Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:20 - ಕನ್ನಡ ಸತ್ಯವೇದವು C.L. Bible (BSI)

20 ಆರೋನನ ಅಕ್ಕ ಮಿರ್ಯಾಮಳು ಒಬ್ಬ ಪ್ರವಾದಿನಿ. ಆಕೆ ತಮ್ಮಟೆಯನ್ನು ಕೈಗೆ ತೆಗೆದುಕೊಂಡಳು. ಮಹಿಳೆಯರೆಲ್ಲರು ತಮ್ಮಟೆ ಹಿಡಿದು ನಾಟ್ಯವಾಡುತ್ತಾ ಆಕೆಯ ಹಿಂದೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ಕೈಗಳಲ್ಲಿ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆರೋನನ ಅಕ್ಕನಾದ ವಿುರ್ಯಾಮಳು ಪ್ರವಾದಿನಿಯಾಗಿದ್ದು ದಮ್ಮಡಿಯನ್ನು ಕೈಯಲ್ಲಿ ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ನಾಟ್ಯವಾಡುತ್ತಾ ಆಕೆಯ ಹಿಂದೆ ಹೋಗುತ್ತಿರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆರೋನನ ಅಕ್ಕ ಮಿರ್ಯಾಮಳು ಪ್ರವಾದಿನಿಯಾಗಿದ್ದು ದಮ್ಮಡಿಯನ್ನು ಕೈಯಲ್ಲಿ ತೆಗೆದುಕೊಂಡಳು. ಮಿರ್ಯಾಮಳು ಮತ್ತು ಸ್ತ್ರೀಯರು ಹಾಡುವುದಕ್ಕೂ ಕುಣಿಯುವುದಕ್ಕೂ ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯನ್ನು ಹಿಂಬಾಲಿಸಿ ಹೊರಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:20
33 ತಿಳಿವುಗಳ ಹೋಲಿಕೆ  

ಆತನನ್ನು ಸ್ತುತಿಸಿರಿ ತಮಟೆ ಬಡಿಯುತಾ ಕುಣಿಯುತಾ I ಆತನನ್ನು ಸ್ತುತಿಸಿರಿ ತಂತಿವಾದ್ಯ ನುಡಿಸುತಾ ಕೊಳಲೂದುತಾ II


ದಾವೀದನು ಫಿಲಿಷ್ಟಿಯರನ್ನು ಸಂಹರಿಸಿ ಸರ್ವಸೈನಿಕರೊಡನೆ ಹಿಂದಿರುಗಿ ಬರುವಾಗ ಇಸ್ರಯೇಲರ ಎಲ್ಲ ಪಟ್ಟಣಗಳಿಂದ ಮಹಿಳೆಯರು ಹೊರಗೆ ಬಂದು, ತಾಳ ತಮ್ಮಟೆಗಳನ್ನು ಹಿಡಿದು, ಸಂತೋಷದಿಂದ ಹಾಡುತ್ತಾ, ಕುಣಿಯುತ್ತಾ, ಅರಸ ಸೌಲನನ್ನು ಎದುರುಗೊಂಡರು.


ಮುಂಗಡೆಯಲಿದೋ ಹಾಡುಗಾರರು I ಹಿಂಗಡೆಯಲಿದೋ ವಾದ್ಯಗಾರರು I ನಡುವೆ ದಮ್ಮಡಿ ಬಡಿವ ಮಹಿಳೆಯರು II


ಯೆಪ್ತಾಹನು ಮಿಚ್ಫೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿ ಬಡಿಯುತ್ತಾ ನಾಟ್ಯವಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆ ಅವನ ಒಬ್ಬಳೇ ಮಗಳು. ಆಕೆಯ ಹೊರತು ಅವನಿಗೆ ಬೇರೆ ಗಂಡುಹೆಣ್ಣು ಮಕ್ಕಳೇ ಇರಲಿಲ್ಲ.


ಕೆಹಾತನು ಅಮ್ರಾಮನನ್ನು ಪಡೆದನು. ಅಮ್ರಾಮನ ಹೆಂಡತಿ ಈಜಿಪ್ಟ್ ದೇಶದಲ್ಲಿ ಲೇವಿಯಿಂದ ಹುಟ್ಟಿದ ಯೋಕೆಬೆದ ಎಂಬವಳು. ಈಕೆಯಲ್ಲಿ ಅಮ್ರಾಮನಿಂದ ಆರೋನ, ಮೋಶೆ ಮತ್ತು ಅಕ್ಕ ಮಿರ್ಯಾಮಳೂ ಹುಟ್ಟಿದರು.


ಈಜಿಪ್ಟ್ ದೇಶದಿಂದ ನಾನು ನಿನ್ನನ್ನು ಕರೆತಂದೆ; ದಾಸತ್ವದ ಬಂಧನದಿಂದ ನಿನ್ನನ್ನು ಬಿಡುಗಡೆ ಮಾಡಿದೆ. ನಿನಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಾಯಕರನ್ನಾಗಿ ಕಳುಹಿಸಿದೆ.


ಆತನ ನಾಮವನು ಕೀರ್ತಿಸಲಿ ಕುಣಿತದಿಂದ I ಆತನನು ಭಜಿಸಲಿ ತಮಟೆ, ಕಿನ್ನರಿಗಳಿಂದ II


ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿ ದೆಬೋರಳೆಂಬ ಪ್ರವಾದಿನಿ ಇಸ್ರಯೇಲರಲ್ಲಿ ನ್ಯಾಯ ತೀರಿಸುತ್ತಿದ್ದಳು.


ಇದಲ್ಲದೆ ಅಲ್ಲಿ ಅಶೇರನ ವಂಶಕ್ಕೆ ಸೇರಿದ ಫನುವೇಲನ ಮಗಳಾದ ಅನ್ನಳೆಂಬ ಪ್ರವಾದಿನಿಯಿದ್ದಳು. ಅವಳು ಮುದಿಪ್ರಾಯದವಳು, ಮದುವೆಯಾಗಿ ಏಳು ವರ್ಷ ಮಾತ್ರ ಗಂಡನೊಡನೆ ಬಾಳಿ ವಿಧವೆಯಾದವಳು.


ಆರಂಭಿಸಿ ಸಂಗೀತವನು, ಬಾರಿಸಿ ಮೃದಂಗವನು I ನುಡಿಸಿರಿ ಮಧುರ ವೀಣೆಯನು, ಸ್ವರಮಂಡಲವನು II


ಆಗ ಯಾಜಕ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ ಎಂಬವರು ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಗಂಡನು. ಈಕೆ ಜೆರುಸಲೇಮಿನ ಎರಡನೇ ಕೇರಿಯಲ್ಲಿ ವಾಸವಾಗಿದ್ದಳು.


ಮಗುವಿಗೆ ಏನಾಗುವುದೋ ಎಂದು ತಿಳಿದುಕೊಳ್ಳುವುದಕ್ಕಾಗಿ ಆ ಮಗುವಿನ ಅಕ್ಕ ಸ್ವಲ್ಪ ದೂರದಲ್ಲಿ ನಿಂತುಕೊಂಡಳು.


ಅವನಿಗೆ ನಾಲ್ಕುಮಂದಿ ಅವಿವಾಹಿತ ಹೆಣ್ಣುಮಕ್ಕಳಿದ್ದರು. ಇವರೂ ದೇವರ ವಾಕ್ಯವನ್ನು ಪ್ರಚಾರಮಾಡುತ್ತಿದ್ದರು.


ಹೊರಡಿಸಿದನು ಪ್ರಭು ಶುಭವಾರ್ತೆಯೊಂದನು I ಹರಡಿತು ಜನಸ್ತೋಮ ಆ ಸಂದೇಶವನು II


ಎನ್ನ ಗೋಳಾಟವನು ನೀ ಕುಣಿದಾಟವಾಗಿಸಿದೆ I ಎನ್ನ ಗೋಣಿತಟ್ಟನು ಹರ್ಷಾಭರಣವಾಗಿಸಿದೆ II


ದಾವೀದನು ಏಫೋದೆಂಬ ನಾರುಮಡಿಯನ್ನು ಮಾತ್ರ ಉಟ್ಟುಕೊಂಡು ಸರ್ವೇಶ್ವರನ ಸನ್ನಿಧಿಯಲ್ಲಿ ಪೂರ್ಣಾವೇಶದಿಂದ ಕುಣಿದಾಡಿದನು.


ಅಲ್ಲಿಂದ ದೇವಗಿರಿಯನ್ನು ಮುಟ್ಟಿದಾಗ ಫಿಲಿಷ್ಟಿಯರ ದಂಡುಪ್ರದೇಶವನ್ನು ಕಾಣುವೆ; ಮುಂಗಡೆಯಲ್ಲಿ ಸ್ವರಮಂಡಲ, ತಮ್ಮಟೆ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದಿಳಿದು ಬರುತ್ತಿರುವ ಪ್ರವಾದಿಗಳ ಒಂದು ಗುಂಪನ್ನು ಕಾಣುವೆ. ಅವರು ಪರವಶರಾಗಿ ಪ್ರವಾದಿಸುವರು.


ಶಿಲೋವಿನ ಕನ್ಯೆಯರು ಹೊರಗೆ ಬಂದು ನಾಟ್ಯವಾಡುವಾಗ ನೀವು ತೋಟಗಳಿಂದ ಹೊರಗೆ ಬಂದು ಪ್ರತಿಯೊಬ್ಬನು ತನತನಗೆ ಶಿಲೋವಿನ ಕನ್ನಿಕೆಗಳಿಂದ ಒಬ್ಬಳನ್ನು ಹೆಂಡತಿಯಾಗಿ ತೆಗೆದುಕೊಂಡು ನಿಮ್ಮ ಪ್ರಾಂತ್ಯಕ್ಕೆ ಓಡಿಹೋಗಿರಿ.


ಇಸ್ರಯೇಲ್ ಸಮಾಜದವರು ಮೊದಲನೆಯ ತಿಂಗಳಲ್ಲಿ ‘ಚಿನ್’ ಎಂಬ ಮರುಭೂಮಿಗೆ ಬಂದು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ಮೃತಳಾದಳು; ಆಕೆಯನ್ನು ಅಲ್ಲೇ ಸಮಾಧಿಮಾಡಿದರು.


ಸ್ತ್ರೀಯು ತಲೆಯ ಮೇಲೆ ಮುಸುಕು ಹಾಕದೆ ಪ್ರಾರ್ಥಿಸುವುದಾದರೆ ಅಥವಾ ದೇವರ ವಾಕ್ಯವನ್ನು ಪ್ರವಚಿಸುವುದಾದರೆ ತನ್ನ ಶಿರಸ್ಸಾದ ಪತಿಗೆ ಅವಮಾನ ತರುತ್ತಾಳೆ. ಮುಸುಕು ಹಾಕದ ಸ್ತ್ರೀ ತಲೆಯನ್ನು ಮುಂಡನ ಮಾಡಿಸಿಕೊಂಡಂತೆಯೇ.


ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿ ನೋಡಿ ದಾವೀದನು ಸರ್ವೇಶ್ವರನ ಮುಂದೆ ನಲಿದಾಡುತ್ತಾ ಕುಣಿಯುತ್ತಾ ಇರುವುದನ್ನು ಕಂಡು ಮನಸ್ಸಿನಲ್ಲೇ ಅವನನ್ನು ತಿರಸ್ಕರಿಸಿದಳು.


ದಾವೀದನೂ ಎಲ್ಲ ಇಸ್ರಯೇಲರೂ ಕಿನ್ನರಿ, ಸ್ವರಮಂಡಲ, ತಮಟೆ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು, ಪೂರ್ಣಾವೇಶದಿಂದ ಗೀತೆಗಳನ್ನು ಹಾಡುತ್ತಾ, ಸರ್ವೇಶ್ವರನ ಮುಂದೆ ನರ್ತನ ಮಾಡುತ್ತಾ ಹೋದರು.


ಎಲ್ಲ ಕ್ರೈಸ್ತಸಭೆಗಳಲ್ಲಿ ರೂಢಿಯಲ್ಲಿರುವಂತೆ ಮಹಿಳೆಯರು ಮೌನವಾಗಿರಲಿ; ಮಾತನಾಡಲು ಅವರಿಗೆ ಅನುಮತಿಯಿಲ್ಲ. ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಅವರು ಅಧೀನರಾಗಿರಬೇಕು.


ಮೋಶೆ ಕೂಷ್ ನಾಡಿನ ಮಹಿಳೆಯೊಬ್ಬಳನ್ನು ಮದುವೆ ಮಾಡಿಕೊಂಡಿದ್ದನು. ಈ ಕಾರಣ ಮಿರ್ಯಾಮಳು ಮತ್ತು ಆರೋನನು ಅವನಿಗೆ ವಿರುದ್ಧ ಮಾತಾಡತೊಡಗಿದರು.


ನನಗೆ ಏನೂ ಹೇಳದೆ ವಂಚಿಸಿ ಏಕೆ ಓಡಿಬಂದೆ? ನನಗೆ ತಿಳಿಸಿದ್ದರೆ ಸಂಗೀತ ಸಂಭ್ರಮದೊಂದಿಗೆ, ತಾಳಮೇಳ ವಾದ್ಯಗಳೊಂದಿಗೆ ನಿನ್ನನ್ನು ಸಾಗಕಳುಹಿಸುತ್ತಿದ್ದೆ.


ಸಾರಬೇಡಿ ಈ ಸುದ್ದಿಯನು ‘ಗತ್’ ಊರಿನಲಿ ಘೋಷಿಸಬೇಡಿ ಅಷ್ಕೆಲೋನಿನ ಬೀದಿಗಳಲಿ. ಏಕೆನೆ, ಉಲ್ಲಾಸಿಸಿಯಾರು ಆ ಫಿಲಿಷ್ಟಿಯ ಮಹಿಳೆಯರು; ಜಯಘೋಷ ಮಾಡಿಯಾರು ಸುನ್ನತಿಯಿಲ್ಲದವರಾ ಸ್ತ್ರೀಯರು!


ಅಮ್ರಾಮನಿಗೆ ಆರೋನ್, ಮೋಶೆ ಎಂಬ ಗಂಡುಮಕ್ಕಳೂ ಮಿರ್ಯಾಮ್ ಎಂಬ ಹೆಣ್ಣುಮಗಳೂ ಇದ್ದರು.


ಸ್ವರಮಂಡಲ, ಕಿನ್ನರಿ, ತಾಳಗಳೊಂದಿಗೆ ಸಂಭ್ರಮದಿಂದ ವಾದ್ಯಗಳನ್ನು ಬಾರಿಸುವುದಕ್ಕೂ ಹಾಡುವುದಕ್ಕೂ ವಿವಿಧ ಲೇವಿಯರನ್ನು ನೇಮಿಸಬೇಕೆಂದು ದಾವೀದನು ಲೇವಿಯರ ನಾಯಕನಿಗೆ ಆಜ್ಞಾಪಿಸಿದನು.


ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ.


ಇಸ್ರಯೇಲೆಂಬ ಯುವತಿಯೇ, ನಿನ್ನ ಪಾಳುಬಿದ್ದ ಪ್ರದೇಶಗಳನ್ನು ನಾನು ಪುನಃ ಕಟ್ಟುವೆನು, ಅವು ಕಟ್ಟಡಗಳಿಂದ ಕೂಡಿರುವುವು. ನೀನು, ಮತ್ತೆ ತಾಳಮೇಳಗಳನ್ನು ತೆಗೆದುಕೊಂಡು ನಲಿದಾಡುವವರ ನಾಟ್ಯಗಳಲ್ಲಿ ಭಾಗವಹಿಸುವೆ.


“ಸರ್ವೇಶ್ವರ ಸ್ವಾಮಿ ಮೋಶೆಯ ಮುಖಾಂತರ ಮಾತ್ರ ಮಾತಾಡಿದ್ದಾರೋ? ನಮ್ಮ ಮುಖಾಂತರ ಮಾತಾಡಲಿಲ್ಲವೋ?’ ಎಂದು ಹೇಳತೊಡಗಿದರು.


“ಓ ದೇವರೇ, ಟೋಬೀಯ-ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿಮ್ಮ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮುಂತಾದ ಪ್ರವಾದಿಗಳನ್ನು ಮರೆಯಬೇಡಿ,” ಎಂದು ನಾನು ಪ್ರಾರ್ಥಿಸಿದೆ.


“ಇಸ್ರಯೇಲಿನ ವಂಶಜರೇ, ಸ್ತುತಿಸಿರಿ ಪ್ರಭುವನು” ಎನ್ನುತಿಹರು I “ಸಭೆ ಸಮ್ಮುಖದಲಿ ಕೊಂಡಾಡಿರಿ ದೇವರನು” ಎಂದು ಹಾಡುತಿಹರು I


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು