Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:5 - ಕನ್ನಡ ಸತ್ಯವೇದವು C.L. Bible (BSI)

5 ಮುಚ್ಚಿಬಿಟ್ಟಿತವರನು ಸಮುದ್ರ ಸಾಗರವು ಸೇರಿದರವರು ಕಲ್ಲಿನೋಪಾದಿ ಕಡಲಿನ ತಳವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಳವಾದ ಸಾಗರವು ಅವರನ್ನು ಮುಚ್ಚಿಬಿಟ್ಟಿತು. ಅವರು ಕಲ್ಲಿನಂತೆ ಸಮುದ್ರದ ತಳವನ್ನು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸಾಗರವು ಅವರನ್ನು ಮುಚ್ಚಿಬಿಟ್ಟಿತು; ಕಲ್ಲಿನಂತೆ ಧಡಲ್ಲೆಂದು ಸಮುದ್ರದ ತಳವನ್ನು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸಾಗರವು ಅವರನ್ನು ಮುಚ್ಚಿಕೊಂಡಿತು; ಆಳವಾದ ನೀರಿನಲ್ಲಿ ಅವರು ಬಂಡೆಗಳಂತೆ ಮುಳುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಳವಾದ ಜಲರಾಶಿ ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ ಸಮುದ್ರದ ತಳಕ್ಕೆ ಮುಳುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:5
12 ತಿಳಿವುಗಳ ಹೋಲಿಕೆ  

ಕಡಲನು ಸೀಳಿ, ಆ ಪಿತೃಗಳ ನಡೆಸಿದಿರಿ ಒಣನೆಲದಲೋ ಎಂಬಂತೆ ಅವರ ಬೆನ್ನಟ್ಟಿ ಬಂದವರನು ಜಲರಾಶಿಯ ತಳಮುಟ್ಟಿಸಿದಿರಿ ಕಲ್ಲಂತೆ.


ಆದರೆ ನಿನ್ನದೊಂದು ಉಸಿರುಗಾಳಿ ಸಾಕಾಯಿತು ಅವರು ಸೀಸದ ಗುಂಡಿನಂತೆ ಮುಳುಗಿ ಹೋಗಲು. ಅವರನ್ನು ಸಮುದ್ರವು ನುಂಗಿಬಿಡಲು


ನೀರು ಮೊದಲಿನಂತೆ ಬಂದು ಆ ರಥಗಳನ್ನು, ರಾಹುತರನ್ನು ಹಾಗು ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನು ಮುಳುಗಿಸಿತು. ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.


ಮುಳುಗಿಹೋದರು ಅಗಾಧ ಜಲದೊಳು ಸರಕುಸಮೇತ ನಿನ್ನ ಸೇರಿದ್ದ ಜನರು; ಹಾಳಾದೆ ನೀನು ಸಮುದ್ರ ಸಾಗರದೊಳು.


ಆಗ ಒಬ್ಬ ಬಲಿಷ್ಠ ದೇವದೂತನು ಬೀಸುವ ಕಲ್ಲಿನಂತಿದ್ದ ಒಂದು ದೊಡ್ಡ ಕಲ್ಲನ್ನು ಎತ್ತಿ ಸಮುದ್ರಕ್ಕೆ ಎಸೆದು ಹೀಗೆಂದನು : “ಬಾಬಿಲೋನ್ ಮಹಾನಗರವನು ಈ ಪರಿಯಾಗಿ ಎತ್ತೆಸೆಯಲಾಗುವುದು ಅವಳಿದ್ದ ಎಡೆಯು ಯಾರಿಗೂ ಕಾಣಸಿಗದಂತಾಗುವುದು.”


“ನನ್ನಲ್ಲಿ ವಿಶ್ವಾಸವಿಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಪಾಪಕ್ಕೆ ಕಾರಣನಾದರೆ ಅಂಥವನು ದೊಡ್ಡ ಬೀಸುವ ಕಲ್ಲನ್ನು ಕುತ್ತಿಗೆಗೆ ಬಿಗಿಸಿಕೊಂಡು, ಆಳವಾದ ಸಮುದ್ರದಲ್ಲಿ ದಬ್ಬಿಸಿಕೊಳ್ಳುವುದೇ ಲೇಸು.


ಮತ್ತೊಮ್ಮೆ ನಮಗೆ ದಯೆತೋರಿ. ನಮ್ಮ ಅಪರಾಧಗಳನ್ನು ಅಳಿಸಿಬಿಡಿ; ಅವನ್ನು ತುಳಿದು ಸಮುದ್ರದ ತಳಕ್ಕೆ ತಳ್ಳಿಬಿಡಿ.


“ಸಂಕಟದಲಿ, ಸರ್ವೇಶ್ವರಾ, ನಾ ನಿನಗೆ ಮೊರೆಯಿಟ್ಟೆ ನೀನೆನ್ನ ಮೊರೆಗೆ ಕಿವಿಗೊಟ್ಟೆ. ಪಾತಾಳದಂತರಾಳದಿಂದ ನಿನ್ನ ನೆರವನ್ನು ಬೇಡಿದೆ ನೀನೆನ್ನ ಪ್ರಾರ್ಥನೆಯನ್ನಾಲಿಸಿದೆ.


ಭಯಭೀತಿ ಅವರನ್ನು ಆವರಿಸಿದೆ ನಿನ್ನ ಭುಜಬಲ ನೋಡಿ ಸ್ತಬ್ದರಾಗಿಹರವರು ಕಲ್ಲಿನಂತೆ.


ಮುಳುಗಿಸಿತು ಜಲರಾಶಿ ಆ ಶತ್ರುಗಳನು I ಉಳಿಯಗೊಡಿಸಲಿಲ್ಲ ಅವರಲ್ಲೊಬ್ಬನನು II


ಜಲನಿಧಿಗಳಾಗಲಿ, ನೀರಿನ ಬುಗ್ಗೆಗಳಾಗಲಿ ಇಲ್ಲದಿರುವಾಗಲೆ ನಾ ಬಂದೆ ಜನ್ಮತಾಳಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು