Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:5 - ಕನ್ನಡ ಸತ್ಯವೇದವು C.L. Bible (BSI)

5 ಇತ್ತ ಫರೋಹನಿಗೆ ಇಸ್ರಯೇಲರು ಓಡಿಹೋದರೆಂಬ ಸುದ್ದಿ ಮುಟ್ಟಿತು. ಅವರ ಬಗ್ಗೆ ಅವನ ಹಾಗು ಅವನ ಪರಿವಾರದವರ ಮನಸ್ಸು ಮಾರ್ಪಟ್ಟಿತು. “ನಮಗೆ ಗುಲಾಮರಾಗಿದ್ದ ಇಸ್ರಯೇಲರನ್ನು ನಾವೇಕೆ ಹೋಗಗೊಟ್ಟೆವು?” ಎಂದು ನೊಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇಸ್ರಾಯೇಲರು ಓಡಿಹೋದರೆಂಬ ವರ್ತಮಾನವು ಐಗುಪ್ತದ ಅರಸನಾದ ಫರೋಹನಿಗೆ ತಿಳಿದುಬಂದಾಗ, ಅವರ ವಿಷಯದಲ್ಲಿ ಫರೋಹನ ಮತ್ತು ಅವನ ಪರಿವಾರದವರ ಹೃದಯವು ಅವರಿಗೆ ವಿರುದ್ಧವಾಗಿ ಕಠಿಣಗೊಂಡಿತು. ಅವರು, “ಇದೇನು ನಾವು ಮಾಡಿದ್ದು? ನಮಗೆ ದಾಸರಾಗಿದ್ದ ಇಸ್ರಾಯೇಲರನ್ನು ಹೊರಟು ಹೋಗುವುದಕ್ಕೆ ಬಿಟ್ಟೆವಲ್ಲಾ” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇಸ್ರಾಯೇಲ್ಯರು ಓಡಿಹೋದರೆಂಬ ವರ್ತಮಾನವು ಫರೋಹನಿಗೆ ತಿಳಿದುಬಂದಾಗ ಅವರ ವಿಷಯದಲ್ಲಿ ಫರೋಹನ ಮನಸ್ಸೂ ಅವನ ಪರಿವಾರದವರ ಮನಸ್ಸೂ ಬೇರೆಯಾಯಿತು. ಅವರು - ಇದೇನು ನಾವು ಮಾಡಿದ್ದು? ನಮಗೆ ದಾಸರಾಗಿದ್ದ ಇಸ್ರಾಯೇಲ್ಯರನ್ನು ಯಾತಕ್ಕೆ ಹೋಗಗೊಡಿಸಿದೆವು ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇಸ್ರೇಲರು ತಪ್ಪಿಸಿಕೊಂಡರೆಂಬ ವರದಿಯನ್ನು ಕೇಳಿದಾಗ, ಫರೋಹನ ಮತ್ತು ಅವನ ಅಧಿಕಾರಿಗಳ ಮನಸ್ಸುಗಳು ಬದಲಾದವು. ಫರೋಹನು, “ಇಸ್ರೇಲರನ್ನು ನಾವು ಯಾಕೆ ಹೋಗಲು ಬಿಟ್ಟೆವು? ಅಯ್ಯೋ, ನಾವೀಗ ನಮ್ಮ ಗುಲಾಮರನ್ನು ಕಳೆದುಕೊಂಡೆವಲ್ಲಾ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಜನರು ಓಡಿಹೋದರೆಂಬ ವಿಷಯ ಈಜಿಪ್ಟಿನ ಅರಸನಿಗೆ ತಿಳಿಯಿತು. ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಅವರಿಗೆ ವಿರೋಧವಾಗಿ ತಿರುಗಿಕೊಂಡಿತು. ಅವರು, “ಇಸ್ರಾಯೇಲರು ನಮ್ಮ ಸೇವೆ ಮಾಡುವುದನ್ನು ಬಿಟ್ಟು ಹೋಗಿಬಿಡುವಂತೆ ನಾವು ಏಕೆ ಮಾಡಿದೆವು?” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:5
9 ತಿಳಿವುಗಳ ಹೋಲಿಕೆ  

ಮಾರ್ಪಡಿಸಿದ ಈಜಿಪ್ಟರನು ತನ್ನ ಜನರನು ದ್ವೇಷಿಸುವಂತೆ I ತನ್ನ ದಾಸರೊಡನವರು ಕುಯುಕ್ತಿಯಿಂದ ನಡೆದುಕೊಳ್ಳುವಂತೆ II


ಈಜಿಪ್ಟಿನವರು, “ನಾವೆಲ್ಲರು ಸಾಯುತ್ತೇವೆ,” ಎಂದುಕೊಂಡು ತಮ್ಮ ದೇಶವನ್ನು ಬಿಟ್ಟು ಬೇಗನೆ ಹೋಗಬೇಕೆಂದು ಇಸ್ರಯೇಲರನ್ನು ಒತ್ತಾಯಪಡಿಸಿದರು.


ನಾನು ಫರೋಹನ ಹೃದಯವನ್ನು ಕಠಿಣವಾಗಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ಆ ಫರೋಹನನ್ನೂ ಅವನ ಸೈನ್ಯವನ್ನೂ ಗೆದ್ದು ನಾನು ಪ್ರಖ್ಯಾತಿ ಹೊಂದುವೆನು. ನಾನೇ ಸರ್ವೇಶ್ವರ ಎಂಬುದು ಈಜಿಪ್ಟಿನವರಿಗೆ ಗೊತ್ತಾಗುವುದು.” ಸರ್ವೇಶ್ವರನ ಆಜ್ಞೆಯಂತೆಯೇ ಇಸ್ರಯೇಲರು ನಡೆದುಕೊಂಡರು.


ಕೂಡಲೆ ಫರೋಹನು ತನ್ನ ರಥಬಲವನ್ನು ಸಜ್ಜುಗೊಳಿಸಿಕೊಂಡು ಸೈನ್ಯ ಸಮೇತನಾಗಿ ಹೊರಟನು.


ನಮ್ಮ ಶತ್ರುಗಳು ಮಾತಾಡಿಕೊಂಡರು ಇಂತೆಂದು: ‘ಹಿಂದಟ್ಟಿ ಹಿಡಿಯುವೆವು ಅವರನು ಅಪಹರಿಸಿಕೊಳ್ವೆವು ಅವರ ಸೊತ್ತನು ತೀರಿಸಿಕೊಳ್ವೆವು ಅವರಲ್ಲಿ ನಮ್ಮ ಬಯಕೆಯನು ಶಕ್ತಿಯಿಂದ ಸಂಹರಿಸುವೆವು ಅವರನು ಕತ್ತಿ ಹಿಡಿದು.’


ಯಕೋಬನು ಓಡಿಹೋದ ಸುದ್ದಿ ಲಾಬಾನನಿಗೆ ಮೂರನೆಯ ದಿನ ತಿಳಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು