Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:2 - ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರನೇ ನನ್ನ ಶಕ್ತಿ, ನನ್ನ ಗೀತೆ! ಆತನಿಂದಲೇ ನನಗೆ ದೊರಕಿತು ರಕ್ಷಣೆ. ಆತನನ್ನು ವರ್ಣಿಸುವೆನು, ಆತನೆನ್ನ ದೇವನು ಆತನನ್ನು ಸ್ತುತಿಸುವೆನು, ಆತನೆನ್ನ ಪಿತೃಗಳ ದೇವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಬಲವೂ, ಕೀರ್ತನೆಯೂ ಯಾಹುವೇ. ಆತನಿಂದ ನನಗೆ ರಕ್ಷಣೆ ಉಂಟಾಯಿತು. ನಮ್ಮ ದೇವರು ಆತನೇ, ಆತನನ್ನು ಸ್ತುತಿಸುವೆನು, ನಮ್ಮ ಪೂರ್ವಿಕರ ದೇವರು ಆತನೇ, ಆತನ ಮಹಿಮೆಯನ್ನು ಪ್ರಖ್ಯಾತಿಪಡಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನ ಬಲವೂ ಕೀರ್ತನೆಯೂ ಯಾಹುವೇ, ಆತನಿಂದ ನನಗೆ ರಕ್ಷಣೆಯುಂಟಾಯಿತು. ನಮ್ಮ ದೇವರು ಆತನೇ, ಆತನನ್ನು ವರ್ಣಿಸುವೆವು; ನಮ್ಮ ಪಿತೃಗಳ ದೇವರು ಆತನೇ, ಆತನ ಮಹಿಮೆಯನ್ನು ಪ್ರಖ್ಯಾತಿಪಡಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನೇ ನನ್ನ ಬಲ, ಆತನು ನನ್ನನ್ನು ರಕ್ಷಿಸುತ್ತಾನೆ. ನನ್ನ ಬಲವೂ ಕೀರ್ತನೆಯೂ ಯಾಹುವೇ; ಆತನಿಂದ ನನಗೆ ರಕ್ಷಣೆ ಆಯಿತು. ಯೆಹೋವನು ನನ್ನ ದೇವರು. ಮತ್ತು ನಾನು ಆತನನ್ನು ಸ್ತುತಿಸುತ್ತೇನೆ. ಯೆಹೋವನೇ ನಮ್ಮ ಪೂರ್ವಿಕರ ದೇವರು. ನಾನು ಆತನನ್ನು ಸನ್ಮಾನಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಯೆಹೋವ ದೇವರು ನನ್ನ ಬಲವೂ ಕೀರ್ತನೆಯೂ ಆಗಿದ್ದಾರೆ; ಅವರು ನನ್ನ ರಕ್ಷಣೆಯಾದರು; ಅವರು ನನ್ನ ದೇವರು, ಅವರನ್ನು ಕೊಂಡಾಡುವೆನು; ಅವರು ನನ್ನ ತಂದೆಯ ದೇವರು, ನಾನು ಅವರನ್ನು ಘನಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:2
64 ತಿಳಿವುಗಳ ಹೋಲಿಕೆ  

ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ಪ್ರಭುವೇ ನನಗೆ ಬಲವು, ಧೈರ್ಯವು I ಆತನಿಂದಲೇ ನನಗೆ ಉದ್ಧಾರವು II


ಸರ್ವೇಶ್ವರನು ಚೈತನ್ಯಸ್ವರೂಪನು I ನನ್ನುದ್ಧಾರಕನಾದವಗೆ ಸ್ತುತಿಸ್ತೋತ್ರವು I ನನ್ನ ರಕ್ಷಿಸುವ ದೇವರಿಗೆ ಜಯಕಾರವು II


ನೀನೆನ್ನ ಶಕ್ತಿದೇವಾ, ನಿನಗೆನ್ನ ಸ್ತುತಿ I ನೀನೆನ್ನ ದುರ್ಗ, ತೋರಿಸು ಎನಗೆ ಪ್ರೀತಿ II


ಸರ್ವೇಶ್ವರಾ, ನೀನೆನ್ನ ದೇವನು, ಏಕೆನೆ ನೀನು ಸತ್ಯಸ್ವರೂಪನು, ನಿಷ್ಟಾವಂತನು, ಆದಿ ಯೋಜನೆಗಳನು ಪೂರೈಸುವವನು, ಅದ್ಭುತಕಾರ್ಯಗಳನು ಎಸಗಿದಂತವನು. ಘನಪಡಿಸುವೆ ನಾ ನಿನ್ನನು, ಸ್ತುತಿಸುವೆನು ನಿನ್ನ ನಾಮ ಮಹಿಮೆಯನು.


ಸ್ವಾಮಿದೇವಾ, ನೀನೆನಗೆ ದುರ್ಗಸ್ಥಾನ I ರಣರಂಗದಲಿ ನೀನೆನಗೆ ಶಿರಸ್ತ್ರಾಣ II


ಘನಪಡಿಸಿರೆಮ್ಮ ಸ್ವಾಮಿ ದೇವನನು I ಶ್ರೀಪರ್ವತದಲಿ ವಂದಿಸಿ ಆತನನು I ಪರಮಪವಿತ್ರನು ಆ ನಮ್ಮ ದೇವನು II


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


‘ಕ್ರಿಸ್ತಯೇಸುವೇ ಪ್ರಭು' ಎಂದೆಲ್ಲರಿಗೆ ಅರಿಕೆ ಮಾಡುವರು ಪಿತದೇವನ ಮಹಿಮೆಯನು ಈ ಪರಿ ಹೊಗಳಿ ಸಾರುವರವರು.


ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ I ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ II


ಪರಮ ಪಾವನನು ನಮ್ಮೀ ಸ್ವಾಮಿ ದೇವನು I ಹೊಗಳಿರಿ, ಆತನ ಪಾದಪೀಠಕೆ ಅಡ್ಡಬೀಳಿರಿ ನೀವೆಲ್ಲರು II


ಬನ್ನಿ, ಕೊಂಡಾಡುವ ಪ್ರಭು ದೇವನನು II ಘನಪಡಿಸೋಣ ಅವನ ಶ್ರೀನಾಮವನು II


ಅವರೊಬ್ಬರೇ ನಿಮ್ಮ ಸ್ತುತಿಸ್ತೋತ್ರಕ್ಕೆ ಪಾತ್ರರು; ಅವರು ನಿಮ್ಮ ದೇವರು; ನೀವು ನೋಡಿದ ಆ ಮಹಾಭಯಂಕರವಾದ ಮಹತ್ಕಾರ್ಯಗಳನ್ನು ನಿಮ್ಮ ಪರವಾಗಿ ನಡೆಸಿದವರು ಅವರೇ.


ಅದೂ ಅಲ್ಲದೆ, “ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಕೋಬನ ದೇವರು,” ಎಂದರು. ಆಗ ಮೋಶೆ ದೇವರನ್ನು ದಿಟ್ಟಿಸಿ ನೋಡಲು ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ಹೌದು, ದೇವರು ಮಾನವರ ಅಪರಾಧಗಳನ್ನು ಲೆಕ್ಕಿಸದೆ, ಕ್ರಿಸ್ತಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಡನೆ ಸಂಧಾನಗೊಳಿಸುತ್ತಿದ್ದಾರೆ. ಈ ಸಂಧಾನದ ಸಂದೇಶವನ್ನು ಸಾರುವ ಸೌಭಾಗ್ಯವನ್ನು ಅವರೇ ನಮಗೆ ಕೊಟ್ಟಿದ್ದಾರೆ.


ಇವರಿಂದಲ್ಲದೆ ಬೇರಾರಿಂದಲೂ ನಮಗೆ ಜೀವೋದ್ಧಾರವಿಲ್ಲ. ಇವರ ನಾಮವನ್ನು ಬಿಟ್ಟರೆ ಈ ಧರೆಯಲ್ಲಿರುವ ಬೇರೆ ಯಾವ ನಾಮದಿಂದಲೂ ನಾವು ಜೀವೋದ್ಧಾರ ಹೊಂದುವಂತಿಲ್ಲ.”


ದೇವಾ, ನನ್ನೊಡೆಯಾ, ಮಾಡುವೆ ನಿನ್ನ ಗುಣಗಾನ I ಯುಗಯುಗಾಂತರಕ್ಕೂ ನಿನ್ನ ನಾಮಕ್ಕೆ ನಮನ II


ಸರ್ವೇಶ್ವರನು ಚೈತನ್ಯಸ್ವರೂಪನು ನನ್ನುದ್ಧಾರಕನವಗೆ ಸ್ತುತಿಸ್ತೋತ್ರವು ನನ್ನಾಶ್ರಯಸಿರಿ ದೇವಗೆ ಜಯಕಾರವು.


ಅದಕ್ಕೆ ಮೋಶೆ ಆ ಜನರಿಗೆ, “ಅಂಜಬೇಡಿ, ಸುಮ್ಮನಿರಿ, ಈ ದಿನ ಸರ್ವೇಶ್ವರ ನಿಮ್ಮನ್ನು ಹೇಗೆ ರಕ್ಷಿಸುತ್ತಾರೆಂದು ನೋಡಿ! ಈ ದಿನ ನೀವು ನೋಡುವ ಈಜಿಪ್ಟಿನವರನ್ನು ಇನ್ನೆಂದಿಗೂ ನೋಡುವುದಿಲ್ಲ.


ಆಗ ನೀನು ಅವನಿಗೆ ತಿಳಿಸಬೇಕಾದುದು, 'ಸರ್ವೇಶ್ವರನು ಹೇಳುವುದನ್ನು ಕೇಳು: ಇಸ್ರಯೇಲ್ ಜನತೆ ನನಗೆ ಮಗನಂತೆ, ಜ್ಯೇಷ್ಠಪುತ್ರನಂತಿದೆ.


ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನೀವು ಸಹ ಇತರರೆಲ್ಲರೊಡನೆ ದೇವರ ನಿವಾಸಕ್ಕೆ ತಕ್ಕ ಮಂದಿರವಾಗಿ ಪವಿತ್ರಾತ್ಮ ಅವರಿಂದ ಕಟ್ಟಲ್ಪಡುತ್ತಿದ್ದೀರಿ.


ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ಹೇ ದೇವಾ, ನೀ ಸ್ತುತಿಗೆ ಯೋಗ್ಯ I ನೀನು ಸುಮ್ಮನಿರುವುದು ಸರಿಯಾ? II


ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II


ಆಗ ಮೇಘವೊಂದು ದೇವದರ್ಶನದ ಗುಡಾರವನ್ನು ಮುಚ್ಚಿತು; ಸರ್ವೇಶ್ವರನ ತೇಜಸ್ಸು ಗುಡಾರವನ್ನು ತುಂಬಿತು.


ಇದಾದ ಬಳಿಕ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದಿಂದ ಬಂದ ಒಂದು ಮಹಾಶಬ್ದವನ್ನು ಆಲಿಸಿದೆ. ಅದು ದೊಡ್ಡ ಜನಸಮೂಹದ ಆರ್ಭಟದಂತಿತ್ತು. “ಅಲ್ಲೆಲೂಯ ! ಜೀವೋದ್ಧಾರವೂ ಪ್ರಭಾವವೂ ಶಕ್ತಿಯೂ ನಮ್ಮ ದೇವರಲ್ಲುಂಟು.


ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.


ನೀವು ಆರಾಧಿಸುವುದು ಯಾರೆಂದು ನಿಮಗೇ ತಿಳಿಯದು. ನಾವು ಆರಾಧಿಸುವುದು ಯಾರೆಂದು ನಮಗೆ ತಿಳಿದಿದೆ. ಏಕೆಂದರೆ ಲೋಕೋದ್ಧಾರಕ ಬರುವುದು ಯೆಹೂದ್ಯರಿಂದಲೇ.


ನೀನಿತ್ತ ಉದ್ಧಾರಕನನು ನಾ ಕಂಡೆ ಕಣ್ಣಾರೆ


ಸರ್ವೇಶ್ವರನ ಮಾರ್ಗವನು ಸಜ್ಜುಗೊಳಿಸುವೆ, ಮುಂದಾಗಿ ತೆರಳಿ II ಪಾಪಕ್ಷಮೆಯನು ಸಾರುವೆ ಆತನ ಪ್ರಜೆಗೆ I ಈ ಮೂಲಕ ಜೀವೋದ್ಧಾರದ ಜ್ಞಾನವನ್ನೀಯುವೆ ಆ ಜನರಿಗೆ II


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಅವರು ನನಗೆ ಪ್ರಜೆಯಾಗಿರುವರು. ನಾನು ಅವರಿಗೆ ದೇವರಾಗಿರುವೆನು.


ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಜನರು : “ಇಗೋ, ನಿಮಗೆ ಅಭಿಮುಖರಾಗಿ ಬಂದಿದ್ದೇವೆ. ನೀವೇ ನಮ್ಮ ಸರ್ವೇಶ್ವರ, ನಮ್ಮ ದೇವರು. ನಿಶ್ಚಯವಾಗಿ ಬೆಟ್ಟಗುಡ್ಡಗಳಿಂದಲೂ ಜಾತ್ರೆಜಂಗುಳಿಯಿಂದಲೂ ನಮಗೆ ಮೋಸವಾಯಿತು. ಇಸ್ರಯೇಲಿನ ಉದ್ಧಾರ ಇರುವುದು ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯ ಕೈಯಲ್ಲೇ, ಇದು ಸತ್ಯಕ್ಕೂ ಸತ್ಯ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಆಕಾಶವೇ ನನಗೆ ಸಿಂಹಾಸನವಾಗಿರಲು, ಭೂಮಿಯೇ ನನಗೆ ಪಾದಪೀಠವಾಗಿರಲು ನೀವು ನನಗೆ ಕಟ್ಟುವ ಮನೆ ಇನ್ನು ಎಂಥದ್ದು? ನನ್ನ ವಿಶ್ರಾಂತಿಗೆ ತಕ್ಕ ಸ್ಥಳ ಯಾವುದು?


ಇಸ್ರಯೇಲಿಗಾದರೋ, ದೊರೆವುದು ಶಾಶ್ವತ ರಕ್ಷಣೆ ಸರ್ವೇಶ್ವರನಿಂದ; ಯುಗಯುಗಾಂತರಕ್ಕೂ ಅದಕ್ಕಾಗದು ಲಜ್ಜೆ, ಮಾನಭಂಗ.”


ಮುಚ್ಚೆನು ನಾನು ಕಣ್ಣುಗಳನು I ಕೂಡಿಸೆನು ನಾನು ರೆಪ್ಪೆಗಳನು” II


ನಮ್ಮ ದೇವರು ಜೀವೋದ್ಧಾರಕ ದೇವರು ಹೌದು I ಸಾವಿಂದ ತಪ್ಪಿಸುವ ಶಕ್ತಿ, ಸ್ವಾಮಿ ದೇವರದು II


ನಿನಗೆನ್ನ ವಂದನೆ ಪ್ರಭು, ನನ್ನನುದ್ಧರಿಸಿದೆ I ಶತ್ರುಗಳೆನ್ನ ಕುರಿತು ಹಿಗ್ಗದಂತೆ ಮಾಡಿದೆ II


ಪ್ರಭುವೆ ತನ್ನ ಪ್ರಜೆಯ ಪ್ರಾಬಲ್ಯವು I ತನ್ನಭಿಷಿಕ್ತನಿಗೆ ಆಶ್ರಯ ದುರ್ಗವು II


ಆಗರ್ಭದಿಂದಲೆ ನೀನೆನಗಧಾರ I ತಾಯಿ ಹೆತ್ತಂದಿನಿಂದಲೇ ಕರ್ತಾರ II


ಆದರೂ ದೇವಾ, ನೀನಂತು ಪರಮಪೂಜ್ಯನು I ಇಸ್ರಯೇಲರ ಸ್ತುತ್ಯ ಸಿಂಹಾಸನದಲಿ ಆಸೀನನು II


“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ, ಉನ್ನತೋನ್ನತ ಆದ ಆಕಾಶವೂ, ನಿಮ್ಮ ವಾಸಕ್ಕೆ ಸಾಲದು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?


ತಾನೇ ನೇಮಿಸಿದ ಅರಸನಿಗೆ ಆತನೀವನು ವಿಶೇಷ ರಕ್ಷಣೆ.


“ನೀನು ಹೋಗಿ ನನ್ನ ದಾಸ ದಾವೀದನಿಗೆ ತಿಳಿಸಬೇಕಾದುದು ಇದು: ‘ನೀನು ನನಗೊಂದು ದೇವಾಲಯವನ್ನು ಕಟ್ಟಬೇಕೆಂದಿರುವೆಯೋ?


ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.


ದೈವತ್ವದ ಸಂಪೂರ್ಣತೆ ಸಶರೀರವಾಗಿ ಯೇಸುಕ್ರಿಸ್ತರಲ್ಲಿ ನೆಲೆಗೊಂಡಿದೆ.


ಸರ್ವೇಶ್ವರಾ, ಎದುರುನೋಡುತ್ತಿರುವೆನು ನಿನ್ನಿಂದ ಬರುವಾ ಸಂರಕ್ಷಣೆಯನು.


ಶತ್ರುಗಳನು ಕೊಚ್ಚಿಕೊಂಡು ಹೋಯಿತು ಪೂರ್ವಪ್ರಸಿದ್ಧವಾದ ಆ ಕೀಷೋನ್ ಹೊಳೆಯು. ನನ್ನ ಮನವೇ, ನೀ ಧೈರ್ಯದಿಂದ ಮುಂದೆ ಸಾಗು.


ಆಗ ತಿಳಿಸಿರಿ ಮುಂದಣ ಪೀಳಿಗೆಗಿಂತೆಂದು - “ಈತನೀತನೇ ನಮ್ಮ ದೇವನು ಯುಗಯುಗಕು I ನಮಗೀತ ಮಾರ್ಗದರ್ಶಕ ತಲತಲಾಂತರಕು” II


ಹೊರಟಿರುವೆ ನಿನ್ನ ಪ್ರಜೆಗಳ ರಕ್ಷಣೆಗೆ ನಿನ್ನ ಅಭಿಷಿಕ್ತನ ಜೀವೋದ್ಧಾರಕೆ. ಬಡಿದುಹಾಕಿರುವೆ ದುರುಳನ ಬುರುಡೆಯನು ನೆಲಸಮಮಾಡಿರುವೆ ಅವನ ಮನೆಯನು.


ನಾನು ನಿಮ್ಮನ್ನು ನನ್ನ ಪ್ರಜೆಯಾಗಿ ಮಾಡುವೆನು; ನಾನು ನಿಮ್ಮ ದೇವರಾಗಿರುವೆನು. ಈಜಿಪ್ಟಿನವರು ಹೊರಿಸುವ ದುಡಿಮೆಯನ್ನು ನಾನು ನಿಮ್ಮಿಂದ ಬಿಡಿಸಿದಾಗ ಸರ್ವೇಶ್ವರ ಎಂಬ ನಾನೇ ನಿಮ್ಮ ದೇವರೆಂದು ನಿಮಗೆ ತಿಳಿದುಬರುವುದು.


ಇಸ್ರಯೇಲರು ಸದಾಕಾಲ ನಿಮ್ಮ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದಿರಿ; ಸರ್ವೇಶ್ವರಾ, ತಾವಾದಿರಿ ಅವರಿಗೆ ದೇವರು!


ಆತನೇ ನನಗೆ ದೇವರು, ನನ್ನಾಶ್ರಯಗಿರಿ, ನನ್ನ ರಕ್ಷಣಾಶೃಂಗ, ನನ್ನ ದುರ್ಗ, ನನ್ನ ಗುರಾಣಿ.


ಸರ್ವೇಶ ನಮ್ಮ ದೇವನೆಂಬುದು ಪ್ರಕಟಿತ I ಆತನಿತ್ತ ತೀರ್ಪು ವಿಶ್ವವ್ಯಾಪ್ತ II


ಸದುತ್ತರ ಪಾಲಿಸಿದ ಪ್ರಭೂ, ನಿನಗೆ ವಂದನೆ I ಉದ್ಧಾರ ಮಾಡಿದೆ, ನಿನಗೆ ಕೃತಜ್ಞತಾವಂದನೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು