Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:21 - ಕನ್ನಡ ಸತ್ಯವೇದವು C.L. Bible (BSI)

21 ಮೋಶೆ ಸಮುದ್ರದ ಮೇಲೆ ಕೈ ಚಾಚಿದಾಗ ಸರ್ವೇಶ್ವರ ಸ್ವಾಮಿ ಆ ರಾತ್ರಿಯೆಲ್ಲಾ ಪೂರ್ವದಿಕ್ಕಿನಿಂದ ಬಲವಾದ ಬಿರುಗಾಳಿ ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದುಕಡೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದರು. ನೀರು ಇಬ್ಭಾಗವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ, ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ಇಬ್ಭಾಗವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ವಿಭಾಗವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಮೋಶೆಯು ತನ್ನ ಕೈಯನ್ನು ಕೆಂಪುಸಮುದ್ರದ ಮೇಲೆ ಚಾಚಿದನು; ಆಗ ಯೆಹೋವನು ಪೂರ್ವದಿಂದ ಬಲವಾದ ಗಾಳಿಯನ್ನು ಬೀಸುವಂತೆ ಮಾಡಿದನು. ಗಾಳಿಯು ರಾತ್ರಿಯೆಲ್ಲಾ ಬೀಸಿತು. ಸಮುದ್ರವು ಇಬ್ಭಾಗವಾಗಿ ಮಧ್ಯದಲ್ಲಿ ಒಣನೆಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಮೋಶೆಯು ಸಮುದ್ರದ ಮೇಲೆ ತನ್ನ ಬಲಗೈಯನ್ನು ಚಾಚಲಾಗಿ, ಯೆಹೋವ ದೇವರು ರಾತ್ರಿಯೆಲ್ಲಾ ಬಲವಾದ ಪೂರ್ವದಿಕ್ಕಿನ ಗಾಳಿಯಿಂದ ಸಮುದ್ರವನ್ನು ಹಿಂದಕ್ಕೆ ಹೋಗುವಂತೆ ಸಮುದ್ರವನ್ನು ಸರಿಸಿ, ಒಣ ನೆಲ ಕಾಣಿಸುವಂತೆ ಮಾಡಿದರು. ಆಗ ನೀರು ವಿಭಾಗವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:21
30 ತಿಳಿವುಗಳ ಹೋಲಿಕೆ  

ಮೋಶೆಯ ಬಲಗೈಗೆ ತಮ್ಮ ಮಹಿಮಾ ಭುಜಬಲವನ್ನು ನೀಡಿದ ಸ್ವಾಮಿ ಎಲ್ಲಿ? ಆತನ ಕೈಯಿಂದ ಜಲರಾಶಿಯನ್ನು ಆ ಜನರ ಕಣ್ಮುಂದೆ ಇಬ್ಬಾಗಿಸಿದ ಸ್ವಾಮಿ ಎಲ್ಲಿ? ಹೀಗೆ ತಮ್ಮ ಹೆಸರನ್ನು ಶಾಶ್ವತವಾಗಿಸಿಕೊಂಡ ಸ್ವಾಮಿ ಎಲ್ಲಿ?


ಸಿಟ್ಟಿನಿಂದ ನೀ ಮುಸುಗೆರೆದಾಗಲೆ ಸಮುದ್ರವಾಯಿತು ನೀರೊಡ್ಡಿನಂತೆ ಪ್ರವಾಹ ನಿಂತಿತು ಗೋಡೆಯಂತೆ ಸಾಗರ (ಗರ್ಭ) ದೊಳಗಿನ ಜಲ ಗಟ್ಟಿಯಾಯಿತು ನೆಲದಂತೆ.


ಒಣನೆಲವಾಗಿ ಮಾರ್ಪಡಿಸಿದ ಕಡಲನು I ಕಾಲು ನಡೆಯಲೇ ದಾಟಿಸಿದ ನದಿಯನು I ಇದ ನಿಮಿತ್ತ ಪಡೆಯೋಣ ಆನಂದವನು II


ಸಮುದ್ರ ಜನರಾಶಿಗಳನು ಬತ್ತಿಸಿದ ಬಾಹು ನೀನು ವಿಮುಕ್ತ ಜನ ಹಾಯುವಂತೆ ಸಮುದ್ರದಲಿ ದಾರಿಮಾಡಿದೆ ನೀನು.


ದಾಟಿಸಿದನವರನು ಸಮುದ್ರವನೆ ಭೇದಿಸಿ I ಅದರತುಳ ನೀರನು ರಾಶಿಯಾಗಿ ನಿಲ್ಲಿಸಿ II


ಸ್ವಶಕ್ತಿಯಿಂದ ಸಮುದ್ರವನೆ ಭೇದಿಸಿದೆ ನೀನು I ಜಲರಾಶಿಯ ಭುಜಂಗಗಳ ತಲೆ ಜಜ್ಜಿದಾತ ನೀನು II


ಕಡಲನು ಸೀಳಿ, ಆ ಪಿತೃಗಳ ನಡೆಸಿದಿರಿ ಒಣನೆಲದಲೋ ಎಂಬಂತೆ ಅವರ ಬೆನ್ನಟ್ಟಿ ಬಂದವರನು ಜಲರಾಶಿಯ ತಳಮುಟ್ಟಿಸಿದಿರಿ ಕಲ್ಲಂತೆ.


ನಿಮ್ಮ ದೇವರಾದ ಸರ್ವೇಶ್ವರ ನಮ್ಮ ಕಣ್ಮುಂದೆ ಕೆಂಪುಸಮುದ್ರವನ್ನು ಬತ್ತಿಸಿ, ನಮ್ಮನ್ನು ದಾಟಿಸಿದಂತೆ ಈಗ ನಿಮ್ಮ ಕಣ್ಮುಂದೆಯೇ ಈ ಜೋರ್ಡನನ್ನು ಬತ್ತಿಸಿ, ನಿಮ್ಮನ್ನು ದಾಟಿಸಿದ್ದಾರೆ.


ಕೆಂಪು ಕಡಲನು ಇಬ್ಭಾಗಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಚಾಚಿ ಅದನ್ನು ವಿಭಾಗಿಸು; ಆಗ ಇಸ್ರಯೇಲರು ಸಮುದ್ರದ ಮಧ್ಯೆ ಒಣಗಿದ ನೆಲದ ಮೇಲೆ ನಡೆದುಹೋಗುವರು.


ನಿನ್ನ ದೇವರಾದ ಸರ್ವೇಶ್ವರ ನಾನೆ ಸಮುದ್ರವನು ಕಲ್ಲೋಲಗೊಳಿಸುವವನು ನಾನೆ ಅದರ ಅಲೆಗಳನು ಭೋರ್ಗರೆಸುವವನು ನಾನೆ ನನ್ನ ಹೆಸರು ಸೇನಾಧೀಶ್ವರ ಸರ್ವೇಶ್ವರ!


ಸಮುದ್ರವನು ಭೇದಿಸುತ್ತಾನೆ ಪರಾಕ್ರಮದಿಂದ ಘಟಸರ್ಪವನೂ ಹೊಡೆದು ಹಾಕುತ್ತಾನೆ ವಿವೇಕಶಕ್ತಿಯಿಂದ.


ಈಜಿಪ್ಟಿನಲ್ಲೂ ಕೆಂಪುಸಮುದ್ರದಲ್ಲೂ ನಲವತ್ತು ವರ್ಷಕಾಲ ಮರಳು ಬೆಂಗಾಡಿನಲ್ಲೂ ಅದ್ಭುತಗಳನ್ನು ಹಾಗೂ ಸೂಚಕಕಾರ್ಯಗಳನ್ನು ಮಾಡಿ ಇಸ್ರಯೇಲರನ್ನು ಬಿಡುಗಡೆಮಾಡಿದವನು ಇವನೇ.


ದೇವರಿಗೆ ನೋಹನ ಮತ್ತು ಅವನ ಸಂಗಡ ನಾವೆಯಲ್ಲಿದ್ದ ಎಲ್ಲ ಪ್ರಾಣಿಪಕ್ಷಿಗಳ ನೆನಪಿತ್ತು. ಅವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲು ನೀರು ತಗ್ಗಿತು.


ಸರ್ವೇಶ್ವರ ಮತ್ತೆ ಮೋಶೆಗೆ ಹೀಗೆಂದರು: “ನೀನು ಆರೋನನಿಗೆ, ‘ನಿನ್ನ ಕೋಲನ್ನು ತೆಗೆದುಕೊಂಡು ಈಜಿಪ್ಟ್ ದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲ ಸ್ಥಳಗಳ ಮೇಲೆ ಅದನ್ನು ಚಾಚು’ ಎಂದು ಹೇಳು. ಅವನು ಚಾಚುವಾಗ ಆ ನೀರೆಲ್ಲ ರಕ್ತವಾಗುವುದು. ಈಜಿಪ್ಟ್ ದೇಶದಲ್ಲೆಲ್ಲೂ ಮರದ ತೊಟ್ಟಿಗಳಲ್ಲೂ ಕಲ್ಲಿನ ಬಾನೆಗಳಲ್ಲೂ ಕೂಡ ರಕ್ತ ತುಂಬಿರುವುದು.”


ಆ ಮೇಘಸ್ತಂಭವು ಈಜಿಪ್ಟಿನವರ ಪಡೆಗೂ ಇಸ್ರಯೇಲರ ಪಡೆಗೂ ನಡುವೆ ಬಂದು ಈಜಿಪ್ಟಿನವರಿಗೆ ಕತ್ತಲೆಯನ್ನುಂಟುಮಾಡಿತು; ಇಸ್ರಯೇಲರಿಗೆ ರಾತ್ರಿಯನ್ನು ಬೆಳಕಾಗಿಸಿತು. ಈ ಕಾರಣ ಆ ರಾತ್ರಿಯೆಲ್ಲಾ ಒಂದು ಪಡೆಯವರು ಇನ್ನೊಂದು ಪಡೆಯವರ ಬಳಿಗೆ ಬರಲಾಗಲಿಲ್ಲ.


ನೀವು ಈಜಿಪ್ಟಿನಿಂದ ಹೊರಟುಬಂದ ಮೇಲೆ ಸರ್ವೇಶ್ವರ ನಿಮ್ಮ ಮುಂದೆ ಕೆಂಪುಸಮುದ್ರವನ್ನು ಬತ್ತಿಸಿಬಿಟ್ಟರೆಂದು ಕೇಳಿದ್ದೇವೆ. ಅಲ್ಲದೆ ಜೋರ್ಡನ್ನಿನ ಆಚೆ ಇರುವ ಅಮೋರಿಯರ ಅರಸರಿಬ್ಬರನ್ನು ಅಂದರೆ, ಸೀಹೋನ್ ಮತ್ತು ಓಗ್ ಎಂಬವರನ್ನು ನೀವು ನಾಶಮಾಡಿದಿರೆಂದು ಕೇಳಿದ್ದೇವೆ.


ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿನ ನಡುವೆ ನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಯೇಲರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಹೀಗೆ ಜನರೆಲ್ಲರೂ ಜೋರ್ಡನಿನ ಆಚೆಗೆ ಸೇರಿದರು.


ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಿಚಿ, ಅದರಿಂದ ನೀರನ್ನು ಹೊಡೆದನು. ನೀರು ಇಬ್ಭಾಗವಾಯಿತು; ಅವರಿಬ್ಬರೂ ಒಣ ನೆಲದ ಮೇಲೆ ದಾಟಿಹೋದರು.


ಸರ್ವೇಶ್ವರ ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾರೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅಪ್ಪಣೆಕೊಟ್ಟಿದ್ದಾರೆ.


ಸಮುದ್ರದ ಮಧ್ಯೆ ದಾರಿಮಾಡಿದವನಾರೋ, ಭೋರ್ಗರೆವ ಜಲರಾಶಿಗಳಲ್ಲಿ ಮಾರ್ಗವೇರ್ಪಡಿಸಿದವನಾರೋ,


ನಾನು ರಕ್ಷಿಸಲು ಬಂದಾಗ ಯಾರೂ ಕಾದಿರಲಿಲ್ಲ, ಏಕೆ? ನಾನು ಕೂಗಿಕರೆದಾಗ ಯಾರೂ ಉತ್ತರಕೊಡಲಿಲ್ಲ, ಏಕೆ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿ ನನ್ನಲ್ಲಿ ಇಲ್ಲವೋ? ಬರಿ ಗರ್ಜನೆಯಿಂದ ಬತ್ತಿಸಬಲ್ಲೆ ಸಮುದ್ರವನು ಬೆಂಗಾಡಾಗಿಸಬಲ್ಲೆ ನಾ ನದಿಸರೋವರಗಳನು ಬಾಯಾರಿ ಸತ್ತು ನಾರುವಂತೆ ಮಾಡಬಲ್ಲೆ ಅಲ್ಲಿಯ ಮೀನುಗಳನು.


ಬಯಲಿನಲ್ಲಿ ಸರಾಗವಾಗಿ ನಡೆವ ಕುದುರೆಯಂತೆ ಆ ಜನರನ್ನು ಜಲದ ಮೇಲೆ ನಡೆಸಿದ ಸ್ವಾಮಿ ಎಲ್ಲಿ?


ಮೋಡಗಳ ಮೇಲೆ ನೀ ಆಗಮಿಸಿದೆ ಏಕೆ? ಜಯರಥಗಳಲ್ಲಿ ಆಸೀನನಾಗಿ ಬಂದೆ ಏಕೆ? ಸರ್ವೇಶ, ನಿನಗೆ ರೌದ್ರವೇ ನದಿಗಳ ಮೇಲೆ? ಸಿಟ್ಟುಸಿಡುಕವೇ ಹೊಳೆಗಳ ಮೇಲೆ? ರೋಷಾವೇಷವೇ ಸಮುದ್ರದ ಮೇಲೆ?


ಬೆಳಕು ಏರಿಬರುವ ಜಾಗವೆಲ್ಲಿ? ಬಿಸಿಗಾಳಿ ಬೀಸಿಬರುವ ಮಾರ್ಗವೆಲ್ಲಿ?


ಕಿಚ್ಚು, ಕಲ್ಮಳೆ, ಹಿಮ, ಹಬೆ ಇವುಗಳೆಲ್ಲವೂ I ಆತ ಹೇಳಿದಂತೆ ಕೇಳುವ ಬಿರುಗಾಳಿಯೂ, II


‘ಬತ್ತಿಹೋಗು’ ಎಂದು ಜಲರಾಶಿಗಳಿಗೆ ‘ಒಣಗಿಹೋಗು’ ಎಂದು ನಿನ್ನ ಸೇರುವ ನದಿಗಳಿಗೆ ಅಪ್ಪಣೆ ಕೊಡುವಾತನು ನಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು