ವಿಮೋಚನಕಾಂಡ 12:48 - ಕನ್ನಡ ಸತ್ಯವೇದವು C.L. Bible (BSI)48 ನಿಮ್ಮ ಬಳಿ ವಾಸವಾಗಿರುವ ವಿದೇಶೀಯನೊಬ್ಬನು ಸರ್ವೇಶ್ವರನಿಗೆ ಈ ಪಾಸ್ಕಹಬ್ಬವನ್ನು ಕೊಂಡಾಡಬೇಕೆಂಬ ಆಸೆಯಿದ್ದರೆ ಅವನೂ ಅವನ ಕುಟುಂಬಕ್ಕೆ ಸೇರಿದ ಗಂಡಸರೆಲ್ಲರೂ ಸುನ್ನತಿಮಾಡಿಸಿಕೊಳ್ಳಬೇಕು. ಬಳಿಕ ಅವನು ಬಂದು ಈ ಹಬ್ಬವನ್ನು ಆಚರಿಸಬಹುದು. ಅಂಥವನು ಸ್ವದೇಶದವನಂತೆ ಆಗುತ್ತಾನೆ. ಆದರೆ ಸುನ್ನತಿ ಮಾಡಿಸಿಕೊಳ್ಳದ ಯಾವನೂ ಆ ಭೋಜನದಲ್ಲಿ ಭಾಗಿ ಆಗಕೂಡದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ನಿಮ್ಮ ಬಳಿಯಲ್ಲಿ ವಾಸವಾಗಿರುವ ಪರದೇಶದವನು ಯೆಹೋವನಿಗೆ ಈ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅವನೂ, ಅವನಿಗೆ ಸೇರಿರುವ ಗಂಡಸರೆಲ್ಲರೂ ಸುನ್ನತಿಮಾಡಿಸಿಕೊಳ್ಳಬೇಕು. ತರುವಾಯ ಅವನು ಈ ಹಬ್ಬವನ್ನು ಆಚರಿಸುವುದಕ್ಕೆ ಸಮೀಪ ಬರಲಿ. ಅಂಥವನು ಸ್ವದೇಶದವನಂತೆಯೇ ಇರುವನು. ಆದರೆ ಸುನ್ನತಿಮಾಡಿಸಿಕೊಳ್ಳದವನು ಆ ಭೋಜನವನ್ನು ತಿನ್ನಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ನಿಮ್ಮ ಬಳಿಯಲ್ಲಿ ವಾಸವಾಗಿರುವ ಪರದೇಶದವನು ಯೆಹೋವನಿಗೆ ಈ ಪಸ್ಕ ಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅವನೂ ಅವನಿಗೆ ಸೇರಿರುವ ಗಂಡಸರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕು; ತರುವಾಯ ಅವನು ಹತ್ತಿರ ಬಂದು ಈ ಹಬ್ಬವನ್ನು ಆಚರಿಸಬಹುದು. ಅಂಥವನು ಸ್ವದೇಶದವನಂತೆಯೇ ಇರುವನು; ಆದರೆ ಸುನ್ನತಿ ಮಾಡಿಸಿಕೊಳ್ಳದವನು ಆ ಭೋಜನವನ್ನು ಮಾಡಲೇ ಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ನಿಮ್ಮ ಮಧ್ಯದಲ್ಲಿ ವಾಸವಾಗಿರುವ ಪರದೇಶದವನು ಯೆಹೋವನ ಪಸ್ಕ ಭೋಜನದಲ್ಲಿ ಪಾಲುಗಾರನಾಗಬೇಕೆಂದು ಬಯಸಿದರೆ ಅವನು ಸುನ್ನತಿ ಮಾಡಿಸಿಕೊಳ್ಳಬೇಕು. ಆಗ ಅವನು ಇಸ್ರೇಲಿನವನಾಗುವುದರಿಂದ ಭೋಜನದಲ್ಲಿ ಪಾಲುಗಾರನಾಗಬಹುದು. ಆದರೆ ಸುನ್ನತಿಯಾಗಿಲ್ಲದವನು ಪಸ್ಕದ ಊಟ ಮಾಡಕೂಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 “ನಿಮ್ಮ ಜೊತೆಯಲ್ಲಿ ವಾಸಮಾಡಿದ ಪರದೇಶದವನು ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ, ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ. ತರುವಾಯ ಅವನು ಅದನ್ನು ಆಚರಿಸುವುದಕ್ಕೆ ಸಮೀಪಬರಲಿ, ಅಂಥವರು ಸ್ವದೇಶದಲ್ಲಿ ಹುಟ್ಟಿದವರಂತೆ ಇರುವರು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು. ಅಧ್ಯಾಯವನ್ನು ನೋಡಿ |