ವಿಮೋಚನಕಾಂಡ 14:26 - ಕನ್ನಡ ಸತ್ಯವೇದವು C.L. Bible (BSI)26 ಅಷ್ಟರಲ್ಲಿ ಸರ್ವೇಶ್ವರ, “ಸಮುದ್ರದ ಮೇಲೆ ನಿನ್ನ ಕೈಚಾಚು; ಆಗ ಅದರ ನೀರು ಮೊದಲಿನಂತೆ ಬಂದು ಈಜಿಪ್ಟಿನವರನ್ನೂ ಅವರ ರಥಗಳನ್ನೂ, ರಾಹುತರನ್ನೂ ಮುಳುಗಿಸುವುದು,” ಎಂದು ಮೋಶೆಗೆ ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅಷ್ಟರಲ್ಲಿ ಯೆಹೋವನು ಮೋಶೆಗೆ, “ಸಮುದ್ರದ ಮೇಲೆ ನಿನ್ನ ಕೈಚಾಚು, ಆಗ ಅದರ ನೀರು ಮೊದಲಿನಂತೆ ಬಂದು ಐಗುಪ್ತ್ಯರನ್ನೂ, ಅವರ ರಥಗಳನ್ನೂ, ರಾಹುತರನ್ನೂ ಮುಳುಗಿಸುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅಷ್ಟರಲ್ಲಿ ಯೆಹೋವನು ಮೋಶೆಗೆ - ಸಮುದ್ರದ ಮೇಲೆ ನಿನ್ನ ಕೈ ಚಾಚು; ಆಗ ಅದರ ನೀರು ಮೊದಲಿನಂತೆ ಬಂದು ಐಗುಪ್ತ್ಯರನ್ನೂ ಅವರ ರಥಗಳನ್ನೂ ರಾಹುತರನ್ನೂ ಮುಣುಗಿಸುವದೆಂದು ಹೇಳಿದನು. ಮೋಶೆ ಸಮುದ್ರದ ಮೇಲೆ ಕೈಚಾಚಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆಗ ಯೆಹೋವನು ಮೋಶೆಗೆ, “ನಿನ್ನ ಕೈಯನ್ನು ಸಮುದ್ರದ ಮೇಲೆ ಚಾಚು; ನೀರು ಈಜಿಪ್ಟಿನವರ ರಥಗಳನ್ನು ಮತ್ತು ರಾಹುತರನ್ನು ಮುಚ್ಚಿಕೊಳ್ಳುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಗ ಯೆಹೋವ ದೇವರು ಮೋಶೆಗೆ, “ಈಜಿಪ್ಟಿನವರನ್ನೂ ಅವರ ರಥಗಳ ಕುದುರೆಯ ಸವಾರರನ್ನೂ ಸಮುದ್ರವು ಮುಳುಗಿಸುವಂತೆ ಸಮುದ್ರದ ಮೇಲೆ ಕೈಚಾಚು,” ಎಂದರು. ಅಧ್ಯಾಯವನ್ನು ನೋಡಿ |