Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 13:5 - ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರ ನಿಮ್ಮ ಪೂರ್ವಜರಿಗೆ ಪ್ರಮಾಣವಾಗಿ ಹೇಳಿದಂತೆ ನಿಮ್ಮನ್ನು ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ, ನೀವು ಈ ಆಚರಣೆಯನ್ನು ಈ ತಿಂಗಳಿನಲ್ಲೇ ನಡೆಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿ ಹೇಳಿದಂತೆ, ನಿಮ್ಮನ್ನು ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚರಣೆಯನ್ನು ನಡೆಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣವಾಗಿ ಹೇಳಿದಂತೆ ನಿಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ಕರತಂದು, ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚಾರವನ್ನು ನಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಯೆಹೋವನು ಒಂದು ವಿಶೇಷ ವಾಗ್ದಾನವನ್ನು ನಿಮ್ಮ ಪೂರ್ವಿಕರಿಗೆ ಮಾಡಿದನು. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸಿಸುವ ಸಮೃದ್ಧಿಕರವಾದ ದೇಶವನ್ನು ನಿಮಗೆ ಕೊಡುವುದಾಗಿ ಯೆಹೋವನು ವಾಗ್ದಾನ ಮಾಡಿದನು. ಆತನು ನಿಮಗೆ ಆ ದೇಶವನ್ನು ಕೊಟ್ಟಾಗ ಪ್ರತಿವರ್ಷದ ಮೊದಲನೆಯ ತಿಂಗಳ ಈ ದಿನವನ್ನು ಆರಾಧನೆಯ ವಿಶೇಷ ದಿನವನ್ನಾಗಿ ಇಟ್ಟುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರ, ಹಿತ್ತಿಯರ, ಅಮೋರಿಯರ, ಹಿವ್ವಿಯರ, ಯೆಬೂಸಿಯರ ದೇಶಕ್ಕೆ ನಿಮ್ಮನ್ನು ಕರೆತಂದು ಅದನ್ನು ನಿಮಗೆ ಕೊಟ್ಟಾಗ ಈ ಹಬ್ಬವನ್ನು ಈ ತಿಂಗಳಲ್ಲಿ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 13:5
31 ತಿಳಿವುಗಳ ಹೋಲಿಕೆ  

ಆದಕಾರಣ ಅವರನ್ನು ಈಜಿಪ್ಟಿನವರ ಕೈಯಿಂದ ಬಿಡಿಸುವುದಕ್ಕು ಮತ್ತು ಆ ದೇಶದಿಂದ ಹೊರತಂದು ಹಾಲೂ ಜೇನೂ ಹರಿಯುವ ಸವಿಸ್ತಾರವಾದ ಒಳ್ಳೆಯ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಆಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ನಡೆಸಿಕೊಂಡು ಹೋಗುವುದಕ್ಕು ಇಳಿದು ಬಂದಿದ್ದೇನೆ.


ನೀವು ಜೋರ್ಡನನ್ನು ದಾಟಿ ಜೆರಿಕೋವಿಗೆ ಬಂದಿರಿ. ಆಗ ಜೆರಿಕೋವಿನವರು, ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷ್ಟಿಯರು, ಹಿವ್ವಿಯರು ಹಾಗೂ ಯೆಬೂಸಿಯರು ಇವರೆಲ್ಲರೂ ನಿಮಗೆ ವಿರುದ್ಧ ಯುದ್ಧಕ್ಕೆ ಬಂದರು. ನಾನು ಅವರೆಲ್ಲರನ್ನು ನಿಮ್ಮ ಕೈವಶಮಾಡಿದೆ.


ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಕೋಬರಿಗೆ ಕೊಡುವೆನೆಂದು ಪ್ರಮಾಣ ಪೂರ್ವಕವಾಗಿ ಹೇಳಿದ ನಾಡಿಗೆ ನಿಮ್ಮನ್ನು ಸೇರಿಸುವೆನು. ಅದನ್ನು ನಿಮಗೆ ಸ್ವಂತ ನಾಡಾಗಿ ಕೊಡುವೆನು. ಸರ್ವೇಶ್ವರನು ನಾನೇ’ ಎಂದು ಅವರಿಗೆ ಹೇಳು,” ಎಂದರು.


ನಾನು ಈ ದಿನ ನಿಮಗೆ ಆಜ್ಞಾಪಿಸುವುದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ನಿಮ್ಮ ಮುಂದೆಯೇ ಹೊರಡಿಸಿಬಿಡುವೆನು.


ಈಜಿಪ್ಟಿನಲ್ಲಿ ನಿಮಗುಂಟಾಗಿ ಇರುವ ಸಂಕಷ್ಟಗಳಿಂದ ನಿಮ್ಮನ್ನು ಪಾರುಮಾಡಿ ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಬರಮಾಡಬೇಕೆಂದು ತೀರ್ಮಾನಿಸಿದ್ದೇನೆ’ ಎಂದು ತಿಳಿಸು.


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲು ಕೊಡುವ ನಾಡನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸುವಾಗ


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡಿನಲ್ಲಿರುವ ಜನಾಂಗಗಳನ್ನು ಅಲ್ಲಿಂದ ತೆಗೆದುಹಾಕಿಬಿಡುವರು. ತರುವಾಯ ನೀವು ಆ ನಾಡನ್ನು ಸ್ವಾಧೀನಕ್ಕೆ ತೆಗೆದುಕೊಳ್ಳುವಿರಿ.


“ನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡಿನ ಜನಾಂಗಗಳನ್ನು, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮುಂದೆ ನಾಶಮಾಡಿದ ತರುವಾಯ, ನೀವು ಅವರ ನಾಡನ್ನು ತೆಗೆದುಕೊಂಡು ಅದರಲ್ಲಿ ವಾಸವಾಗಿರುವಿರಿ.


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿ, ಸಂಖ್ಯೆಯಲ್ಲೂ ಶಕ್ತಿಯಲ್ಲೂ ನಿಮ್ಮನ್ನು ಮೀರುವ ಜನಾಂಗಗಳನ್ನು ಅಲ್ಲಿಂದ ನಿಮ್ಮ ಮುಂದೆಯೆ ಹೊರಡಿಸುವರು.


‘ಈಜಿಪ್ಟ್ ದೇಶದಿಂದ ಹೊರಬಂದ ಈ ಜನರಲ್ಲಿ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಮತ್ತು ನೂನನ ಮಗ ಯೆಹೋಶುವನು ಇವರಿಬ್ಬರೇ ಹೊರತಾಗಿ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದರು.


ಯೆಫುನ್ನೆಯ ಮಗ ಕಾಲೇಬ್ ಮತ್ತು ನೂನನ ಮಗ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ನಿವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ನಾಡನ್ನು ಸೇರುವುದಿಲ್ಲ.


‘ಸರ್ವೇಶ್ವರ ಪ್ರಮಾಣ ಪೂರ್ವಕವಾಗಿ ವಾಗ್ದಾನ ಮಾಡಿದ ನಾಡಿಗೆ ತನ್ನ ಜನರನ್ನು ಸೇರಿಸಲು ಶಕ್ತಿ ಸಾಲದೆ ಹೋಯಿತು; ಅವರನ್ನು ಮರುಭೂಮಿಯಲ್ಲೇ ಕೊಂದುಹಾಕಿಬಿಟ್ಟ’ ಎಂದುಕೊಳ್ಳುವರು.


ಮೋಶೆಗೆ ಸರ್ವೇಶ್ವರ ಸ್ವಾಮಿ ಹೇಳಿದ ಮಾತುಗಳಿವು: “ನೀನು ಈಜಿಪ್ಟಿನಿಂದ ಕರೆದುತಂದ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳಬಿಟ್ಟು ತೆರಳು. ನಾನು ಅಬ್ರಹಾಮ್, ಇಸಾಕ್, ಯಕೋಬ್ ಎಂಬುವರೊಡನೆ ಅವನ ಸಂತತಿಯವರಿಗೆ ಕೊಡುವುದಾಗಿ ಪ್ರಮಾಣ ಮಾಡಿದ ನಾಡಿಗೆ ಹೊರಟುಹೋಗು.


ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನನ್ನ ಮರಣಕಾಲವು ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಲು ಬರುವರು; ತಾವು ಅಬ್ರಹಾಮ್, ಇಸಾಕ್, ಯಕೋಬರಿಗೆ ಕೊಡುವುದಾಗಿ ವಾಗ್ದಾನಮಾಡಿರುವ ನಾಡಿಗೆ ನೀವು ಹೋಗಿ ಸೇರುವಂತೆ ಮಾಡುವರು,” ಎಂದು ಹೇಳಿದನು.


ನಾನು ಹೇಳುವ ನಾಡಿನಲ್ಲಿ ಇದ್ದು ಪ್ರವಾಸ ಮಾಡುತ್ತಿರು. ನಾನು ನಿನ್ನ ಸಂಗಡವಿದ್ದು ನೀನು ಏಳಿಗೆಯಾಗುವಂತೆ ಮಾಡುತ್ತೇನೆ; ಈ ನಾಡೆಲ್ಲವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ನೀವು ಮತ್ತು ನಿಮ್ಮ ಸಂತತಿಯವರು ಈ ನಿಯಮಗಳನ್ನು ಶಾಶ್ವತವಾಗಿ ಆಚರಿಸಬೇಕು.


ವರ್ಷವರ್ಷವೂ ನಿಯಮಿತ ಕಾಲದಲ್ಲಿ ಈ ಆಚರಣೆಯನ್ನು ನಡೆಸಬೇಕು.


“ಸರ್ವೇಶ್ವರ ಸ್ವಾಮಿ ನಿಮಗೂ ನಿಮ್ಮ ಪೂರ್ವಜರಿಗೂ ಕೊಟ್ಟ ವಾಗ್ದಾನದ ಮೇರೆಗೆ ನಿಮ್ಮನ್ನು ಕಾನಾನ್ಯರ ನಾಡಿಗೆ ಬರಮಾಡಿ ಆ ನಾಡನ್ನು ನಿಮಗೆ ಕೊಟ್ಟನಂತರ


ತಮ್ಮ ದಾಸರಾದ ಅಬ್ರಹಾಮ್, ಇಸಾಕ್ ಹಾಗು ಯಕೋಬರನ್ನು ನೆನಪಿಗೆ ತಂದುಕೊಳ್ಳಿ. ತಾವು ತಮ್ಮ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನು; ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನು; ಮತ್ತು ಅವರು ಈ ನಾಡನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರು’ ಎಂದು ತಾವು ಮಾತುಕೊಡಲಿಲ್ಲವೆ?” ಎಂದನು.


ನಿಮಗಾದರೋ - ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ; ಹಾಲೂ ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ? ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಸರ್ವೇಶ್ವರ.


ನಿಮ್ಮ ದಯೆಗೆ ನಾನು ಅಯೋಗ್ಯನಾದೆನೇ? ‘ಮೊಲೆ ಕೂಸನ್ನು ಎತ್ತಿಕೊಂಡು ಹೋಗುವವಳಂತೆ ಈ ಜನರನ್ನು ತೋಳತೆಕ್ಕೆಯಲ್ಲಿರಿಸಿ, ಅವರ ಪೂರ್ವಜರಿಗೆ ನಾನು ಪ್ರಮಾಣಮಾಡಿದ ನಾಡಿಗೆ ಒಯ್ಯಿ’ ಎಂದು ಹೇಳುತ್ತೀರಲ್ಲವೆ? ನಾನು ಇವರಿಗೆ ಹೆತ್ತ ತಾಯಿಯೋ?


ಮೋಶೆಗೆ, “ನೀವು ನಮ್ಮನ್ನು ಕಳಿಸಿದ ನಾಡಿಗೆ ಹೋಗಿದ್ದೆವು. ಅದು ಹಾಲು-ಜೇನು ಹರಿಯುವಂಥ ನಾಡು. ಅಲ್ಲಿನ ಹಣ್ಣುಹಂಪಲುಗಳು ಇಂಥವು.


ಹಾಲೂ ಜೇನೂ ಹರಿಯುವ ನಾಡನ್ನು, ಅಂದರೆ ಇಂದು ನೀವಿರುವ ನಾಡನ್ನು, ಕೊಡುವುದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಯೇಲಿನ ದೇವರಾದ ಸರ್ವೇಶ್ವರ ಹೇಳುವ ಮಾತು.” ಆಗ ನಾನು, “ತಮ್ಮ ಅಪ್ಪಣೆಯಂತಾಗಲಿ, ಸರ್ವೇಶ್ವರಾ,” ಎಂದು ಉತ್ತರಕೊಟ್ಟೆ.


ಅವರ ಪೂರ್ವಜರಿಗೆ ವಾಗ್ದಾನ ಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಈ ನಾಡನ್ನು ಅವರಿಗೆ ಅನುಗ್ರಹಿಸಿದಿರಿ.


ನಾನು ಅವರಿಗೆ ‘ನಾಡುಗಳಲ್ಲೆಲ್ಲ ಶ್ರೀಮಂತವಾದ ನಾಡನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಈಜಿಪ್ಟ್ ದೇಶದಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ನಾಡಿಗೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆ;


ಅಲ್ಲದೆ ಅವರು ಪ್ರವಾಸಿಗಳಾಗಿ ತಂಗಿದ್ದ ಕಾನಾನ್ ನಾಡನ್ನು ಅವರಿಗೆ ಸ್ವಂತ ನಾಡಾಗಿ ಕೊಡುವೆನೆಂದು ದೃಢವಾಗ್ದಾನ ಮಾಡಿದವನು ನಾನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು