ವಿಮೋಚನಕಾಂಡ 12:42 - ಕನ್ನಡ ಸತ್ಯವೇದವು C.L. Bible (BSI)42 ಸರ್ವೇಶ್ವರ ಅವರನ್ನು ಈಜಿಪ್ಟ್ ದೇಶದಿಂದ ಹೊರಗೆ ಬರಮಾಡಲು ಜಾಗರೂಕರಾಗಿದ್ದದ್ದು ಆ ರಾತ್ರಿಯೇ. ಆದುದರಿಂದಲೆ ಇಸ್ರಯೇಲರೆಲ್ಲರು ತಲತಲಾಂತರಕ್ಕೂ ಸರ್ವೇಶ್ವರನ ಗೌರವಾರ್ಥ ಈ ರಾತ್ರಿಯಲ್ಲೇ ಜಾಗರಣೆಯನ್ನು ಅನುಸರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಯೆಹೋವನು ಆ ರಾತ್ರಿಯಲ್ಲಿಯೇ ಅವರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡಿದ್ದರಿಂದ ಅವರು ಈ ರಾತ್ರಿಯಲ್ಲಿ ಆತನ ಘನಕ್ಕಾಗಿ ಜಾಗರಣೆಯನ್ನು ಮಾಡಿದರು. ಇಸ್ರಾಯೇಲರೆಲ್ಲರೂ ತಲತಲಾಂತರಕ್ಕೂ ಯೆಹೋವನಿಗೆ ಜಾಗರಣೆಯನ್ನು ಆಚರಿಸಬೇಕಾದ ರಾತ್ರಿಯು ಇದೇ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಯೆಹೋವನು ಆ ರಾತ್ರಿಯಲ್ಲಿಯೇ ಅವರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡಿದ್ದರಿಂದ ಅವರು ಈ ರಾತ್ರಿಯಲ್ಲಿ ಆತನ ಘನಕ್ಕಾಗಿ ಜಾಗರಣೆಯನ್ನು ಮಾಡಬೇಕು. ಇಸ್ರಾಯೇಲ್ಯರೆಲ್ಲರೂ ತಲತಲಾಂತರಕ್ಕೂ ಯೆಹೋವನಿಗೆ ಈ ಜಾಗರಣೆಯನ್ನು ಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಆದ್ದರಿಂದ ಯೆಹೋವನು ಅವರನ್ನು ಸಂರಕ್ಷಿಸಿ ಈಜಿಪ್ಟಿನಿಂದ ಹೊರತಂದದ್ದನ್ನು ಜ್ಞಾಪಕಮಾಡುವ ಆ ರಾತ್ರಿ ಬಹು ವಿಶೇಷವಾದ ರಾತ್ರಿಯಾಗಿದೆ. ಇಸ್ರೇಲರೆಲ್ಲರೂ ಆ ರಾತ್ರಿಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ದೇವರು ಈಜಿಪ್ಟ್ ದೇಶದಿಂದ ಅವರನ್ನು ಹೊರಗೆ ತಂದ ಕಾರಣ, ಇದು ಯೆಹೋವ ದೇವರಿಗೆ ಆಚರಿಸಬೇಕಾದ ರಾತ್ರಿಯಾಗಿತ್ತು. ಇಸ್ರಾಯೇಲರು ತಮ್ಮ ಸಂತತಿಗಳಲ್ಲಿ ಯೆಹೋವ ದೇವರಿಗೆ ಆಚರಿಸಬೇಕಾದ ರಾತ್ರಿಯು ಇದೇ. ಅಧ್ಯಾಯವನ್ನು ನೋಡಿ |