Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:19 - ಕನ್ನಡ ಸತ್ಯವೇದವು C.L. Bible (BSI)

19 ಫರೋಹನ ಕುದುರೆಗಳು, ರಥಗಳು ಹಾಗು ರಾಹುತರು ಸಮುದ್ರವನ್ನು ಹೊಕ್ಕು ನಡೆಯಲಾರಂಭಿಸಿದಾಗ ಸರ್ವೇಶ್ವರ ಸ್ವಾಮಿ ಸಮುದ್ರದ ನೀರನ್ನು ಮೊದಲಿನಂತೆ ಬರಮಾಡಿ ಅವರನ್ನು ಮುಳುಗಿಸಿಬಿಟ್ಟರು. ಇಸ್ರಯೇಲರಾದರೋ, ಸಮುದ್ರದ ನಡುವೆ ಒಣನೆಲದಲ್ಲಿ ನಡೆದು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಫರೋಹನ ಕುದುರೆಗಳು, ರಥಗಳೂ, ರಾಹುತರೂ ಸಮುದ್ರದೊಳಗೆ ಬಂದಾಗ ಯೆಹೋವನು ಸಮುದ್ರದ ನೀರನ್ನು ಅವರ ಮೇಲೆ ತಿರುಗಿ ಬರಮಾಡಿ ಮುಳುಗಿಸಿಬಿಟ್ಟನು. ಆದರೆ ಇಸ್ರಾಯೇಲರಾದರೋ ಸಮುದ್ರದ ಮಧ್ಯದಲ್ಲಿನ ಒಣ ನೆಲದ ಮೇಲೆ ದಾಟಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 [ಈ ಜಯಗೀತಕ್ಕೆ ಕಾರಣವೇನಂದರೆ -] ಫರೋಹನ ಕುದುರೆಗಳೂ ರಥಗಳೂ ರಾಹುತರೂ ಸಮುದ್ರದಲ್ಲಿ ಹೊಕ್ಕು ನಡೆಯಲು ಯೆಹೋವನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರಮಾಡಿ ಮುಳುಗಿಸಿಬಿಟ್ಟನು; ಇಸ್ರಾಯೇಲ್ಯರಾದರೋ ಸಮುದ್ರದ ಮಧ್ಯದೊಳಗೆ ಒಣನೆಲದಲ್ಲಿ ನಡೆದುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಫರೋಹನ ಕುದುರೆಗಳು, ಸವಾರರು, ರಥಗಳು ಸಮುದ್ರದೊಳಕ್ಕೆ ಹೋದಾಗ ಸಮುದ್ರದ ನೀರು ಅವರನ್ನು ಆವರಿಸಿಕೊಳ್ಳುವಂತೆ ಯೆಹೋವನು ಮಾಡಿದನು. ಆದರೆ ಇಸ್ರೇಲರು ಸಮುದ್ರದೊಳಗಿನ ಒಣನೆಲದ ಮೇಲೆ ನಡೆದು ಸಮುದ್ರವನ್ನು ದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಫರೋಹನ ಕುದುರೆಗಳು ಅವನ ರಥಗಳ ಮತ್ತು ಸವಾರರ ಸಂಗಡ ಸಮುದ್ರದೊಳಗೆ ಬಂದಾಗ, ಯೆಹೋವ ದೇವರು ಸಮುದ್ರದ ನೀರನ್ನು ಅವರ ಮೇಲೆ ತಿರುಗಿ ಬರಮಾಡಿದರು. ಆದರೆ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿನ ಒಣನೆಲದ ಮೇಲೆ ದಾಟಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:19
6 ತಿಳಿವುಗಳ ಹೋಲಿಕೆ  

ವಿಶ್ವಾಸದಿಂದಲೇ ಇಸ್ರಯೇಲರು ಒಣನೆಲವನ್ನು ದಾಟುವಂತೆ, ಕೆಂಪು ಸಮುದ್ರವನ್ನು ದಾಟಿದರು. ಈಜಿಪ್ಟಿನವರು ಹಾಗೆಯೇ ದಾಟಲೆತ್ನಿಸಿದಾಗ ನೀರಿನ ಪಾಲಾದರು.


ಯುದ್ಧಕ್ಕಾಗಿ ಸನ್ನದ್ಧವಾಗಿರಬಹುದು ಅಶ್ವಬಲ; ಜಯಸಿಗುವುದಾದರೋ ಸರ್ವೇಶ್ವರನಿಂದ.


ಅಶ್ವರಥಭಟಸೈನ್ಯಗಳನ್ನು ಹೊರಡಿಸಿದವನಾರೋ, ಅವು ಬಿದ್ದು ಏಳಲಾಗದೆ, ಬತ್ತಿಕರಗಿಹೋಗುವಂತೆ ಮಾಡಿದವನಾರೋ, ಆ ಸ್ವಾಮಿ ಸರ್ವೇಶ್ವರ ನುಡಿದ ಮಾತಿದೋ;


ನಿಮ್ಮ ದೇವರಾದ ಸರ್ವೇಶ್ವರ ನಮ್ಮ ಕಣ್ಮುಂದೆ ಕೆಂಪುಸಮುದ್ರವನ್ನು ಬತ್ತಿಸಿ, ನಮ್ಮನ್ನು ದಾಟಿಸಿದಂತೆ ಈಗ ನಿಮ್ಮ ಕಣ್ಮುಂದೆಯೇ ಈ ಜೋರ್ಡನನ್ನು ಬತ್ತಿಸಿ, ನಿಮ್ಮನ್ನು ದಾಟಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು