Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:28 - ಕನ್ನಡ ಸತ್ಯವೇದವು C.L. Bible (BSI)

28 ಆಗ ಸರ್ವೇಶ್ವರ, “ಎಲ್ಲಿಯವರೆಗೆ ನೀವು ನನ್ನ ಆಜ್ಞೆಯನ್ನೂ ನಾನು ಮಾಡಿರುವ ನಿಯಮವನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಗ ಯೆಹೋವನು ಮೋಶೆಗೆ, “ನೀವು ಎಲ್ಲಿಯವರೆಗೆ ನನ್ನ ಆಜ್ಞೆಗಳನ್ನೂ, ನಾನು ಮಾಡಿರುವ ನಿಯಮಗಳನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಗ ಯೆಹೋವನು ಮೋಶೆಗೆ - ನೀವು ಎಲ್ಲಿಯವರೆಗೂ ನನ್ನ ಆಜ್ಞೆಯನ್ನೂ ನಾನು ಮಾಡಿರುವ ನಿಯಮವನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರೋ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆಗ ಯೆಹೋವನು ಮೋಶೆಗೆ, “ಜನರೇ, ನೀವು ಇನ್ನೆಷ್ಟರವರೆಗೆ ನನ್ನ ಆಜ್ಞೆಗಳಿಗೆ ಮತ್ತು ಬೋಧನೆಗಳಿಗೆ ವಿಧೇಯರಾಗುವುದಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಗ ಯೆಹೋವ ದೇವರು ಮೋಶೆಗೆ, “ಎಷ್ಟು ಕಾಲ ನನ್ನ ಕಟ್ಟಳೆಗಳನ್ನೂ, ನಿಯಮಗಳನ್ನೂ ಕೈಗೊಳ್ಳದೆ ನಿರಾಕರಿಸುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:28
19 ತಿಳಿವುಗಳ ಹೋಲಿಕೆ  

ಪಾಲಿಸಲಿಲ್ಲ ಅವರು ದೇವರ ನಿಬಂಧನೆಯನು I ಅನುಸರಿಸಲಿಲ್ಲ ಆತನ ಧರ್ಮಶಾಸ್ತ್ರವನು II


ಆದರೆ ಮರೆತರು ಬೇಗನೆ ಆತನ ಸತ್ಕಾರ್ಯಗಳನು I ಕಾಯದೆ ಹೋದರು ಆತನಾ ಸಂಕಲ್ಪ ಸಾದನೆಯನು II


ಆದರೆ ಇಸ್ರಯೇಲ್ ವಂಶದವರು ಮರುಭೂಮಿಯಲ್ಲಿ ನನ್ನ ವಿರುದ್ಧ ದಂಗೆಯೆದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ಧಿಕ್ಕರಿಸಿದರು. ಮುಖ್ಯವಾಗಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆಗ ನಾನು ‘ಮರುಭೂಮಿಯಲ್ಲಿರುವ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ ಇವರನ್ನು ಧ್ವಂಸಮಾಡುವೆನು’ ಎಂದುಕೊಂಡೆ.


ಆದರೆ ಅವರು, ದೇವರಾದ ಸರ್ವೇಶ್ವರನನ್ನು ನಂಬದೆ, ಅವರ ಆಜ್ಞೆಗಳಿಗೆ ಮಣಿಯದೆಯಿದ್ದ ತಮ್ಮ ಹಿರಿಯರಂತೆ, ಕಿವಿಗೊಡದೆ ಹೋದರು.


ಮೋಶೆಗೆ ಸರ್ವೇಶ್ವರ, “ಇನ್ನೆಷ್ಟುಕಾಲ ಈ ಜನರು ನನ್ನನ್ನು ಅಲಕ್ಷ್ಯ ಮಾಡುವರು? ನಾನು ಮಾಡಿದ ಮಹತ್ಕಾರ್ಯಗಳನ್ನು ಕಣ್ಣಾರೆ ನೋಡಿಯೂ ನನ್ನನ್ನು ಇನ್ನೆಷ್ಟು ಕಾಲ ನಂಬದೆ ಇರುವರು?


ಇದನ್ನು ಕೇಳಿ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ಪೀಳಿಗೆಯೇ, ಇನ್ನೆಷ್ಟು ಕಾಲ ನಿಮ್ಮೊಂದಿಗಿರಲಿ! ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ! ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.


ಏಕೆಂದರೆ, ಅವರ ಹೃದಯ ವಿಗ್ರಹಗಳಲ್ಲಿ ಆಸಕ್ತವಾಗಿ, ನನ್ನ ಆಜ್ಞಾವಿಧಿಗಳನ್ನು ಅವರು ಅನುಸರಿಸದೆ ಧಿಕ್ಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು.


ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಇತರ ಜನಾಂಗಗಳಿಗಿಂತಲೂ ಸುತ್ತಲಿನ ದೇಶಗಳಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮವನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.


‘ನೀನು (ಯೆರೆಮೀಯ) ವಾಸವಾಗಿರುವುದು ಮೋಸಗಾರರ ಮಧ್ಯೆ ಮೋಸಗಾರರಾಗಿರುವುದರಿಂದಲೆ ಅವರು ನನ್ನನ್ನು ಅರಿಯಲೊಲ್ಲರು’ ಎನ್ನುತ್ತಾರೆ ಸರ್ವೇಶ್ವರ.


ಜೆರುಸಲೇಮ್, ನೀನು ತಪ್ಪಿಸಿಕೊಳ್ಳಬೇಕಾದರೆ ನಿನ್ನ ಹೃದಯದಲ್ಲಿರುವ ಕೆಟ್ಟತನವನ್ನು ತೊಳೆದುಬಿಡು. ದುರಾಲೋಚನೆಗಳನ್ನು ನಿನ್ನ ಮನದಲ್ಲಿ ಇನ್ನೆಷ್ಟರವರೆಗೆ ಇಟ್ಟುಕೊಂಡಿರುವೆ?


ಆಗ ಯೆಶಾಯನು: “ದಾವೀದ ವಂಶಜರೇ, ಕೇಳಿರಿ, ಮಾನವರನ್ನು ಕೆಣಕಿದ್ದು ಸಾಲದೆಂದು ದೇವರನ್ನೇ ಕೆಣಕುತ್ತಿರುವಿರಾ?


ಅಂತೆಯೇ, ರಾಜಧಾನಿಯಾದ ಸಮಾರ್ಯಕ್ಕಿಂತ ಇಸ್ರಯೇಲ್ ಹೆಚ್ಚಲ್ಲ. ರಾಜನಾದ ಪೆಕಹನಿಗಿಂತ ಸಮಾರ್ಯ ಹೆಚ್ಚಲ್ಲ. ನಿಮ್ಮ ವಿಶ್ವಾಸ ಸ್ಥಿರವಿಲ್ಲದಿದ್ದರೆ, ನಿಮಗೆ ಸ್ಥಿರತೆ ಇರುವುದಿಲ್ಲ.”


ಏಕೆನೆ, ಅವರಿಗಿರಲಿಲ್ಲ ವಿಶ್ವಾಸ ದೇವರಲಿ I ಇರಲಿಲ್ಲ ನಂಬಿಕೆ ಆತನಾ ಸಲಹುವ ಶಕ್ತಿಯಲಿ II


ಬಳಿಕ ಸರ್ವೇಶ್ವರ ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದೇಹೋದಿರಿ. ಇಸ್ರಯೇಲರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದಿರಿ. ಆದುದರಿಂದ ಈ ಸಮಾಜದವರನ್ನು ನಾನು ವಾಗ್ದಾನಮಾಡಿದ ನಾಡಿಗೆ ನೀವು ಕರೆದುಕೊಂಡು ಹೋಗಕೂಡದು,” ಎಂದು ಹೇಳಿದರು.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, "ಹಿಬ್ರಿಯರ ದೇವರಾಗಿರುವ ಸರ್ವೇಶ್ವರನ ಮಾತುಗಳಿವು: ‘ಎಲ್ಲಿಯವರೆಗೆ ನೀನು ನನಗೆ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸ ಹೋಗಲು ನನ್ನ ಜನರಿಗೆ ಅಪ್ಪಣೆ ಕೊಡು.


ಹಾಗೆಯೇ ಆಯಿತು. ಜನರಲ್ಲಿ ಕೆಲವರು ಏಳನೆಯ ದಿನದಲ್ಲಿ ಅದನ್ನು ಕೂಡಿಸಿಕೊಳ್ಳುವುದಕ್ಕೆ ಹೋದಾಗ ಅವರಿಗೆ ಏನೂ ಸಿಕ್ಕಲಿಲ್ಲ.


ನೋಡಿ, ಸಬ್ಬತ್ ದಿನವನ್ನು ನೀವು ಆಚರಿಸಬೇಕೆಂದು ಸರ್ವೇಶ್ವರನಾದ ನಾನು ಅಪ್ಪಣೆ ಮಾಡಿರುವುದರಿಂದಲೇ ಆರನೆಯ ದಿನ ಎರಡು ದಿನದ ಆಹಾರ ನಿಮಗೆ ದೊರಕುವಂತೆ ಅನುಗ್ರಹಿಸಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವಲ್ಲಿಯೇ ಇರಬೇಕು. ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಕೂಡದು,’ ಎಂದು ಮೋಶೆಗೆ ಹೇಳಿದರು.


ಸರ್ವೇಶ್ವರ ತಮ್ಮ ಪೂರ್ವಜರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿವಾಕ್ಯಗಳನ್ನೂ ತಿರಸ್ಕರಿಸಿ, ಮಿಥ್ಯಾದೇವತೆಗಳನ್ನು ಪೂಜಿಸಿ ನಿಸ್ಸಾರ್ಥಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಸರ್ವೇಶ್ವರ ಆಜ್ಞಾಪಿಸಿದ್ದರೂ ಕೇಳದೆ ಆ ಜನಾಂಗಗಳನ್ನೇ ಅನುಸರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು