Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:5 - ಕನ್ನಡ ಸತ್ಯವೇದವು C.L. Bible (BSI)

5 ಆ ಮರಿಯು ಯಾವ ದೋಷವೂ ಇಲ್ಲದ ಒಂದು ವರ್ಷದ ಗಂಡಾಗಿರಬೇಕು. ಕುರಿಗಳಿಂದಾಗಲಿ ಆಡುಗಳಿಂದಾಗಲಿ ಅದನ್ನು ಆರಿಸಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ಮರಿಯು ಊನವಿಲ್ಲದ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಅಥವಾ ಆಡುಗಳಿಂದಾಗಲಿ ಅದನ್ನು ತೆಗೆದುಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆ ಮರಿಯು ಪೂರ್ಣಾಂಗವಾದ ಒಂದು ವರುಷದ ಗಂಡಾಗಿರಬೇಕು; ಕುರಿಗಳಿಂದಾಗಲಿ ಆಡುಗಳಿಂದಾಗಲಿ ಅದನ್ನು ತೆಗೆದುಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅದು ಒಂದು ವರ್ಷದ ಗಂಡು ಕುರಿಯಾಗಿರಬೇಕು ಅಥವಾ ಆಡಾಗಿರಬೇಕು. ಅಲ್ಲದೆ ಕಳಂಕ ರಹಿತವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ಆಯ್ದುಕೊಳ್ಳುವ ಕುರಿಮರಿಯು ದೋಷರಹಿತವಾಗಿರುವ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ, ಆಡುಗಳಿಂದಾಗಲಿ ತೆಗೆದುಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:5
14 ತಿಳಿವುಗಳ ಹೋಲಿಕೆ  

“ತನ್ನ ಹಿಂಡಿನಲ್ಲಿರುವ ಗಂಡು ಪಶುವನ್ನು ಕೊಡುವುದಾಗಿ ಹರಕೆ ಹೊತ್ತು, ಬದಲಿಗೆ ಕಳಂಕವಾದ ಪಶುವನ್ನು ಸರ್ವೇಶ್ವರಸ್ವಾಮಿಗೆ ಬಲಿದಾನಮಾಡುವವನು ಮೋಸಗಾರ, ಅವನು ಶಾಪಗ್ರಸ್ತ. ನಾನೋ ರಾಜಾಧಿರಾಜ. ನನ್ನ ನಾಮಕ್ಕೆ ಅನ್ಯರಾಷ್ಟ್ರಗಳೂ ಭಯಪಡುತ್ತವೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


“ಯಾವುದಾದರೊಂದು ಕುಂದುಕೊರತೆಯಾಗಲಿ, ದುರ್ಲಕ್ಷಣವಾಗಲಿ ಇರುವ ದನಕುರಿಗಳನ್ನು ನಿಮ್ಮ ದೇವರಾದ ಸರ್ವೇಶ್ವರನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಅವರು ಸಹಿಸರು.


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ನೀವು ಒಂದು ವರ್ಷದ ಕಳಂಕರಹಿತವಾದ ಟಗರನ್ನು ದಹನಬಲಿಯಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.


“ಒಬ್ಬನು ಆಡನ್ನಾಗಲಿ, ಕುರಿಯನ್ನಾಗಲಿ ದಹನಬಲಿದಾನ ಮಾಡಬೇಕೆಂದಿದ್ದರೆ ಅಂಥವನು ಕಳಂಕರಹಿತವಾದ ಗಂಡನ್ನು ತರಲಿ.


ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಸರ್ವೇಶ್ವರನಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.


ಸೌಲನು ಅರಸನಾದಾಗ ಅವನಿಗೆ ಮೂವತ್ತು ವರ್ಷ. ಅವನು ಇಸ್ರಯೇಲರನ್ನು ನಾಲ್ವತ್ತೆರಡು ವರ್ಷ ಆಳಿದನು.


ಕುಟುಂಬವು ಚಿಕ್ಕದಾಗಿದ್ದು ಒಂದು ಮರಿಯನ್ನು ಪೂರ್ತಿಯಾಗಿ ತಿನ್ನಲಾಗದಿದ್ದರೆ ಹತ್ತಿರದ ನೆರೆಮನೆಯ ಕುಟುಂಬದೊಂದಿಗೆ ಸೇರಿ ಒಬ್ಬೊಬ್ಬನು ಇಷ್ಟಿಷ್ಟು ತಿನ್ನುವನೆಂದು ಲೆಕ್ಕ ಹಾಕಿ ಜನಗಳ ಸಂಖ್ಯಾನುಸಾರ ಮರಿಗಳನ್ನು ಆರಿಸಿಕೊಳ್ಳಲಿ.


ಸರ್ವಾಂಗ ಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,


ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು