Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:4 - ಕನ್ನಡ ಸತ್ಯವೇದವು C.L. Bible (BSI)

4 ನಾನು ಫರೋಹನ ಹೃದಯವನ್ನು ಕಠಿಣವಾಗಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ಆ ಫರೋಹನನ್ನೂ ಅವನ ಸೈನ್ಯವನ್ನೂ ಗೆದ್ದು ನಾನು ಪ್ರಖ್ಯಾತಿ ಹೊಂದುವೆನು. ನಾನೇ ಸರ್ವೇಶ್ವರ ಎಂಬುದು ಈಜಿಪ್ಟಿನವರಿಗೆ ಗೊತ್ತಾಗುವುದು.” ಸರ್ವೇಶ್ವರನ ಆಜ್ಞೆಯಂತೆಯೇ ಇಸ್ರಯೇಲರು ನಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ನಾನು ಫರೋಹನಲ್ಲಿಯೂ, ಅವನ ಸೈನ್ಯದಲ್ಲಿಯೂ ಮಹಿಮೆಗೊಳ್ಳುವೆನು. ‘ನಾನೇ ಯೆಹೋವನು’ ಎಂದು ಐಗುಪ್ತ್ಯರಿಗೆ ತಿಳಿದು ಬರುವುದು” ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲರು ನಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನಾದದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು; ಆಗ ನಾನು ಫರೋಹನಲ್ಲಿಯೂ ಅವನ ಸೈನ್ಯದಲ್ಲಿಯೂ ಪ್ರಖ್ಯಾತಿಗೊಳ್ಳುವೆನು. ನಾನೇ ಯೆಹೋವನೆಂಬದು ಐಗುಪ್ತ್ಯರಿಗೆ ತಿಳಿದುಬರುವದು ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಫರೋಹನ ಹೃದಯವನ್ನು ಕಠಿಣಪಡಿಸುವುದರಿಂದ ಅವನು ನಿಮ್ಮನ್ನು ಬೆನ್ನಟ್ಟುವನು. ಆದರೆ ನಾನು ಫರೋಹನನ್ನು ಮತ್ತು ಅವನ ಸೈನ್ಯವನ್ನು ಸೋಲಿಸುವೆನು. ಇದು ನನಗೆ ಗೌರವವನ್ನು ತರುವುದು. ಆಗ ನಾನೇ ಯೆಹೋವನೆಂದು ಈಜಿಪ್ಟಿನ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು. ಇಸ್ರೇಲರು ದೇವರಿಗೆ ವಿಧೇಯರಾಗಿ ಆತನು ಹೇಳಿದ್ದನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದಲ್ಲದೆ ಫರೋಹನು ನಿಮ್ಮನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು. ಫರೋಹನಲ್ಲಿಯೂ, ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು. ಆಗ ನಾನೇ ಯೆಹೋವ ದೇವರೆಂದು ಈಜಿಪ್ಟಿನವರು ತಿಳಿಯುವರು,” ಎಂದು ಹೇಳಿದರು. ಅದರಂತೆಯೇ ಇಸ್ರಾಯೇಲರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:4
36 ತಿಳಿವುಗಳ ಹೋಲಿಕೆ  

ಪವಿತ್ರಗ್ರಂಥದಲ್ಲಿ ಫರೋಹನಿಗೆ ಹೀಗೆಂದು ಹೇಳಲಾಗಿದೆ: “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ಪ್ರದರ್ಶಿಸುವ ಸಲುವಾಗಿ ಹಾಗು ಜಗತ್ತಿನಲ್ಲೆಲ್ಲಾ ನನ್ನ ಹೆಸರನ್ನು ಪ್ರಖ್ಯಾತಪಡಿಸಿಕೊಳ್ಳುವ ಸಲುವಾಗಿ ನಿನ್ನನ್ನು ಉನ್ನತಸ್ಥಾನಕ್ಕೆ ಏರಿಸಿದೆನು.


ನಾನು ಈಜಿಪ್ಟಿನವರಿಗೆ ವಿರುದ್ಧ ಕೈಯೆತ್ತಿ ಅವರ ಮಧ್ಯೆಯಿಂದ ಇಸ್ರಯೇಲರನ್ನು ಹೊರತಂದಾಗ ನಾನು ಸರ್ವೇಶ್ವರನೆಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು.


ಆದರೂ ನಾನು ಫರೋಹನ ಹೃದಯವನ್ನು ಕಲ್ಲಾಗಿಸಿ ಈಜಿಪ್ಟ್ ದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಪವಾಡಗಳನ್ನೂ ನಡೆಸಿ ನನ್ನ ಶಕ್ತಿಯನ್ನು ತೋರಿಸುವೆನು.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೆ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.


ಆದುದರಿಂದ ಸರ್ವೇಶ್ವರನಾದ ನಾನು ಮತ್ತೆ ಹೇಳುತ್ತೇನೆ - ನೀನು ನನ್ನನ್ನು ಸರ್ವೇಶ್ವರನೆಂದು ತಿಳಿದುಕೊಳ್ಳುವಂತೆ ನನ್ನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡಿಸುವೆನು; ಆಗ ಅದು ರಕ್ತವಾಗುವುದು.


“ದೇವರು ಅವರಿಗೆ ಜಡಸ್ವಭಾವವನ್ನು ಕೊಟ್ಟರು. ಇಂದಿನವರೆಗೂ ಅವರು ಕಣ್ಣಿದ್ದೂ ಕಾಣರು, ಕಿವಿಯಿದ್ದೂ ಕೇಳರು,” ಎಂದು ಲಿಖಿತವಾಗಿದೆ. ಇದಲ್ಲದೆ ದಾವೀದನು ಇಂತೆಂದಿದ್ದಾನೆ:


ಹೌದು, ದೇಶದ ಸಕಲ ಪ್ರಜೆಗಳು ಅವರನ್ನು ಹೂಳಿಬಿಡುವರು. ಹೀಗೆ ನನ್ನ ಮಹಿಮೆಯನ್ನು ಪ್ರತ್ಯಕ್ಷಗೊಳಿಸುವಾಗ ನನ್ನ ಜನರಿಗೆ ಗೌರವ ಉಂಟಾಗುವುದು; ಇದು ಸರ್ವೇಶ್ವರನಾದ ದೇವರ ನುಡಿ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಹಾ, ಸಿದೋನೇ, ನಾನು ನಿನಗೆ ವಿರುದ್ಧನಾಗಿ ನಿನ್ನ ಮಧ್ಯದಲ್ಲೆ ಪ್ರಖ್ಯಾತಿಗೊಳ್ಳುವೆನು ; ನಾನು ಈ ಪಟ್ಟಣವನ್ನು ದಂಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ, ನಾನೇ ಸರ್ವೇಶ್ವರ ಎಂದು ಎಲ್ಲರಿಗು ಗೊತ್ತಾಗುವುದು.


ಆದರೂ, ‘ನಿಮ್ಮನ್ನು ಈಜಿಪ್ಟಿನಿಂದ ಪಾರುಮಾಡುವೆನು,’ ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ ಅವರ ಸುತ್ತಮುತ್ತಲಿನ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.


ಈಜಿಪ್ಟಿನವರು ಅವರನು ದರ್ಪದಿಂದ ದಮನಮಾಡುವಲ್ಲಿ ಎಸಗಿದಿರಿ ಅದ್ಭುತಕಾರ್ಯಗಳನು ಸೂಚಕಕಾರ್ಯಗಳನು ಫರೋಹನಲಿ, ಅವನ ಸೇವಕರಲಿ, ಆ ನಾಡಿನ ಜನರಲಿ. ಉಳಿಸಿಕೊಂಡಿರಿ ಇಂದಿಗೂ ಅಂದು ಸಾಧಿಸಿದ ಕೀರ್ತಿಯನು.


ಆತ ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಈಜಿಪ್ಟಿನವರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ ಆ ವಿಷಯದಲ್ಲೇ ಅವರನ್ನು ತಗ್ಗಿಸಿದ್ದಾನೆ. ಆದ್ದರಿಂದ ಸರ್ವೇಶ್ವರ ಸ್ವಾಮಿಯೇ ಎಲ್ಲ ದೇವರುಗಳಿಗಿಂತ ದೊಡ್ಡವರೆಂದು ಈಗ ತಿಳಿದುಕೊಂಡಿದ್ದೇನೆ,” ಎಂದು ಹೇಳಿದನು.


ಈಜಿಪ್ಟ್ ರಾಜ ಫರೋಹನ ಹೃದಯವನ್ನು ಸರ್ವೇಶ್ವರ ಕಠಿಣಪಡಿಸಿದ್ದರಿಂದ ಅವನು ಇಸ್ರಯೇಲರನ್ನು ಬೆನ್ನಟ್ಟಿಹೋದನು. ಇತ್ತ ಅಟ್ಟಹಾಸದಿಂದ ಹೊರಟಿದ್ದರು ಇಸ್ರಯೇಲರು.


ದೇವರ ಇಚ್ಛೆಗೆ ಅನುಗುಣವಾಗಿ ಮಾನವರಿಗೆ ಕರುಣೆಯೂ ಲಭಿಸುತ್ತದೆ, ಕಾಠಿಣ್ಯವೂ ಲಭಿಸುತ್ತದೆ.


ಸರ್ವೇಶ್ವರ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಅವರಿಗೆ ಅಪ್ಪಣೆಕೊಡಲು ಒಪ್ಪಲಿಲ್ಲ.


ಫರೋಹನು ಅದನ್ನು ಕಂಡು, ‘ಇಸ್ರಯೇಲರಿಗೆ ದಾರಿತಪ್ಪಿತು, ಸುತ್ತಲೂ ಮರುಭೂಮಿ ಅವರನ್ನು ಆವರಿಸಿದೆ” ಎಂದುಕೊಳ್ಳುವನು.


ಇತ್ತ ಫರೋಹನಿಗೆ ಇಸ್ರಯೇಲರು ಓಡಿಹೋದರೆಂಬ ಸುದ್ದಿ ಮುಟ್ಟಿತು. ಅವರ ಬಗ್ಗೆ ಅವನ ಹಾಗು ಅವನ ಪರಿವಾರದವರ ಮನಸ್ಸು ಮಾರ್ಪಟ್ಟಿತು. “ನಮಗೆ ಗುಲಾಮರಾಗಿದ್ದ ಇಸ್ರಯೇಲರನ್ನು ನಾವೇಕೆ ಹೋಗಗೊಟ್ಟೆವು?” ಎಂದು ನೊಂದುಕೊಂಡರು.


ಈಜಿಪ್ಟಿನವರು, ಅಂದರೆ ಫರೋಹನ ಕುದುರೆಗಳು, ರಥಗಳು, ರಾಹುತರು ಇಸ್ರಯೇಲರನ್ನು ಬೆನ್ನಟ್ಟಿ ಬಂದು ಅವರ ಹಿಂದೆಯೇ ಸಮುದ್ರದೊಳಗೆ ಹೋದರು.


ಸರ್ವೇಶ್ವರ ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಈಜಿಪ್ಟಿನವರು ಬಹುಕಷ್ಟದಿಂದ ಅವುಗಳನ್ನು ಸಾಗಿಸಿಕೊಂಡು ಹೋದರು. ಆಗ ಈಜಿಪ್ಟಿನವರು, “ನಾವು ಇಸ್ರಯೇಲರ ಮುಂದೆ ಗೆಲ್ಲಲಾರೆವು. ಓಡಿಹೋಗೋಣ ಬನ್ನಿ; ಸರ್ವೇಶ್ವರನು ಅವರ ಪರವಾಗಿ, ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನೆ,” ಎಂದುಕೊಂಡರು.


ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.


ಈಜಿಪ್ಟಿನಲ್ಲಿ ತುಂಬಿದ್ದ ಸೊತ್ತನ್ನೆಲ್ಲಾ ಕರಗಿಸಿ ಆ ದೇಶವನ್ನು ಹಾಳುಪಾಳುಮಾಡಿ ಅಲ್ಲಿನ ಸಕಲ ನಿವಾಸಿಗಳನ್ನು ಸಂಹರಿಸಿದಾಗ ನಾನೇ ಸರ್ವೇಶ್ವರ ಎಂದು ಗೊತ್ತಾಗುವುದು.


ನಾನು ನಿಮ್ಮನ್ನು ನನ್ನ ಪ್ರಜೆಯಾಗಿ ಮಾಡುವೆನು; ನಾನು ನಿಮ್ಮ ದೇವರಾಗಿರುವೆನು. ಈಜಿಪ್ಟಿನವರು ಹೊರಿಸುವ ದುಡಿಮೆಯನ್ನು ನಾನು ನಿಮ್ಮಿಂದ ಬಿಡಿಸಿದಾಗ ಸರ್ವೇಶ್ವರ ಎಂಬ ನಾನೇ ನಿಮ್ಮ ದೇವರೆಂದು ನಿಮಗೆ ತಿಳಿದುಬರುವುದು.


ಇಸ್ರಯೇಲರು ತಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ಈ ಸೂಚಕಕಾರ್ಯಗಳನ್ನು ತಿಳಿಸಬೇಕು; ಅಲ್ಲದೆ ಸರ್ವೇಶ್ವರ ಆದ ನಾನು ಈಜಿಪ್ಟಿನವರನ್ನು ಇಷ್ಟಬಂದ ಹಾಗೆ ಆಡಿಸಿ ದಂಡಿಸಿದೆನೆಂದು ತಿಳಿಸಬೇಕು. ಹೀಗೆ ನಾನೇ ಸರ್ವೇಶ್ವರನೆಂದು ಈ ಸೂಚಕಕಾರ್ಯಗಳಿಂದ ನೀವು ತಿಳಿದುಕೊಳ್ಳುವಿರಿ,” ಎಂದರು.


ಜನರು ತಲೆಬಾಗಿ ನಮಸ್ಕರಿಸಿದರು. ಇಸ್ರಯೇಲರು ಅಲ್ಲಿಂದ ಹೊರಟು ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ನಡೆದುಕೊಂಡರು.


ಏಕೆಂದರೆ ಸರ್ವೇಶ್ವರ ಅವರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರಮಾಡಿದ್ದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಇಸ್ರಯೇಲರು ಅವರೆಲ್ಲರನ್ನು ಕರುಣೆ ಇಲ್ಲದೆ ಸಂಹರಿಸಿದರು.


ಯಾಬೀನನ ಸೇನಾಪತಿ ಸೀಸೆರನನ್ನು ನಿನ್ನ ಬಳಿಗೆ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬರುವರು. ಅವನಿಗೆ ರಥಗಳೂ ಸೇನಾಪಡೆಗಳೂ ಇದ್ದರೂ ನಾನು ನಿನಗೆ ಜಯವನ್ನು ದೊರಕಿಸುವೆನು’,” ಎಂದಳು.


ನನ್ನ ಜನರಾದ ಇಸ್ರಯೇಲರ ಮೇಲೆ ಬಿದ್ದು ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವೆ. ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು, ನಾನೇ ಸರ್ವೇಶ್ವರ ಎಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ನಾಡಿನ ಮೇಲೆ ಬೀಳಮಾಡುವೆನು.


ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಬಹುಜನಾಂಗಗಳು ನಾನೇ ಸರ್ವೇಶ್ವರ ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು