Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:16 - ಕನ್ನಡ ಸತ್ಯವೇದವು C.L. Bible (BSI)

16 ಭಯಭೀತಿ ಅವರನ್ನು ಆವರಿಸಿದೆ ನಿನ್ನ ಭುಜಬಲ ನೋಡಿ ಸ್ತಬ್ದರಾಗಿಹರವರು ಕಲ್ಲಿನಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಭಯವೂ, ಹೆದರಿಕೆಯೂ, ಅವರಿಗುಂಟಾಗುವುದು. ನಿನ್ನ ಭುಜಬಲದ ಶಕ್ತಿಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು. ಅಷ್ಟರಲ್ಲಿ ಯೆಹೋವನೇ, ನೀನು ಕಾಪಾಡಿದ ನಿನ್ನ ಪ್ರಜೆಗಳು ದಾಟಿ ಹೋಗಿ ದೇಶವನ್ನು ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಗಾಬರಿಯೂ ಹೆದರಿಕೆಯೂ ಅವರನ್ನು ಹಿಡಿದವೆ. ನಿನ್ನ ಭುಜಬಲದ ದೆಸೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗಿದ್ದಾರೆ. ಅಷ್ಟರಲ್ಲಿ ಯೆಹೋವನೇ, ನೀನು ಸಂಪಾದಿಸಿಕೊಂಡ ನಿನ್ನ ಪ್ರಜೆಗಳು ಸಾಗಿಹೋಗಿ ದೇಶವನ್ನು ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಿನ್ನ ಭುಜಬಲವನ್ನು ಅವರು ಕಂಡು ಭಯಭೀತರಾಗುವರು. ಯೆಹೋವನ ಜನರು ದಾಟಿ ಹೋಗುವವರೆಗೆ, ನೀನು ರೂಪಿಸಿದ ಜನರು ದಾಟಿ ಹೋಗುವವರೆಗೆ, ಅವರು ಬಂಡೆಯಂತೆ ಮೌನವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಭಯವೂ ಹೆದರಿಕೆಯೂ ಅವರಿಗಾಗುವುದು; ನಿಮ್ಮ ಜನರು ದಾಟಿ ಹೋಗುವವರೆಗೆ ಯೆಹೋವ ದೇವರೇ, ನೀವು ಕೊಂಡುಕೊಂಡ ಜನರು ದಾಟಿಹೋಗುವವರೆಗೆ ನಿಮ್ಮ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:16
34 ತಿಳಿವುಗಳ ಹೋಲಿಕೆ  

ನೆನಸಿಕೊ ಆದಿಯಲೆ ನೀ ಸಂಪಾದಿಸಿಕೊಂಡ ಸಭೆಯನು I ಸ್ಮರಿಸಿಕೊ ಸೊತ್ತಾಗಿ ನೀ ರಕ್ಷಿಸಿಕೊಂಡ ಗೋತ್ರವನು I ಜ್ಞಾಪಿಸಿಕೊ ನಿನ್ನ ಸದನವಾಗಿದ್ದ ಸಿಯೋನ್ ಶಿಖರವನು II


ಲೋಕದಲ್ಲಿರುವ ಎಲ್ಲ ಜನಗಳಿಗೂ ಇಂದಿನಿಂದ ನಿಮ್ಮ ಬಗ್ಗೆ ದಿಗಿಲೂ ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಗಡಗಡನೆ ನಡುಗಿ ಸಂಕಟಪಡುವರು,’ ಎಂದು ಹೇಳಿದರು.


ಮರುದಿನ ಅಮಲಿಳಿದ ನಂತರ ಈಕೆ ಈ ಸಮಾಚಾರವನ್ನು ಅವನಿಗೆ ತಿಳಿಸಿದಳು. ಆಗ ಅವನ ಗುಂಡಿಗೆ ಒಡೆಯಿತು. ಅವನು ಕಲ್ಲಿನಂತಾದನು.


“ಸರ್ವೇಶ್ವರ ಈ ನಾಡನ್ನು ನಿಮಗೆ ಕೊಟ್ಟಿದ್ದಾರೆಂದು ನಾನು ಬಲ್ಲೆ; ನಿಮ್ಮ ವಿಷಯದಲ್ಲಿ ನಮಗೆ ಮಹಾಭೀತಿ ಉಂಟಾಗಿದೆ. ನಾಡಿನ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆ.


ಇಸ್ರಯೇಲ್ ಜನರಲ್ಲೇ ಕಪಟ ಪ್ರವಾದಿಗಳು ಕಾಣಿಸಿಕೊಂಡರು. ಅಂತೆಯೇ, ನಿಮ್ಮಲ್ಲೂ ಸುಳ್ಳುಬೋಧಕರು ಕಾಣಿಸಿಕೊಳ್ಳುವರು. ಹಾನಿಕರವಾದ ದುರ್ಬೋಧನೆಗಳನ್ನು ಗೋಪ್ಯವಾಗಿ ಪ್ರಸರಿಸುವರು. ಒತ್ತೆಯಿಟ್ಟು ತಮ್ಮನ್ನು ರಕ್ಷಿಸಿದ ಒಡೆಯನನ್ನೇ ಅರಿಯೆವೆಂದು ನಿರಾಕರಿಸುವರು. ಹೀಗೆ ತಮ್ಮ ವಿನಾಶವನ್ನು ತಾವೇ ಬೇಗನೆ ಬರಮಾಡಿಕೊಳ್ಳುವರು.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಸರ್ವೇಶ್ವರ ಯಕೋಬರ ವಿಮೋಚಕ ಅವರನ್ನು ಅವರಿಗಿಂತ ಬಲಿಷ್ಠರ ಕೈಯಿಂದ ಬಿಡಿಸಿದಾತ.


ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ. ನೀವು ಕಾಲಿಡುವ ಎಲ್ಲ ಪ್ರದೇಶಗಳ ಜನಗಳಿಗೂ ನಿಮ್ಮಿಂದ ದಿಗಿಲೂ ಹೆದರಿಕೆಯೂ ಉಂಟಾಗುವ ಹಾಗೆ ನಿಮ್ಮ ದೇವರಾದ ಸರ್ವೇಶ್ವರ ತಾನೇ ಹೇಳಿರುವಂತೆ ಮಾಡುವರು.


ಆದರೆ ಇಸ್ರಯೇಲರಲ್ಲಿರುವ ಮನುಷ್ಯನ ವಿರುದ್ಧವಾಗಲಿ, ಪ್ರಾಣಿಯ ವಿರುದ್ಧವಾಗಲಿ, ಒಂದು ನಾಯಿ ಕೂಡ ಬೊಗಳುವುದಿಲ್ಲ. ಇದರಿಂದ ಸರ್ವೇಶ್ವರ ಇಸ್ರಯೇಲರಿಗೂ ಈಜಿಪ್ಟಿನವರಿಗೂ ತಾರತಮ್ಯ ಮಾಡಿದ್ದಾರೆಂದು ನಿಮಗೆ ಗೊತ್ತಾಗುವುದು.


ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


ಸಮುದ್ರ ಜನರಾಶಿಗಳನು ಬತ್ತಿಸಿದ ಬಾಹು ನೀನು ವಿಮುಕ್ತ ಜನ ಹಾಯುವಂತೆ ಸಮುದ್ರದಲಿ ದಾರಿಮಾಡಿದೆ ನೀನು.


ತಮ್ಮ ಇಸ್ರಯೇಲ್ ಪ್ರಜೆಗೆ ಸಮಾನಾದ ಜನಾಂಗ ಲೋಕದಲ್ಲಿ ಯಾವುದಿದೆ? ತಾವೇ ಬಂದು ಅದನ್ನು ವಿಮೋಚಿಸಿ, ಸ್ವಪ್ರಜೆಯನ್ನಾಗಿಸಿಕೊಂಡು, ನಿಮ್ಮ ನಾಮವನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟರು ಹಾಗು ಇತರ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ, ರಕ್ಷಿಸಿ, ಅವುಗಳ ಕಣ್ಮುಂದೆಯೇ ನಿಮ್ಮ ನಾಡಿನವರ ಪರವಾಗಿ ವಿಸ್ಮಯಕರವಾದ ಮಹತ್ಕಾರ್ಯಗಳನ್ನು ನಡೆಸಿದಿರಿ.


ಕಾಯುವನಾತ ತನ್ನ ಭಕ್ತರನು ಹೆಜ್ಜೆ ಹೆಜ್ಜೆಗು ದುರುಳರಾದರೋ ಮುಳುಗಿ ಮೌನ ತಾಳುವರು ಅಂಧಕಾರದೊಳು. ಕೇವಲ ಭುಜಬಲದಿಂದ ಜಯಹೊಂದಲಾರನು ನರಮಾನವನು!


ಇಸ್ರಯೇಲರು ಮಾತ್ರ ಸ್ವಜನರಾದರು ಸರ್ವೇಶ್ವರನಿಗೆ, ಸ್ವಕೀಯ ಪ್ರಜೆಯಾದರು ಆ ಯಕೋಬ ವಂಶಜರು ಆತನಿಗೆ.


ದುರಾಚಾರಿಗಳೇ, ಅವಿವೇಕಿಗಳೇ, ಸರ್ವೇಶ್ವರನ ಬಗ್ಗೆ ಹೀಗೆ ವರ್ತಿಸಬಹುದೇ? ಆತ ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೆ? ನಿಮ್ಮನ್ನೊಂದು ರಾಷ್ಟ್ರವಾಗಿ ಸ್ಥಾಪಿಸಿದವನಲ್ಲವೆ?


ನೀವು ಹೋಗುವ ಎಲ್ಲ ಕಡೆಯಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನು ಹುಟ್ಟಿಸಿ, ಕಳವಳವನ್ನು ಉಂಟುಮಾಡಿ, ನಿಮ್ಮನ್ನು ವಿರೋಧಿಸುವವರು ಓಡಿಹೋಗುವಂತೆ ಮಾಡುವೆನು.


ಅವರು ಪ್ರಯಾಣಮಾಡುತ್ತಿದ್ದಾಗ ದೇವರು ಸುತ್ತಮುತ್ತಣದ ಊರಿನವರಲ್ಲಿ ಭಯ ಹುಟ್ಟಿಸಿದರು. ಇದರಿಂದಾಗಿ ಆ ಊರಿವನರಾರೂ ಯಕೋಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.


ಮುಚ್ಚಿಬಿಟ್ಟಿತವರನು ಸಮುದ್ರ ಸಾಗರವು ಸೇರಿದರವರು ಕಲ್ಲಿನೋಪಾದಿ ಕಡಲಿನ ತಳವನು.


ಹೇ ಸರ್ವೇಶ್ವರಾ, ನಿನ್ನ ಭುಜಬಲ ಶಕ್ತಿಯುತ! ಪುಡಿ ಪುಡಿ ಮಾಡಿತು ನಿನ್ನ ಶತ್ರುಗಳನು ಆ ಬಾಹುಬಲ!


ನೀ ಬಿಡುಗಡೆ ಮಾಡಿದ ಜನರನ್ನು ನಡೆಸಿಕೊಂಡೆ ಪ್ರೀತಿಯಿಂದ ನಿನ್ನ ಶ್ರೀನಿವಾಸದ ತನಕ ಅವರನ್ನು ಬರಮಾಡಿದೆ ಶಕ್ತಿಯಿಂದ.


ಸರ್ವೇಶ್ವರ ಸ್ವಾಮಿ ಇಸ್ರಯೇಲರ ಪರವಾಗಿ ಫರೋಹನಿಗೂ ಈಜಿಪ್ಟಿನವರಿಗೂ ಮಾಡಿದ್ದೆಲ್ಲವನ್ನೂ ಮತ್ತು ದಾರಿಯಲ್ಲಿ ತಮಗುಂಟಾದ ಎಲ್ಲ ಕಷ್ಟದುಃಖಗಳನ್ನು ಹಾಗು ಸರ್ವೇಶ್ವರ ಹೇಗೆ ಅವುಗಳಿಂದ ಕಾಪಾಡಿದರೆಂಬುದನ್ನು ಮೋಶೆ ತನ್ನ ಮಾವನಿಗೆ ವಿವರಿಸಿದನು.


“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.


“ಇಗೋ, ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೆ ಹಾಗು ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆದುತರುವುದಕ್ಕೆ ಒಬ್ಬ ದೂತನನ್ನು ನಿಮ್ಮ ಮುಂದೆ ಕಳಿಸುತ್ತೇನೆ.


ಇಸ್ರಯೇಲರಿಗೆ ಹೀಗೆ ಆಜ್ಞಾಪಿಸು; ಸೇಯೀರ್ ನಾಡಿನಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ನಾಡನ್ನು ದಾಟುವುದಕ್ಕಿದ್ದೀರಿ. ಅವರು ನಿಮಗೆ ಅಂಜುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.


ಇದರಿಂದ ಭೂನಿವಾಸಿಗಳೆಲ್ಲರು ಸರ್ವೇಶ್ವರನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವರು. ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಯಾವಾಗಲೂ ಭಯಭಕ್ತಿಯುಳ್ಳವರಾಗಿರುವರು.


ಭೀತಿಯಿತ್ತಾ ಈಜಿಪ್ಟರಿಗೆ ಇಸ್ರಯೇಲರ ಬಗ್ಗೆ I ಈ ಕಾರಣ ಆನಂದಿಸಿದರು ಅವರು ಹೋದುದಕ್ಕೆ II


ಮೋಶೆಯ ಬಲಗೈಗೆ ತಮ್ಮ ಮಹಿಮಾ ಭುಜಬಲವನ್ನು ನೀಡಿದ ಸ್ವಾಮಿ ಎಲ್ಲಿ? ಆತನ ಕೈಯಿಂದ ಜಲರಾಶಿಯನ್ನು ಆ ಜನರ ಕಣ್ಮುಂದೆ ಇಬ್ಬಾಗಿಸಿದ ಸ್ವಾಮಿ ಎಲ್ಲಿ? ಹೀಗೆ ತಮ್ಮ ಹೆಸರನ್ನು ಶಾಶ್ವತವಾಗಿಸಿಕೊಂಡ ಸ್ವಾಮಿ ಎಲ್ಲಿ?


ನಾನು ನಿಮ್ಮನ್ನು ನನ್ನ ಪ್ರಜೆಯಾಗಿ ಮಾಡುವೆನು; ನಾನು ನಿಮ್ಮ ದೇವರಾಗಿರುವೆನು. ಈಜಿಪ್ಟಿನವರು ಹೊರಿಸುವ ದುಡಿಮೆಯನ್ನು ನಾನು ನಿಮ್ಮಿಂದ ಬಿಡಿಸಿದಾಗ ಸರ್ವೇಶ್ವರ ಎಂಬ ನಾನೇ ನಿಮ್ಮ ದೇವರೆಂದು ನಿಮಗೆ ತಿಳಿದುಬರುವುದು.


ನೀವು ಆತನ ಮಾತನ್ನು ಶ್ರದ್ಧೆಯಿಂದ ಆಲಿಸಿ, ನನ್ನ ಆಶೆಗಳನ್ನೆಲ್ಲ ಪಾಲಿಸಿದರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.


ನೀತಿನ್ಯಾಯ ನಿನ್ನ ಸಿಂಹಾಸನದಸ್ತಿವಾರ I ಪ್ರೀತಿಸತ್ಯತೆ ನಿನ್ನ ಸಾನ್ನಿಧ್ಯ ಪರಿವಾರ II


“ನಾನು ಪುನಃ ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದೆ; ಆಗ ನಾನು ನನ್ನ ಹೊದಿಕೆಯ ಸೆರಗನ್ನು ನಿನಗೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡೆ. ಆದ್ದರಿಂದ ನೀನು ನನ್ನವಳಾದೆ; ಇದು ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು