Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:21 - ಕನ್ನಡ ಸತ್ಯವೇದವು C.L. Bible (BSI)

21 ಮಿರ್ಯಾಮಳು ಅವರ ಹಾಡಿಗೆ ಈ ಪಲ್ಲವಿಯನ್ನು ಕೂಡಿಸಿದಳು: ಮಾಡಿರಿ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕಡಲಲ್ಲಿ ಕೆಡವಿ ನಾಶಮಾಡಿಹನು ಕುದುರೆಗಳನು, ರಾಹುತರನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು: “ಯೆಹೋವನಿಗೆ ಕೀರ್ತನೆ ಹಾಡಿರಿ, ಆತನು ಮಹೋನ್ನತನಾದ ದೇವರಾಗಿದ್ದಾನೆ. ಕುದುರೆಗಳನ್ನೂ, ರಾಹುತರನ್ನೂ ಸಮುದ್ರದಲ್ಲಿ ಮುಳುಗಿಸಿ ನಾಶಮಾಡಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ವಿುರ್ಯಾಮಳು ಅವರ ಹಾಡಿಗೆ ಹೀಗೆ ಪಲ್ಲವಿ ಹಾಡಿದಳು- ಯೆಹೋವನನ್ನು ಗಾನಮಾಡಿರಿ; ಆತನು ಮಹಾಜಯಶಾಲಿಯಾದನು; ಕುದುರೆಗಳನ್ನೂ ರಾಹುತರನ್ನೂ ಸಮುದ್ರದಲ್ಲಿ ಕೆಡವಿ ನಾಶಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಮಿರ್ಯಾಮಳು ಅವರ ಹಾಡಿಗೆ ಹೀಗೆ ಪಲ್ಲವಿ ಹಾಡಿದಳು: “ಯೆಹೋವನಿಗೆ ಗಾನಮಾಡಿರಿ; ಆತನು ಮಹಾಜಯಶಾಲಿಯಾದನು. ಕುದುರೆಗಳನ್ನೂ ರಾಹುತರನ್ನೂ ಸಮುದ್ರದೊಳಗೆ ಮುಳುಗಿಸಿ ನಾಶಮಾಡಿದನು…”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು: “ಯೆಹೋವ ದೇವರಿಗೆ ನೀವು ಹಾಡಿರಿ, ಅವರು ಮಹೋನ್ನತದಲ್ಲಿದ್ದಾರೆ; ಕುದುರೆಯನ್ನೂ ಸವಾರರನ್ನೂ ಸಮುದ್ರದಲ್ಲಿ ಮುಣುಗಿಸಿಬಿಟ್ಟರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:21
17 ತಿಳಿವುಗಳ ಹೋಲಿಕೆ  

ಆಗ ಮೋಶೆ ಮತ್ತು ಇಸ್ರಯೇಲರು ಸರ್ವೇಶ್ವರ ಸ್ವಾಮಿಗೆ ಸ್ತೋತ್ರವಾಗಿ ಈ ಕೀರ್ತನೆಯನ್ನು ಹಾಡಿದರು: “ಮಾಡೋಣ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕುದುರೆಗಳನು ರಾಹುತರನು ಕಡಲಲ್ಲಿ ಕೆಡವಿ ನಾಶಮಾಡಿಹನು


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದ ಕೂಡಲೆ ಒಕ್ಕೊರಲಿನಿಂದ ಸ್ವರವೆತ್ತಿ ಸರ್ವೇಶ್ವರನನ್ನು ಕೀರ್ತಿಸುವುದಕ್ಕಾಗಿ, ತುತೂರಿ ಊದುವವರೂ ಗಾಯನಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿ ಹಾಗೂ ‘ಸರ್ವೇಶ್ವರ ಒಳ್ಳೆಯವರು, ಅವರ ಅಚಲ ಪ್ರೀತಿ ಶಾಶ್ವತವಾದುದು’ ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರ ಕೇಳಿಸಿದೊಡನೆ ಮೇಘವೊಂದು ಸರ್ವೇಶ್ವರನ ಆಲಯದಲ್ಲಿ ತುಂಬಿಕೊಂಡಿತು.


ಅವರು: ಸೌಲನು ಕೊಂದನು ಸಾವಿರಗಟ್ಟಳೆ ದಾವೀದನೋ ಕೊಂದನು ಹತ್ತುಸಾವಿರಗಟ್ಟಳೆ,” ಎಂದು ಪರಸ್ಪರ ಹಾಡಿದರು.


ಅರಸರೇ, ಕೇಳಿ! ಪ್ರಭುಗಳೇ, ಕಿವಿಗೊಡಿ; ನಾ ಕಟ್ಟುವೆನು ಕವಿತೆಯನು ಸರ್ವೇಶ್ವರನಿಗೆ ನಾ ಭಜಿಸಿ ಹಾಡುವೆನು ಇಸ್ರಯೇಲರಾ ದೇವನಿಗೆ;


ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಜನರು ಸಿಂಹಾಸನದ ಸಾನ್ನಿಧ್ಯದಲ್ಲಿಯೂ ನಾಲ್ಕು ಜೀವಿಗಳ ಮುಂದೆಯೂ ಸಭಾಪ್ರಮುಖರ ಎದುರಿನಲ್ಲಿಯೂ ನಿಂತು ಒಂದು ಹೊಸಗೀತೆಯನ್ನು ಹಾಡುತ್ತಿದ್ದರು. ಇಡೀ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರೇ. ಇವರನ್ನುಳಿದು ಬೇರೆ ಯಾರಿಂದಲೂ ಆ ಹಾಡನ್ನು ಕಲಿಯಲಾಗಲಿಲ್ಲ.


ದಾವೀದನು ಫಿಲಿಷ್ಟಿಯರನ್ನು ಸಂಹರಿಸಿ ಸರ್ವಸೈನಿಕರೊಡನೆ ಹಿಂದಿರುಗಿ ಬರುವಾಗ ಇಸ್ರಯೇಲರ ಎಲ್ಲ ಪಟ್ಟಣಗಳಿಂದ ಮಹಿಳೆಯರು ಹೊರಗೆ ಬಂದು, ತಾಳ ತಮ್ಮಟೆಗಳನ್ನು ಹಿಡಿದು, ಸಂತೋಷದಿಂದ ಹಾಡುತ್ತಾ, ಕುಣಿಯುತ್ತಾ, ಅರಸ ಸೌಲನನ್ನು ಎದುರುಗೊಂಡರು.


ಸಾರಬೇಡಿ ಈ ಸುದ್ದಿಯನು ‘ಗತ್’ ಊರಿನಲಿ ಘೋಷಿಸಬೇಡಿ ಅಷ್ಕೆಲೋನಿನ ಬೀದಿಗಳಲಿ. ಏಕೆನೆ, ಉಲ್ಲಾಸಿಸಿಯಾರು ಆ ಫಿಲಿಷ್ಟಿಯ ಮಹಿಳೆಯರು; ಜಯಘೋಷ ಮಾಡಿಯಾರು ಸುನ್ನತಿಯಿಲ್ಲದವರಾ ಸ್ತ್ರೀಯರು!


ದಾವೀದನು ಏಫೋದೆಂಬ ನಾರುಮಡಿಯನ್ನು ಮಾತ್ರ ಉಟ್ಟುಕೊಂಡು ಸರ್ವೇಶ್ವರನ ಸನ್ನಿಧಿಯಲ್ಲಿ ಪೂರ್ಣಾವೇಶದಿಂದ ಕುಣಿದಾಡಿದನು.


ನಿನ್ನ ಒಂದು ಗದರಿಕೆಗೆ, ಯಕೋಬನ ದೇವನೆ I ರಥಾಶ್ವಬಲಗಳೆಲ್ಲಾ ಬಿದ್ದಿವೆ ಬಿಮ್ಮನೆ II


ಫರೋಹನ ರಥಗಳನು, ಸೈನಿಕರನು ಕೆಡವಿಬಿಟ್ಟನಾತ ಕಡಲಲಿ ಫರೋಹನ ವೀರ ಶ್ರೇಷ್ಟರನು ಮುಳುಗಿಸಿಬಿಟ್ಟನಾತ ಕೆಂಪು ಸಮುದ್ರದಲಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು