Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:25 - ಕನ್ನಡ ಸತ್ಯವೇದವು C.L. Bible (BSI)

25 ಸರ್ವೇಶ್ವರ ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಈಜಿಪ್ಟಿನವರು ಬಹುಕಷ್ಟದಿಂದ ಅವುಗಳನ್ನು ಸಾಗಿಸಿಕೊಂಡು ಹೋದರು. ಆಗ ಈಜಿಪ್ಟಿನವರು, “ನಾವು ಇಸ್ರಯೇಲರ ಮುಂದೆ ಗೆಲ್ಲಲಾರೆವು. ಓಡಿಹೋಗೋಣ ಬನ್ನಿ; ಸರ್ವೇಶ್ವರನು ಅವರ ಪರವಾಗಿ, ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನೆ,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೋವನು ಅವರ ರಥಗಳ ಚಕ್ರದ ಕೀಲುಗಳಲ್ಲಿ ವ್ಯತ್ಯಾಸ ಮಾಡಿಬಿಟ್ಟದ್ದರಿಂದ ಐಗುಪ್ತರು ಬಹು ಕಷ್ಟದಿಂದ ರಥಗಳನ್ನು ಸಾಗಿಸಿಕೊಂಡು ಹೋಗಬೇಕಾಯಿತು. ಆಗ ಐಗುಪ್ತ್ಯರು, “ನಾವು ಇಸ್ರಾಯೇಲರ ಮುಂದೆ ನಿಲ್ಲಲಾರೆವು, ಓಡಿ ಹೋಗೋಣ, ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಿದ್ದಾನೆ” ಎಂದು ಹೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆತನು ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಬಹು ಕಷ್ಟದಿಂದ ಹೊಡಕೊಂಡು ಹೋದರು. ಆಗ ಐಗುಪ್ತ್ಯರು - ನಾವು ಇಸ್ರಾಯೇಲ್ಯರ ಮುಂದೆ ನಿಲ್ಲಲಾರೆವು, ಓಡಿಹೋಗೋಣ; ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ ಎಂದು ಹೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ರಥಗಳ ಚಕ್ರಗಳು ನೆಲಕ್ಕೆ ಅಂಟಿಕೊಂಡವು. ರಥಗಳನ್ನು ನಡಿಸುವುದು ಬಹುಕಷ್ಟವಾಗಿತ್ತು. ಈಜಿಪ್ಟಿನವರು “ನಾವು ಇಲ್ಲಿಂದ ಹೋಗೋಣ. ಯೆಹೋವನು ಈಜಿಪ್ಟಿನ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನೆ. ಯೆಹೋವನು ಇಸ್ರೇಲರಿಗಾಗಿ ಯುದ್ಧ ಮಾಡುತ್ತಿದ್ದಾನೆ” ಎಂದು ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟು ಕಷ್ಟದಿಂದ ಅವರು ಹೋಗುವಂತೆ ಮಾಡಿದರು. ಆಗ ಈಜಿಪ್ಟಿನವರು, “ಇಸ್ರಾಯೇಲರ ಎದುರಿನಿಂದ ಓಡಿಹೋಗೋಣ. ಏಕೆಂದರೆ ಯೆಹೋವ ದೇವರು ಈಜಿಪ್ಟಿನವರಿಗೆ ವಿರೋಧವಾಗಿ ಯುದ್ಧಮಾಡುತ್ತಾರೆ,” ಎಂದು ಹೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:25
26 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿಯೇ ನಿಮ್ಮ ಪರವಾಗಿ ಯುದ್ಧಮಾಡುವರು. ನೀವು ನೆಮ್ಮದಿಯಿಂದಿರಿ,” ಎಂದು ಹೇಳಿದನು.


ಈ ಗದೆಯಿಂದ ಒಡೆದುಬಿಡುವೆನು ಕುದುರೆಯನ್ನೂ ಸವಾರನನ್ನೂ,


ಕಬ್ಬಿಣದ ಆಯುಧಕ್ಕೆ ಹೆದರಿ ಓಡಿದ ಆದರೆ ಅವನನು ಇರಿಯಿತು ಕಂಚಿನ ಬಾಣ.


ನೀವು ಅವರಿಗೆ ಭಯಪಡಬೇಡಿ; ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯೇ ನಿಮ್ಮ ಕಡೆಯವರಾಗಿ ಯುದ್ಧಮಾಡುವರು’ ಎಂದು ಆಜ್ಞಾಪಿಸಿದೆ.


ಆಗ ಸರ್ವೇಶ್ವರಸ್ವಾಮಿ ಬಲಿಪೀಠದ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಅವರು ನನಗೆ ಹೀಗೆಂದು ಅಪ್ಪಣೆಮಾಡಿದರು: “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗೆ ಬಲವಾಗಿ ಹೊಡೆ. ಅವು ಕುಸಿದು ಎಲ್ಲರ ತಲೆಯ ಮೇಲೆ ಬೀಳಲಿ. ಅಳಿದುಳಿದವರನ್ನು ಖಡ್ಗಕ್ಕೆ ತುತ್ತಾಗಿಸುವೆನು. ಅವರಲ್ಲಿ ಯಾರೂ ಓಡಿಹೋಗರು; ಯಾರೂ ತಪ್ಪಿಸಿಕೊಳ್ಳರು.


ಅದು ಹೇಗೆಂದರೆ: “ಸಿಂಹದ ಬಾಯಿಯಿಂದ ತಪ್ಪಿಸಿಕೊಂಡು ಓಡುತ್ತಿರುವವನು ಕರಡಿಯನ್ನು ಎದುರುಗೊಳ್ಳುವಂತೆ ಆಗುವುದು ಅಥವಾ ಅವನು ಅಲ್ಲಿಂದ ಮನೆಗೆ ಓಡಿಬಂದು ಗೋಡೆಯ ಮೇಲೆ ಕೈಯೂರಲು ಅವನಿಗೆ ಹಾವು ಕಚ್ಚಿದಂತೆ ಆಗುವುದು.


ನಿನ್ನ ಒಂದು ಗದರಿಕೆಗೆ, ಯಕೋಬನ ದೇವನೆ I ರಥಾಶ್ವಬಲಗಳೆಲ್ಲಾ ಬಿದ್ದಿವೆ ಬಿಮ್ಮನೆ II


ಓಡಿದರು, ದಂಡೊಡನೆ ಓಡಿದರು ದೊರೆಗಳು I ದೋಚಿಕೊಂಡರು ಕೊಳ್ಳೆಯನು ಗೃಹಿಣಿಯರು II


ಜಗದೆಲ್ಲೆಡೆ ಕದನ ಕಾಳಗ ನಿಲ್ಲಿಸಿಹನು I ಬಿಲ್ಲು ಭಲ್ಲೆಗಳನು ಮುರಿದು ಹಾಕಿದನು I ರಥಗಳನು ಬೆಂಕಿಯಿಂದ ಸುಟ್ಟುಹಾಕಿದನು II


ಅವನ ಮೇಲೆ ಅದು ಬೀಸುತ್ತದೆ ನಿರ್ದಾಕ್ಷಿಣ್ಯದಿಂದ ತಪ್ಪಿಸಿಕೊಳ್ಳಲು ಅವನು ಯತ್ನಿಸುತ್ತಾನೆ ಅದರ ಹೊಡೆತದಿಂದ.


ದುರ್ಜನರು ನಿರಾಶೆಯಿಂದ ಕಂಗೆಡುವರು ಪ್ರಾಣಬಿಡಬೇಕೆಂಬುದೇ ಅವರ ಆಶೆಯಾಗಿರುವುದು.”


ಆದಕಾರಣ ನಾನು ರಬ್ಬದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು. ಆಗ ಯುದ್ಧಾರ್ಭಟವೂ ಚಂಡಮಾರುತದಂಥ ಪ್ರಚಂಡ ಕಾದಾಟವೂ ಉಂಟಾಗುವುವು.


ಸರ್ವೇಶ್ವರ ಸೀಸೆರನನ್ನೂ ಅವನ ಎಲ್ಲಾ ಸೈನ್ಯರಥಗಳನ್ನೂ ಬಾರಾಕನ ಮುಂದೆ ಗಲಿಬಿಲಿಪಡಿಸಿ ಕತ್ತಿಗೆ ತುತ್ತಾಗಿಸಿದರು. ಸೀಸೆರನು ರಥದಿಂದ ಹಾರಿ ಓಡಿಹೋದನು.


ನಾನು ಫರೋಹನ ಹೃದಯವನ್ನು ಕಠಿಣವಾಗಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ಆ ಫರೋಹನನ್ನೂ ಅವನ ಸೈನ್ಯವನ್ನೂ ಗೆದ್ದು ನಾನು ಪ್ರಖ್ಯಾತಿ ಹೊಂದುವೆನು. ನಾನೇ ಸರ್ವೇಶ್ವರ ಎಂಬುದು ಈಜಿಪ್ಟಿನವರಿಗೆ ಗೊತ್ತಾಗುವುದು.” ಸರ್ವೇಶ್ವರನ ಆಜ್ಞೆಯಂತೆಯೇ ಇಸ್ರಯೇಲರು ನಡೆದುಕೊಂಡರು.


ರಾಹುತರನ್ನು ಸೋಲಿಸಿ ಪ್ರಖ್ಯಾತಿ ಹೊಂದಿದ ನಂತರ ನಾನೇ ಸರ್ವೇಶ್ವರ ಎಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು ಮೋಶೆಗೆ.


‘ನಮ್ಮಾಶ್ರಯ ದುರ್ಗ ಅವರ ಆಶ್ರಯದುರ್ಗದಂತಲ್ಲ’ ಎಂದು ಅವರ ಶತ್ರುಗಳೇ ಒಪ್ಪಿಕೊಳ್ಳುತ್ತಾರಲ್ಲವೆ?


ಈ ಸುದ್ದಿ ಸುತ್ತ-ಮುತ್ತಲಿನ ನಮ್ಮ ವಿರೋಧಿಗಳಾದ ಜನಾಂಗಗಳಿಗೆ ಮುಟ್ಟಿತು. ಅವರು ಭಯಭೀತರಾದರು. ಸೊಕ್ಕು ಮುರಿದವರಾಗಿ ಹಾಗೇ ಕುಗ್ಗಿಹೋದರು. ಈ ಕಾರ್ಯ ನಮ್ಮ ದೇವರಿಂದಲೇ ಪೂರ್ಣಗೊಂಡಿತು ಎಂದು ಅವರಿಗೆ ಮನದಟ್ಟಾಯಿತು.


ಸರ್ವೇಶ್ವರನು ಯುದ್ಧಶೂರನು ‘ಸರ್ವೇಶ್ವರ’ ಎಂಬುದು ಆತನ ನಾಮಧೇಯವು.


ನಿಮ್ಮ ಮುಂದುಗಡೆಯಲ್ಲೇ ಹೋಗುವ ನಿಮ್ಮ ದೇವರಾದ ಸರ್ವೇಶ್ವರ ಈಜಿಪ್ಟ್ ದೇಶದಲ್ಲೂ ನೀವು ನೋಡಿದ ಮರುಭೂಮಿಯಲ್ಲೂ ಪ್ರತ್ಯಕ್ಷರಾಗಿ ನಿಮ್ಮ ಪರವಾಗಿ ಯುದ್ಧಮಾಡಿದಂತೆಯೇ, ಈಗಲೂ ನಿಮ್ಮ ಕಡೆಯವರಾಗಿದ್ದು ಯುದ್ಧಮಾಡುವರು.


ಆ ಪ್ರಕಾರ ಹಿಂದೆಯಾಗಲಿ ಮುಂದೆಯಾಗಲಿ ಸರ್ವೇಶ್ವರ ಒಬ್ಬ ಮನುಷ್ಯನ ಮಾತಿಗೆ ಕಿವಿಗೊಟ್ಟಂಥ ದಿವಸ ಇಲ್ಲವೇ ಇಲ್ಲ! ಸರ್ವೇಶ್ವರಸ್ವಾಮಿ ತಾವೇ ಇಸ್ರಯೇಲರ ಪರವಾಗಿ ಯುದ್ಧಮಾಡುತ್ತಿದ್ದರು.


ಸರ್ವೇಶ್ವರಾ ಸ್ವಾಮಿಯೇ ಇಸ್ರಯೇಲರ ಪರವಾಗಿ ಶತ್ರಗಳೊಡನೆ ಯುದ್ಧಮಾಡಿದರೆಂಬ ಸುದ್ದಿ ಅನ್ಯದೇಶಗಳ ರಾಜ್ಯಗಳವರೆಗೆ ಮುಟ್ಟಿದಾಗ, ಅವರೆಲ್ಲರು ಬಹಳ ಭಯಭೀತರಾದರು.


ಅವರನ್ನು ಸಂದರ್ಶಿಸಿ, ಅವರ ಮುಂದೆ ನಿಂತು, ಶ್ರೀಮಂತರನ್ನೂ ಅಧಿಕಾರಿಗಳನ್ನೂ ಉಳಿದ ಜನರನ್ನೂ ಸಂಬೋಧಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿ; ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ಸರ್ವೇಶ್ವರಸ್ವಾಮಿಯನ್ನು ಸ್ಮರಿಸಿಕೊಂಡು, ನಿಮ್ಮ ಸಹೋದರರಿಗಾಗಿ, ಮಡದಿಮಕ್ಕಳಿಗಾಗಿ ಹಾಗು ನಿಮ್ಮ ಮನೆಮಠಗಳಿಗಾಗಿ ಕಾದಾಡಿರಿ,” ಎಂದು ಹುರಿದುಂಬಿಸಿದೆ.


ಕಡಲನು ಸೀಳಿ, ಆ ಪಿತೃಗಳ ನಡೆಸಿದಿರಿ ಒಣನೆಲದಲೋ ಎಂಬಂತೆ ಅವರ ಬೆನ್ನಟ್ಟಿ ಬಂದವರನು ಜಲರಾಶಿಯ ತಳಮುಟ್ಟಿಸಿದಿರಿ ಕಲ್ಲಂತೆ.


ನನ್ನೊಡನೆ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯ ಮಾಡು I ನನ್ನೊಡನೆ ಕದನ ಮಾಡುವವರೊಡನೆ ಪ್ರಭು, ಕದನ ಮಾಡು


ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ : “ಸಿಂಹವೋ ಪ್ರಾಯದ ಸಿಂಹವೋ ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಆ ಕೂಗನ್ನು ಕೇಳಿ ಕುರುಬರನೇಕರು ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದು, ಅವರ ಗದ್ದಲಕ್ಕೆ ಎದೆಗುಂದದು. ಅಂತೆಯೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆದ ನಾನು ಯುದ್ಧಮಾಡಲು ಸಿಯೋನ್ ಶಿಖರದ ಮೇಲೆ ಇಳಿದು ಬರುವಾಗ ನನ್ನನ್ನು ಯಾರೂ ಹೆದರಿಸುವುದಿಲ್ಲ, ಎದೆಗುಂದಿಸುವಂತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು