Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:22 - ಕನ್ನಡ ಸತ್ಯವೇದವು C.L. Bible (BSI)

22 ಇಸ್ರಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲಿ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತುಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇಸ್ರಾಯೇಲ್ಯರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇಸ್ರೇಲರು ಒಣನೆಲದ ಮೇಲೆ ಸಮುದ್ರವನ್ನು ದಾಟಿದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹೀಗೆ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಹೋದರು. ನೀರು ಅವರಿಗೆ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಾಗಿ ನಿಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:22
27 ತಿಳಿವುಗಳ ಹೋಲಿಕೆ  

ವಿಶ್ವಾಸದಿಂದಲೇ ಇಸ್ರಯೇಲರು ಒಣನೆಲವನ್ನು ದಾಟುವಂತೆ, ಕೆಂಪು ಸಮುದ್ರವನ್ನು ದಾಟಿದರು. ಈಜಿಪ್ಟಿನವರು ಹಾಗೆಯೇ ದಾಟಲೆತ್ನಿಸಿದಾಗ ನೀರಿನ ಪಾಲಾದರು.


ಒಣನೆಲವಾಗಿ ಮಾರ್ಪಡಿಸಿದ ಕಡಲನು I ಕಾಲು ನಡೆಯಲೇ ದಾಟಿಸಿದ ನದಿಯನು I ಇದ ನಿಮಿತ್ತ ಪಡೆಯೋಣ ಆನಂದವನು II


ದಾಟಿಸಿದನವರನು ಸಮುದ್ರವನೆ ಭೇದಿಸಿ I ಅದರತುಳ ನೀರನು ರಾಶಿಯಾಗಿ ನಿಲ್ಲಿಸಿ II


ಫರೋಹನ ಕುದುರೆಗಳು, ರಥಗಳು ಹಾಗು ರಾಹುತರು ಸಮುದ್ರವನ್ನು ಹೊಕ್ಕು ನಡೆಯಲಾರಂಭಿಸಿದಾಗ ಸರ್ವೇಶ್ವರ ಸ್ವಾಮಿ ಸಮುದ್ರದ ನೀರನ್ನು ಮೊದಲಿನಂತೆ ಬರಮಾಡಿ ಅವರನ್ನು ಮುಳುಗಿಸಿಬಿಟ್ಟರು. ಇಸ್ರಯೇಲರಾದರೋ, ಸಮುದ್ರದ ನಡುವೆ ಒಣನೆಲದಲ್ಲಿ ನಡೆದು ಹೋದರು.


ಇಸ್ರಯೇಲರಾದರೋ, ಸಮುದ್ರದೊಳಗೆ ಒಣ ನೆಲದಲ್ಲೇ ನಡೆದುಹೋದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತ್ತು.


ಪ್ರಿಯ ಸಹೋದರರೇ, ನಮ್ಮ ಪೂರ್ವಜರಿಗೆ ಸಂಭವಿಸಿದವುಗಳತ್ತ ನಿಮ್ಮ ಗಮನವನ್ನು ಸೆಳೆಯಬೇಕೆಂದಿದ್ದೇನೆ. ಅವರೆಲ್ಲರೂ ಮೋಡದ ನೆರಳಿನಲ್ಲಿಯೇ ನಡೆದರು. ಎಲ್ಲರೂ ಸಮುದ್ರವನ್ನು ಸುರಕ್ಷಿತವಾಗಿ ದಾಟಿದರು.


ಬಯಲಿನಲ್ಲಿ ಸರಾಗವಾಗಿ ನಡೆವ ಕುದುರೆಯಂತೆ ಆ ಜನರನ್ನು ಜಲದ ಮೇಲೆ ನಡೆಸಿದ ಸ್ವಾಮಿ ಎಲ್ಲಿ?


ಕಡಲನು ಸೀಳಿ, ಆ ಪಿತೃಗಳ ನಡೆಸಿದಿರಿ ಒಣನೆಲದಲೋ ಎಂಬಂತೆ ಅವರ ಬೆನ್ನಟ್ಟಿ ಬಂದವರನು ಜಲರಾಶಿಯ ತಳಮುಟ್ಟಿಸಿದಿರಿ ಕಲ್ಲಂತೆ.


ಸಿಟ್ಟಿನಿಂದ ನೀ ಮುಸುಗೆರೆದಾಗಲೆ ಸಮುದ್ರವಾಯಿತು ನೀರೊಡ್ಡಿನಂತೆ ಪ್ರವಾಹ ನಿಂತಿತು ಗೋಡೆಯಂತೆ ಸಾಗರ (ಗರ್ಭ) ದೊಳಗಿನ ಜಲ ಗಟ್ಟಿಯಾಯಿತು ನೆಲದಂತೆ.


ಅಲ್ಲಿಂದ ಹೊರಟು ಸಮುದ್ರದ ಮಧ್ಯದಲ್ಲೇ ನಡೆದು ಮರುಭೂಮಿಗೆ ಬಂದರು. ಏತಾಮಿನ ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಿ ಮಾರಾ ಎಂಬ ಸ್ಥಳದಲ್ಲಿ ಇಳಿದುಕೊಂಡರು.


ನಾನೇ ಅದರ ಸುತ್ತಮುತ್ತಲು ಅಗ್ನಿ ಪ್ರಾಕಾರವಾಗಿ, ಅದರೊಳಗಿನ ವೈಭವವಾಗಿರುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ,’ ಎಂದ.”


ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿನ ನಡುವೆ ನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಯೇಲರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಹೀಗೆ ಜನರೆಲ್ಲರೂ ಜೋರ್ಡನಿನ ಆಚೆಗೆ ಸೇರಿದರು.


‘ಇಸ್ರಯೇಲರು ಒಣನೆಲವಾಗಿದ್ದ ಈ ಜೋರ್ಡನನ್ನು ದಾಟಿ ಬಂದುದಕ್ಕಾಗಿ’ ಎಂದು ಹೇಳಿ.


ನಾವು ಕುರಿಗಳನ್ನು ಮೇಯಿಸುವವರಾಗಿ ಅವರೊಡನಿದ್ದಾಗ ಅವರು ಹಗಲೂ ಇರುಳೂ ನಮಗೆ ಕಾವಲುಗೋಡೆಯಂತಿದ್ದರು.


ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಿಚಿ, ಅದರಿಂದ ನೀರನ್ನು ಹೊಡೆದನು. ನೀರು ಇಬ್ಭಾಗವಾಯಿತು; ಅವರಿಬ್ಬರೂ ಒಣ ನೆಲದ ಮೇಲೆ ದಾಟಿಹೋದರು.


ಒರತೆ ಊಟೆಗಳ ಉಕ್ಕಿಸಿದಾತ ನೀನು I ಹರಿವ ನದಿಗಳ ಬತ್ತಿಸಿಬಿಟ್ಟವ ನೀನು II


ಇಸ್ರಯೇಲರನು ಅದರ ನಡುವೆ ದಾಟಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಸಮುದ್ರದ ಮಧ್ಯೆ ದಾರಿಮಾಡಿದವನಾರೋ, ಭೋರ್ಗರೆವ ಜಲರಾಶಿಗಳಲ್ಲಿ ಮಾರ್ಗವೇರ್ಪಡಿಸಿದವನಾರೋ,


ಮೋಶೆಯ ಬಲಗೈಗೆ ತಮ್ಮ ಮಹಿಮಾ ಭುಜಬಲವನ್ನು ನೀಡಿದ ಸ್ವಾಮಿ ಎಲ್ಲಿ? ಆತನ ಕೈಯಿಂದ ಜಲರಾಶಿಯನ್ನು ಆ ಜನರ ಕಣ್ಮುಂದೆ ಇಬ್ಬಾಗಿಸಿದ ಸ್ವಾಮಿ ಎಲ್ಲಿ? ಹೀಗೆ ತಮ್ಮ ಹೆಸರನ್ನು ಶಾಶ್ವತವಾಗಿಸಿಕೊಂಡ ಸ್ವಾಮಿ ಎಲ್ಲಿ?


ಮೇಲಿಂದ ಬರುತ್ತಿದ್ದ ನೀರು ಬಹು ದೂರದಲ್ಲಿದ್ದ ಚಾರೆತಾನಿನ ಬಳಿಯಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದುಹೋಯಿತು. ಜನರು ಜೆರಿಕೋವಿನ ಎದುರಿನಲ್ಲಿ ನದಿ ದಾಟಿದರು.


“ಎಲೀಯನ ದೇವರಾದ ಸರ್ವೇಶ್ವರನೆಲ್ಲಿ?” ಎಂದುಕೊಂಡು ಆ ಕಂಬಳಿಯಿಂದ ನೀರನ್ನು ಹೊಡೆದನು. ಅದು ಇಬ್ಭಾಗ ಆಯಿತು. ಅವನು ದಾಟಿಹೋದನು.


ಒಣಗಿಹೋಯಿತಾ ಕೆಂಗಡಲು ಆತನ ಗದರಿಕೆಗೆ I ದಾಟಿಸಿದನಾ ಸಾಗರವನು ಅಡವಿಯೋ ಎಂಬ ಹಾಗೆ II


ಕೆಂಪು ಕಡಲನು ಇಬ್ಭಾಗಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಆತ ಬತ್ತಿಸುವನು ಈಜಿಪ್ಟಿನ ಕೊಲ್ಲಿಯನ್ನು, ಒಣಗಿಸುವನು ಬಿಸಿಗಾಳಿಯಿಂದ ಯೂಫ್ರೆಟಿಸ್ ನದಿಯನ್ನು, ಸೀಳುವನದನ್ನು ಏಳು ತೊರೆಗಳನ್ನಾಗಿ. ಈ ಪರಿ ದಾಟುವರು ಜನರು ಕೆರ ಮೆಟ್ಟಿದವರಾಗಿ.


ಈಜಿಪ್ಟನ್ನು ಬಿಟ್ಟು ಬಂದ ಇಸ್ರಯೇಲರಿಗೆ ಮಾರ್ಗವೊಂದು ಸಿದ್ಧವಾಯಿತು ಅಂತೆಯೆ ಸಿದ್ಧವಾಗುವುದು ರಾಜಮಾರ್ಗವೊಂದು ಅಸ್ಸೀರಿಯದಲ್ಲಿ ಅಳಿದುಳಿದ ಜನರಿಗೆ.


ಸಮುದ್ರ ಜನರಾಶಿಗಳನು ಬತ್ತಿಸಿದ ಬಾಹು ನೀನು ವಿಮುಕ್ತ ಜನ ಹಾಯುವಂತೆ ಸಮುದ್ರದಲಿ ದಾರಿಮಾಡಿದೆ ನೀನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು