ವಿಮೋಚನಕಾಂಡ 15:15 - ಕನ್ನಡ ಸತ್ಯವೇದವು C.L. Bible (BSI)15 ಕಳವಳಗೊಂಡರು ಎದೋಮ್ಯರ ಕುಲನಾಯಕರು ಗಡಗಡನೆ ನಡುಗುತ್ತಿಹರು ಮೋವಾಬ್ಯರ ಮುಖಂಡರು. ಕರಗಿ ನೀರಾಗಿ ಹೋದರು ಕಾನಾನ್ ನಾಡಿನವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಎದೋಮ್ಯರ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಮೋವಾಬ್ಯರ ಸೈನಿಕರು ನಡುಗುವರು; ಕಾನಾನಿನ ನಿವಾಸಿಗಳೆಲ್ಲರೂ ಕರಗಿ ಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಫಿಲಿಷ್ಟಿಯರಿಗೆ ಸಂಕಟವಾಯಿತು; ಎದೋಮ್ಯರ ಕುಲಪತಿಗಳು ಕಳವಳಗೊಂಡರು; ಮೋವಾಬ್ಯರ ಮುಖಂಡರು ಗಡಗಡನೆ ನಡುಗುತ್ತಾರೆ; ಕಾನಾನ್ ದೇಶದವರು ಕರಗಿಹೋದರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಗ ಎದೋಮಿನ ಕುಟುಂಬಗಳು ಭಯಭೀತರಾಗುವರು. ಮೋವಾಬಿನ ನಾಯಕರು ಭಯದಿಂದ ನಡುಗುವರು. ಕಾನಾನಿನ ಜನರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಕಂಪನವು ಮೋವಾಬಿನ ಬಲಿಷ್ಠರನ್ನು ಹಿಡಿಯುವುದು; ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು. ಅಧ್ಯಾಯವನ್ನು ನೋಡಿ |
‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳುವರು. ಆಗ ನೀನು ಅವರಿಗೆ - ‘ದುರ್ವಾರ್ತೆಯ ನಿಮಿತ್ತ ನರಳುತ್ತಿದ್ದೇನೆ; ಇಗೋ, ವಿಪತ್ತು ಬಂದಿತು; ಎಲ್ಲರ ಹೃದಯವು ಕರಗಿ ನೀರಾಗುವುದು, ಎಲ್ಲರ ಕೈ ಜೋಲುಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಅದರುವುದು; ಇಗೋ, ಬಂದಿತು, ಬಂದಾಯಿತು! ಇದು ಸರ್ವೇಶ್ವರನಾದ ದೇವರ ನುಡಿ,’ ಎಂದು ಉತ್ತರಕೊಡು.”