Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:6 - ಕನ್ನಡ ಸತ್ಯವೇದವು C.L. Bible (BSI)

6 ಹೇ ಸರ್ವೇಶ್ವರಾ, ನಿನ್ನ ಭುಜಬಲ ಶಕ್ತಿಯುತ! ಪುಡಿ ಪುಡಿ ಮಾಡಿತು ನಿನ್ನ ಶತ್ರುಗಳನು ಆ ಬಾಹುಬಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನೇ, ನಿನ್ನ ಬಲಗೈಯಲ್ಲಿರುವ ಶಕ್ತಿ ಎಷ್ಟೋ ಮಹಿಮೆಯುಳ್ಳದ್ದಾಗಿದೆ. ಯೆಹೋವನೇ, ನಿನ್ನ ಬಲಗೈ ಶತ್ರುಗಳನ್ನು ಪುಡಿಪುಡಿಮಾಡಿಬಿಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನೇ, ನಿನ್ನ ಭುಜಬಲವು ಎಷ್ಟೋ ಘನವಾದದ್ದು; ಯೆಹೋವನೇ, ನಿನ್ನ ಭುಜಬಲವು ನಿನ್ನ ಶತ್ರುಗಳನ್ನು ಪುಡಿಪುಡಿ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ನಿನ್ನ ಭುಜಬಲವು ಎಷ್ಟೋ ಶಕ್ತಿಯುಳ್ಳದ್ದಾಗಿದೆ. ಯೆಹೋವನೇ, ನಿನ್ನ ಭುಜಬಲವು ವೈರಿಯನ್ನು ನುಚ್ಚುನೂರು ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರೇ, ನಿಮ್ಮ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳದ್ದಾಗಿದೆ; ಯೆಹೋವ ದೇವರೇ, ನಿಮ್ಮ ಬಲಗೈ ಶತ್ರುವನ್ನು ಜಜ್ಜಿ ಪುಡಿ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:6
27 ತಿಳಿವುಗಳ ಹೋಲಿಕೆ  

ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?


ನಿನಗೆ ಪ್ರಿಯರಾದ ನಮ್ಮ ಮೊರೆಯನಾಲಿಸು I ನಿನ್ನ ಭುಜಬಲದಿಂದ ನಮ್ಮನು ಜಯಗೊಳಿಸು II


ನೀ ಬಡಿದು ಹಾಕುವೆ ಕಬ್ಬಿಣದ ಗದೆಯಿಂದವರನು I ನೀ ಒಡೆದು ಹಾಕುವೆ ಮಣ್ಣಿನ ಮಡಕೆಯಂತವರನು"II


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.


ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ಹಾಗು ನಾಶಮಾಡದೆ ಬಿಡೆನು,’ ಇದು ಸರ್ವೇಶ್ವರನಾದ ನನ್ನ ನುಡಿ.”


ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು I ಎಸಗಿಹನಾತನು ಪವಾಡಕಾರ್ಯಗಳನು I ಗಳಿಸಿತಾತನ ಕೈ ಪೂತಭುಜ ಗೆಲುವನು II


ಆಗ ನಾನು “ನೆನೆಯಲೀಪರಿ, ನನ್ನ ಚಪಲತೆಯೇ ಕಾರಣ I ಮಾಡುವೆನೀಗ ಪರಾತ್ಪರನಾ ಪವಾಡ ವರುಷಗಳ ಸ್ಮರಣ” II


ಚಾಚಿದಾ ಬಲಗೈಯನೇಕೆ ಹಿಂದೆಗೆದುಕೊಂಡೆ I ಬಚ್ಚಿಟ್ಟಾ ಕೈಯಿಂದ ನೀನವರನು ಚಚ್ಚಿಬಿಡೈ II


ನಾಡ ಗೆದ್ದುದು ನಮ್ಮವರ ಕತ್ತಿಯಲ್ಲ I ಜಯ ದೊರೆತದು ತಮ್ಮ ಭುಜಬಲದಿಂದಲ್ಲ II ಜಯ ತಂದಿತು ನಿನ್ನ ಬಲಹಸ್ತ, ನಿನ್ನ ಮುಖಕಾಂತಿ I ನಿನ್ನ ಭುಜಬಲ, ನೀ ತೋರಿದಾ ಅಚಲಪ್ರೀತಿ II


ಶರಣರನು ಶತ್ರುವಿಂದ ಸಂರಕ್ಷಿಸುವಾತ ನೀನಯ್ಯಾ I ಭುಜಬಲವನು ಪ್ರಯೋಗಿಸಿ ಕಾಪಾಡುವಾತ ನೀನಯ್ಯಾ I ನಿನ್ನಚಲ ಪ್ರೀತಿಯನ್ನಚ್ಚರಿಯಿಂದ ತೋರ್ಪಡಿಸಯ್ಯಾ II


ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು?


ಆ ಗೋಡೆಯೆಂಬ ಕುಂಬಾರನ ಮಡಕೆಯ ಚೂರಿನಿಂದ, ಬೆಂಕಿಯ ಒಲೆಯಿಂದ ಕೆಂಡವನ್ನು ತೆಗೆಯುವುದಕ್ಕಾಗಲೀ ತೊಟ್ಟಿಯ ನೀರನ್ನು ತೋಡಿಕೊಳ್ಳುವುದಕ್ಕಾಗಲೀ ಸಾಧ್ಯವಾಗದು.”


ಆದಕಾರಣ ನನ್ನ ಭುಜಬಲವನ್ನು ಪ್ರದರ್ಶಿಸುವೆನು. "ಅಲ್ಲಿ ಮಹಾತ್ಕಾರ್ಯಗಳನ್ನು ಮಾಡಿ, ಈಜಿಪ್ಟ್ ದೇಶವನ್ನೆ ನಾನಾವಿಧವಾಗಿ ಬಾಧಿಸುವೆನು. ಆಮೇಲೆ ಅರಸನು ನಿಮ್ಮನ್ನು ಬಿಡುಗಡೆಮಾಡುವನು.


ಅದಕ್ಕೆ ಸರ್ವೇಶ್ವರ ಸ್ವಾಮಿ ಮೋಶೆಗೆ, “ನಾನು ಫರೋಹನಿಗೆ ಮಾಡಲು ಹೋಗುವುದನ್ನು ನೀನು ಇಷ್ಟರಲ್ಲೇ ನೋಡುವೆ. ಅವನು ನನ್ನ ಭುಜಬಲವನ್ನು ಕಂಡು ಅವರನ್ನು ಹೋಗಲು ಬಿಡುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ನಾಡಿನಿಂದ ಹೊರಡಿಸುವನು,” ಎಂದರು.


ಭುವಿ ಬಾಯ್ದೆರೆದು ನುಂಗಿತು ಹಗೆಗಳನು ನೀ ನಿನ್ನ ಬಲಗೈಯನ್ನು ಚಾಚಲು.


ಭಯಭೀತಿ ಅವರನ್ನು ಆವರಿಸಿದೆ ನಿನ್ನ ಭುಜಬಲ ನೋಡಿ ಸ್ತಬ್ದರಾಗಿಹರವರು ಕಲ್ಲಿನಂತೆ.


ಸರ್ವೇಶ್ವರ ಸ್ವಾಮಿ ಇಸ್ರಯೇಲರ ಪರವಾಗಿ ಫರೋಹನಿಗೂ ಈಜಿಪ್ಟಿನವರಿಗೂ ಮಾಡಿದ್ದೆಲ್ಲವನ್ನೂ ಮತ್ತು ದಾರಿಯಲ್ಲಿ ತಮಗುಂಟಾದ ಎಲ್ಲ ಕಷ್ಟದುಃಖಗಳನ್ನು ಹಾಗು ಸರ್ವೇಶ್ವರ ಹೇಗೆ ಅವುಗಳಿಂದ ಕಾಪಾಡಿದರೆಂಬುದನ್ನು ಮೋಶೆ ತನ್ನ ಮಾವನಿಗೆ ವಿವರಿಸಿದನು.


ಚದರಿಹೋಗುವರು ಸರ್ವೇಶ್ವರನ ವಿರೋಧಿಗಳು ಆಗಸದಿಂದಾತ ಅವರ ವಿರುದ್ಧ ಗರ್ಜಿಸಲು! ನ್ಯಾಯ ತೀರಿಸುವನಾತ ಜಗದ ಕಟ್ಟಕಡೆಯವರೆಗೆ ಶಕ್ತಿಸಾಮರ್ಥ್ಯವನೀವನು ತಾ ನೇಮಿಸಿದರಸನಿಗೆ ಏರಿಸುವನು ತನ್ನಭಿಷಿಕ್ತನ ಒಲುಮೆಯನು ಉನ್ನತಿಗೆ.


ಯಾರಿವನು ಮಹಿಮಾವಂತ ರಾಜಾಧಿರಾಜನು? I ಇವನೇ ಪ್ರಭು, ಯುದ್ಧವೀರನು, ಶಕ್ತಿಸಮರ್ಥನು! II


ಯಕೋಬಿಗೆ ವಿಜಯ ಗಿಟ್ಟಿಸಿದಾತ I ನೀನಲ್ಲವೆ ದೇವಾ, ನನ್ನ ಅರಸ? II


ನೀತಿನ್ಯಾಯ ನಿನ್ನ ಸಿಂಹಾಸನದಸ್ತಿವಾರ I ಪ್ರೀತಿಸತ್ಯತೆ ನಿನ್ನ ಸಾನ್ನಿಧ್ಯ ಪರಿವಾರ II


ಮೋಶೆಯ ಬಲಗೈಗೆ ತಮ್ಮ ಮಹಿಮಾ ಭುಜಬಲವನ್ನು ನೀಡಿದ ಸ್ವಾಮಿ ಎಲ್ಲಿ? ಆತನ ಕೈಯಿಂದ ಜಲರಾಶಿಯನ್ನು ಆ ಜನರ ಕಣ್ಮುಂದೆ ಇಬ್ಬಾಗಿಸಿದ ಸ್ವಾಮಿ ಎಲ್ಲಿ? ಹೀಗೆ ತಮ್ಮ ಹೆಸರನ್ನು ಶಾಶ್ವತವಾಗಿಸಿಕೊಂಡ ಸ್ವಾಮಿ ಎಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು