Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:37 - ಕನ್ನಡ ಸತ್ಯವೇದವು C.L. Bible (BSI)

37 ಇಸ್ರಯೇಲರು ರಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಅವರಲ್ಲಿ ಮಹಿಳೆಯರನ್ನೂ ಮಕ್ಕಳನ್ನೂ ಬಿಟ್ಟು ಗಂಡಸರ ಸಂಖ್ಯೆಯೇ ಸುಮಾರು ಆರು ಲಕ್ಷವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಇಸ್ರಾಯೇಲರು ರಾಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಹೆಂಗಸರು ಮಕ್ಕಳು ಅಲ್ಲದೆ ಗಂಡಸರು ಮಾತ್ರ ಸುಮಾರು ಆರುಲಕ್ಷ ಮಂದಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಇಸ್ರಾಯೇಲ್ಯರು ರಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಹೆಂಗಸರೂ ಮಕ್ಕಳೂ ಅಲ್ಲದೆ ಅವರ ಕಾಲ್ಬಲವೇ ಸುಮಾರು ಆರು ಲಕ್ಷ ಗಂಡಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಇಸ್ರೇಲರು ರಮ್ಸೇಸ್‌ನಿಂದ ಸುಕ್ಕೋತಿಗೆ ಪ್ರಯಾಣ ಮಾಡಿದರು. ಅವರಲ್ಲಿ ಸುಮಾರು ಆರು ಲಕ್ಷಮಂದಿ ಗಂಡಸರಿದ್ದರು. (ಈ ಸಂಖ್ಯೆಯಲ್ಲಿ ಮಕ್ಕಳು ಮತ್ತು ಹೆಂಗಸರು ಸೇರಿಲ್ಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಆಗ ಇಸ್ರಾಯೇಲರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಜನರು ಕಾಲುನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:37
15 ತಿಳಿವುಗಳ ಹೋಲಿಕೆ  

ಇಸ್ರಯೇಲರು ರಮ್ಸೇಸಿನಿಂದ ಹೊರಟು ಸುಕ್ಕೋತಿನಲ್ಲಿ ಇಳಿದುಕೊಂಡರು.


ಮೊದಲನೆಯ ತಿಂಗಳಿನ ಹದಿನೈದನೆಯ ದಿನ, ಅಂದರೆ ಪಾಸ್ಕಹಬ್ಬದ ಮರುದಿನ, ಇಸ್ರಯೇಲರು ಈಜಿಪ್ಟರ ಎದುರಿನಲ್ಲೇ ಅಟ್ಟಹಾಸದಿಂದ ರಮ್ಸೇಸಿನಿಂದ ಹೊರಟರು.


ಮೋಶೆ ಸರ್ವೇಶ್ವರನಿಗೆ, ” ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಆದರೂ ನೀವು, ‘ಇವರು ಇಡೀ ಒಂದು ತಿಂಗಳು ತಿನ್ನುವಷ್ಟು ಮಾಂಸವನ್ನು ಕೊಡುತ್ತೇನೆ’ ಎಂದು ಹೇಳಿದ್ದೀರಿ.


ಫರೋಹನ ಅಪ್ಪಣೆಯ ಮೇರೆಗೆ ಜೋಸೆಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಈಜಿಪ್ಟಿನಲ್ಲಿ ವಾಸಸ್ಥಾನವನ್ನು ನೇಮಿಸಿ, ಅದರಲ್ಲಿ ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸೊತ್ತನ್ನು ಕೊಟ್ಟನು.


ಅದರಂತೆಯೇ ಅವನ ಜನರು ಇಸ್ರಯೇಲರಿಗೆ ಕಿರುಕುಳ ಕೊಡಲು ತೊಡಗಿದರು. ಪುಕ್ಕಟೆಯಾಗಿ ಕೆಲಸಮಾಡಿಸಿಕೊಂಡರು. ಬಿಟ್ಟೀ ಕೆಲಸ ಮಾಡಿಸುವ ಅಧಿಕಾರಿಗಳನ್ನು ನೇಮಿಸಿ ಫರೋಹನಿಗೆ ‘ಪಿತೋಮ್’ ಮತ್ತು ‘ರಾಮ್ಸೇಸ್’ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.


ಇಸ್ರಯೇಲರಲ್ಲಿ ಲೆಕ್ಕಿತರಾದವರ ಒಟ್ಟು ಸಂಖ್ಯೆ ; 601,730:


ಇವರೇ ಇಸ್ರಯೇಲರಲ್ಲಿ ಗೋತ್ರಗೋತ್ರಗಳ ಪ್ರಕಾರ ಎಣಿಕೆಯಾದವರು. ಆ ದಂಡುಗಳಲ್ಲಿ ಸೈನಿಕರಾಗಿ ಎಣಿಕೆಯಾದ ಸೈನಿಕರ ಸಂಖ್ಯೆ - 6,03,500:


ಆಗ ದೇವರು, “ನಾನೇ ದೇವರು, ನಿನ್ನ ತಂದೆ ಆರಾಧಿಸಿದ ದೇವರು, ನೀನು ಈಜಿಪ್ಟ್ ದೇಶಕ್ಕೆ ಹೋಗಲು ಅಂಜಬೇಡ; ಅಲ್ಲಿ ನಿನ್ನಿಂದ ಮಹಾಜನಾಂಗ ಉತ್ಪನ್ನವಾಗುವಂತೆ ಮಾಡುವೆನು;


ಸರ್ವೇಶ್ವರ ಬಳಿಕ ಅಬ್ರಾಮನನ್ನು ಹೊರಗೆ ಕರೆತಂದು, “ಆಕಾಶದ ಕಡೆಗೆ ನೋಡು. ಆ ನಕ್ಷತ್ರಗಳನ್ನು ನಿನ್ನಿಂದಾದರೆ ಲೆಕ್ಕಿಸು. ನಿನ್ನ ಸಂತಾನವು ಅಷ್ಟು ಅಸಂಖ್ಯಾತವಾಗುವುದು!” ಎಂದರು.


ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ.


ಅದಕ್ಕೆ ಮೋಶೆ, “ನಾವು ಸರ್ವೇಶ್ವರ ಸ್ವಾಮಿಗಾಗಿ ಹಬ್ಬವನ್ನು ಆಚರಿಸಬೇಕಾಗಿದೆ. ಆದಕಾರಣ ಚಿಕ್ಕವರು, ಮುದುಕರು ಎಲ್ಲರು ಹೋಗುತ್ತೇವೆ; ಗಂಡುಹೆಣ್ಣು ಮಕ್ಕಳನ್ನೂ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ,” ಎಂದು ಉತ್ತರಕೊಟ್ಟನು.


ಇಸ್ರಯೇಲರು ಸುಕ್ಕೋತಿನಿಂದ ಪ್ರಯಾಣಮಾಡಿ ಮರುಳುಗಾಡಿನ ಅಂಚಿನಲ್ಲಿರುವ ಏತಾಮಿನಲ್ಲಿ ಇಳಿದುಕೊಂಡರು.


“ನೀನು ಮತ್ತು ಆರೋನ ಇಸ್ರಯೇಲ್ ಜನಸಮೂಹದ ಗಂಡಸರನ್ನು ಗೋತ್ರ ಹಾಗೂ ಕುಟುಂಬಗಳಿಗೆ ಅನುಗುಣವಾಗಿ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಎಣಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು