Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:17 - ಕನ್ನಡ ಸತ್ಯವೇದವು C.L. Bible (BSI)

17 ನಾನು ಈಜಿಪ್ಟಿನವರ ಹೃದಯಗಳನ್ನು ಕಠಿಣಪಡಿಸುವೆನು, ಎಂದೇ ಅವರು ಇವರ ಹಿಂದೆ ಸಮುದ್ರದೊಳಕ್ಕೆ ಹೋಗುವರು. ಆಗ, ನಾನು ಫರೋಹನ್ನು ಅವನ ಸಮಸ್ತ ಸೈನ್ಯವನ್ನೂ, ರಥಗಳನ್ನೂ ಹಾಗು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನು. ಅವರು ಇವರನ್ನು ಹಿಂದಟ್ಟುವರು. ಆಗ ನಾನು ಫರೋಹನ ಮೇಲೆಯೂ, ಅವನ ಸಮಸ್ತ ಸೈನ್ಯದವರ ಮೇಲೆಯೂ, ರಥಗಳ ಮೇಲೆಯೂ ಮತ್ತು ಕುದುರೆಗಳ ಮೇಲೆಯೂ ಪ್ರಖ್ಯಾತಿಗೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನಾದದರಿಂದ ಅವರು ಇವರ ಹಿಂದೆ ಸಮುದ್ರದೊಳಗೆ ಹೋಗುವರು; ಆಗ ನಾನು ಫರೋಹನಲ್ಲಿಯೂ ಅವನ ಸಮಸ್ತ ಸೈನ್ಯದಲ್ಲಿಯೂ ರಥಗಳಲ್ಲಿಯೂ ಕುದುರೆಗಳಲ್ಲಿಯೂ ಪ್ರಖ್ಯಾತಿಗೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈಜಿಪ್ಟಿನವರು ನಿಮ್ಮನ್ನು ಬೆನ್ನಟ್ಟುವಂತೆ ನಾನು ಅವರ ಹೃದಯಗಳನ್ನು ಕಠಿಣಗೊಳಿಸುವುದರಿಂದ ನಾನು ಫರೋಹನಿಗಿಂತಲೂ ಅವನ ಎಲ್ಲಾ ರಾಹುತರುಗಳಿಗಿಂತಲೂ ರಥಗಳಿಗಿಂತಲೂ ಶಕ್ತಿಶಾಲಿ ಎಂಬುದನ್ನು ನಿಮಗೆ ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ಈಜಿಪ್ಟಿನವರ ಹೃದಯವನ್ನು ಕಠಿಣ ಮಾಡುತ್ತೇನೆ. ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:17
26 ತಿಳಿವುಗಳ ಹೋಲಿಕೆ  

ಈಜಿಪ್ಟ್ ರಾಜ ಫರೋಹನ ಹೃದಯವನ್ನು ಸರ್ವೇಶ್ವರ ಕಠಿಣಪಡಿಸಿದ್ದರಿಂದ ಅವನು ಇಸ್ರಯೇಲರನ್ನು ಬೆನ್ನಟ್ಟಿಹೋದನು. ಇತ್ತ ಅಟ್ಟಹಾಸದಿಂದ ಹೊರಟಿದ್ದರು ಇಸ್ರಯೇಲರು.


ನಾನು ಫರೋಹನ ಹೃದಯವನ್ನು ಕಠಿಣವಾಗಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ಆ ಫರೋಹನನ್ನೂ ಅವನ ಸೈನ್ಯವನ್ನೂ ಗೆದ್ದು ನಾನು ಪ್ರಖ್ಯಾತಿ ಹೊಂದುವೆನು. ನಾನೇ ಸರ್ವೇಶ್ವರ ಎಂಬುದು ಈಜಿಪ್ಟಿನವರಿಗೆ ಗೊತ್ತಾಗುವುದು.” ಸರ್ವೇಶ್ವರನ ಆಜ್ಞೆಯಂತೆಯೇ ಇಸ್ರಯೇಲರು ನಡೆದುಕೊಂಡರು.


“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನೇ ಕೊಬ್ಬಿದ ಟಗರು ಹೋತಗಳಿಗೂ ಬಡ ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು.


“ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.


‘ಇಸ್ರಯೇಲಿನ ಬೆಟ್ಟಗಳೇ, ಸರ್ವೇಶ್ವರನಾದ ದೇವರ ಈ ಮಾತನ್ನು ಕೇಳಿರಿ; ಸರ್ವೇಶ್ವರನಾದ ದೇವರು ಬೆಟ್ಟಗುಡ್ಡಗಳಿಗೂ ತೊರೆತಗ್ಗುಗಳಿಗೂ ಹೀಗೆ ಹೇಳುತ್ತಾರೆ: ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು.


ಆದುದರಿಂದ ಜೆರುಸಲೇಮೇ, ಇಗೋ, ನಾನೇ ನಿನಗೆ ವಿರುದ್ಧವಾಗಿದ್ದೇನೆ. ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು; ಇದು ಸರ್ವೇಶ್ವರನಾದ ನನ್ನ ನುಡಿ.


“ನಾನೆ, ನಾನೆ ನಿನ್ನನು ಸಂತೈಸುವವನಾಗಿರೆ, ನೀ ಭಯಪಡುವುದೇಕೆ ಮರ್ತ್ಯನಾದ ಮಾನವನಿಗೆ? ನೀ ಹೆದರಿ ನಡುಗುವುದೇಕೆ ಹುಲುಮಾನವನಿಗೆ?


ಆತನನ್ನು ಹೆಸರಿಸಿ ಕರೆದವನು ನಾನೇ ಆತನನ್ನು ಬರಮಾಡಿದವನೂ ನಾನೇ. ಆತನು ಗಳಿಸುವುದು ಜಯವನ್ನೇ.


ಎಫ್ರಯಿಮಿಗೆ ನಾನು ಸಿಂಹ; ಯೆಹೂದ್ಯಕುಲಕ್ಕೆ ಪ್ರಾಯದ ಸಿಂಹ; ಅದನ್ನು ಸೀಳಿಬಿಡುವೆನು; ಎಳೆದುಕೊಂಡು ಹೋಗುವೆನು; ಯಾರೂ ಅದನ್ನು ನನ್ನಿಂದ ಬಿಡಿಸಿಕೊಳ್ಳಲಾರರು.


ಈ ಕಾರಣ ನಿಮ್ಮನ್ನು ಮತ್ತು ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ನಗರವನ್ನು ನನ್ನೆದುರಿನಿಂದ ಎತ್ತಿ ಎಸೆದುಬಿಡುವೆನು.


ನಾನು ನಿಮಗೆ ವಿರುದ್ಧ ಕೋಪದಿಂದ ವರ್ತಿಸುವೆನು. ನಿಮ್ಮ ಪಾಪಗಳ ಕಾರಣ ಏಳ್ಮಡಿಯಾಗಿ ಶಿಕ್ಷಿಸುವೆನು.


ಆದರೂ ನಾನು ಫರೋಹನ ಹೃದಯವನ್ನು ಕಲ್ಲಾಗಿಸಿ ಈಜಿಪ್ಟ್ ದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಪವಾಡಗಳನ್ನೂ ನಡೆಸಿ ನನ್ನ ಶಕ್ತಿಯನ್ನು ತೋರಿಸುವೆನು.


ನನ್ನನ್ನು ಆರಾಧಿಸಲು ನಿನ್ನ ದೇಶದಿಂದ ಹೊರಡುವುದಕ್ಕೆ ಅವನಿಗೆ ಅಪ್ಪಣೆಕೊಡು.' ಇದಕ್ಕೆ ನೀನು ಒಪ್ಪದೆ ಹೋದರೆ ನಾನು ನಿನ್ನ ಜ್ಯೇಷ್ಠ ಪುತ್ರನನ್ನು ಕೊಲ್ಲುವೆನು,”


“ಕೇಳಿ, ನಾನು ನಿಮ್ಮನ್ನೂ ನಿಮ್ಮ ಸಂತತಿಯವರನ್ನೂ


ನಾನು ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಲಿದ್ದೇನೆ. ಅದು ಆಕಾಶದ ಕೆಳಗಿರುವ ಸಕಲ ಪ್ರಾಣಿಗಳನ್ನೂ ಅಳಿಸಿಬಿಡುವುದು. ಭೂಮಿಯಲ್ಲಿರುವ ಸಮಸ್ತವೂ ನಾಶವಾಗುವುದು.


ದೇವರ ಇಚ್ಛೆಗೆ ಅನುಗುಣವಾಗಿ ಮಾನವರಿಗೆ ಕರುಣೆಯೂ ಲಭಿಸುತ್ತದೆ, ಕಾಠಿಣ್ಯವೂ ಲಭಿಸುತ್ತದೆ.


ಈಜಿಪ್ಟಿನವರು, ಅಂದರೆ ಫರೋಹನ ಕುದುರೆಗಳು, ರಥಗಳು, ರಾಹುತರು ಇಸ್ರಯೇಲರನ್ನು ಬೆನ್ನಟ್ಟಿ ಬಂದು ಅವರ ಹಿಂದೆಯೇ ಸಮುದ್ರದೊಳಗೆ ಹೋದರು.


ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.


ಏಕೆಂದರೆ ಸರ್ವೇಶ್ವರ ಅವರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರಮಾಡಿದ್ದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಇಸ್ರಯೇಲರು ಅವರೆಲ್ಲರನ್ನು ಕರುಣೆ ಇಲ್ಲದೆ ಸಂಹರಿಸಿದರು.


ಈಜಿಪ್ಟ್ ನವರಂತೆ ಆಗಲಿ, ಫರೋಹನಂತೆ ಆಗಲಿ ನೀವೇಕೆ ನಿಮ್ಮ ಹೃದಯಗಳನ್ನು ಕಠಿಣಪಡಿಸಿಕೊಳ್ಳಬೇಕು? ಇಸ್ರಯೇಲರನ್ನು ಕಳುಹಿಸಲೊಲ್ಲದ ಈ ಈಜಿಪ್ಟ್ ನವರನ್ನು ಸರ್ವೇಶ್ವರನು ಎಷ್ಟೋ ವಿಧವಾಗಿ ಬಾಧಿಸಬೇಕಾಯಿತಲ್ಲವೆ?


ಅವನ ಸಂಗಡ ರಥಗಳೂ ಕುದುರೆಸವಾರರೂ ಸಹ ಇದ್ದರು. ಹೀಗೆ ದೊಡ್ಡ ಜನಸಮೂಹವೇ ಅವನೊಂದಿಗೆ ಹೋಯಿತು.


ಸರ್ವೇಶ್ವರ ಮೋಶೆಗೆ ಮತ್ತೆ ಇಂತೆಂದರು: “ನೀನು ಈಜಿಪ್ಟಿಗೆ ಮರಳಿದಾಗ ನಾನು ನಿನಗೆ ತೋರಿಸಿಕೊಟ್ಟ ಸೂಚಕಕಾರ್ಯಗಳನ್ನೆಲ್ಲಾ ಫರೋಹ ರಾಜನ ಮುಂದೆ ಮಾಡಿ ತೋರಿಸು. ಆದರೆ ನಾನು ಅವನ ಹೃದಯವನ್ನು ಕಲ್ಲಾಗಿಸುವೆನು. ಅವನು ಇಸ್ರಯೇಲರನ್ನು ಹೋಗಗೊಡಿಸುವುದಿಲ್ಲ.


ಯಾಬೀನನ ಸೇನಾಪತಿ ಸೀಸೆರನನ್ನು ನಿನ್ನ ಬಳಿಗೆ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬರುವರು. ಅವನಿಗೆ ರಥಗಳೂ ಸೇನಾಪಡೆಗಳೂ ಇದ್ದರೂ ನಾನು ನಿನಗೆ ಜಯವನ್ನು ದೊರಕಿಸುವೆನು’,” ಎಂದಳು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಹಾ, ಸಿದೋನೇ, ನಾನು ನಿನಗೆ ವಿರುದ್ಧನಾಗಿ ನಿನ್ನ ಮಧ್ಯದಲ್ಲೆ ಪ್ರಖ್ಯಾತಿಗೊಳ್ಳುವೆನು ; ನಾನು ಈ ಪಟ್ಟಣವನ್ನು ದಂಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ, ನಾನೇ ಸರ್ವೇಶ್ವರ ಎಂದು ಎಲ್ಲರಿಗು ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು