Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:2 - ಕನ್ನಡ ಸತ್ಯವೇದವು C.L. Bible (BSI)

2 ಇಸ್ರಯೇಲರು ಹಿಂತಿರುಗಿ ಹೋಗಿ ಪೀಹಹೀರೋತಿನ ಪೂರ್ವಕಡೆಯಲ್ಲಿ ಮಿಗ್ದೋಲಿಗೂ ಕೆಂಪುಸಮುದ್ರಕ್ಕೂ ನಡುವೆ ಬಾಳ್ಚೆಫೋನಿಗೆ ಎದುರಾಗಿ ಇಳಿದುಕೊಳ್ಳಬೇಕೆಂದು ಹೇಳು. ಅದರ ಎದುರಿಗೆ ಸಮುದ್ರದ ಬಳಿಯಲ್ಲೇ ಅವರು ಇಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಇಸ್ರಾಯೇಲರು ಹಿಂದಿರುಗಿ ಹೋಗಿ ಪೀಹಹೀರೋತಿನ ಪೂರ್ವಕಡೆಯಲ್ಲಿ ಮಿಗ್ದೋಲಿಗೂ ಕೆಂಪು ಸಮುದ್ರಕ್ಕೂ ನಡುವೆ ಬಾಳ್ಚೆಫೋನಿಗೆ ಎದುರಾಗಿ ಇಳಿದುಕೊಳ್ಳಬೇಕೆಂದು ಅವರಿಗೆ ಹೇಳು. ಅದರ ಎದುರಾಗಿಯೇ ಸಮುದ್ರದ ಬಳಿಯಲ್ಲೇ ಅವರು ಇಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಪೀಹಹೀರೋತಿನ ಪೂರ್ವಕಡೆಯಲ್ಲಿ ಪ್ರಯಾಣ ಮಾಡಿ ಬಾಳ್ಚೆಫೋನಿಗೆ ಸಮೀಪದಲ್ಲಿರುವ ಮಿಗ್ದೋಲ್ ಮತ್ತು ಕೆಂಪು ಸಮುದ್ರದ ನಡುವೆ ಇಳಿದುಕೊಳ್ಳಬೇಕೆಂದು ಇಸ್ರೇಲರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲರು ಹಿಂತಿರುಗಿ ಹೋಗಿ ಪೀಹಹೀರೋತಿಗೆ ಎದುರಾಗಿ ಮಿಗ್ದೋಲಿಗೂ ಸಮುದ್ರಕ್ಕೂ ಮಧ್ಯದಲ್ಲಿ ಬಾಲ್ಜೆಫೋನಿಗೆ ಎದುರಾಗಿ ಇಳಿದುಕೊಳ್ಳಬೇಕೆಂದು ಅವರಿಗೆ ಹೇಳು. ಅದರ ಎದುರಾಗಿ ನೀವು ಸಮುದ್ರದ ತೀರದಲ್ಲಿ ಇಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:2
9 ತಿಳಿವುಗಳ ಹೋಲಿಕೆ  

ಈಜಿಪ್ಟ್ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ನಗರಗಳಲ್ಲೂ ಮತ್ತು ಪತ್ರೋಸ್ ಪ್ರಾಂತ್ಯದಲ್ಲೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಸರ್ವೇಶ್ವರ ಸ್ವಾಮಿ ಯೆರೆಮೀಯನಿಗೆ ತಿಳಿಯಪಡಿಸಿದ ವಾಣಿ ಇದು:


“ಪ್ರಕಟಿಸಿರಿ ಈಜಿಪ್ಟಿನಲ್ಲಿ, ಪ್ರಚುರಪಡಿಸಿರಿ ಮಿಗ್ದೋಲ್, ತಹಪನೇಸ್, ಹಾಗು ಸೋಫ್ ಎಂಬೀ ನಗರಗಳಲ್ಲಿ. ಸಾರಿರಿ ಇಂತೆಂದು: ‘ಈಜಿಪ್ಟೇ, ಸ್ಥಿರವಾಗಿ ನಿಲ್ಲು, ಯುದ್ಧ ಸನ್ನದ್ಧವಾಗು, ಖಡ್ಗ ಆವರಿಸುತ್ತಿದೆ ನಿನ್ನ ಸುತ್ತಮುತ್ತಲು’


ಈಜಿಪ್ಟಿನವರು, ಅಂದರೆ ಫರೋಹನ ಕುದುರೆಗಳು, ರಥಗಳು, ರಾಹುತರು, ಸೈನ್ಯದವರೆಲ್ಲರು ಅವನ ಹಿಂದೆ ಹೊರಟು ಇಸ್ರಯೇಲರ ಸಮೀಪಕ್ಕೆ ಬಂದರು; ಪೀಹಹೀರೋತಿನ ಬಳಿ ಬಾಳ್ಚೆಫೋನಿನ ಎದುರಾಗಿ ಸಮುದ್ರ ತೀರದಲ್ಲಿ ಇಳಿದುಕೊಳ್ಳುವಾಗಲೇ ಅವರ ಹತ್ತಿರಕ್ಕೆ ಬಂದರು.


ಇಗೋ, ನಾನು ನಿನಗೂ ನಿನ್ನ ನದಿಗೂ ವಿರುದ್ಧನಾಗಿ ಈಜಿಪ್ಟ್ ದೇಶವನ್ನು ಮಿಗ್ದೋಲಿನಿಂದ ಸೆವೇನೆಯ ತನಕ, ಹೌದು, ಸುಡಾನ್ ಎಲ್ಲೆಯವರೆಗೂ ಪೂರ್ತಿಯಾಗಿ ಹಾಳುಪಾಳುಮಾಡುವೆನು.


ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದರು:


ಫರೋಹನು ಅದನ್ನು ಕಂಡು, ‘ಇಸ್ರಯೇಲರಿಗೆ ದಾರಿತಪ್ಪಿತು, ಸುತ್ತಲೂ ಮರುಭೂಮಿ ಅವರನ್ನು ಆವರಿಸಿದೆ” ಎಂದುಕೊಳ್ಳುವನು.


ನಿಮ್ಮ ಪೂರ್ವಜರು ಈಜಿಪ್ಟಿನಿಂದ ಬಿಡುಗಡೆಯಾಗಿ ಕೆಂಪುಸಮುದ್ರಕ್ಕೆ ಬರುತ್ತ ಇರುವಾಗ ಈಜಿಪ್ಟಿನವರು ರಥಾಶ್ವಬಲಗಳ ಸಹಿತ ಅವರನ್ನು ಆ ಸಮುದ್ರದವರೆಗೂ ಹಿಂದಟ್ಟಿ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು