Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:30 - ಕನ್ನಡ ಸತ್ಯವೇದವು C.L. Bible (BSI)

30 ಆ ದಿನ ಸರ್ವೇಶ್ವರ ಸ್ವಾಮಿ ಇಸ್ರಯೇಲರನ್ನು ಈಜಿಪ್ಟಿನವರ ಕೈಯಿಂದ ರಕ್ಷಿಸಿದರು. ಈಜಿಪ್ಟಿನವರು ಸತ್ತು ಸಮುದ್ರ ತೀರದಲ್ಲಿ ಬಿದ್ದಿರುವುದನ್ನು ಇಸ್ರಯೇಲರು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಐಗುಪ್ತ್ಯರು ಸತ್ತು ಸಮುದ್ರ ತೀರದಲ್ಲಿ ಬಿದ್ದಿರುವುದನ್ನು ಇಸ್ರಾಯೇಲರು ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತ್ಯರ ಕೈಗೆ ತಪ್ಪಿಸಿದನು. ಐಗುಪ್ತ್ಯರು ಸತ್ತು ಸಮುದ್ರತೀರದಲ್ಲಿ ಬಿದ್ದಿರುವದನ್ನು ಇಸ್ರಾಯೇಲ್ಯರು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದ್ದರಿಂದ ಆ ದಿನ ಯೆಹೋವನು ಇಸ್ರೇಲರನ್ನು ಈಜಿಪ್ಟಿನವರಿಂದ ರಕ್ಷಿಸಿದನು. ಇಸ್ರೇಲರು ಕೆಂಪುಸಮುದ್ರದ ದಡದಲ್ಲಿ ಬಿದ್ದಿದ್ದ ಈಜಿಪ್ಟಿನವರ ಹೆಣಗಳನ್ನು ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆ ದಿನದಲ್ಲಿ ಯೆಹೋವ ದೇವರು ಈ ಪ್ರಕಾರ ಇಸ್ರಾಯೇಲರನ್ನು ಈಜಿಪ್ಟಿನವರ ಕೈಯಿಂದ ರಕ್ಷಿಸಿದರು. ಇಸ್ರಾಯೇಲರು ಸಮುದ್ರ ತೀರದಲ್ಲಿ ಸತ್ತ ಈಜಿಪ್ಟಿನವರನ್ನು ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:30
17 ತಿಳಿವುಗಳ ಹೋಲಿಕೆ  

ತಪ್ಪಿಸಿದನವರನು ವೈರಿಗಳ ಕೈಯಿಂದ I ರಕ್ಷಿಸಿದನು ಆ ಶತ್ರುಗಳ ಹಿಡಿತದಿಂದ II


ಆದರೂ ತನ್ನ ನಾಮಪ್ರಯುಕ್ತ ರಕ್ಷಿಸಿದನವರನು I ಪ್ರಕಟಿಸಿದನಾತ ಹೀಗೆ ತನ್ನ ಶಕ್ತಿಸಾಮರ್ಥ್ಯವನು II


ಇದನ್ನೆಲ್ಲಾ ನೀವು ಈಗಾಗಲೇ ಚೆನ್ನಾಗಿ ಅರಿತವರಾಗಿದ್ದೀರಿ. ಆದರೂ ಕೆಲವು ವಿಷಯಗಳನ್ನು ನಿಮ್ಮ ನೆನಪಿಗೆ ತರಲು ಬಯಸುತ್ತೇನೆ: ದೇವರು ತಮ್ಮ ಪ್ರಜೆಗಳನ್ನು ಈಜಿಪ್ಟ್ ದೇಶದಿಂದ ಬಿಡುಗಡೆಮಾಡಿದರು; ವಿಶ್ವಾಸವಿಡದವರನ್ನು ಅನಂತರ ಅವರೇ ನಾಶಮಾಡಿದರು.


ನಲಿವರು ಸಜ್ಜನರು ಈ ಪ್ರತೀಕಾರ ನೋಟದಲಿ I ಕಾಲುತೊಳೆಯುವರವರು ಆ ದುರ್ಜನರ ನೆತ್ತರಲಿ II


ಪ್ರೀತಿಯಿಂದ ನೆರವಾಗುವನು ದೇವನೆನಗೆ I ಶತ್ರುಗಳಿಗಾದ ಸೋಲನು ತೋರಿಸುವನೆನಗೆ II


ಹೀಗೆ ಸರ್ವೇಶ್ವರ ಆ ದಿನದಲ್ಲಿ ಇಸ್ರಯೇಲರಿಗೆ ಜಯವನ್ನುಂಟುಮಾಡಿದರು. ಯುದ್ಧ ಬೇತಾವೆನಿನ ಆಚೆಯ ತನಕ ನಡೆಯಿತು.


ಅದಕ್ಕೆ ಮೋಶೆ ಆ ಜನರಿಗೆ, “ಅಂಜಬೇಡಿ, ಸುಮ್ಮನಿರಿ, ಈ ದಿನ ಸರ್ವೇಶ್ವರ ನಿಮ್ಮನ್ನು ಹೇಗೆ ರಕ್ಷಿಸುತ್ತಾರೆಂದು ನೋಡಿ! ಈ ದಿನ ನೀವು ನೋಡುವ ಈಜಿಪ್ಟಿನವರನ್ನು ಇನ್ನೆಂದಿಗೂ ನೋಡುವುದಿಲ್ಲ.


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


ನೀನಿದನು ಕಣ್ಣಾರೆ ಕಾಣುವೆ I ದುರುಳರ ದಂಡನೆಯನು ನೋಡುವೆ II


ಹೀಗೆ ಸರ್ವೇಶ್ವರ, ಹಿಜ್ಕೀಯನನ್ನೂ ಜೆರುಸಲೇಮಿನವರನ್ನೂ ಅಸ್ಸೀರಿಯದ ಅರಸ ಸನ್ಹೇರೀಬನ ಕೈಗೂ ಸುತ್ತಲಿನ ಎಲ್ಲ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದರು.


ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೊ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೆ?


“ಸರ್ವೇಶ್ವರ ಈ ದಿನ ಇಸ್ರಯೇಲರಿಗೆ ಜಯವನ್ನುಂಟುಮಾಡಿರುವರು. ಆದ್ದರಿಂದ ಯಾರನ್ನೂ ಕೊಲ್ಲಬಾರದು,” ಎಂದು ಹೇಳಿದನು.


“ನಿಜವಾಗಿ ಇವರು ನನ್ನ ಜನ, ನನ್ನ ಮಕ್ಕಳು, ನನಗೆ ಮೋಸಮಾಡರು,” ಎಂದುಕೊಂಡರು ಸರ್ವೇಶ್ವರ ಸ್ವಾಮಿ.


ಆಗ ಆ ಜನರು ಪುರಾತನ ಮೋಶೆಯ ಕಾಲವನ್ನು ನೆನಪಿಗೆ ತಂದುಕೊಂಡು ಹೀಗೆಂದರು : “ತನ್ನ ಜನರೆಂಬ ಮಂದೆಯನ್ನು, ಅದರ ಕುರುಬನ ಸಮೇತ ಸಮುದ್ರದಿಂದ ಸುರಕ್ಷಿತವಾಗಿ ಬರಮಾಡಿದ ಸ್ವಾಮಿ ಎಲ್ಲಿ? ಆ ಜನರಿಗೆ ತಮ್ಮ ಪವಿತ್ರಾತ್ಮನನ್ನು ಪ್ರದಾನಮಾಡಿದ ಸ್ವಾಮಿ ಎಲ್ಲಿ?


ಸರ್ವೇಶ್ವರ ಅವರಿಗೆ, “ಈಜಿಪ್ಟ್, ಅಮೋರಿಯ, ಅಮ್ಮೋನಿಯ, ಫಿಲಿಷ್ಟಿಯ, ಚೀದೋನ್ಯ, ಅಮಾಲೇಕ್ಯ, ಮಾವೋನ್ಯ


ಆದರೆ ಯೆಹೂದ್ಯ ಮನೆತನವನ್ನು ಪ್ರೀತಿಸಿ ಉದ್ಧರಿಸುವೆನು. ಬಿಲ್ಲುಬಾಣ, ಕತ್ತಿಕಾಳಗ, ಕುದುರೆರಾಹುತರು ಇವುಗಳಿಂದಲ್ಲ, ದೇವರಾದ ಸರ್ವೇಶ್ವರನ ಶಕ್ತಿಯಿಂದಲೇ ಅವರನ್ನು ರಕ್ಷಿಸುವೆನು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು