ. ಅದು ಬಂದನಂತರ ಅವನು ನಿಮಗೆ ಇಲ್ಲಿಂದ ಹೋಗುವುದಕ್ಕೆ ಅಪ್ಪಣೆಕೊಡುವನು. ಅದು ಮಾತ್ರವಲ್ಲ, ನಿಮ್ಮೆಲ್ಲರನ್ನು ಅಲ್ಲಿಂದ ಅಟ್ಟಿಬಿಡುವನು.


ಆದರೆ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಆ ಮಹಿಳೆಯನ್ನು ಸೇರಿಸಿಕೊಂಡ ಕಾರಣ ಸಾಯತಕ್ಕವನು, ಆಕೆಗೆ ಗಂಡನಿದ್ದಾನೆ,” ಎಂದರು.


ಅದಕ್ಕೆ ಸರ್ವೇಶ್ವರ ಸ್ವಾಮಿ ಮೋಶೆಗೆ, “ನಾನು ಫರೋಹನಿಗೆ ಮಾಡಲು ಹೋಗುವುದನ್ನು ನೀನು ಇಷ್ಟರಲ್ಲೇ ನೋಡುವೆ. ಅವನು ನನ್ನ ಭುಜಬಲವನ್ನು ಕಂಡು ಅವರನ್ನು ಹೋಗಲು ಬಿಡುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ನಾಡಿನಿಂದ ಹೊರಡಿಸುವನು,” ಎಂದರು.


ಆಗ ಪರಿವಾರದವರು ಫರೋಹನಿಗೆ, “ಈ ಮನುಷ್ಯ ಇನ್ನೆಷ್ಟುಕಾಲ ನಮಗೆ ಉರುಳಾಗಿರುವನೋ! ಆ ಜನರು ಹೋಗಿ ತಮ್ಮ ದೇವರಾದ ಸರ್ವೇಶ್ವರನನ್ನು ಆರಾಧಿಸಲು ಅಪ್ಪಣೆಕೊಟ್ಟುಬಿಡಿ. ಈಜಿಪ್ಟ್ ದೇಶವೇ ಹಾಳಾಗುತ್ತಿದೆಯೆಂದು ತಮ್ಮ ಮನಸ್ಸಿಗೆ ತೋಚಿರಬೇಕಲ್ಲವೆ?” ಎಂದು ಹೇಳಿದರು.


ಈಜಿಪ್ಟ್ ದೇಶದಿಂದ ಅವರು ತಂದಿದ್ದ ಕಣಕದ ಮುದ್ದೆಯಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಸುಟ್ಟರು. ಅಲ್ಲಿಂದ ಅವರನ್ನು ಹೊರಡಿಸಿದಾಗ ಸ್ವಲ್ಪವೂ ಸಮಯ ಸಿಕ್ಕದೆ ಕಣಕದಲ್ಲಿ ಹುಳಿಯನ್ನು ಕಲಸಲಿಕ್ಕೂ ಆಗಲಿಲ್ಲ ಹಾಗು ಬೇರೆ ಆಹಾರವನ್ನು ಸಿದ್ಧಪಡಿಸಿಕೊಳ್ಳಲೂ ಸಾಧ್ಯವಾಗಿರಲಿಲ್ಲ.


ಅವಸರವಾಗಿ ನೀವು ಹೊರಡಬೇಕಿಲ್ಲ ನೆಗೆನೆಗೆದು ನೀವು ಓಡಬೇಕಿಲ್ಲ. ಹೋಗುವನು ಸರ್ವೇಶ್ವರ ನಿಮಗೆ ಮುಂಬಲವಾಗಿ, ನಿಮಗಿರುವನು ಇಸ್ರಯೇಲ್ ದೇವರು ಹಿಂಬಲವಾಗಿ.


ರಾಜಾಜ್ಞೆಯು ಖಡಾಖಂಡಿತವಾಗಿದ್ದರಿಂದಲೂ ಆವಿಗೆಯ ಕಾವು ಅತಿ ತೀಕ್ಷ್ಣವಾಗಿದ್ದರಿಂದಲೂ ಅಗ್ನಿಕುಂಡವು ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರನ್ನು ಎತ್ತಿ ತಂದವರನ್ನೇ ಭಸ್ಮಮಾಡಿಬಿಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು