ವಿಮೋಚನಕಾಂಡ 13:8 - ಕನ್ನಡ ಸತ್ಯವೇದವು C.L. Bible (BSI)8 ಆ ದಿನ ನೀವು ನಿಮ್ಮ ಮಕ್ಕಳಿಗೆ, “ನಮ್ಮ ಜನರು ಈಜಿಪ್ಟಿನಿಂದ ಹೊರಟು ಬಂದಾಗ ಸರ್ವೇಶ್ವರ ನಮಗೋಸ್ಕರ ಮಾಡಿದ ಉಪಕಾರವನ್ನು ಸ್ಮರಿಸುವುದಕ್ಕಾಗಿ ಈ ಆಚರಣೆಯನ್ನು ನಡೆಸುತ್ತಿದ್ದೇವೆ” ಎಂದು ತಿಳಿಸಬೇಕು. ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದ್ದರಿಂದ ಅವರ ನಿಯಮ ನಮ್ಮ ಬಾಯಿಗೆ ಬರುತ್ತಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆ ದಿನದಲ್ಲಿ ನೀವು ನಿಮ್ಮ ಮಕ್ಕಳಿಗೆ, ನಮ್ಮ ಜನರು ಐಗುಪ್ತ ದೇಶದಿಂದ ಹೊರಟು ಬಂದಾಗ ಯೆಹೋವನು ನಮಗೋಸ್ಕರ ಮಾಡಿದ್ದನ್ನು ನೆನಪು ಮಾಡಿಕೊಳ್ಳುವುದಕ್ಕಾಗಿ ಈ ಆಚರಣೆಯನ್ನು ಆಚರಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆ ದಿನದಲ್ಲಿ ನೀವು ನಿಮ್ಮ ಮಕ್ಕಳಿಗೆ - ನಮ್ಮ ಜನವು ಐಗುಪ್ತದೇಶದಿಂದ ಹೊರಟು ಬಂದಾಗ ಯೆಹೋವನು ನಮಗೋಸ್ಕರ ಮಾಡಿದ್ದನ್ನು ನೆನಸುವದಕ್ಕಾಗಿ ಈ ಆಚರಣೆಯನ್ನು ನಡಿಸುತ್ತೇವೆಂಬದಾಗಿ ತಿಳಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಈ ದಿನದಲ್ಲಿ ನೀವು ನಿಮ್ಮ ಮಕ್ಕಳಿಗೆ, ‘ಯೆಹೋವನು ನಮ್ಮನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದದ್ದರಿಂದ ನಾವು ಈ ಹಬ್ಬವನ್ನು ಮಾಡುತ್ತಿದ್ದೇವೆ’ ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆ ದಿನದಲ್ಲಿ ನಿಮ್ಮ ಮಕ್ಕಳಿಗೆ, ‘ನಾವು ಈಜಿಪ್ಟಿನಿಂದ ಹೊರಗೆ ಬಂದಾಗ ಯೆಹೋವ ದೇವರು ನಮಗೆ ಮಾಡಿದ್ದನ್ನು ಸ್ಮರಿಸುವುದಕ್ಕಾಗಿ ಇದನ್ನು ಆಚರಿಸುತ್ತೇವೆ,’ ಎಂದು ತಿಳಿಸಬೇಕು. ಅಧ್ಯಾಯವನ್ನು ನೋಡಿ |