Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:40 - ಕನ್ನಡ ಸತ್ಯವೇದವು C.L. Bible (BSI)

40 ಇಸ್ರಯೇಲರು ಈಜಿಪ್ಟ್ ದೇಶದಲ್ಲಿ ನಾನೂರಮೂವತ್ತು ವರ್ಷಗಳ ಕಾಲ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಇಸ್ರಾಯೇಲರು ಐಗುಪ್ತ ದೇಶದಲ್ಲಿ ಸುಮಾರು ನಾನೂರಮೂವತ್ತು ವರ್ಷ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಇಸ್ರಾಯೇಲ್ಯರು ಐಗುಪ್ತದೇಶದಲ್ಲಿ ವಾಸವಾಗಿದ್ದದ್ದು ನಾನೂರಮೂವತ್ತು ವರುಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಇಸ್ರೇಲರು ಈಜಿಪ್ಟಿನಲ್ಲಿ ನಾನೂರಮೂವತ್ತು ವರ್ಷ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಇಸ್ರಾಯೇಲರು ಈಜಿಪ್ಟಿನಲ್ಲಿ ಪ್ರವಾಸವಾಗಿ ವಾಸಮಾಡಿದ್ದ ಕಾಲವು ನಾನೂರ ಮೂವತ್ತು ವರ್ಷಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:40
8 ತಿಳಿವುಗಳ ಹೋಲಿಕೆ  

ಆಗ ಅಬ್ರಾಮನಿಗೆ ಸರ್ವೇಶ್ವರ, “ಇದನ್ನು ನೀನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು: ನಿನ್ನ ಸಂತತಿಯವರು ಅನ್ಯ ನಾಡಿಗೆ ಆಗಂತುಕರಂತೆ ಹೋಗುವರು; ಆ ನಾಡಿಗರಿಗೆ ಗುಲಾಮರಾಗುವರು; ನಾನೂರು ವರ್ಷ ಅಲ್ಲಿಯವರ ಶೋಷಣೆಗೆ ಗುರಿಯಾಗುವರು.


ಇದಲ್ಲದೆ ದೇವರು ಅಬ್ರಹಾಮನಿಗೆ, ‘ನಿನ್ನ ಸಂತತಿಯವರು ಅನ್ಯದೇಶದಲ್ಲಿ ಗುಲಾಮರಾಗುವರು; ನಾನೂರು ವರ್ಷಗಳವರೆಗೆ ದಬ್ಬಾಳಿಕೆಗೆ ಒಳಗಾಗುವರು.


ಇಸ್ರಯೇಲ್ ಜನರ ದೇವರು ನಮ್ಮ ಪೂರ್ವಜರನ್ನು ಆರಿಸಿಕೊಂಡರು. ಈಜಿಪ್ಟಿನಲ್ಲಿ ಪರಕೀಯರಾಗಿ ವಾಸಿಸುತ್ತಿದ್ದ ನಮ್ಮ ಜನರನ್ನು ಪ್ರಬಲ ಜನಾಂಗವನ್ನಾಗಿ ಮಾಡಿದರು. ತಮ್ಮ ಮಹಾಶಕ್ತಿಯನ್ನು ಪ್ರಯೋಗಿಸಿ ಅವರನ್ನು ಈಜಿಪ್ಟಿನಿಂದ ಹೊರಗೆ ತಂದರು.


ದೇವರು ವಾಗ್ದಾನ ಮಾಡಿದ ನಾಡಿಗೆ ಬಂದಾಗಲೂ ಆತನು ಅದೇ ವಿಶ್ವಾಸದ ನಿಮಿತ್ತ ಒಬ್ಬ ಅನ್ಯದೇಶಿಯನಂತೆ ಬಾಳಿದನು. ಡೇರೆಗಳಲ್ಲಿದ್ದುಕೊಂಡು ಒಬ್ಬ ಪ್ರವಾಸಿಗನಂತೆ ಜೀವಿಸಿದನು. ಅದೇ ವಾಗ್ದಾನಕ್ಕೆ ಸಹಬಾಧ್ಯಸ್ಥರಾದ ಇಸಾಕನೂ ಯಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.


ನಿನ್ನ ಸಂತತಿಯವರು ನಾಲ್ಕನೆಯ ತಲಾಂತರವಾದ ಮೇಲೆ ಇಲ್ಲಿಗೆ ಮರಳಿ ಬರುವರು. ಏಕೆಂದರೆ ಅಮೋರಿಯರ ಪಾಪಕ್ರಮ ಇನ್ನೂ ಮಾಗಿಲ್ಲ,” ಎಂದರು.


ಆದ್ದರಿಂದ ಹೋಗು; ನನ್ನ ಜನರಾಗಿರುವ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಹೊರತರುವುದಕ್ಕಾಗಿ ನಿನ್ನನ್ನು ಫರೋಹನ ಬಳಿಗೆ ಕಳಿಸುತ್ತಿದ್ದೇನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು