Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:19 - ಕನ್ನಡ ಸತ್ಯವೇದವು C.L. Bible (BSI)

19 ಇಸ್ರಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ಸ್ಥಳ ಬದಲಾಯಿಸಿ ಅವರ ಹಿಂದಕ್ಕೆ ಬಂದನು. ಅವರ ಮುಂಭಾಗದಲ್ಲಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ಇಸ್ರಾಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಅವರ ಮುಂದಾಗಿ ಹೋಗುತ್ತಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಗ ಇಸ್ರಾಯೇಲ್ಯರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು; ಅವರ ಮುಂದಾಗಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆ ಸಮಯದಲ್ಲಿ ಯೆಹೋವನ ದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಆದ್ದರಿಂದ ಅವರ ಮುಂಭಾಗದಲ್ಲಿದ್ದ ಮೇಘಸ್ತಂಭವು ಅವರ ಹಿಂಭಾಗಕ್ಕೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:19
14 ತಿಳಿವುಗಳ ಹೋಲಿಕೆ  

ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


ನೀನಾದರೋ ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ನಾಡಿಗೆ ಈ ಜನರನ್ನು ನಡೆಸಿಕೊಂಡು ಹೋಗು. ನನ್ನ ದೂತನು ನಿನ್ನ ಮುಂದುಗಡೆ ನಡೆಯುವನು. ಆದರೂ ನಾನು ಅವರನ್ನು ದಂಡಿಸುವ ದಿನದಂದು ಅವರ ಪಾಪಕ್ಕೆ ತಕ್ಕಂತೆ ದಂಡಿಸುವೆನು.


ನಾವು ಸರ್ವೇಶ್ವರನಿಗೆ ಮೊರೆಯಿಟ್ಟೆವು. ಅವರು ನಮ್ಮ ಪ್ರಾರ್ಥನೆಯನ್ನು ಆಲಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಇದೆಲ್ಲದರ ಅರಿವು ತಮಗಿದೆ. ಈಗ ನಾವು ತಮ್ಮ ರಾಜ್ಯದ ಗಡಿಪ್ರದೇಶವಾದ ಕಾದೇಶ್ ಎಂಬ ಊರಲ್ಲಿದ್ದೇವೆ.


ಬೆಳಗಿನ ಜಾವದಲ್ಲಿ ಸರ್ವೇಶ್ವರ ಆ ಅಗ್ನಿಸ್ತಂಭದಿಂದ ಈಜಿಪ್ಟಿನವರ ದಂಡಿನ ಕಡೆಗೆ ನೋಡಿ ಅದನ್ನು ಗಲಿಬಿಲಿ ಮಾಡಿದರು.


ಆ ಮೇಘಸ್ತಂಭವು ಈಜಿಪ್ಟಿನವರ ಪಡೆಗೂ ಇಸ್ರಯೇಲರ ಪಡೆಗೂ ನಡುವೆ ಬಂದು ಈಜಿಪ್ಟಿನವರಿಗೆ ಕತ್ತಲೆಯನ್ನುಂಟುಮಾಡಿತು; ಇಸ್ರಯೇಲರಿಗೆ ರಾತ್ರಿಯನ್ನು ಬೆಳಕಾಗಿಸಿತು. ಈ ಕಾರಣ ಆ ರಾತ್ರಿಯೆಲ್ಲಾ ಒಂದು ಪಡೆಯವರು ಇನ್ನೊಂದು ಪಡೆಯವರ ಬಳಿಗೆ ಬರಲಾಗಲಿಲ್ಲ.


ಕುರುಬನು ತನ್ನ ಕುರಿಮಂದೆಯನು ಕರೆದೊಯ್ಯುವಂತೆ I ಮೋಶೆ, ಆರೋನರಿಂದ ನಿನ್ನ ಪ್ರಜೆಗಳನು ನಡೆಸಿದೆ II


ಅವರು ಅಂಜದಂತೆ ನಡೆಸಿದನು ಸುರಕ್ಷಿತವಾಗಿ I ಶತ್ರುಗಳನೋ ಆವರಿಸಿತು ಸಮುದ್ರವು ನುಂಗಿ II


ಅವಸರವಾಗಿ ನೀವು ಹೊರಡಬೇಕಿಲ್ಲ ನೆಗೆನೆಗೆದು ನೀವು ಓಡಬೇಕಿಲ್ಲ. ಹೋಗುವನು ಸರ್ವೇಶ್ವರ ನಿಮಗೆ ಮುಂಬಲವಾಗಿ, ನಿಮಗಿರುವನು ಇಸ್ರಯೇಲ್ ದೇವರು ಹಿಂಬಲವಾಗಿ.


“ಇದನ್ನು ಆಚರಿಸುವಾಗ ನೀವು ಉದಯಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರ ಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು.


ದೇವರು ಪ್ರವಾದಿಯನ್ನು ಕಳುಹಿಸಿ, ಇಸ್ರಯೇಲನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಪ್ರವಾದಿಯ ಮುಖಾಂತರ ಇಸ್ರಯೇಲಿಗೆ ರಕ್ಷಣೆ ದೊರಕಿತು.


ಅಂದು, ಸರ್ವೇಶ್ವರ ಜೆರುಸಲೇಮಿನ ನಿವಾಸಿಗಳನ್ನು ಕೋಟೆಯಂತೆ ಕಾಪಾಡುವರು. ಈ ಕಾರಣ, ಅವರಲ್ಲಿ ದುರ್ಬಲನು ದಾವೀದನಂತೆ ಬಲಾಢ್ಯನಾಗುವನು. ದಾವೀದನವಂಶ ದೇವದೂತರಂತೆ, ಹೌದು, ದೇವರಂತೆ, ಅವರಿಗೆ ಮುಂದಾಳಾಗುವುದು.


ಬಾಗಿಲನ್ನು ಒಡೆದು ತೆರೆಯುವಂಥವನು ಜನರ ಮುಂದಾಳಾಗಿ ಹೊರಡುವನು; ಅವರೂ ಬಾಗಿಲನ್ನು ಒಡೆದು ನುಗ್ಗುವರು; ಅವರ ಅರಸನು ಮುಂದಾಳಾಗಿ ಹೋಗುವನು. ಸರ್ವೇಶ್ವರಸ್ವಾಮಿಯೇ ಅವರ ಮುಂದಾಳತ್ವವನ್ನು ವಹಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು