ವಿಮೋಚನಕಾಂಡ 14:10 - ಕನ್ನಡ ಸತ್ಯವೇದವು C.L. Bible (BSI)10 ಫರೋಹನು ಸಮೀಪಿಸುತ್ತಿರುವುದನ್ನು ಇಸ್ರಯೇಲರು ಕಣ್ಣೆತ್ತಿ ನೋಡಿದರು. ತಮ್ಮನ್ನು ಬೆನ್ನಟ್ಟಿ ಬಂದಿದ್ದ ಈಜಿಪ್ಟಿನವರನ್ನು ಕಂಡು ಬಹಳವಾಗಿ ಭಯಪಟ್ಟು ಸರ್ವೇಶ್ವರನಿಗೆ ಮೊರೆಯಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಫರೋಹನು ಸಮೀಪಿಸುತ್ತಿರುವಾಗ ಇಸ್ರಾಯೇಲರು ಕಣ್ಣೆತ್ತಿ ತಮ್ಮ ಹಿಂದೆ ಹೊರಟು ಬಂದಿದ್ದ ಐಗುಪ್ತ್ಯರನ್ನು ಕಂಡು, ಬಹಳ ಭಯಪಟ್ಟವರಾಗಿ ಯೆಹೋವನಿಗೆ ಮೊರೆಯಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಫರೋಹನು ಸಮೀಪಿಸುತ್ತಿರುವಾಗ ಇಸ್ರಾಯೇಲ್ಯರು ಕಣ್ಣೆತ್ತಿ ತಮ್ಮ ಹಿಂದೆ ಹೊರಟುಬಂದಿದ್ದ ಐಗುಪ್ತ್ಯರನ್ನು ಕಂಡು ಬಹಳ ಭಯಪಟ್ಟವರಾಗಿ ಯೆಹೋವನಿಗೆ ಮೊರೆಯಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಫರೋಹನೂ ಅವನ ಸೈನ್ಯವೂ ತಮ್ಮ ಕಡೆಗೆ ಬರುತ್ತಿರುವುದನ್ನು ಇಸ್ರೇಲರು ಕಂಡು ಬಹಳ ಭಯಪಟ್ಟರು. ಅವರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಫರೋಹನು ಸಮೀಪಕ್ಕೆ ಬರುವುದನ್ನು ಇಸ್ರಾಯೇಲರು ಕಣ್ಣೆತ್ತಿ ನೋಡಿದರು. ಈಜಿಪ್ಟಿನವರು ಅವರ ಹಿಂದೆ ಬರುತ್ತಿರುವುದನ್ನು ಕಂಡು ಇಸ್ರಾಯೇಲರು ಬಹಳ ಭಯಪಟ್ಟು ಯೆಹೋವ ದೇವರಿಗೆ ಮೊರೆಯಿಟ್ಟರು. ಅಧ್ಯಾಯವನ್ನು ನೋಡಿ |