ವಿಮೋಚನಕಾಂಡ 13:17 - ಕನ್ನಡ ಸತ್ಯವೇದವು C.L. Bible (BSI)17 ಫರೋಹನು ಇಸ್ರಯೇಲರಿಗೆ ಹೋಗಲು ಅಪ್ಪಣೆಕೊಟ್ಟಾಗ ದೇವರು ಅವರನ್ನು ಹತ್ತಿರವಾಗಿದ್ದ ಫಿಲಿಷ್ಟಿಯರ ಪ್ರಾಂತ್ಯದ ಮಾರ್ಗವಾಗಿ ಕರೆದುತರಲಿಲ್ಲ. ಬದಲಿಗೆ ಕೆಂಪು ಸಮುದ್ರದ ಬಳಿಯಿರುವ ಮರುಳುಗಾಡಿನ ಬಳಸು ದಾರಿಯಲ್ಲೇ ನಡೆಸಿಕೊಂಡು ಬಂದರು. ಏಕೆಂದರೆ, “ಯುದ್ಧ ತೊಡಗಿದರೆ ಇವರು ಎದೆಗೆಟ್ಟು ಈಜಿಪ್ಟಿಗೆ ಹಿಂದಿರುಗಿಯಾರು” ಎಂದುಕೊಂಡರು ದೇವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಫರೋಹನು ಇಸ್ರಾಯೇಲರಿಗೆ ಹೋಗುವುದಕ್ಕೆ ಅಪ್ಪಣೆ ಕೊಟ್ಟಾಗ, ಫಿಲಿಷ್ಟಿಯರ ದೇಶದ ಮಾರ್ಗವು ಸಮೀಪವಾಗಿದ್ದರೂ ದೇವರು ಆ ದಾರಿಯಲ್ಲಿ ಅವರನ್ನು ಹೋಗಗೊಡಿಸಲಿಲ್ಲ. ಏಕೆಂದರೆ, “ದೇವರು, ಜನರು ಯುದ್ಧವನ್ನು ನೋಡಿ ಗಾಬರಿಯಾಗಿ ಮನಸ್ಸನ್ನು ಬದಲಾಯಿಸಿಕೊಂಡು ಐಗುಪ್ತಕ್ಕೆ ಹಿಂದಿರುಗಿ ಹೋದಾರೂ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಫರೋಹನು ಇಸ್ರಾಯೇಲ್ಯರಿಗೆ ಹೋಗುವದಕ್ಕೆ ಅಪ್ಪಣೆ ಕೊಟ್ಟಾಗ ಫಿಲಿಷ್ಟಿಯರ ದೇಶದೊಳಗಣ ಮಾರ್ಗ ಹತ್ತಿರವಿದ್ದರೂ ದೇವರು ಆ ದಾರಿಯಲ್ಲಿ ಅವರನ್ನು ನಡಿಸದೆ ಕೆಂಪುಸಮುದ್ರದ ಬಳಿಯಲ್ಲಿರುವ ಮರಳು ಕಾಡಿನ ದಾರಿಯಲ್ಲಿಯೇ ಸುತ್ತಾಗಿ ನಡಿಸಿಕೊಂಡುಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಇಸ್ರೇಲರು ಈಜಿಪ್ಟನ್ನು ಬಿಟ್ಟುಹೋಗುವಂತೆ ಫರೋಹನು ಅನುಮತಿ ನೀಡಿದನು. ಇಸ್ರೇಲರು ಫಿಲಿಷ್ಟಿಯರ ದೇಶದ ಮೂಲಕ ಹಾದುಹೋಗುವ ರಸ್ತೆಯಲ್ಲಿ ಹೋಗಲು ಯೆಹೋವನು ಅನುಮತಿ ನೀಡಲಿಲ್ಲ. ಸಮುದ್ರದ ಮೂಲಕ ಹಾದುಹೋಗುವ ಆ ರಸ್ತೆ ಬಹಳ ಹತ್ತಿರವಾಗಿತ್ತು. ಆದರೆ ಯೆಹೋವನು, “ಇಸ್ರೇಲರು ಆ ದಾರಿಯಲ್ಲಿ ಹೋದರೆ, ಯುದ್ಧಮಾಡಬೇಕಾಗುವುದು. ಆಗ ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿ ಈಜಿಪ್ಟಿಗೆ ಹಿಂತಿರುಗಬಹುದು” ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಫರೋಹನು ಜನರನ್ನು ಕಳುಹಿಸಿಬಿಟ್ಟಾಗ, ಫಿಲಿಷ್ಟಿಯರ ದೇಶದ ದಾರಿಯು ಸಮೀಪವಿದ್ದರೂ ದೇವರು ಅವರನ್ನು ಅದರಲ್ಲಿ ನಡೆಸಲಿಲ್ಲ. ಏಕೆಂದರೆ ದೇವರು, “ಜನರು ಯುದ್ಧವನ್ನು ನೋಡಿ, ಮನಸ್ಸನ್ನು ಬೇರೆಮಾಡಿಕೊಂಡು, ಈಜಿಪ್ಟಿಗೆ ಹಿಂದಿರುಗಿಯಾರು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |