Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:46 - ಕನ್ನಡ ಸತ್ಯವೇದವು C.L. Bible (BSI)

46 ಅಡಿಗೆ ಮಾಡಿದ ಮನೆಯಲ್ಲೆ ಅದನ್ನು ಊಟಮಾಡಬೇಕು. ಅದರಲ್ಲಿ ಕಿಂಚಿತ್ತನ್ನೂ ಆ ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಬಾರದು. ಬಲಿಪ್ರಾಣಿಯ ಎಲುಬೊಂದನ್ನಾದರೂ ಮುರಿಯಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಅವರವರ ಮನೆಯಲ್ಲಿಯೇ ಅದನ್ನು ಊಟಮಾಡಬೇಕು. ಅದರಲ್ಲಿ ಸ್ವಲ್ಪ ಮಾಂಸವನ್ನಾದರೂ ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಬಾರದು. ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಒಂದೇ ಮನೆಯಲ್ಲಿ ಅದನ್ನು ಊಟಮಾಡಬೇಕು; ಅದರಲ್ಲಿ ಸ್ವಲ್ಪವನ್ನಾದರೂ ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಕೂಡದು. ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 “ಪಸ್ಕಹಬ್ಬದ ಊಟವನ್ನು ಮನೆಯೊಳಗೆ ತಿನ್ನಬೇಕು. ಪಸ್ಕದ ಮಾಂಸವನ್ನು ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಕೂಡದು. ಕುರಿಮರಿಯ ಎಲುಬುಗಳಲ್ಲಿ ಯಾವುದನ್ನೂ ಮುರಿಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 “ಒಂದೇ ಮನೆಯಲ್ಲಿ ಅದನ್ನು ತಿನ್ನಬೇಕು. ಆ ಮಾಂಸದಲ್ಲಿ ಸ್ವಲ್ಪ ಅಂಶವನ್ನಾದರೂ ಮನೆಯ ಹೊರಗೆ ತೆಗೆದುಕೊಂಡು ಹೋಗಬಾರದು. ಪಶುವಿನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:46
7 ತಿಳಿವುಗಳ ಹೋಲಿಕೆ  

‘ಆತನ ಎಲುಬೊಂದನ್ನು ಮುರಿಯಕೂಡದು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಆ ವಾಕ್ಯ ನೆರವೇರುವಂತೆ ಹೀಗೆ ನಡೆಯಿತು.


ಅದರಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ಮಿಗಿಸಬಾರದು. ಅದರ ಒಂದು ಎಲುಬನ್ನಾದರೂ ಮುರಿಯಬಾರದು. ಪಾಸ್ಕ ಹಬ್ಬ ಕುರಿತ ವಿಧಿನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು.


ತರುವಾಯ ಯೇಸುವಿನ ಬಳಿಗೆ ಬಂದರು. ಯೇಸು ಆಗಲೇ ಸತ್ತುಹೋಗಿರುವುದನ್ನು ಕಂಡು, ಅವರ ಕಾಲುಗಳನ್ನು ಮುರಿಯಲಿಲ್ಲ.


ದೇಹ ಒಂದೇ; ಅಂಗಗಳು ಹಲವು. ಆ ಅಂಗಗಳು ಅನೇಕವಿದ್ದರೂ ಅವು ಸೇರಿ ಒಂದೇ ದೇಹವಾಗುತ್ತದೆ. ಅಂತೆಯೇ ಕ್ರಿಸ್ತಯೇಸು.


ಕಾಪಾಡುವನು ಅವನೆಲಬುಗಳೆಲ್ಲವನ್ನೂ I ಮುರಿಯಬಿಡನು ಪ್ರಭು ಅವುಗಳಲ್ಲೊಂದನ್ನೂ II


ದುರ್ಜನರೆಲ್ಲರೂ ತುತ್ತಾಗುವರು ತಮ್ಮ ಕೇಡಿಗೆ I ಸಜ್ಜನರ ಶತ್ರುಗಳು ಗುರಿಯಾಗುವರು ದಂಡನೆಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು