Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:11 - ಕನ್ನಡ ಸತ್ಯವೇದವು C.L. Bible (BSI)

11 ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ನಿನ್ನ ಹಾಗೆ ಪರಿಶುದ್ಧತ್ವದಲ್ಲಿ ಸರ್ವೋತ್ತಮನು ಮಹಿಮೆ ಹೊಂದಿದವನು, ಭಯಂಕರನೂ, ಅದ್ಭುತ ಕೃತ್ಯಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನರು ಯಾರಿದ್ದಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನೇ, ದೇವರುಗಳಲ್ಲಿ ನಿನ್ನ ಸಮಾನನು ಯಾವನು? ಪರಿಶುದ್ಧತ್ವದಿಂದ ಸರ್ವೋತ್ತಮನೂ ಪ್ರಖ್ಯಾತ ಕೃತ್ಯಗಳನ್ನು ಮಾಡಿರುವದರಿಂದ ಭಯಂಕರನೂ ಅದ್ಭುತಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನನು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ಪರಿಶುದ್ಧತೆಯಲ್ಲಿ ನೀನೇ ಸರ್ವೋತ್ತಮನು. ಭಯಂಕರ ಕಾರ್ಯಗಳನ್ನು ಮಾಡಿ ಪ್ರಖ್ಯಾತಿಹೊಂದಿದವನೂ ನೀನೇ. ಅದ್ಭುತಕಾರ್ಯಗಳನ್ನು ಮಾಡುವಾತನೂ ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರೇ, ನಿಮ್ಮ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ವೈಭವ ಹೊಂದಿದವರೂ, ಮಹಿಮೆಯಲ್ಲಿ ಅತಿಶಯರೂ, ಅದ್ಭುತಗಳನ್ನು ಮಾಡುವವರೂ ಆದ ನಿಮ್ಮ ಹಾಗೆ ಯಾರಿದ್ದಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:11
51 ತಿಳಿವುಗಳ ಹೋಲಿಕೆ  

“ಇಸ್ರಯೇಲ್ ದೇವರಾದ ಸರ್ವೇಶ್ವರಾ, ಭೂಲೋಕದಲ್ಲೂ ಪರಲೋಕದಲ್ಲೂ ನಿಮಗೆ ಸಮಾನರಾದ ದೇವರಿಲ್ಲ; ಪೂರ್ಣಮನಸ್ಸಿನಿಂದ ನಿಮಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಭಕ್ತರ ಬಗ್ಗೆ ನಿಮ್ಮ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿಸುವವರು ನೀವು.


ಸರ್ವೇಶ್ವರನಂಥ ಪರಮಪಾವನನಿಲ್ಲ ನಿನ್ನ ಹೊರತು ದೇವಾ, ಬೇರೆ ದೇವನಿಲ್ಲ; ನಮ್ಮ ದೇವನಿಗೆ ಸಮನಾದ ಆಶ್ರಯದುರ್ಗವಿಲ್ಲ.


ಹೇ ದೇವಾ, ಸರ್ವೇಶ್ವರಾ, ತಾವು ಮಹೋನ್ನತರು, ತಮಗೆ ಸಮಾನರು ಯಾರೂ ಇಲ್ಲ. ನಾವು ಕೇಳಿದ ಅವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ತಮ್ಮ ಹೊರತು ದೇವರೇ ಇಲ್ಲ ಎಂಬುದು ನಿಶ್ಚಯ.


ಆ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಅವುಗಳ ಸುತ್ತಲು ಮತ್ತು ಒಳಗು ಅನೇಕ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳೂ : “ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು! ಸರ್ವಶಕ್ತರಾದ ಪ್ರಭು ದೇವರು ವರ್ತಮಾನಕಾಲದಲ್ಲಿ ಇರುವವರೂ ಭೂತಕಾಲದಲ್ಲಿ ಇದ್ದವರೂ ಭವಿಷ್ಯತ್‍ಕಾಲದಲ್ಲಿ ಬರುವವರೂ ಆಗಿದ್ದಾರೆ,” ಎಂದು ಹಾಡುತ್ತಿದ್ದವು.


ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ : “ಪವಿತ್ರ, ಪವಿತ್ರ, ಪವಿತ್ರ ಸೇನಾಧೀಶ್ವರ ಸರ್ವೇಶ್ವರ ಜಗವೆಲ್ಲ ಆತನ ಪ್ರಭಾವಭರಿತ” ಎಂದು ಕೂಗಿ ಹೇಳಿದನು.


ದೇವರುಗಳಲಿ ಪ್ರಭು, ನಿನ್ನಂಥವನಿಲ್ಲ I ನಿನ್ನ ಮಹತ್ಕಾರ್ಯಗಳಿಗೆ ಸಾಟಿಯೇ ಇಲ್ಲ II


ಅದ್ಭುತಗಳನು ನಡೆಸುವಂತಹ ದೇವ ನೀನೆಮಗೆ I ತೋರ್ಪಡಿಸಿದೆ ನಿನ್ನಾ ಪರಾಕ್ರಮವನು ಜನತೆಗೆ II


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


“ಇಂತಿರಲು ನನ್ನನ್ನು ಯಾರಿಗೆ ಹೋಲಿಸಬಲ್ಲಿರಿ?” ಯಾರಿಗೆ ನನ್ನನ್ನು ಸರಿಸಮಾನ ಮಾಡಬಲ್ಲಿರಿ?” ಎಂದು ಕೇಳುತ್ತಿಹರು ಪರಮಪಾವನ ಸ್ವಾಮಿ.


ಇಸ್ರಯೇಲಿನ ಜನರೇ, ನಿಮ್ಮ ದೇವರಿಗೆ ಸಮಾನನಾರೂ ಇಲ್ಲ, ಆತ ಬರುವನು ಆಕಾಶವನ್ನೇರಿ, ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ಬರುವನು ನಿಮ್ಮ ನೆರವಿಗಾಗಿ.


ಸಾಗರವನೆ ನೀ ತುಳಿದು ನಡೆದೆ I ಮಹಾಸಾಗರವನೆ ನೀ ದಾಟಿದೆ I ಹೆಜ್ಜೆಯ ಗುರುತನೂ ಕಾಣಬಿಡದೆ II


ಇಂತಿರಲು ಯಾರಿಗೆ ಹೋಲಿಸಬಲ್ಲಿರಿ ದೇವರನು? ಕೊಡಬಲ್ಲಿರಾ ಆತನಿಗೆ ಯಾವುದಾದರೊಂದು ಉಪಮಾನವನು?


“ಬಿಡಿಸಿದೆ ಬಡವನನು ದರೋಡೆಗಾರರಿಂದ I ರಕ್ಷಿಸಿದೆ ದುರ್ಬಲನನು ಬಲಾಢ್ಯರಿಂದ I ಹೇ ಪ್ರಭು, ನಿನಗೆ ಸಮಾನರಾರೆಂದು” I ಹೊಗಳುವುವು ನನ್ನೆಲುಬುಗಳೊಂದೊಂದು II


ಅವನು, “ನಾಳೆಯೇ ಆಗಲಿ” ಎಂದನು. ಅದಕ್ಕೆ ಮೋಶೆ, “ತಮ್ಮ ಮಾತಿನ ಪ್ರಕಾರವೇ ಆಗುವುದು.


ಬನ್ನಿ, ದೇವನತಿಶಯ ಕಾರ್ಯಗಳ ನೋಡಬನ್ನಿ I ಜನತೆಗಾತ ಮಾಡಿದುದು ಅತ್ಯಾಶ್ಚರ್ಯವೆನ್ನಿ II


“ಎದೋಮ್ಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇದೋ ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ಏರಿಬರುವೆನು. ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯುವಂಥ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಎಲ್ಲ ಜೀವಿಗಳಿಗೆ ನೀ ಕೈ ನೀಡುವವನು I ಎಲ್ಲರ ಕೋರಿಕೆಗಳನು ಈಡೇರಿಸುವವನು II


ಹಾಗಲ್ಲ ಯಕೋಬ್ಯರಿಗೆ ಸ್ವಂತವಾದ ದೇವರು ಅವರು ಸಮಸ್ತವನ್ನು ಸೃಷ್ಟಿಸಿದವರು. ಇಸ್ರಯೇಲ್ ಗೋತ್ರ ಅವರಿಗೆ ಸ್ವಾಸ್ತ್ಯ. ‘ಸೇನಾಧೀಶ್ವರ ಸರ್ವೇಶ್ವರ’ ಅವರ ನಾಮಧೇಯ.


ನಡುಗುತ್ತಿದೆ ದೇಹ ನಿನ್ನ ಭಯದಿಂದ I ಬಾಳಿದೆ ನಿನ್ನ ವಿಧಿಗಳ ಭೀತಿಯಿಂದ II


ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ: ಸತ್ತಮೇಲೆ ನರಕದೊಳಕ್ಕೆ ದಬ್ಬಲು ಅಧಿಕಾರವುಳ್ಳಾತನಿಗೆ ಭಯಪಡಿ. ಹೌದು, ಆತನಿಗೆ ಭಯಪಡಿರೆಂದು ನಿಮಗೆ ಒತ್ತಿಹೇಳುತ್ತೇನೆ.


ನಿನ್ನ ಕೋಪದಾ ಪ್ರತಾಪವನು ಬಲ್ಲವನಾರು? I ಭಯಂಕರ ರೌದ್ರವನು ಅನುಭವಿಸುವವರಾರು? II


“ನಿಮ್ಮ ದೇವರಾದ ಸರ್ವೇಶ್ವರನೆಂಬ ನಾನು ಪರಿಶುದ್ಧ ನಾಗಿರುವಂತೆ ನೀವು ಕೂಡ ಪರಿಶುದ್ಧ ರಾಗಿರಬೇಕು .


ನಮಗೆ ಅಡ್ಡ ಬರಬೇಡಿ. ನಮ್ಮ ದಾರಿಯಿಂದ ದೂರವಿರಿ. ಇಸ್ರಯೇಲರ ಪರಮಪಾವನ ಸ್ವಾಮಿಯ ವಿಷಯವನ್ನು ನಮ್ಮ ಮುಂದೆ ಎತ್ತಬೇಡಿ,” ಎಂದು ಹೇಳುತ್ತಾರೆ.


ಗುರಾಣಿಯಂತಿಹ ನಮ್ಮ ರಾಜನು ಪ್ರಭುವಿನವನೇ I ಇಸ್ರಯೇಲಿನ ಪರಮಪಾವನ ಸ್ವಾಮಿಗೆ ಸೇರಿದವನೇ II


ಜನರು ಆ ಮೃಗವನ್ನು ಮಾತ್ರವಲ್ಲ, ಅದಕ್ಕೆ ಅಧಿಕಾರವನ್ನು ಕೊಟ್ಟ ಘಟಸರ್ಪವನ್ನೂ ಆರಾಧಿಸಿದರು. ಮೃಗವನ್ನು ಕುರಿತು, “ಈ ಮೃಗಕ್ಕೆ ಸಮಾನರು ಯಾರು? ಇದರೊಡನೆ ಯುದ್ಧಮಾಡಬಲ್ಲವರು ಯಾರು?” ಎಂದು ಹೇಳುತ್ತಿದ್ದರು.


ಆದಕಾರಣ ನನ್ನ ಭುಜಬಲವನ್ನು ಪ್ರದರ್ಶಿಸುವೆನು. "ಅಲ್ಲಿ ಮಹಾತ್ಕಾರ್ಯಗಳನ್ನು ಮಾಡಿ, ಈಜಿಪ್ಟ್ ದೇಶವನ್ನೆ ನಾನಾವಿಧವಾಗಿ ಬಾಧಿಸುವೆನು. ಆಮೇಲೆ ಅರಸನು ನಿಮ್ಮನ್ನು ಬಿಡುಗಡೆಮಾಡುವನು.


ಇಲ್ಲವಾದರೆ ಈ ಸಾರಿ ವಿಧಿಸುವ ಈ ಬಾಧೆಗಳು ನಿನ್ನ ಪ್ರಜಾಪರಿವಾರದವರಿಗೆ ಮಾತ್ರವಲ್ಲ ನಿನಗೂ ತಗಲುವುದು. ಇದರಿಂದ ಇಡೀ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


ಆತ ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಈಜಿಪ್ಟಿನವರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ ಆ ವಿಷಯದಲ್ಲೇ ಅವರನ್ನು ತಗ್ಗಿಸಿದ್ದಾನೆ. ಆದ್ದರಿಂದ ಸರ್ವೇಶ್ವರ ಸ್ವಾಮಿಯೇ ಎಲ್ಲ ದೇವರುಗಳಿಗಿಂತ ದೊಡ್ಡವರೆಂದು ಈಗ ತಿಳಿದುಕೊಂಡಿದ್ದೇನೆ,” ಎಂದು ಹೇಳಿದನು.


ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಕೂಡದು.


ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವರು! ನಾನು ಕಟ್ಟಿಸುವ ಆಲಯವೂ ದೊಡ್ಡದಾಗಿರಬೇಕು.


“ಇಸ್ರಯೇಲ್ ದೇವರಾದ ಸರ್ವೇಶ್ವರಾ, ಭೂಲೋಕದಲ್ಲೂ ಪರಲೋಕದಲ್ಲೂ ನಿಮಗೆ ಸಮಾನರಾದ ದೇವರಿಲ್ಲ; ಪೂರ್ಣಮನಸ್ಸಿನಿಂದ ನಿಮಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಭಕ್ತರ ಬಗ್ಗೆ ನೀವು ನಿಮ್ಮ ಒಡಂಬಡಿಕೆಯನ್ನು ನೆರವೇರಿಸಿ ಕೃಪೆಯನ್ನು ತೋರಿಸುತ್ತೀರಿ.


ಮಣಿಯಿರಿ, ಪ್ರಭುವಿನಲಿ ಭಯಭಕುತಿಯುಳ್ಳವರೇ I ಭಜಿಸಿರಿ ಇಸ್ರಯೇಲರೇ, ಯಾಕೋಬ ಕುಲಜರೇ II


ನಮ್ಮ ಪ್ರಭು ದೇವನಂತೆ ಯಾರು ಸಮರ್ಥ I ಉನ್ನತದಲಿ ಆಸನಾರೂಢನು ಆತ I ಇಹಪರಗಳನು ವೀಕ್ಷಿಸಲಾತ ಶಕ್ತ II


ಮಹತ್ಕಾರ್ಯವೆಸಗಬಲ್ಲ ಆ ಏಕೈಕನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


ಆರೋನನು ಈಜಿಪ್ಟ್ ದೇಶದಲ್ಲಿ ನೀರಿರುವ ಎಲ್ಲ ಸ್ಥಳಗಳ ಮೇಲೆ ಕೈಚಾಚಲು ಕಪ್ಪೆಗಳು ಹೊರಟುಬಂದು ದೇಶವನ್ನೆಲ್ಲಾ ತುಂಬಿಕೊಂಡವು.


ನಿಮ್ಮ ಮುಂದುಗಡೆಯಲ್ಲೇ ಹೋಗುವ ನಿಮ್ಮ ದೇವರಾದ ಸರ್ವೇಶ್ವರ ಈಜಿಪ್ಟ್ ದೇಶದಲ್ಲೂ ನೀವು ನೋಡಿದ ಮರುಭೂಮಿಯಲ್ಲೂ ಪ್ರತ್ಯಕ್ಷರಾಗಿ ನಿಮ್ಮ ಪರವಾಗಿ ಯುದ್ಧಮಾಡಿದಂತೆಯೇ, ಈಗಲೂ ನಿಮ್ಮ ಕಡೆಯವರಾಗಿದ್ದು ಯುದ್ಧಮಾಡುವರು.


ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೊ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೆ?


ಏಕೆನೆ, ಮಹಾತ್ಮನು ಸರ್ವೇಶ್ವರ ಅತಿ ಸ್ತುತ್ಯರ್ಹನು I ಸಕಲ ದೇವರುಗಳಿಗಿಂತಲೂ ಘನಗಂಭೀರನು II


ನಾಡನು ನಡುಗಿಸಿ ಬಿಡಿಬಿಡಿಯಾಗಿಸಿದೆ I ಅದರೊಡಕನು ಸರಿಮಾಡು ತಡವರಿಸದೆ II


ವರ್ಣಿಸುವೆನು ಪ್ರಭುವಿನ ಮಹತ್ಕಾರ್ಯಗಳೆಲ್ಲವನು I ಸ್ಮರಿಸುವೆ ನೀನಾದಿಯಿಂದ ನಡೆಸಿದ ಅದ್ಭುತಗಳನು II


ಪ್ರಭು, ನೀನೊಬ್ಬನೇ ದೇವನು I ಅದ್ಭುತಶಾಲಿ, ಮಹೋನ್ನತನು II


ನೆನಪಿಗೆ ತಂದುಕೊಳ್ಳಿ ಪ್ರಾಚೀನ ಘಟನೆಗಳನ್ನು ಅರಿತುಕೊಳ್ಳಿ ನಾನೇ ದೇವರು, ಇನ್ನಾರೂ ಇಲ್ಲ ಎಂಬುದನ್ನು ನಾನೇ ಪರಮದೇವರು, ನನಗೆ ಸರಿಸಮಾನವಿಲ್ಲ ಎಂಬುದನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು