Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:28 - ಕನ್ನಡ ಸತ್ಯವೇದವು C.L. Bible (BSI)

28 ನೀರು ಮೊದಲಿನಂತೆ ಬಂದು ಆ ರಥಗಳನ್ನು, ರಾಹುತರನ್ನು ಹಾಗು ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನು ಮುಳುಗಿಸಿತು. ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನೀರು ಮೊದಲಿನಂತೆ ಬಂದು ಆ ರಥಗಳನ್ನೂ, ರಾಹುತರನ್ನೂ, ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನೂ ಮುಳುಗಿಸಿಬಿಟ್ಟಿತ್ತು, ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನೀರು ಮೊದಲಿನಂತೆ ಬಂದು ಆ ರಥಗಳನ್ನೂ ರಾಹುತರನ್ನೂ ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನೂ ಮುಣುಗಿಸಿತು. ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನೀರು ತನ್ನ ಸರಿಯಾದ ಮಟ್ಟಕ್ಕೆ ಹಿಂತಿರುಗಿ ರಥಗಳನ್ನು ಮತ್ತು ರಾಹುತರನ್ನು ಮುಚ್ಚಿಬಿಟ್ಟಿತು. ಸಮುದ್ರದೊಳಗೆ ಹೋಗಿದ್ದ ಇಸ್ರೇಲರನ್ನು ಬೆನ್ನಟ್ಟಿದ ಫರೋಹನ ಸೈನ್ಯವೆಲ್ಲಾ ನಾಶವಾಯಿತು. ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನೀರು ತಿರುಗಿಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಹೀಗೆ ಒಬ್ಬರೂ ಉಳಿಯದಂತೆ ಮುಳುಗಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:28
16 ತಿಳಿವುಗಳ ಹೋಲಿಕೆ  

ಅವರು ಅಂಜದಂತೆ ನಡೆಸಿದನು ಸುರಕ್ಷಿತವಾಗಿ I ಶತ್ರುಗಳನೋ ಆವರಿಸಿತು ಸಮುದ್ರವು ನುಂಗಿ II


ಹೊರಟಿರುವೆ ನಿನ್ನ ಪ್ರಜೆಗಳ ರಕ್ಷಣೆಗೆ ನಿನ್ನ ಅಭಿಷಿಕ್ತನ ಜೀವೋದ್ಧಾರಕೆ. ಬಡಿದುಹಾಕಿರುವೆ ದುರುಳನ ಬುರುಡೆಯನು ನೆಲಸಮಮಾಡಿರುವೆ ಅವನ ಮನೆಯನು.


ಫರೋಹನನ್ನೂ ಅವನ ಸೈನ್ಯವನ್ನೂ ಆ ಕಡಲಲ್ಲಿ ಮುಳುಗಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ವಿಶ್ವಾಸದಿಂದಲೇ ಇಸ್ರಯೇಲರು ಒಣನೆಲವನ್ನು ದಾಟುವಂತೆ, ಕೆಂಪು ಸಮುದ್ರವನ್ನು ದಾಟಿದರು. ಈಜಿಪ್ಟಿನವರು ಹಾಗೆಯೇ ದಾಟಲೆತ್ನಿಸಿದಾಗ ನೀರಿನ ಪಾಲಾದರು.


ಕಡಲನು ಸೀಳಿ, ಆ ಪಿತೃಗಳ ನಡೆಸಿದಿರಿ ಒಣನೆಲದಲೋ ಎಂಬಂತೆ ಅವರ ಬೆನ್ನಟ್ಟಿ ಬಂದವರನು ಜಲರಾಶಿಯ ತಳಮುಟ್ಟಿಸಿದಿರಿ ಕಲ್ಲಂತೆ.


ಯೆಹೂದ್ಯರು ಮರುಭೂಮಿಯ ಬುರುಜಿಗೆ ಬಂದು ಆ ಸೈನ್ಯಸಮೂಹವಿದ್ದ ಕಡೆಗೆ ನೋಡಿದಾಗ ನೆಲದ ಮೇಲೆ ಬಿದ್ದಿರುವ ಹೆಣಗಳು ಹೊರತಾಗಿ ಜೀವದಿಂದುಳಿದವರು ಯಾರೂ ಕಾಣಿಸಲಿಲ್ಲ.


ಈಜಿಪ್ಟಿನವರು ರಥಾಶ್ವಬಲಗಳಿಂದ ಕೂಡಿದಂಥ ದಂಡಿನ ಸಮೇತ ನಿಮ್ಮನ್ನು ಹಿಂದಟ್ಟಿ ಬಂದಾಗ ಕೆಂಪುಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ ಸಂಪೂರ್ಣವಾಗಿ ನಾಶಮಾಡಿದ್ದನ್ನೂ;


ಆದರೆ ನಿನ್ನದೊಂದು ಉಸಿರುಗಾಳಿ ಸಾಕಾಯಿತು ಅವರು ಸೀಸದ ಗುಂಡಿನಂತೆ ಮುಳುಗಿ ಹೋಗಲು. ಅವರನ್ನು ಸಮುದ್ರವು ನುಂಗಿಬಿಡಲು


ಅದಕ್ಕೆ ಮೋಶೆ ಆ ಜನರಿಗೆ, “ಅಂಜಬೇಡಿ, ಸುಮ್ಮನಿರಿ, ಈ ದಿನ ಸರ್ವೇಶ್ವರ ನಿಮ್ಮನ್ನು ಹೇಗೆ ರಕ್ಷಿಸುತ್ತಾರೆಂದು ನೋಡಿ! ಈ ದಿನ ನೀವು ನೋಡುವ ಈಜಿಪ್ಟಿನವರನ್ನು ಇನ್ನೆಂದಿಗೂ ನೋಡುವುದಿಲ್ಲ.


ಫರೋಹನ ಕುದುರೆಗಳು, ರಥಗಳು ಹಾಗು ರಾಹುತರು ಸಮುದ್ರವನ್ನು ಹೊಕ್ಕು ನಡೆಯಲಾರಂಭಿಸಿದಾಗ ಸರ್ವೇಶ್ವರ ಸ್ವಾಮಿ ಸಮುದ್ರದ ನೀರನ್ನು ಮೊದಲಿನಂತೆ ಬರಮಾಡಿ ಅವರನ್ನು ಮುಳುಗಿಸಿಬಿಟ್ಟರು. ಇಸ್ರಯೇಲರಾದರೋ, ಸಮುದ್ರದ ನಡುವೆ ಒಣನೆಲದಲ್ಲಿ ನಡೆದು ಹೋದರು.


ಬಾರಾಕನು ಅವನ ಸೈನ್ಯರಥಗಳನ್ನು ಮ್ಲೇಚ್ಛರ ಹರೋಷೆತಿನವರೆಗೂ ಹಿಂದಟ್ಟಿದನು. ಸೀಸೆರನ ಸೈನ್ಯದವರೆಲ್ಲರು ಕತ್ತಿಯಿಂದ ಹತರಾದರು; ಒಬ್ಬನೂ ಉಳಿಯಲಿಲ್ಲ.


ನೀರು ಪ್ರಬಲವಾಗಿ ಹೆಚ್ಚಲು ನಾವೆಯು ಅದರ ಮೇಲೆ ಚಲಿಸಿತು.


ಅವನ ಸಂಗಡ ರಥಗಳೂ ಕುದುರೆಸವಾರರೂ ಸಹ ಇದ್ದರು. ಹೀಗೆ ದೊಡ್ಡ ಜನಸಮೂಹವೇ ಅವನೊಂದಿಗೆ ಹೋಯಿತು.


ಹಾಮನಾಡಿನಲಿ ಮಾಡಿದ ಅದ್ಭುತಗಳನು I ಕೆಂಗಡಲಬಳಿ ನಡೆದ ಘೋರ ಕೃತ್ಯಗಳನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು