ವಿಮೋಚನಕಾಂಡ 16:1 - ಕನ್ನಡ ಸತ್ಯವೇದವು C.L. Bible (BSI)1 ಇಸ್ರಯೇಲರ ಸಮಾಜ ಏಲೀಮಿನಿಂದ ಹೊರಟ ಮೇಲೆ, ಏಲೀಮಿಗೂ ಸಿನಾಯಿ ಬೆಟ್ಟಕ್ಕೂ ನಡುವೆಯಿರುವ ‘ಸೀನ್’ ಎಂಬ ಮರುಭೂಮಿಗೆ ಬಂದರು. ಈಜಿಪ್ಟನ್ನು ಬಿಟ್ಟು ಬಂದ ಎರಡನೆಯ ತಿಂಗಳಿನ ಹದಿನೈದನೆಯ ದಿನ ಅದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇಸ್ರಾಯೇಲರ ಸಮೂಹವೆಲ್ಲಾ ಏಲೀಮಿನಿಂದ ಪ್ರಯಾಣ ಮಾಡಿ ಅವರು ಐಗುಪ್ತ ದೇಶದಿಂದ ಹೊರಟ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಎಲೀಮಿಗೂ ಸೀನಾಯಿ ಬೆಟ್ಟಕ್ಕೂ ನಡುವೆಯಿರುವ ಸೀನ್ ಎಂಬ ಮರುಭೂಮಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇಸ್ರಾಯೇಲ್ಯರ ಸಮೂಹವೆಲ್ಲಾ ಏಲೀವಿುನಿಂದ ಹೊರಟ ಮೇಲೆ ಅವರು ಐಗುಪ್ತದೇಶವನ್ನು ಬಿಟ್ಟ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಏಲೀವಿುಗೂ ಸೀನಾಯಿ ಬೆಟ್ಟಕ್ಕೂ ನಡುವೆಯಿರುವ ಸೀನೆಂಬ ಅರಣ್ಯಕ್ಕೆ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಬಳಿಕ ಅವರು ಏಲೀಮಿನಿಂದ ಪ್ರಯಾಣಮಾಡಿ ಸಿನ್ ಅರಣ್ಯಕ್ಕೆ ಬಂದರು. ಈ ಸ್ಥಳವು ಏಲೀಮಿನ ಮತ್ತು ಸೀನಾಯ್ ಬೆಟ್ಟದ ನಡುವೆ ಇತ್ತು. ಈಜಿಪ್ಟನ್ನು ಬಿಟ್ಟ ನಂತರ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಅವರು ಈ ಸ್ಥಳಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇಸ್ರಾಯೇಲರ ಸಭೆಯೆಲ್ಲಾ ಏಲೀಮಿನಿಂದ ಪ್ರಯಾಣಮಾಡಿ, ಈಜಿಪ್ಟ್ ದೇಶದಿಂದ ಹೊರಟ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಏಲೀಮಿಗೂ, ಸೀನಾಯಿ ಪರ್ವತಕ್ಕೂ ಮಧ್ಯೆ ಇರುವ ಸೀನ್ ಮರುಭೂಮಿಗೆ ಬಂದರು. ಅಧ್ಯಾಯವನ್ನು ನೋಡಿ |