Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:27 - ಕನ್ನಡ ಸತ್ಯವೇದವು C.L. Bible (BSI)

27 ಅಲ್ಲಿಂದ ಆ ಜನರು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದವು. ಆದ್ದರಿಂದ ಆ ನೀರಿನ ಬಳಿಯಲ್ಲೇ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ನಂತರ ಅವರು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಬುಗ್ಗೆಗಳೂ, ಎಪ್ಪತ್ತು ಖರ್ಜೂರದ ಮರಗಳೂ ಇದ್ದವು. ಆ ನೀರಿನ ಬಳಿಯಲ್ಲಿ ಅವರು ಇಳಿದು ಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ತರುವಾಯ ಅವರು ಏಲೀವಿುಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದದರಿಂದ ಆ ನೀರಿನ ಬಳಿಯಲ್ಲಿ ಇಳುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಬಳಿಕ ಜನರು ಏಲೀಮಿಗೆ ಪ್ರಯಾಣ ಮಾಡಿದರು. ಏಲೀಮಿನಲ್ಲಿ ನೀರಿನ ಹನ್ನೆರಡು ಬುಗ್ಗೆಗಳಿದ್ದವು; ಅಲ್ಲಿ ಎಪ್ಪತ್ತು ಖರ್ಜೂರದ ಮರಗಳಿದ್ದವು. ಆದ್ದರಿಂದ ಅವರು ನೀರಿನ ಹತ್ತಿರ ತಮ್ಮ ಪಾಳೆಯ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ತರುವಾಯ ಇಸ್ರಾಯೇಲರು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದವು. ಅವರು ಆ ನೀರಿನ ಬಳಿಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:27
7 ತಿಳಿವುಗಳ ಹೋಲಿಕೆ  

ನಗರದ ಹೆದ್ದಾರಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲೂ ಜೀವವೃಕ್ಷವಿತ್ತು. ಅದು ವರ್ಷದಲ್ಲಿ ಹನ್ನೆರಡು ಸಾರಿ ಫಲಕೊಡುವಂಥದ್ದು; ಪ್ರತೀ ತಿಂಗಳೂ ಫಸಲನ್ನೀಯುವಂಥದ್ದು. ಆ ವೃಕ್ಷದ ಎಲೆಗಳನ್ನು ರಾಷ್ಟ್ರಗಳಿಗೆ ಸಿದ್ದೌಷಧಿಯನ್ನಾಗಿ ಉಪಯೋಗಿಸಲಾಗುವುದು.


ನಿಂತಿಹನು ಕುರಿಮರಿಯಾದಾತನು ಸಿಂಹಾಸನದ ನಡುವೆ ಕಾಯುವನು ಅವರುಗಳನು ಕುರುಬನಂತೆ ನಡೆಸುವನು ಅವರನು ಜೀವಜಲದ ಒರತೆಗಳ ಬಳಿಗೆ ದೇವನೊರಸುವನು ಅವರ ಕಂಬನಿಗಳನು ಬಿಡದೆ', “ ಎಂದು ನನಗೆ ತಿಳಿಸಿದನು.


ಮಾರಾದಿಂದ ಹೊರಟು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದುದರಿಂದ ಅಲ್ಲಿ ಇಳಿದುಕೊಂಡರು.


ತೊರೆಯ ಎರಡು ದಡಗಳಲ್ಲಿಯೂ ಸಕಲ ಫಲವೃಕ್ಷಗಳು ಬೆಳೆಯುವುವು. ಅವುಗಳ ಎಲೆ ಬಾಡದು, ಹಣ್ಣು ತೀರದು. ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳು ತಿಂಗಳಲ್ಲಿಯೂ ಹೊಸ ಹೊಸ ಫಲವನ್ನು ಕೊಡುತ್ತಲಿರುವುವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಅನುಕೂಲಿಸುವುವು.”


ಉದ್ಧರಿಸುವಾ ಒರತೆಗಳಿಂದ ಸೇದುವಿರಿ ನೀರನು ಹರುಷದಿಂದ.


ಇಸ್ರಯೇಲರ ಸಮಾಜ ಏಲೀಮಿನಿಂದ ಹೊರಟ ಮೇಲೆ, ಏಲೀಮಿಗೂ ಸಿನಾಯಿ ಬೆಟ್ಟಕ್ಕೂ ನಡುವೆಯಿರುವ ‘ಸೀನ್’ ಎಂಬ ಮರುಭೂಮಿಗೆ ಬಂದರು. ಈಜಿಪ್ಟನ್ನು ಬಿಟ್ಟು ಬಂದ ಎರಡನೆಯ ತಿಂಗಳಿನ ಹದಿನೈದನೆಯ ದಿನ ಅದು.


ಹಸಿರುಗಾವಲುಗಳಲೆನ್ನ ತಂಗಿಸುವನು I ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು