Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:36 - ಕನ್ನಡ ಸತ್ಯವೇದವು C.L. Bible (BSI)

36 ಇಸ್ರಯೇಲರ ಮೇಲೆ ಈಜಿಪ್ಟಿನವರಿಗೆ ದಯೆ ಹುಟ್ಟುವಂತೆ ಮಾಡಿದ್ದರು ಸರ್ವೇಶ್ವರ. ಆದ್ದರಿಂದ ಅವರು ಕೇಳಿಕೊಂಡದ್ದನ್ನು ಈಜಿಪ್ಟಿನವರು ಕೊಟ್ಟುಬಿಟ್ಟರು. ಹೀಗೆ ಇಸ್ರಯೇಲರು ಈಜಿಪ್ಟಿನವರ ಸೊತ್ತನ್ನು ಸುಲಿಗೆ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಯೆಹೋವನು ಅವರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದ್ದರಿಂದ ಅವರು ಕೇಳಿಕೊಂಡದ್ದೆಲ್ಲವನ್ನು ಐಗುಪ್ತರು ಕೊಟ್ಟರು. ಹೀಗೆ ಇಸ್ರಾಯೇಲರು ಐಗುಪ್ತ್ಯರ ಸೊತ್ತನ್ನು ಸುಲಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಯೆಹೋವನು ಅವರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದ್ದರಿಂದ ಅವರು ಕೇಳಿಕೊಂಡದ್ದನ್ನು ಕೊಟ್ಟರು. ಹೀಗೆ ಇಸ್ರಾಯೇಲ್ಯರು ಐಗುಪ್ತ್ಯರ ಸೊತ್ತನ್ನು ಸುಲುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಈಜಿಪ್ಟಿನವರು ಇಸ್ರೇಲರಿಗೆ ದಯೆ ತೋರಿಸುವಂತೆ ಯೆಹೋವನು ಪ್ರೇರೇಪಿಸಿದ್ದರಿಂದ ಈಜಿಪ್ಟಿನವರು ತಮ್ಮ ಸ್ವತ್ತುಗಳನ್ನು ಇಸ್ರೇಲರಿಗೆ ಕೊಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಯೆಹೋವ ದೇವರು ಈಜಿಪ್ಟಿನವರ ಎದುರಿನಲ್ಲಿ ಜನರ ಮೇಲೆ ದಯೆ ತೋರಿಸಿದ್ದರಿಂದ, ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಈಜಿಪ್ಟಿನವರ ಸೊತ್ತನ್ನು ಸುಲಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:36
11 ತಿಳಿವುಗಳ ಹೋಲಿಕೆ  

ಎಲ್ಲಾ ಆಪತ್ತು ವಿಪತ್ತುಗಳಿಂದ ಅವನನ್ನು ಪಾರುಮಾಡಿದರು. ಅವನು ಈಜಿಪ್ಟಿನ ಅರಸ ಫರೋಹನ ಆಸ್ಥಾನಕ್ಕೆ ಬಂದಾಗ ದೇವರು ಅವನಿಗೆ ಜ್ಞಾನಸಂಪನ್ನತೆಯನ್ನಿತ್ತು ಅರಸನ ಮೆಚ್ಚುಗೆಗೆ ಪಾತ್ರನಾಗುವಂತೆ ಅನುಗ್ರಹಿಸಿದರು. ಫರೋಹನು ಅವನನ್ನು ರಾಜ್ಯಪಾಲನನ್ನಾಗಿಯೂ ಅರಮನೆಯ ಮೇಲ್ವಿಚಾರಕನನ್ನಾಗಿಯೂ ನೇಮಿಸಿದನು.


ಆದರೆ ಅವರನ್ನು ಗುಲಾಮರನ್ನಾಗಿಸಿಕೊಳ್ಳುವ ರಾಷ್ಟ್ರವನ್ನು ನಾನು ದಂಡಿಸುವೆನು. ಬಳಿಕ ಬಿಡುಗಡೆ ಹೊಂದಿ ಅಧಿಕ ಆಸ್ತಿವಂತರಾಗಿ ಹಿಂತಿರುಗುವರು.


ಕಂಚುಕಿಯರ ನಾಯಕನು ದಾನಿಯೇಲನ ಮೇಲೆ ಕನಿಕರ ಮತ್ತು ದಯೆತೋರುವಂತೆ ದೇವರು ಅನುಗ್ರಹಿಸಿದ್ದರು.


ಹೊರತಂದನು ಇಸ್ರಯೇಲರನು ಬೆಳ್ಳಿಬಂಗಾರ ಸಹಿತ I ಅವರಾ ಗೋತ್ರದೊಳಿರಲಿಲ್ಲ ಯಾರೊಬ್ಬನೂ ನಿಶ್ಯಕ್ತ II


ಈಜಿಪ್ಟಿನವರಿಗೆ ಇಸ್ರಯೇಲರ ಮೇಲೆ ಕನಿಕರ ಉಂಟಾಗುವಂತೆ ಮಾಡಿದರು ಸರ್ವೇಶ್ವರ. ಇದಲ್ಲದೆ ಈಜಿಪ್ಟ್ ದೇಶದ ಫರೋಹನ ಪರಿವಾರದವರು ಮೋಶೆಯನ್ನು ಮಹಾಪುರುಷನೆಂದು ಭಾವಿಸಿದರು.


ಆದರೂ ಸರ್ವೇಶ್ವರ, ಜೋಸೆಫನ ಸಂಗಡ ಇದ್ದರು. ಅವನಿಗೆ ಅಪಾರ ಪ್ರೀತಿ ತೋರಿಸಿ, ಅವನಿಗೆ ಸೆರೆಯಜಮಾನನ ದಯೆ ದೊರಕುವಂತೆ ಮಾಡಿದರು.


ದೇವರನ್ನು ಸ್ತುತಿಸುತ್ತಾ ಸಕಲರಿಗೆ ಅಚ್ಚುಮೆಚ್ಚಾಗಿ ಬಾಳುತ್ತಿದ್ದರು. ಜೀವೋದ್ಧಾರವನ್ನು ಹೊಂದುತ್ತಿದ್ದವರನ್ನೆಲ್ಲಾ ಪ್ರಭು ಈ ಸಭೆಗೆ ದಿನೇದಿನೇ ಸೇರಿಸಿಕೊಳ್ಳುತ್ತಿದ್ದರು.


ಒಬ್ಬನ ನಡತೆಯನ್ನುಸರ್ವೇಶ್ವರ ಮೆಚ್ಚಿದರೆ, ಅವನ ಶತ್ರುಗಳನ್ನು ಆತ ಮಿತ್ರರನ್ನಾಗಿಸುತ್ತಾನೆ.


ಆದುದರಿಂದ ಸ್ತ್ರೀಪುರುಷರೆಲ್ಲರು ತಮ್ಮ ತಮ್ಮ ನೆರೆಹೊರೆಯವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಕೇಳಿಕೊಳ್ಳಬೇಕೆಂದು ನಿಮ್ಮ ಜನರಿಗೆ ಸ್ಪಷ್ಟವಾಗಿಹೇಳು,” ಎಂದರು.


ಅವರ ನೆರೆಯವರೆಲ್ಲರು ಕೊಡುಗೆಗಳನ್ನು ಕೊಟ್ಟರು; ಬೆಳ್ಳಿ ಸಾಮಾನುಗಳು, ಬಂಗಾರದ ಆಭರಣಗಳು, ಪಶುಪ್ರಾಣಿಗಳು, ಶ್ರೇಷ್ಠವಸ್ತುಗಳು, ಇತ್ಯಾದಿಗಳನ್ನು ನೀಡಿ ಸಹಕರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು