Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:51 - ಕನ್ನಡ ಸತ್ಯವೇದವು C.L. Bible (BSI)

51 ಆ ದಿನ ಸರ್ವೇಶ್ವರ ಇಸ್ರಯೇಲರನ್ನು ಪಡೆಪಡೆಯಾಗಿ ಈಜಿಪ್ಟ್ ದೇಶದಿಂದ ಹೊರಗೆ ಕರೆದೊಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಅದೇ ದಿನದಲ್ಲಿ ಯೆಹೋವನು ಇಸ್ರಾಯೇಲರನ್ನು ಅವರವರ ಸೈನ್ಯಗಳ ಪ್ರಕಾರವಾಗಿ ಐಗುಪ್ತ ದೇಶದಿಂದ ಹೊರಗೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಸೈನ್ಯ ಸೈನ್ಯವಾಗಿ ಐಗುಪ್ತದೇಶದಿಂದ ಹೊರಗೆ ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಆದ್ದರಿಂದ ಅದೇ ದಿನದಲ್ಲಿ ಯೆಹೋವನು ಇಸ್ರೇಲರನ್ನು ಈಜಿಪ್ಟ್ ದೇಶದಿಂದ ಜನರನ್ನು ಗುಂಪುಗುಂಪುಗಳಾಗಿ ಹೊರತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಅದೇ ದಿನದಲ್ಲಿ ಯೆಹೋವ ದೇವರು ಇಸ್ರಾಯೇಲರನ್ನು ಅವರ ಸೈನ್ಯಗಳ ಪ್ರಕಾರ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:51
25 ತಿಳಿವುಗಳ ಹೋಲಿಕೆ  

ಈ ನಾನೂರ ಮೂವತ್ತು ವರ್ಷಗಳು ಕಳೆದ ನಂತರ ಅದೇ ದಿವಸದಲ್ಲಿ ಸರ್ವೇಶ್ವರನ ಪಡೆಗಳೆಲ್ಲವೂ ಈಜಿಪ್ಟ್ ದೇಶವನ್ನು ಬಿಟ್ಟು ಹೊರಟುಬಂದವು.


“ತಮ್ಮ ತಮ್ಮ ಗೋತ್ರದ ಪ್ರಕಾರ ಇಸ್ರಯೇಲ್ ಜನರನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬರುವುದಕ್ಕೆ ಸರ್ವೇಶ್ವರನಿಂದ ಆಜ್ಞೆಹೊಂದಿದ ಆರೋನ್ ಮತ್ತು ಮೋಶೆ ಇವರೇ.


ಇಸ್ರಯೇಲ್ ಜನರ ದೇವರು ನಮ್ಮ ಪೂರ್ವಜರನ್ನು ಆರಿಸಿಕೊಂಡರು. ಈಜಿಪ್ಟಿನಲ್ಲಿ ಪರಕೀಯರಾಗಿ ವಾಸಿಸುತ್ತಿದ್ದ ನಮ್ಮ ಜನರನ್ನು ಪ್ರಬಲ ಜನಾಂಗವನ್ನಾಗಿ ಮಾಡಿದರು. ತಮ್ಮ ಮಹಾಶಕ್ತಿಯನ್ನು ಪ್ರಯೋಗಿಸಿ ಅವರನ್ನು ಈಜಿಪ್ಟಿನಿಂದ ಹೊರಗೆ ತಂದರು.


ಇದನ್ನೆಲ್ಲಾ ನೀವು ಈಗಾಗಲೇ ಚೆನ್ನಾಗಿ ಅರಿತವರಾಗಿದ್ದೀರಿ. ಆದರೂ ಕೆಲವು ವಿಷಯಗಳನ್ನು ನಿಮ್ಮ ನೆನಪಿಗೆ ತರಲು ಬಯಸುತ್ತೇನೆ: ದೇವರು ತಮ್ಮ ಪ್ರಜೆಗಳನ್ನು ಈಜಿಪ್ಟ್ ದೇಶದಿಂದ ಬಿಡುಗಡೆಮಾಡಿದರು; ವಿಶ್ವಾಸವಿಡದವರನ್ನು ಅನಂತರ ಅವರೇ ನಾಶಮಾಡಿದರು.


ಆದಕಾರಣ ಅವರನ್ನು ಈಜಿಪ್ಟಿನವರ ಕೈಯಿಂದ ಬಿಡಿಸುವುದಕ್ಕು ಮತ್ತು ಆ ದೇಶದಿಂದ ಹೊರತಂದು ಹಾಲೂ ಜೇನೂ ಹರಿಯುವ ಸವಿಸ್ತಾರವಾದ ಒಳ್ಳೆಯ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಆಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ನಡೆಸಿಕೊಂಡು ಹೋಗುವುದಕ್ಕು ಇಳಿದು ಬಂದಿದ್ದೇನೆ.


ಆದುದರಿಂದ ನೀನು ಇಸ್ರಯೇಲರಿಗೆ ನನ್ನ ಪರವಾಗಿ ಹೀಗೆಂದು ಹೇಳು: ‘ನಾನೇ ಸರ್ವೇಶ್ವರ. ಈಜಿಪ್ಟಿನವರು ನಿಮ್ಮ ಮೇಲೆ ಹೊರಿಸಿರುವ ದುಡಿಮೆಯನ್ನು ನೀಗಿಸುವೆನು, ದಾಸತ್ವವನ್ನು ತೊಲಗಿಸುವೆನು. ಅವರಿಗೆ ಕಠಿಣಶಿಕ್ಷೆಗಳನ್ನು ವಿಧಿಸುವೆನು, ನಿಮ್ಮನ್ನು ಸಂರಕ್ಷಿಸುವೆನು.


ಫರೋಹನು ನಿನ್ನ ಮಾತನ್ನು ಕೇಳುವುದಿಲ್ಲ. ಆಗ ನಾನು ಈಜಿಪ್ಟ್ ದೇಶದವರನ್ನು ಬಾಧಿಸಿ ಅವರಿಗೆ ಕಠಿಣ ಶಿಕ್ಷೆಗಳನ್ನು ವಿಧಿಸುವೆನು. ನನ್ನ ಜನರಾದ ಇಸ್ರಯೇಲರ ಗೋತ್ರಗಳನ್ನೆಲ್ಲ ಈಜಿಪ್ಟ್ ದೇಶದಿಂದ ಹೊರತರುವೆನು.


ಮೋಶೆ ಮತ್ತು ಆರೋನರಿಗೆ ಸರ್ವೇಶ್ವರ ಆಜ್ಞಾಪಿಸಿದ ಮೇರೆಗೆ ಇಸ್ರಯೇಲರೆಲ್ಲರೂ ನಡೆದುಕೊಂಡರು.


ಸರ್ವೇಶ್ವರ ಸ್ವಾಮಿ ಮೋಶೆಗೆ,


ಇಸ್ರಯೇಲರ ಸಮಾಜ ಏಲೀಮಿನಿಂದ ಹೊರಟ ಮೇಲೆ, ಏಲೀಮಿಗೂ ಸಿನಾಯಿ ಬೆಟ್ಟಕ್ಕೂ ನಡುವೆಯಿರುವ ‘ಸೀನ್’ ಎಂಬ ಮರುಭೂಮಿಗೆ ಬಂದರು. ಈಜಿಪ್ಟನ್ನು ಬಿಟ್ಟು ಬಂದ ಎರಡನೆಯ ತಿಂಗಳಿನ ಹದಿನೈದನೆಯ ದಿನ ಅದು.


ಇಸ್ರಯೇಲರು ಈಜಿಪ್ಟ್ ದೇಶದಿಂದ ಹೊರಟ ಮೂರನೆಯ ತಿಂಗಳಿನ ಅದೇ ದಿವಸದಲ್ಲಿ ಸೀನಾಯಿ ಮರುಭೂಮಿಗೆ ಬಂದರು.


ಇಸ್ರಯೇಲ್ ಜನರು ಈಜಿಪ್ಟನು ಬಿಟ್ಟು ಹೊರಟಾಗ I ಯಕೋಬ್ಯರು ಪರ ನುಡಿಯಾಡುವರನು ಬಿಟ್ಟಗಲಿದಾಗ, II


ಇಸ್ರಯೇಲರನು ಅಲ್ಲಿಂದ ಹೊರತಂದವನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಈಜಿಪ್ಟಿನಿಂದ ನಿಮ್ಮನ್ನು ಹೊರತಂದವನು ನಾನೇ. ನಲವತ್ತು ವರ್ಷಗಳ ಕಾಲ ಅರಣ್ಯದ ಮಾರ್ಗವಾಗಿ ನಿಮ್ಮನ್ನು ನಡೆಸಿ ಕರೆತಂದು, ಅಮೋರ್ಯದವರ ನಾಡನ್ನು ನಿಮಗೆ ದೊರಕಿಸಿಕೊಟ್ಟವನು ನಾನೇ.


ಈಜಿಪ್ಟ್ ದೇಶದಿಂದ ನಾನು ನಿನ್ನನ್ನು ಕರೆತಂದೆ; ದಾಸತ್ವದ ಬಂಧನದಿಂದ ನಿನ್ನನ್ನು ಬಿಡುಗಡೆ ಮಾಡಿದೆ. ನಿನಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಾಯಕರನ್ನಾಗಿ ಕಳುಹಿಸಿದೆ.


ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನನ್ನ ಮರಣಕಾಲವು ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಲು ಬರುವರು; ತಾವು ಅಬ್ರಹಾಮ್, ಇಸಾಕ್, ಯಕೋಬರಿಗೆ ಕೊಡುವುದಾಗಿ ವಾಗ್ದಾನಮಾಡಿರುವ ನಾಡಿಗೆ ನೀವು ಹೋಗಿ ಸೇರುವಂತೆ ಮಾಡುವರು,” ಎಂದು ಹೇಳಿದನು.


ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದಾಗ ಇಸ್ರಯೇಲರು ಪರ್ಣಕುಟೀರಗಳಲ್ಲಿ ವಾಸವಾಗಿರುವಂತೆ ಮಾಡಿದೆನೆಂಬುದಾಗಿ ಇದರಿಂದ ನಿಮ್ಮ ಸಂತತಿಯವರಿಗೆ ತಿಳಿಯುವುದು. ನಾನು ನಿಮ್ಮ ದೇವರಾದ ಸರ್ವೇಶ್ವರ.”


ಅವರನ್ನು ದೇವರೇ ಕರೆದು ತಂದ ಈಜಿಪ್ಟಿನಿಂದ ಅವರಿಗಿದೆ ಕಾಡುಕೋಣದಂಥ ಶಕ್ತಿಸಾಮರ್ಥ್ಯ!


ಸರ್ವೇಶ್ವರ ಮೋಶೆಗೂ ಈಜಿಪ್ಟಿನಿಂದ ಬಂದಿದ್ದ ಇಸ್ರಯೇಲರಿಗೂ ಆಜ್ಞಾಪಿಸಿದ್ದಂತೆ ಇಪ್ಪತ್ತು ವರ್ಷ ಮತ್ತು ಮೇಲ್ಪಟ್ಟ ವಯಸ್ಸಿನ ಇಸ್ರಯೇಲರನ್ನು ಲೆಕ್ಕಿಸಿದರು: ಅದರ ವಿವರ ಇದು.


ಮೋಶೆ ಮತ್ತು ಆರೋನರ ಮುಂದಾಳತ್ವದಲ್ಲಿ ಈಜಿಪ್ಟ್ ದೇಶದಿಂದ ಸೈನ್ಯ ಸೈನ್ಯವಾಗಿ ಹೊರಟ ಇಸ್ರಯೇಲರ ಪಯಣದ ವಿವರ:


ನಿಮ್ಮ ಪಿತೃಗಳನ್ನು ಪ್ರೀತಿಸಿ, ತರುವಾಯ ಅವರ ಸಂತತಿಯಾದ ನಿಮ್ಮನ್ನೂ ಆರಿಸಿಕೊಂಡರು.


“ನೀವು ಚೈತ್ರಮಾಸದಲ್ಲಿ ಪಾಸ್ಕಹಬ್ಬವನ್ನು ನಿಮ್ಮ ದೇವರಾದ ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು. ಆ ಮಾಸದಲ್ಲೇ ರಾತ್ರಿವೇಳೆಯಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈಜಿಪ್ಟ್ ದೇಶದಿಂದ ಬಿಡುಗಡೆ ಮಾಡಿದ್ದು.


ಬಳಿಕ ನಾನು ಮೋಶೆ ಹಾಗೂ ಆರೋನರನ್ನು ಕಳಿಸಿ, ಆ ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ನಡೆಸಿ, ಆ ಜನರನ್ನು ಬಾಧಿಸಿ, ನಿಮ್ಮನ್ನು ಹೊರಗೆ ಕರೆತಂದೆ.


ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟ ನಾನೂರ ಎಂಬತ್ತನೆಯ ವರ್ಷದಲ್ಲಿ ಅಂದರೆ, ಇಸ್ರಯೇಲರ ಅರಸನಾದ ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಾದ ವೈಶಾಖ ಮಾಸದಲ್ಲಿ ಅರಸ ಸೊಲೊಮೋನನು ಸರ್ವೇಶ್ವರಸ್ವಾಮಿಯ ಆಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದನು.


ಸರ್ವೇಶ್ವರ ಅರಸನಿಂದಲೂ ಯೆಹೂದ್ಯರಿಂದಲೂ ಸುಡಾನರಿಗೆ ಅಪಜಯ ಉಂಟಾಗುವಂತೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು