Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:10 - ಕನ್ನಡ ಸತ್ಯವೇದವು C.L. Bible (BSI)

10 ಆದರೆ ನಿನ್ನದೊಂದು ಉಸಿರುಗಾಳಿ ಸಾಕಾಯಿತು ಅವರು ಸೀಸದ ಗುಂಡಿನಂತೆ ಮುಳುಗಿ ಹೋಗಲು. ಅವರನ್ನು ಸಮುದ್ರವು ನುಂಗಿಬಿಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ನೀನು ಗಾಳಿಯನ್ನು ಊದಿದಾಗ, ಸಮುದ್ರವು ಅವರನ್ನು ಮುಚ್ಚಿಕೊಂಡಿತು; ಅವರು ಮಹಾಸಾಗರದೊಳಗೆ ಸೀಸದ ಗುಂಡಿನಂತೆ ಮುಳುಗಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೆ ನೀನು ಉಸುರುಗಾಳಿಯಿಂದ ಊದಲು ಸಮುದ್ರವು ಅವರನ್ನು ಮುಚ್ಚಿತು, ಅವರು ಮಹಾಸಾಗರದೊಳಗೆ ಸೀಸದ ಗುಂಡಿನಂತೆ ಮುಳುಗಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ನೀನು ಅವರ ಮೇಲೆ ಊದಿದ ಗಾಳಿಯಿಂದ ಸಮುದ್ರವು ಅವರನ್ನು ಮುಚ್ಚಿಕೊಂಡಿತು; ಅವರು ಸೀಸದಂತೆ ಅಗಾಧವಾದ ಸಮುದ್ರದಲ್ಲಿ ಮುಳುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀವು ನಿಮ್ಮ ಶ್ವಾಸ ಊದಿದಾಗ ಸಮುದ್ರವು ಅವರನ್ನು ನುಂಗಿಕೊಂಡಿತು. ಅವರು ಸೀಸದಂತೆ ಮಹಾಸಾಗರದಲ್ಲಿ ಮುಳುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:10
16 ತಿಳಿವುಗಳ ಹೋಲಿಕೆ  

ಆತ ಬತ್ತಿಸುವನು ಈಜಿಪ್ಟಿನ ಕೊಲ್ಲಿಯನ್ನು, ಒಣಗಿಸುವನು ಬಿಸಿಗಾಳಿಯಿಂದ ಯೂಫ್ರೆಟಿಸ್ ನದಿಯನ್ನು, ಸೀಳುವನದನ್ನು ಏಳು ತೊರೆಗಳನ್ನಾಗಿ. ಈ ಪರಿ ದಾಟುವರು ಜನರು ಕೆರ ಮೆಟ್ಟಿದವರಾಗಿ.


ಈಜಿಪ್ಟಿನವರು ರಥಾಶ್ವಬಲಗಳಿಂದ ಕೂಡಿದಂಥ ದಂಡಿನ ಸಮೇತ ನಿಮ್ಮನ್ನು ಹಿಂದಟ್ಟಿ ಬಂದಾಗ ಕೆಂಪುಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ ಸಂಪೂರ್ಣವಾಗಿ ನಾಶಮಾಡಿದ್ದನ್ನೂ;


ಮುಚ್ಚಿಬಿಟ್ಟಿತವರನು ಸಮುದ್ರ ಸಾಗರವು ಸೇರಿದರವರು ಕಲ್ಲಿನೋಪಾದಿ ಕಡಲಿನ ತಳವನು.


ಮೋಶೆ ಸಮುದ್ರದ ಮೇಲೆ ಕೈ ಚಾಚಿದಾಗ ಸರ್ವೇಶ್ವರ ಸ್ವಾಮಿ ಆ ರಾತ್ರಿಯೆಲ್ಲಾ ಪೂರ್ವದಿಕ್ಕಿನಿಂದ ಬಲವಾದ ಬಿರುಗಾಳಿ ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದುಕಡೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದರು. ನೀರು ಇಬ್ಭಾಗವಾಯಿತು.


ಆಗ ವಾತಾವರಣ ಪ್ರಶಾಂತವಾಯಿತು. ಶಿಷ್ಯರು ನಿಬ್ಬೆರಗಾದರು. “ಗಾಳಿಯೂ ಸರೋವರವೂ ಇವರು ಹೇಳಿದ್ದಂತೆ ಕೇಳಬೇಕಾದರೆ ಇವರೆಂತಹ ವ್ಯಕ್ತಿಯಾಗಿರಬೇಕು!” ಎಂದುಕೊಂಡರು.


ಬೆಟ್ಟಗುಡ್ಡಗಳನ್ನು ರೂಪಿಸಿದಾತ ದೇವನೇ ಗಾಳಿಬಿರುಗಾಳಿಯನು ಸೃಜಿಸಿದಾತ ಆತನೇ ತನ್ನಾಲೋಚನೆಯನ್ನು ನರರಿಗರುಹಿಸಿದವ ದೇವನೇ ಹಗಲನ್ನು ಇರುಳನ್ನಾಗಿಸುವವನು ಆತನೇ ಪೊಡವಿಯ ಉನ್ನತ ಸ್ಥಾನದಲ್ಲಿ ನಡೆದಾಡುವವನಾತನೇ ಆತನ ನಾಮಧೇಯ - ಸೇನಾಧೀಶ್ವರ ದೇವರಾದ ಸರ್ವೇಶ್ವರನೇ.


ಆಕಾಶದಲ್ಲಿ ನೀರು ಭೋರ್ಗರೆಯುವಂತೆ ಭುವಿಯ ಕಟ್ಟಕಡೆಯಿಂದ ಮೋಡಗಳು ಏರುವಂತೆ ಮಳೆಗಾಗಿ ಮಿಂಚು ಹೊಳೆಯುವಂತೆ ತಮ್ಮ ಭಂಡಾರದಿಂದ ಗಾಳಿ ಬೀಸುವಂತೆ - ಮಾಡುತ್ತದೆ ಸರ್ವೇಶ್ವರನಾ ಗರ್ಜನೆ.


ಕರಗುವುವು ಆ ಕಲ್ಲುಗಳು ಆತನ ಅಪ್ಪಣೆಗೆ I ಹರಿಯುವುದು ನೀರು ಆತ ಕಳುಹಿಸುವ ಗಾಳಿಗೆ II


ಏಳಮಾಡುವನು ದಿಗಂತದೊಳು ಮೋಡವನು I ಹೊಳೆಯಮಾಡುವನು ಮಳೆಗೋಸ್ಕರ ಮಿಂಚನು I ಬೀಸಮಾಡುವನು ಉಗ್ರಾಣದಿಂದ ಗಾಳಿಯನು II


ದೇವರಿಗೆ ನೋಹನ ಮತ್ತು ಅವನ ಸಂಗಡ ನಾವೆಯಲ್ಲಿದ್ದ ಎಲ್ಲ ಪ್ರಾಣಿಪಕ್ಷಿಗಳ ನೆನಪಿತ್ತು. ಅವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲು ನೀರು ತಗ್ಗಿತು.


ಆಕಾಶಕ್ಕೆ ಏರಿ ಮರಳಿದವನು ಯಾರು? ಮುಷ್ಟಿಯಲ್ಲಿ ಗಾಳಿಯನ್ನು ಹಿಡಿದಿಟ್ಟವನು ಯಾರು? ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಎಲ್ಲೆಮೇರೆಗಳನ್ನು ನಿಗದಿಮಾಡಿದವನು ಯಾರು? ಆತನ ಹೆಸರೇನು? ಆತನ ಮಗನ ಹೆಸರೇನು? ಬಲ್ಲೆಯಾ?


ಈಜಿಪ್ಟಿನ ಅರಸನು ಗಡಿಬಿಡಿಯ ಮಾತಾಡಿ ಸದಾವಕಾಶವನ್ನು ಕಳೆದುಕೊಂಡವನೆಂದು ಕರೆಸಿಕೊಂಡ ವ್ಯಕ್ತಿ.


ಯುದ್ಧವು ಸುತ್ತಣ ಪ್ರದೇಶಗಳಿಗೆ ಹಬ್ಬಿಕೊಂಡಿತು. ಆ ದಿನ ಕತ್ತಿಯಿಂದ ಸತ್ತವರಿಗಿಂತ, ಮರುಳುಗಾಡಿನಲ್ಲಿ ಸತ್ತವರ ಸಂಖ್ಯೆಯೇ ಹೆಚ್ಚಾಗಿತ್ತು.


ಕಡಲನು ಸೀಳಿ, ಆ ಪಿತೃಗಳ ನಡೆಸಿದಿರಿ ಒಣನೆಲದಲೋ ಎಂಬಂತೆ ಅವರ ಬೆನ್ನಟ್ಟಿ ಬಂದವರನು ಜಲರಾಶಿಯ ತಳಮುಟ್ಟಿಸಿದಿರಿ ಕಲ್ಲಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು