Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 13:13 - ಕನ್ನಡ ಸತ್ಯವೇದವು C.L. Bible (BSI)

13 ಆದರೆ ಕತ್ತೆಯ ಚೊಚ್ಚಲು ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೇಮರಿಯನ್ನು ಬಿಡಿಸಿಕೊಳ್ಳಬಹುದು; ಹಾಗೆ ಬಿಡಿಸಲಾಗದೆ ಹೋದರೆ ಅದರ ಕುತ್ತಿಗೆ ಮುರಿದು ಕೊಲ್ಲಬೇಕು. ಮನುಷ್ಯರ ಚೊಚ್ಚಲ ಗಂಡನ್ನಾದರೋ ಬದಲುಕೊಟ್ಟು ಬಿಡಿಸಿಕೊಳ್ಳಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮೊದಲು ಹುಟ್ಟಿದ ಕತ್ತೆಯ ಚೊಚ್ಚಲಮರಿಗೆ ಬದಲಾಗಿ ಕುರಿಮರಿಯನ್ನು ಬಿಡಿಸಿಕೊಳ್ಳಬಹುದು. ಹಾಗೆ ಬಿಡಿಸದೆ ಹೋದರೆ ಅದರ ಕುತ್ತಿಗೆ ಮುರಿದು ಕೊಲ್ಲಬೇಕು. ಮನುಷ್ಯರ ಚೊಚ್ಚಲ ಗಂಡು ಮಕ್ಕಳನ್ನು ಯೆಹೋವನಿಗಾಗಿ ಬಿಡಿಸಿಕೊಳ್ಳಲೇ ಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕತ್ತೆಯ ಚೊಚ್ಚಲುಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೇಮರಿಯನ್ನು ಬಿಡಿಸಿಕೊಳ್ಳಬಹುದು; ಹಾಗೆ ಬಿಡಿಸಲೊಲ್ಲದೆ ಹೋದರೆ ಅದರ ಕುತ್ತಿಗೆ ಮುರಿದು ಕೊಲ್ಲಬೇಕು. ಮನುಷ್ಯರ ಚೊಚ್ಚಲುಗಂಡನ್ನಾದರೋ ಬದಲುಕೊಟ್ಟು ಬಿಡಿಸಿಕೊಳ್ಳಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಚೊಚ್ಚಲು ಕತ್ತೆಮರಿಯನ್ನು ನೀವು ಯೆಹೋವನಿಂದ ಬಿಡಿಸಿಕೊಳ್ಳಬೇಕೆಂದಿದ್ದರೆ ಅದಕ್ಕೆ ಬದಲಾಗಿ ಒಂದು ಕುರಿಮರಿಯನ್ನು ಕೊಡಬೇಕು. ಕತ್ತೆಮರಿಯನ್ನು ಬಿಡಿಸಿಕೊಳ್ಳಲು ಇಷ್ಟಪಡದಿದ್ದರೆ, ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು. ಆದರೆ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಯೆಹೋವನಿಂದ ಬಿಡಿಸಿಕೊಳ್ಳಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಕತ್ತೆಯ ಚೊಚ್ಚಲು ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ವಿಮೋಚಿಸಿಕೊಳ್ಳಬೇಕು. ಹಾಗೆ ವಿಮೋಚಿಸಿಕೊಳ್ಳದೆ ಹೋದರೆ ಅದರ ಕುತ್ತಿಗೆ ಮುರಿಯಬೇಕು. ಮನುಷ್ಯರಲ್ಲಿ ಚೊಚ್ಚಲ ಗಂಡು ಮಕ್ಕಳನ್ನು ಬದಲುಕೊಟ್ಟು, ವಿಮೋಚಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 13:13
7 ತಿಳಿವುಗಳ ಹೋಲಿಕೆ  

ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೆಮರಿಯನ್ನು ಬಿಡಿಸಬಹುದು. ಹಾಗೆ ಬಿಡಿಸಲಾಗದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೊಚ್ಚಲು ಗಂಡುಮಗುವನ್ನು ಕೊಲ್ಲದೆ, ಬದಲುಕೊಟ್ಟು ಬಿಡಿಸಲೇಬೇಕು. ಯಾರೂ ಬರೀಗೈಯಲ್ಲಿ ನನ್ನ ಮುಂದೆ ಕಾಣಿಸಿಕೊಳ್ಳಬಾರದು.”


ಇವರು ಸ್ತ್ರೀಸಂಸರ್ಗದಿಂದ ಮಲಿನರಾಗದವರು; ಕನ್ಯೆಯರಂತೆ ಕಳಂಕರಹಿತರು; ಇವರು ಯಜ್ಞದ ಕುರಿಮರಿ ಹೋದೆಡೆಯಲ್ಲೆಲ್ಲಾ ಹಿಂಬಾಲಿಸುವವರು; ದೇವರಿಗೂ ಯಜ್ಞದ ಕುರಿಮರಿಗೂ ಅರ್ಪಿತವಾದ ಪ್ರಥಮ ಫಲದಂತೆ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರು.


ಮೋಶೆ ಇಸ್ರಯೇಲರ ಹಿರಿಯರೆಲ್ಲರನ್ನು ಕರೆಯಿಸಿ ಅವರಿಗೆ, “ನೀವು ನಿಮ್ಮ ನಿಮ್ಮ ಕುಟುಂಬಗಳಿಗಾಗಿ ಹಿಂಡಿನಿಂದ ಮರಿಗಳನ್ನು ಆರಿಸಿಕೊಂಡು ಪಾಸ್ಕ ಹಬ್ಬಕ್ಕೆ ಕೊಯ್ಯಿರಿ.


ಈ ವಿಷಯದಲ್ಲಿ ನೀವು ಇಸ್ರಯೇಲರ ಸಮಾಜಕ್ಕೆಲ್ಲ ಈ ರೀತಿ ಕಟ್ಟಳೆಯಿಡಬೇಕು: ‘ಈ ತಿಂಗಳ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ಆರಿಸಿಕೊಳ್ಳಬೇಕು.


“ಚೊಚ್ಚಲಾಗಿ ಹುಟ್ಟಿದ್ದೆಲ್ಲವನ್ನು ನನಗೆ ಮೀಸಲಾಗಿಡು; ಇಸ್ರಯೇಲರಲ್ಲಿ ಮನುಷ್ಯರಿಗಾಗಲಿ ಪಶುಪ್ರಾಣಿಗಳಿಗಾಗಲಿ ಹುಟ್ಟಿದ ಪ್ರಥಮ ಗರ್ಭಫಲ ನನ್ನದೇ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು